SK Home Ad
Home ಕ್ರೀಡೆ IPL 2026: ಪಂಜಾಬ್‌‌ ಕಿಂಗ್ಸ್‌ ವಿರುದ್ಧ ಟಾಸ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್

IPL 2026: ಪಂಜಾಬ್‌‌ ಕಿಂಗ್ಸ್‌ ವಿರುದ್ಧ ಟಾಸ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್

0
415

ಧರ್ಮಶಾಲಾ: ಐಪಿಎಲ್‌ ಪಂದ್ಯಾವಳಿಯ 55ನೇ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ ಟಾಸ್‌ನಲ್ಲಿ ಗೆಲುವು ಸಾಧಿಸಿದೆ.

ಹಿಮಾಚಲ ಪ್ರದೇಶ ಕ್ರಿಕೆಟ್‌ ಅಸೋಸಿಯೇಶನ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಡೆಲ್ಲಿ ಮೊದಲು ಫೀಲ್ಡಿಂಗ್‌ ಆಯ್ದುಕೊಂಡಿದೆ.

ಟೂರ್ನಿಯಲ್ಲಿ ಭರ್ಜರಿ ಆರಂಭ ಪಡೆದಿದ್ದ ಪಂಜಾಬ್ ಕಿಂಗ್ಸ್ ಸದ್ಯ 13 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಆದರೆ ಕಳೆದ ಮೂರು ಪಂದ್ಯಗಳಲ್ಲಿ ಸತತ ಸೋಲು ಅನುಭವಿಸಿರುವುದು ತಂಡಕ್ಕೆ ಅಲ್ಪ ಹಿನ್ನಡೆ ತಂದಿದೆ.

ಇತ್ತ ಅಕ್ಷರ್ ಪಟೇಲ್ ಸಾರಥ್ಯದ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ ರೇಸ್‌ನಿಂದ ಬಹುತೇಕ ಹೊರಬಿದ್ದಿದ್ದು, ಆಡಿದ 11 ಪಂದ್ಯಗಳಲ್ಲಿ ಕೇವಲ 4 ಗೆಲುವುಗಳೊಂದಿಗೆ ಸಂಕಷ್ಟದಲ್ಲಿದೆ. ಸತತ ಸೋಲುಗಳಿಂದ ದೆಹಲಿ ಆಟಗಾರರ ಆತ್ಮವಿಶ್ವಾಸ ಕುಸಿದಿದೆ.