Home Advertisement
Home ನಮ್ಮ ಜಿಲ್ಲೆ ದಾವಣಗೆರೆ ಪೋಕ್ಸೋ: ವಿಚಾರಣೆ ಬಳಿಕ ವೈದ್ಯಕೀಯ ಪರೀಕ್ಷೆಗೆ ವಚನಾನಂದ ಶ್ರೀ

ಪೋಕ್ಸೋ: ವಿಚಾರಣೆ ಬಳಿಕ ವೈದ್ಯಕೀಯ ಪರೀಕ್ಷೆಗೆ ವಚನಾನಂದ ಶ್ರೀ

0
27

ದಾವಣಗೆರೆ: ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಪದಚ್ಯುತಿಗೊಂಡ ಜಗದ್ಗುರು ಶ್ರೀವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಹರಿಹರ ಗ್ರಾಮಾಂತರ ಠಾಣೆಯ ಪೊಲೀಸರು ಗುರುವಾರ ಸುದೀರ್ಘ ವಿಚಾರಣೆ ನಡೆಸಿದರು.

ಬೆಳಗ್ಗೆ 8.30ರ ಸುಮಾರಿಗೆ ಠಾಣೆಗೆ ವಿಚಾರಣೆಗೆ ಹಾಜರಾದ ಸ್ವಾಮೀಜಿಯವರನ್ನು ಮಧ್ಯಾಹ್ನದ ವರೆಗೂ ವಿಚಾರಣೆ ನಡೆಸಿರುವ ಪೊಲೀಸರು ಅವರಿಂದ ಉತ್ತರನ್ನು ಪಡೆದಿದ್ದಾರೆ. ಬಳಿಕ ಸ್ವಾಮೀಜಿ ಅವರಿಗೆ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

ಗುರುಪೀಠದಲ್ಲಿ ಶಿಕ್ಷಣ ಪಡೆಯುತ್ತಿದ್ದ ಬಾಲಕನ ಮೇಲೆ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಪದಚ್ಯುತಿಗೊಂಡ ಪೀಠಾಧಿಪತಿ ಶ್ರೀವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಬಾಲಕನ ತಾಯಿ ಪ್ರಕರಣ ದಾಖಲಿಸಿದ್ದರು. ಲಕ್ಷ್ಮೇಶ್ವರ ಪೊಲೀಸರು ಈ ಪ್ರಕರಣವನ್ನು ಹರಿಹರ ಗ್ರಾಮಾಂತರ ಪೊಲೀಸ್ ಠಾಣಗೆ ವರ್ಗಾಯಿಸಿದ್ದರು.

ತನಿಖೆ ಕೈಗೊಂಡಿದ್ದ ಹರಿಹರ ಗ್ರಾಮಾಂತರ ಠಾಣೆಗೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಶ್ರೀವಚನಾನಂದ ಸ್ವಾಮೀಜಿಗೆ ನೋಟಿಸ್ ನೀಡಿದ್ದರು.