ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಜೀವನದ ಹೊಸ ಪಟ್ಟವನ್ನು ಅಲಂಕರಿಸಿದ್ದಾರೆ. ಅವರ ಪುತ್ರಿ ಐಶ್ವರ್ಯ ಹೆಗ್ಡೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಡಿಕೆಶಿ ತಾತ ಆಗಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಐಶ್ವರ್ಯ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮೊಮ್ಮಗಳನ್ನು ನೋಡಲು ಖಾಸಗಿ ಆಸ್ಪತ್ರೆಗೆ ಡಿ.ಕೆ. ಶಿವಕುಮಾರ ಮತ್ತು ಅವರ ಪತ್ನಿ ಉಷಾ ದೌಡಾಯಿಸಿದ್ದಾರೆ.
ಕೆಫೆ ಕಾಫಿ ಡೇ ಸಂಸ್ಥಾಪಕ ದಿ. ವಿ.ಜಿ. ಸಿದ್ಧಾರ್ಥ ಅವರ ಪುತ್ರ ಅಮರ್ತ್ಯ ಹೆಗ್ಡೆ ಅವರೊಂದಿಗೆ ಐಶ್ವರ್ಯಾ 2021ರ ಫೆ. 14ರಂದು ವಿವಾಹವಾಗಿದ್ದರು. ಶುಕ್ರವಾರ ಚೊಚ್ಚಲ ಮಗುವಿಗೆ ಜನ್ಮ ನೀಡಿದ್ದು, ಎರಡೂ ಕುಟುಂಬಗಳಲ್ಲೂ ಸಂಭ್ರಮ ಮನೆಮಾಡಿದೆ.
























