ಮುಂಬೈ: ಐಪಿಎಲ್ 47ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಟಾಸ್‌ನಲ್ಲಿ ಗೆಲುವು ಸಾಧಿಸಿದೆ.
ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಫೀಲ್ಡಿಂಗ್ ಆಯ್ದುಕೊಂಡಿದೆ.
ಅಂಕಪಟ್ಟಿ ಕ್ರಮವಾಗಿ ಕೊನೆಯ ಸ್ಥಾನದಲ್ಲಿರುವ ಮುಂಬೈ ಮತ್ತು ಲಖನೌ ಕ್ರಮವಾಗಿ 9 ಮತ್ತು 10 ಸ್ಥಾನವನ್ನು ಪಡೆದಿವೆ.
ಎರಡೂ ತಂಡಗಳು ಕೂಡ ಇದುವರೆಗೆ ಎರಡು ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿದ್ದು, ಇಬ್ಬರಿಗೂ ಈ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.























