Home Advertisement
Home ಕ್ರೀಡೆ IPL 2026: ರಾಜಸ್ಥಾನಗೆ ಮಾಡು ಇಲ್ಲವೇ ಮಡಿ ಪಂದ್ಯ

IPL 2026: ರಾಜಸ್ಥಾನಗೆ ಮಾಡು ಇಲ್ಲವೇ ಮಡಿ ಪಂದ್ಯ

0
74

ಜೈಪುರ: ಐಪಿಎಲ್ 2026ರ ಪ್ಲೇಆಫ್ ರೇಸ್‌ನಲ್ಲಿ ಜೀವಂತವಾಗಿರಲು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಇಂದು ಅತ್ಯಂತ ನಿರ್ಣಾಯಕ ದಿನ. ಮಂಗಳವಾರ ಇಲ್ಲಿನ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ರಿಯಾನ್ ಪರಾಗ್ ನೇತೃತ್ವದ ರಾಜಸ್ಥಾನ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ಸವಾಲನ್ನು ಎದುರಿಸಲಿದೆ.

ಸತತ ಮೂರು ಸೋಲುಗಳಿಂದ ಕಂಗಾಲಾಗಿರುವ ರಾಜಸ್ಥಾನ ರಾಯಲ್ಸ್‌ಗೆ ಪ್ಲೇಆಫ್ ಕನಸು ಜೀವಂತವಾಗಿರಿಸಿಕೊಳ್ಳಲು ಇನ್ನುಳಿದಿರುವ ಎರಡೂ ಪಂದ್ಯಗಳ ಗೆಲುವು ಅನಿವಾರ್ಯವಾಗಿದೆ.

ವಿಶೇಷವೆಂದರೆ, ರಾಜಸ್ಥಾನ್ ತಂಡವು ತನ್ನ ಅಪ್ಪಟ ತವರು ಮೈದಾನವಾದ ಜೈಪುರದಲ್ಲಿ ಈವರೆಗೆ ಆಡಿರುವ ಮೂರೂ ಪಂದ್ಯಗಳಲ್ಲಿ ಸೋಲನುಭವಿಸಿದೆ. ಈ ‘ತವರು ಶಾಪ’ವನ್ನು ನೀಗಿಸಿಕೊಳ್ಳುವುದು ಪರಾಗ್ ಪಡೆಗೆ ದೊಡ್ಡ ಸವಾಲಾಗಿದೆ.

ಅತ್ತ ಲಕ್ನೋ ತಂಡವು ಈಗಾಗಲೇ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿದ್ದರೂ, ಇತ್ತೀಚೆಗೆ ಆರ್‌ಸಿಬಿ ಮತ್ತು ಸಿಎಸ್‌ಕೆ ತಂಡಗಳನ್ನು ಮಣಿಸಿ ಭರ್ಜರಿ ಫಾರ್ಮ್ನಲ್ಲಿದೆ. ಒಂದು ವೇಳೆ ಇಂದು ರಾಜಸ್ಥಾನ್ ಸೋತರೆ ಪ್ಲೇಆಫ್ ಹಾದಿ ಬಹುತೇಕ ಮುಚ್ಚಲಿದ್ದು, ಜೈಪುರದಲ್ಲಿಂದು ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ.