Home Advertisement
Home ನಮ್ಮ ಜಿಲ್ಲೆ ಬೆಂಗಳೂರು ಪ್ರಧಾನಿ ತೆರಳುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆ: ಓರ್ವ ಅರೆಸ್ಟ್​

ಪ್ರಧಾನಿ ತೆರಳುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆ: ಓರ್ವ ಅರೆಸ್ಟ್​

0
129

ಬೆಂಗಳೂರು: ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಸ್ಫೋಟಕ ವಸ್ತುವಾದ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಆತಂಕ ಮೂಡಿಸಿದೆ.

ಬೆಂಗಳೂರು ಹೊರವಲಯದ ಕಗ್ಗಲಿಪುರ ಗ್ರಾಮದ ತಾತಗುಣಿ ಬಳಿ, ಜಿಲೆಟಿನ್ ಕಡ್ಡಿ ಪತ್ತೆಯಾಗಿದೆ. ಈ ಕುರಿತಂತೆ ಬೆಂಗಳೂರು ನಗರ ಹಾಗೂ ರಾಮನಗರದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದಿದ್ದಾರೆ.

ಅನುಮಾನಾಸ್ಪದ ಬ್ಯಾಗ್‌ವೊಂದು ಕಂಡುಬಂದ ಹಿನ್ನೆಲೆ ಅದನ್ನು ಪೊಲೀಸರು ಪರಿಶೀಲನೆ ನಡೆಸಿದಾಗ ಆ ಬ್ಯಾಗ್‌ನಲ್ಲಿ ಜಿಲೆಟಿನ್ ಕಡ್ಡಿಗಳು ಇರುವುದಾಗಿ ಕಂಡುಬಂದಿದೆ. ಉದ್ದೇಶಪೂರ್ವಕವಾಗಿ ಇರಿಸಲಾಗಿದೆಯೇ ಅಥವಾ ಇದರ ಉದ್ದೇಶವೇನು ಎನ್ನುವುದು ತನಿಖೆಯಿಂದ ತಿಳಿದು ಬರಬೇಕಿದೆ.

ಇನ್ನು ಘಟನೆ ಸಂಬಂಧಿಸಿದಂತೆ ಶಂಕಿತ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದಿರುವ ಪೊಲೀಸರು. ಆತನನ್ನು ವಿಚಾರಣೆಗೆ ಒಳಪಡಿಸಿದ್ದು, ನಿಜಾಂಶ ಏನು? ಎನ್ನುವುದು ತನಿಖೆಯ ಬಳಿಕ ತಿಳಿದು ಬರಲಿದೆ.