ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಆವೃತ್ತಿಯ 43ನೇ ಪಂದ್ಯದಲ್ಲಿ ಶುಕ್ರವಾರವಾದ ಇಂದು ರಾಜಸ್ಥಾನ ರಾಯಲ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ಸವಾಲನ್ನು ಎದುರಿಸಲಿದೆ.
ಜೈಪುರನ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯವು ಡೆಲ್ಲಿ ತಂಡಕ್ಕೆ ಪ್ಲೇ-ಆಫ್ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾಗಿದೆ.
ರಾಜಸ್ಥಾನ್ ರಾಯಲ್ಸ್ ತಂಡ ಆಡಿದ 9 ಪಂದ್ಯಗಳ ಪೈಕಿ 6ರಲ್ಲಿ ಗೆಲುವು ಸಾಧಿಸಿದ್ದು, ಮೂರು ಪಂದ್ಯಗಳಲ್ಲಿ ಸೋತಿದೆ. ಈ ಮೂಲಕ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡಿದ 8 ಪಂದ್ಯಗಳಲ್ಲಿ ಕೇವಲ 3ರಲ್ಲಿ ಗೆಲುವು ಸಾಧಿಸಿದ್ದು, ಐದು ಪಂದ್ಯಗಳಲ್ಲಿ ಸೋಲುಂಡಿದೆ. ಈ ಮೂಲಕ 6 ಅಂಕದೊಂದಿಗೆ ಅಂಕಪಟ್ಟಿ 7ನೇ ಸ್ಥಾನದಲ್ಲಿದೆ.
ಕಳೆದ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಹೀನಾಯ ಸೋಲು ಅನುಭವಿಸಿರುವ ಡೆಲ್ಲಿ ಕ್ಯಾಪಿಟಲ್ಸ್‌ಗೆ ಪ್ಲೇ-ಆಫ್ ಪ್ರವೇಶಿಸಲು ಈ ಪಂದ್ಯ ಸೇರಿದಂತೆ ಮುಂದಿನ ಪಂದ್ಯಗಳಲ್ಲಿ ಗೆಲುವು ಅನಿವಾರ್ಯವಾಗಿದೆ.
ಕಳೆದ ಐದು ಪಂದ್ಯಗಳಲ್ಲಿ (LLWLW) ಮೂರರಲ್ಲಿ ಸೋತು, ಎರಡರಲ್ಲಿ ರಾಜಸ್ಥಾನ್ ಗೆಲುವು ಸಾಧಿಸಿದೆ. ಇಂದು ತವರಿನಲ್ಲಿಯೇ ಪಂದ್ಯ ನಡೆಯುತ್ತಿದ್ದು, ಸಹಜವಾಗಿ ಅಭಿಮಾನಿಗಳಲ್ಲಿ ಗೆಲುವಿನ ವಿಶ್ವಾಸ ಹೆಚ್ಚಿದೆ.























