Home Advertisement
Home ನಮ್ಮ ಜಿಲ್ಲೆ ಚಿಕ್ಕಮಗಳೂರು ಪ್ರಜಾಪ್ರಭುತ್ವದ ಮೇಲೆ ಅಪನಂಬಿಕೆ ಸೃಷ್ಟಿಸುವುದೇ ಕಾಂಗ್ರೆಸ್ ಚಾಳಿ

ಪ್ರಜಾಪ್ರಭುತ್ವದ ಮೇಲೆ ಅಪನಂಬಿಕೆ ಸೃಷ್ಟಿಸುವುದೇ ಕಾಂಗ್ರೆಸ್ ಚಾಳಿ

0
37

ಚಿಕ್ಕಮಗಳೂರು: ಎಸ್‌ಐಆರ್ ಎಂಬುದು ನಿಯಮಿತವಾಗಿ ನಡೆಯುವ ಸಾಂಪ್ರದಾಯಿಕ ಪ್ರಕ್ರಿಯೆಯಾಗಿದ್ದು, 1952 ಮತ್ತು 1957ರಲ್ಲಿ ಜವಾಹರಲಾಲ್ ನೆಹರು ಹಾಗೂ 1967 ಮತ್ತು 1977ರಲ್ಲಿ ಇಂದಿರಾಗಾಂಧಿ ಅವರು ಪ್ರಧಾನಿಯಾಗಿದ್ದ ಕಾಲದಲ್ಲೂ ಇದು ಜರುಗಿದೆ ಎಂಬುದನ್ನು ಕಾಂಗ್ರೆಸ್ಸಿಗರು ನೆನಪಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಜಾಪ್ರಭುತ್ವದ ಸಾಂಸ್ಥಿಕ ಪ್ರಕ್ರಿಯೆಗಳ ಮೇಲೆ ಅಪನಂಬಿಕೆ ಸೃಷ್ಟಿಸುವುದೇ ಕಾಂಗ್ರೆಸ್‌ಗೆ ಒಂದು ಚಾಳಿಯಾಗಿ ಪರಿಣಮಿಸಿದೆ. ಮತದಾರರ ಪಟ್ಟಿಯ ಶುದ್ಧೀಕರಣಕ್ಕಾಗಿ ದಶಕಗಳಿಂದಲೂ ನಡೆದುಕೊಂಡು ಬಂದಿರುವ ಎಸ್‌ಐಆರ್ ಪ್ರಕ್ರಿಯೆಯನ್ನು ಕಾಂಗ್ರೆಸ್ ರಾಜಕೀಯ ಲಾಭಕ್ಕಾಗಿ ವಿರೋಧಿಸುತ್ತಿದೆ ಎಂದು ಆರೋಪಿಸಿದರು.

ಮತದಾರರ ಪಟ್ಟಿಯಲ್ಲಿ ಅನರ್ಹರನ್ನು ಹೊರಗಿಟ್ಟು, ಅರ್ಹರಿಗೆ ಸ್ಥಾನ ಕಲ್ಪಿಸುವುದು ಈ ಪ್ರಕ್ರಿಯೆಯ ಮೂಲ ಉದ್ದೇಶವಾಗಿದೆ. ಇದನ್ನು ಸ್ಥಳೀಯ ಕಂದಾಯ, ಶಿಕ್ಷಣ ಇಲಾಖೆಯ ಬಿಎಲ್‌ಒಗಳು ನಿರ್ವಹಿಸುತ್ತಾರೆಯೇ ವಿನಃ ಯಾವುದೇ ಹೊರದೇಶದವರು ಬಂದು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕೇರಳದಲ್ಲಿ ಕಾಂಗ್ರೆಸ್ ಮತ್ತು ತಮಿಳುನಾಡಿನಲ್ಲಿ ಡಿಎಂಕೆ ಗೆದ್ದಾಗಲೂ ಇದೇ ಎಸ್‌ಐಆರ್ ಪ್ರಕ್ರಿಯೆ ನಡೆದಿತ್ತು. ಆದರೆ ತಾನು ಗೆದ್ದಾಗ ಸುಮ್ಮನಿದ್ದು, ಸೋತಾಗ ಮಾತ್ರ ಪ್ರಕ್ರಿಯೆಯ ಮೇಲೆ ಗೂಭೆ ಕೂರಿಸುವುದು ಕಾಂಗ್ರೆಸ್‌ನ ಇಬ್ಬಗೆಯ ನೀತಿಯನ್ನು ತೋರಿಸುತ್ತದೆ ಎಂದು ಕುಟುಕಿದರು.