Home Advertisement
Home ನಮ್ಮ ಜಿಲ್ಲೆ ದಾವಣಗೆರೆ ಈಜಲು ಹೋಗಿದ್ದ ಯುವಕ ನೀರುಪಾಲು

ಈಜಲು ಹೋಗಿದ್ದ ಯುವಕ ನೀರುಪಾಲು

0
24

ದಾವಣಗೆರೆ: ಕೆರೆಯಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ನೀರು ಪಾಲಾದ ಘಟನೆ ತಾಲೂಕಿನ ಮಾಗಾನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಗ್ರಾಮದ ಆಕಾಶ್ (17) ಮೃತ ಯುವಕ. ಸ್ನೇಹಿತರೊಂದಿಗೆ ಗ್ರಾಮದ ಕೆರೆಗೆ ಈಜಲು ತೆರಳಿದ್ದ, ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಆಕಾಶ್ ನೀರಿನಲ್ಲಿ ಮುಳುಗಿದ್ದಾನೆ. ಸ್ನೇಹಿತನನ್ನು ರಕ್ಷಿಸಲು ಜೊತೆಗಿದ್ದವರು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ.

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ಯುವಕನ ದೇಹವನ್ನು ನೀರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಬಗ್ಗೆ ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.