ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ನವನಗರದ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಮತಪೆಟ್ಟಿಗೆಗಳಿದ್ದ ಭದ್ರತಾ ಕೊಠಡಿಯನ್ನು ಅಭ್ಯರ್ಥಿಗಳು, ಏಜೆಂಟರ ಸಮ್ಮುಖದಲ್ಲಿ ಅಧಿಕಾರಿಗಳು ತೆರೆದಿದ್ದಾರೆ.
ಮೊದಲು ಅಂಚೆ ಮತಗಳ ಎಣಿಕೆ ಆರಂಭಗೊಳ್ಳಲಿದ್ದು, ನಂತರ ಇವಿಎಂ ಯಂತ್ರಗಳಲ್ಲಿನ ಮತ ಎಣಿಕೆ ಕಾರ್ಯ ಶುರುವಾಗಲಿದೆ. ಮತ ಎಣಿಕೆ ಕೇಂದ್ರದ ಸುತ್ತಮುತ್ತ ಭಾರೀ ಭದ್ರತೆ ನಿಯೋಜಿಸಲಾಗಿದೆ.





















