ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ 43ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್‌ನಲ್ಲಿ ಗೆಲುವು ಕಂಡಿದೆ.
ಜೈಪುರನ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮೊದಲ ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. ಸದ್ಯ ಡೆಲ್ಲಿ ತಂಡಕ್ಕೆ ಪ್ಲೇ-ಆಫ್ ದೃಷ್ಟಿಯಿಂದ ಈ ಪಂದ್ಯ ಅತ್ಯಂತ ನಿರ್ಣಾಯಕವಾಗಿದೆ.
ರಾಜಸ್ಥಾನ್ ರಾಯಲ್ಸ್ ತಂಡ ಆಡಿದ 9 ಪಂದ್ಯಗಳ ಪೈಕಿ 6ರಲ್ಲಿ ಗೆಲುವು ಸಾಧಿಸಿದ್ದು, ಮೂರು ಪಂದ್ಯಗಳಲ್ಲಿ ಸೋತಿದೆ. ಈ ಮೂಲಕ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡಿದ 8 ಪಂದ್ಯಗಳಲ್ಲಿ ಕೇವಲ 3ರಲ್ಲಿ ಗೆಲುವು ಸಾಧಿಸಿದ್ದು, ಐದು ಪಂದ್ಯಗಳಲ್ಲಿ ಸೋಲುಂಡಿದೆ. ಈ ಮೂಲಕ 6 ಅಂಕದೊಂದಿಗೆ ಅಂಕಪಟ್ಟಿ 7ನೇ ಸ್ಥಾನದಲ್ಲಿದೆ.























