SK Home Ad
Home ಸುದ್ದಿ ದೇಶ LIVE: ಅಸ್ಸಾಂ ಫಲಿತಾಂಶ 2026 – ಕ್ಷಣ ಕ್ಷಣದ ಲೈವ್ ಅಪ್ಡೇಟ್ಸ್

LIVE: ಅಸ್ಸಾಂ ಫಲಿತಾಂಶ 2026 – ಕ್ಷಣ ಕ್ಷಣದ ಲೈವ್ ಅಪ್ಡೇಟ್ಸ್

0
337

126 ಸದಸ್ಯ ಬಲದ ಅಸ್ಸಾಂ ವಿಧಾನಸಭಾ ಚುನಾವಣೆಯ ಮತಎಣಿಕೆ ಆರಂಭವಾಗಿದ್ದು. ಬಹುತೇಕ ಕಡೆ ತ್ರಿಕೋಣ ಸ್ಪರ್ಧೆ ಏರ್ಪಟ್ಟಿದೆ

NDA ಭರ್ಜರಿ ಮುನ್ನಡೆ, ಹಿಮಂತ ಶರ್ಮಾ ಮತ್ತೆ CM ಸಾಧ್ಯತೆ

ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಮುನ್ನಡೆ ಸಾಧಿಸಿದ್ದು, 126 ಕ್ಷೇತ್ರಗಳಲ್ಲಿ 96ಕ್ಕೂ ಹೆಚ್ಚು ಸ್ಥಾನಗಳಲ್ಲಿ ಲೀಡ್ ಪಡೆದಿದೆ. ಬಹುಮತಕ್ಕೆ ಅಗತ್ಯವಾದ 64 ಸ್ಥಾನಗಳನ್ನು ದಾಟಿರುವುದರಿಂದ ಸರ್ಕಾರ ರಚನೆ ಸುಗಮವಾಗಿದೆ.

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಮೈತ್ರಿಕೂಟ ಮತ್ತೊಮ್ಮೆ ಅಧಿಕಾರಕ್ಕೆ ಮರಳುವ ಸಾಧ್ಯತೆ ಬಹುತೇಕ ಖಚಿತವಾಗಿದೆ. ಇತ್ತ ಕಾಂಗ್ರೆಸ್ ಸುಮಾರು 27 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

ಎನ್‌ಡಿಎ ಮೈತ್ರಿಯಲ್ಲಿ ಅಸ್ಸಾಂ ಗಣ ಪರಿಷತ್ ಮತ್ತು ಬೋಡೋ ಪೀಪಲ್ಸ್ ಫ್ರಂಟ್ ಪ್ರಮುಖ ಪಾತ್ರ ವಹಿಸಿದ್ದರೆ, ವಿರೋಧ ಪಕ್ಷಗಳ ಮೈತ್ರಿಗೆ ಇದು ದೊಡ್ಡ ಹಿನ್ನಡೆಯಾಗಿದೆ.

126 ಸ್ಥಾನಗಳ ವಿಧಾನಸಭೆಯಲ್ಲಿ ಬಹುಮತದ ಗಡಿ ದಾಟಿದ NDA; ಸರ್ಕಾರ ರಚನೆ ಸುಗಮ

ಅಸ್ಸಾಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಂದುವರಿದಿರುವ ಸಂದರ್ಭದಲ್ಲಿ, ಆಡಳಿತಾರೂಢ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ. ಆರಂಭಿಕ ಟ್ರೆಂಡ್‌ಗಳ ಪ್ರಕಾರ ಬಿಜೆಪಿ ಏಕಾಂಗಿಯಾಗಿ 66 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದು, ಇದು ಸರ್ಕಾರ ರಚಿಸಲು ಅಗತ್ಯವಿರುವ ಬಹುಮತದ ಗಡಿ (64) ದಾಟಿದೆ.

ಒಟ್ಟು 126 ಸ್ಥಾನಗಳಿರುವ ಅಸ್ಸಾಂ ವಿಧಾನಸಭೆಯಲ್ಲಿ ಎನ್‌ಡಿಎ 80ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಇದರಿಂದ ಎನ್‌ಡಿಎ ಮತ್ತೊಮ್ಮೆ ಅಧಿಕಾರಕ್ಕೆ ಮರಳುವ ಸಾಧ್ಯತೆ ಬಹುತೇಕ ಖಚಿತವಾಗುತ್ತಿದೆ.

ಈ ಟ್ರೆಂಡ್‌ಗಳು ಮುಂದುವರಿದರೆ, ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಮತ್ತೊಮ್ಮೆ ಸ್ಥಾಪನೆಯಾಗುವುದು ಸ್ಪಷ್ಟವಾಗಿದೆ. ಪ್ರತಿಪಕ್ಷಗಳು ಹಿನ್ನಡೆಯಲ್ಲಿದ್ದು, ಕಾಂಗ್ರೆಸ್ ಮೈತ್ರಿಗೆ ಇದು ದೊಡ್ಡ ಹೊಡೆತವಾಗಿ ಪರಿಣಮಿಸಬಹುದು ಎಂದು ವಿಶ್ಲೇಷಕರು ಹೇಳುತ್ತಿದ್ದಾರೆ.

