Home Advertisement
Home ನಮ್ಮ ಜಿಲ್ಲೆ ದಾವಣಗೆರೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್: ಇಬ್ಬರ ಸಾವು

ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್: ಇಬ್ಬರ ಸಾವು

0
15

ದಾವಣಗೆರೆ: ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ತಾಲೂಕಿನ ಆನಗೋಡು ಗ್ರಾಮದ ಸಮೀಪ ಶುಕ್ರವಾರ ರಾತ್ರಿ ನಡೆದಿದೆ.

ವಿಜಯಪುರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಮ್ಮತಹಳ್ಳಿ ಗ್ರಾಮದ ಬಸವರಾಜ್ (31) ಹಾಗೂ ಶರತ್ (26) ಮೃತಪಟ್ಟ ಯುವಕರು. ಬಸವರಾಜ್ ಎಂಬಾತ ನಗರದ ಕೊಡಚಾದ್ರಿ ಚಿಟ್ಸ್ ಫಂಡ್‌ನಲ್ಲಿ ಕೆಲಸ ಮಾಡುತ್ತಿದ್ದರು.

ಬೈಕ್‌ನಲ್ಲಿ ಶುಕ್ರವಾರ ರಾತ್ರಿ ಆನಗೋಡಿನಿಂದ ದಾವಣಗೆರೆಗೆ ಬರುತ್ತಿರುವ ಸಂದರ್ಭದಲ್ಲಿ ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ರಸ್ತೆಯ ಬದಿಯಲ್ಲಿ ಬಿದ್ದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಬೆಳಗ್ಗೆ ಬೈಕ್ ಸವಾರರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ ಮೇಲೆ ಈ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.