Home Advertisement
Home ಸುದ್ದಿ ದೇಶ ತಮಿಳುನಾಡು ವಿಧಾನಸಭೆಯ ಸ್ಪೀಕರ್‌ ಆಗಿ ಪ್ರಭಾಕರ್‌ ಆಯ್ಕೆ

ತಮಿಳುನಾಡು ವಿಧಾನಸಭೆಯ ಸ್ಪೀಕರ್‌ ಆಗಿ ಪ್ರಭಾಕರ್‌ ಆಯ್ಕೆ

0
106

ಚೆನ್ನೈ: ತಮಿಳುನಾಡು ವಿಧಾನಸಭೆ ಸ್ಪೀಕರ್ ಆಗಿ ತಮಿಳಗ ವೆಟ್ರಿ ಕಳಗಂ ಪಕ್ಷದ ಶಾಸಕ ಜೆಸಿಡಿ ಪ್ರಭಾಕರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಪ್ರಭಾಕರ್ ಅವರ ಹೆಸರನ್ನು ಪ್ರಸ್ತಾಪಿಸಿದರು ಮತ್ತು ಈ ಹುದ್ದೆಗೆ ಅವರದ್ದು ಒಂದೇ ನಾಮಪತ್ರ ಸಲ್ಲಿಕೆಯಾಗಿದ್ದರಿಂದಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಹಂಗಾಮಿ ಸ್ಪೀಕರ್ ಎಂ. ವಿ. ಕರುಪ್ಪಯ್ಯ ಘೋಷಿಸಿದರು.

ಬಳಿಕ ಉಪ ಸ್ಪೀಕರ್‌ ಸ್ಥಾನಕ್ಕೆ ತುರೈಯೂರ್‌ನ ಟಿವಿಕೆ ಶಾಸಕ ಎಂ. ರವಿಶಂಕರ್ ಅವಿರೋಧವಾಗಿ ಆಯ್ಕೆಯಾದರು. ಡೆಪ್ಯೂಟಿ ಸ್ಪೀಕ‌ರ್ ಸ್ಥಾನಕ್ಕೆ ರವಿಶಂಕರ್ ಹೊರತುಪಡಿಸಿ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಕಾರಣ ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸ್ಪೀಕರ್​ ಘೋಷಿಸಿದರು.

ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಮಾತನಾಡಿ, ಅವಿರೋಧವಾಗಿ ಆಯ್ಕೆಯಾದ ನೂತನ ಸ್ಪೀಕರ್ ಪ್ರಭಾಕರ್ ಮತ್ತು ಡೆಪ್ಯೂಟಿ ಸ್ಪೀಕರ್ ರವಿಶಂಕರ್ ಅವರು ಅಭಿನಂದಿಸಿ, ಸದನವನ್ನು ಸುಗಮವಾಗಿ ನಡೆಸಿಕೊಡುವಂತೆ ಅವರಿಗೆ ಶುಭ ಹಾರೈಸಿದರು.