Home Advertisement
Home ನಮ್ಮ ಜಿಲ್ಲೆ ಕೊಪ್ಪಳ ಕೃಷಿ ಹೊಂಡದಲ್ಲಿ ಬಿದ್ದು ಬಾಲಕಿಯರು ಸಾವು

ಕೃಷಿ ಹೊಂಡದಲ್ಲಿ ಬಿದ್ದು ಬಾಲಕಿಯರು ಸಾವು

0
41

ಕೊಪ್ಪಳ: ಕೃಷಿ ಹೊಂಡಕ್ಕೆ ಬಟ್ಟೆ ತೊಳೆಯಲು ಹೋದ ಸಂದರ್ಭದಲ್ಲಿ ಕಾಲು ಜಾರಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಕುಕನೂರು ತಾಲೂಕಿನ ಯರೇಹಂಚಿನಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಲಕ್ಷ್ಮವ್ವ ಹರಣಿಶಿಕಾರಿ (15), ಮುತ್ತವ್ವ ಹರಣಿಶಿಕಾರಿ (8) ಮೃತ ಬಾಲಕಿಯರು. ಮೃತರು ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದವರು ಎಂದು ಗುರುತಿಸಲಾಗಿದೆ. ಘಟನಾ ಸ್ಥಳದಲ್ಲಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.