ಲಖನೌ: ಐಪಿಎಲ್ 2026ರ 50ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಟಾಸ್‌ನಲ್ಲಿ ಗೆಲುವು ಸಾಧಿಸಿದೆ.
ಇಲ್ಲಿನ ಏಕಾನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ರಾಯಲ್ ಚಾಲೆಂಜರ್ಸ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.
ಆರ್‌ಸಿಬಿ ಆಡಿದ 9 ಪಂದ್ಯಗಳಲ್ಲಿ 6ರಲ್ಲಿ ಜಯ ಸಾಧಿಸಿದ್ದು, 3ರಲ್ಲಿ ಸೋಲು ಕಂಡಿದೆ. ಈ ಮೂಲಕ ಒಟ್ಟು 12 ಅಂಕಗಳೊಂದಿಗೆ 3ನೇ ಸ್ಥಾನವನ್ನು ಪಡೆದಿದೆ.
ಲಖನೌ ತಂಡ ಆಡಿದ 9 ಪಂದ್ಯಗಳ ಪೈಕಿ ಕೇವಲ ಎರಡರಲ್ಲಿ ಮಾತ್ರ ಗೆಲುವು ದಾಖಲಿಸಿದ್ದು, ಉಳಿದ 7 ಪಂದ್ಯಗಳಲ್ಲಿ ಸೋತಿದ್ದು, 4 ಅಂಕಗಳೊಂದಿಗೆ 10ನೇ ಸ್ಥಾನವನ್ನು ಪಡೆದಿದೆ.























