ದಾವಣಗೆರೆ: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿರುವ ಘಟನೆ ತಾಲೂಕಿನ ಮುದಹದಡಿ ಗ್ರಾಮದ ಸಮೀಪ ಗುರುವಾರ ಸಂಜೆ ನಡೆದಿದೆ.
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮರಡಿ ಗ್ರಾಮದ ದುಂಡಪ್ಪ ಗವನಾಳ ಅಲಿಯಾಸ್ ಅಜಯ್ (19) ಮೃತಪಟ್ಟ ಕುರಿಗಾಹಿ.
ಕುರಿಗಳೊಂದಿಗೆ ವಲಸೆ ಬಂದಿದ್ದ ದುಂಡಪ್ಪ ಕುಟುಂಬ ಮುದಹದಡಿ ಗ್ರಾಮದಲ್ಲಿ ಬೀಡುಬಿಟ್ಟಿತ್ತು. ಬೆಳಗ್ಗೆಯಿಂದ ಸಂಜೆಯವರೆಗೆ ರೈತರ ಜಮೀನುಗಳಲ್ಲಿ ಕುರಿ ಮೇಯಿಸುತ್ತಿದ್ದ. ಸಂಜೆ ಆರಂಭವಾದಾಗ ಯುವಕ ಮಳೆಯಿಂದ ರಕ್ಷಣೆ ಪಡೆಯಲು ಮರದಡಿ ನಿಂತಿದ್ದರು. ಈ ಸಂದರ್ಭದಲ್ಲಿ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹದಡಿ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.




















