ಚೆನ್ನೈ: ಐಪಿಎಲ್ ಪಂದ್ಯಾವಳಿಯ 63ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಟಾಸ್‌ನಲ್ಲಿ ಗೆಲುವು ಸಾಧಿಸಿದೆ.
ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಮಹತ್ವದ ಪಂದ್ಯದಲ್ಲಿ ಚೆನ್ನೈ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಪ್ಲೇಆಫ್ ಭವಿಷ್ಯ ನಿರ್ಧರಿಸುವಲ್ಲಿ ಈ ಪಂದ್ಯ ಎರಡೂ ತಂಡಗಳಿಗೂ ಅತ್ಯಂತ ನಿರ್ಣಾಯಕವಾಗಿದೆ.
ಪ್ರಸ್ತುತ ಸಿಎಸ್‌ಕೆ ತಂಡ 12 ಪಂದ್ಯಗಳಲ್ಲಿ 6 ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಪ್ಲೇ ಆಫ್ ಆಸೆ ಜೀವಂತವಾಗಿರಲು ಇಂದು ಗೆಲ್ಲಲೇಬೇಕಾದ ಅನಿವಾರ್ಯತೆ ಋತುರಾಜ್ ಪಡೆಗಿದೆ.
ಇನ್ನು 14 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿರುವ ಹೈದರಾಬಾದ್, ಇಂದು ಜಯ ಸಾಧಿಸಿದರೆ ಪ್ಲೇಆಫ್ ಸ್ಥಾನವನ್ನು ಬಹುತೇಕ ಖಚಿತಪಡಿಸಿಕೊಳ್ಳಲಿದೆ.
ಕಣಕ್ಕಿಳಿಯದ ಧೋನಿ: ಮಹೇಂದ್ರಸಿಂಗ್ ಧೋನಿ ಮೈದಾನಕ್ಕಿಳಿಯುತ್ತಾರೆ ಎಂದು ಕಾದು ಕುಳಿತಿರುವ ಅಭಿಮಾನಿಗಳಿಗೆ ಇಂದು ಕೂಡ ನಿರಾಸೆಯಾಗಿದೆ. ಧೋನಿ ಸಂಪೂರ್ಣವಾಗಿ ಫಿಟ್ ಆಗಿರದ ಕಾರಣ ಈ ಪಂದ್ಯದಲ್ಲಿ ಆಡುತ್ತಿಲ್ಲ ಎಂದು ಸಿಎಸ್‌ಕೆ ತಿಳಿಸಿದೆ.























