ಚೆನ್ನೈ: ಮುಖ್ಯಮಂತ್ರಿಯಾಗಿ ಭಾನುವಾರ ಅಧಿಕಾರವಹಿಸಿಕೊಂಡ ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ, ನಟ ಜೋಸೆಫ್ ವಿಜಯ್, ಸೋಮವಾರ ಮಾಜಿ ಮುಖ್ಯಮಂತ್ರಿ ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿ ಮಾಡಿದರು.
ಚೆನ್ನೈನಲ್ಲಿರುವ ಸ್ಟಾಲಿನ್ ಅವರ ನಿವಾಸಕ್ಕೆ ಭೇಟಿ ನೀಡಿದ ವಿಜಯ್ ಕೆಲ ಸಮಯ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.





