ಅಸ್ಸಾಂನಲ್ಲಿ ನಡೆದ ಮತದಾನದಲ್ಲಿ ಜನರಿಂದ ಉತ್ತಮ ಸ್ಪಂದನೆ ದೊರಕಿದ್ದು, ಈ ಬಾರಿ ರಾಜಕೀಯವಾಗಿ ಪ್ರಮುಖ ಸ್ಪರ್ಧೆ ಕಂಡುಬಂದಿತ್ತು. ಆದರೆ ಆರಂಭಿಕ ಅಂಕಿಅಂಶಗಳು ಬಿಜೆಪಿ ಪರವಾಗಿ ಸ್ಪಷ್ಟವಾದ ಜನಮತವನ್ನು ಸೂಚಿಸುತ್ತಿವೆ.

ಮತ ಎಣಿಕೆ ಇನ್ನೂ ಮುಂದುವರಿದಿದ್ದು, ಅಂತಿಮ ಫಲಿತಾಂಶಗಳಲ್ಲಿ ಸಣ್ಣ ಮಟ್ಟದ ಬದಲಾವಣೆ ಸಾಧ್ಯವಾದರೂ, ಎನ್‌ಡಿಎ ಸರ್ಕಾರ ರಚನೆಗೆ ದಾರಿ ಸುಗಮವಾಗಿದೆ. ರಾಜ್ಯದ ರಾಜಕೀಯ ಭವಿಷ್ಯ ಮತ್ತೊಮ್ಮೆ ಬಿಜೆಪಿ ಕೈಯಲ್ಲಿ ಮುಂದುವರಿಯುವ ಲಕ್ಷಣಗಳು ಸ್ಪಷ್ಟವಾಗುತ್ತಿವೆ.

NDA ಭರ್ಜರಿ ಮುನ್ನಡೆ

ಅಸ್ಸಾಂ ವಿಧಾನಸಭೆ ಚುನಾವಣೆಯ ಫಲಿತಾಂಶಗಳು ತೀವ್ರ ಕುತೂಹಲದ ನಡುವೆ ಹೊರಬರುತ್ತಿದ್ದು, ಆರಂಭಿಕ ಟ್ರೆಂಡ್‌ಗಳಲ್ಲೇ ಎನ್‌ಡಿಎ ಭರ್ಜರಿ ಮುನ್ನಡೆ ಸಾಧಿಸಿದೆ. 126 ಸದಸ್ಯ ಬಲದ ವಿಧಾನಸಭೆಯಲ್ಲಿ ಬಹುಮತಕ್ಕೆ ಅಗತ್ಯವಾದ 64 ಸ್ಥಾನಗಳ ಗಡಿಯನ್ನು ದಾಟುವ ಸೂಚನೆಗಳು ದೊರಕುತ್ತಿವೆ.

ಲಭ್ಯವಿರುವ ಆರಂಭಿಕ ಅಂಕಿಅಂಶಗಳ ಪ್ರಕಾರ, ಎನ್‌ಡಿಎ 66 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದು, ಕಾಂಗ್ರೆಸ್+ ಕೇವಲ 9 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಇನ್ನು ಇತರರು (OTH) 2 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದಾರೆ.

ಈ ಟ್ರೆಂಡ್‌ಗಳು ಮುಂದುವರಿದರೆ, ಅಸ್ಸಾಂನಲ್ಲಿ ಎನ್‌ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಮತ್ತೊಂದೆಡೆ, ಕಾಂಗ್ರೆಸ್ ಮೈತ್ರಿಗೆ ಇದು ದೊಡ್ಡ ಹಿನ್ನಡೆಯಾಗಿ ಪರಿಣಮಿಸಬಹುದು.

ರಾಜ್ಯದಲ್ಲಿ ನಡೆದ ಮತದಾನದಲ್ಲಿ ಜನರಿಂದ ಉತ್ತಮ ಸ್ಪಂದನೆ ದೊರಕಿದ್ದು, ಫಲಿತಾಂಶಗಳತ್ತ ದೇಶದ ಗಮನ ಕೇಂದ್ರೀಕೃತವಾಗಿದೆ. ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದ್ದು, ಮುಂದಿನ ಕೆಲವು ಗಂಟೆಗಳಲ್ಲಿ ಅಂತಿಮ ಚಿತ್ರಣ ಸ್ಪಷ್ಟವಾಗುವ ನಿರೀಕ್ಷೆಯಿದೆ.