Home Advertisement
Home ಕ್ರೀಡೆ IPL 2026: ಟಾಸ್‌ ಗೆದ್ದ ಬೆಂಗಳೂರು ರಾಯಲ್‌ ಚಾಲೆಂಜರ್ಸ್‌

IPL 2026: ಟಾಸ್‌ ಗೆದ್ದ ಬೆಂಗಳೂರು ರಾಯಲ್‌ ಚಾಲೆಂಜರ್ಸ್‌

0
43

ದೆಹಲಿ: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಟಾಸ್‌ನಲ್ಲಿ ಗೆಲುವು ಕಂಡಿದೆ.

ದೆಹಲಿಯ ಅರುಣ ಜೇಟ್ಲಿ ಮೈದಾನದಲ್ಲಿ ನಡೆಯುತ್ತಿರುವ 39ನೇ ಐಪಿಎಲ್‌ ಪಂದ್ಯಾವಳಿಯಲ್ಲಿ ಆರ್‌ಸಿಬಿ ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಕೊಂಡಿದೆ.

ಈ ಪಂದ್ಯವು ಉಭಯ ತಂಡಗಳಿಗೂ ಪ್ಲೇ-ಆಫ್ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾಗಿದೆ.

ನಾಯಕ ರಜತ್ ಪಾಟಿದಾರ್ ನೇತೃತ್ವದ ಆರ್‌ಸಿಬಿ ತಂಡವು ಪ್ರಸಕ್ತ ಸರಣಿಯಲ್ಲಿ ಭರ್ಜರಿ ಫಾರ್ಮ್‌ನಲ್ಲಿದೆ. ಈ ಹಿಂದೆ ಬೆಂಗಳೂರಿನಲ್ಲಿ ನಡೆದಿದ್ದ ಡೆಲ್ಲಿ ವಿರುದ್ಧದ ಮೊದಲ ಮುಖಾಮುಖಿಯಲ್ಲಿ ಆರ್‌ಸಿಬಿ ಸೋಲನುಭವಿಸಿದ್ದರೂ, ನಂತರದ ಪಂದ್ಯಗಳಲ್ಲಿ ಚೇತರಿಸಿಕೊಂಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್(ಸಿ), ಜಿತೇಶ್ ಶರ್ಮಾ(ಡಬ್ಲ್ಯೂ), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಸುಯಶ್ ಶರ್ಮಾ, ರಸಿಖ್ ಸಲಾಮ್ ದಾರ್

ಡೆಲ್ಲಿ ಕ್ಯಾಪಿಟಲ್ಸ್ ತಂಡ: ಸಾಹಿಲ್ ಪರಾಖ್, ಕೆಎಲ್ ರಾಹುಲ್(ಡಬ್ಲ್ಯೂ), ನಿತೀಶ್ ರಾಣಾ, ಸಮೀರ್ ರಿಜ್ವಿ, ಟ್ರಿಸ್ಟಾನ್ ಸ್ಟಬ್ಸ್, ಡೇವಿಡ್ ಮಿಲ್ಲರ್, ಅಕ್ಸರ್ ಪಟೇಲ್(ಸಿ), ದುಷ್ಮಂತ ಚಮೀರಾ, ಕೈಲ್ ಜೇಮಿಸನ್, ಕುಲದೀಪ್ ಯಾದವ್, ಟಿ ನಟರಾಜನ್