Home Advertisement
Home ಕ್ರೀಡೆ IPL 2026: ಗೆಲ್ಲಲೇಬೇಕಾದ ಪಂದ್ಯದಲ್ಲಿ ಟಾಸ್‌ ಗೆದ್ದ ರಾಜಸ್ಥಾನ

IPL 2026: ಗೆಲ್ಲಲೇಬೇಕಾದ ಪಂದ್ಯದಲ್ಲಿ ಟಾಸ್‌ ಗೆದ್ದ ರಾಜಸ್ಥಾನ

0
79

ಜೈಪುರ್:‌ ಐಪಿಎಲ್‌ 64ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್‌ ಟಾಸ್‌ನಲ್ಲಿ ಗೆಲುವು ಸಾಧಿಸಿದೆ.

ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ರಾಜಸ್ಥಾನ ಮೊದಲು ಬೌಲಿಂಗ್‌ ಆಯ್ದುಕೊಂಡಿದೆ.

ಸತತ ಮೂರು ಸೋಲುಗಳಿಂದ ಕಂಗಾಲಾಗಿರುವ ರಾಜಸ್ಥಾನ ರಾಯಲ್ಸ್‌ಗೆ ಪ್ಲೇಆಫ್ ಕನಸು ಜೀವಂತವಾಗಿರಿಸಿಕೊಳ್ಳಲು ಈ ಪಂದ್ಯ ಅತ್ಯಂತ ಮಹತ್ವದ್ದಾಗಿದ್ದು, ಉಳಿದಿರುವ ಮುಂದಿನ ಪಂದ್ಯದಲ್ಲೂ ಗೆಲುವು ಅನಿವಾರ್ಯವಾಗಿದೆ.

ವಿಶೇಷವೆಂದರೆ, ರಾಜಸ್ಥಾನ್ ತಂಡವು ತನ್ನ ಅಪ್ಪಟ ತವರು ಮೈದಾನವಾದ ಜೈಪುರದಲ್ಲಿ ಈವರೆಗೆ ಆಡಿರುವ ಮೂರೂ ಪಂದ್ಯಗಳಲ್ಲಿ ಸೋಲನುಭವಿಸಿದೆ. ಈ ‘ತವರು ಶಾಪ’ವನ್ನು ನೀಗಿಸಿಕೊಳ್ಳುವುದು ಪರಾಗ್ ಪಡೆಗೆ ದೊಡ್ಡ ಸವಾಲಾಗಿದೆ.

ಅತ್ತ ಲಕ್ನೋ ತಂಡವು ಈಗಾಗಲೇ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿದ್ದರೂ, ಇತ್ತೀಚೆಗೆ ಆರ್‌ಸಿಬಿ ಮತ್ತು ಸಿಎಸ್‌ಕೆ ತಂಡಗಳನ್ನು ಮಣಿಸಿ ಭರ್ಜರಿ ಫಾರ್ಮ್‌ನಲ್ಲಿದೆ. ಒಂದು ವೇಳೆ ಇಂದು ರಾಜಸ್ಥಾನ್ ಸೋತರೆ ಪ್ಲೇಆಫ್ ಹಾದಿ ಬಹುತೇಕ ಮುಚ್ಚಲಿದೆ.