SK Home Ad
Home ಕ್ರೀಡೆ IPL 2026: ಟಾಸ್‌ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್

IPL 2026: ಟಾಸ್‌ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್

0
167

ಕೋಲ್ಕತ್ತಾ: ಐಪಿಎಲ್ ಪಂದ್ಯಾವಳಿಯ 65ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಟಾಸ್‌ನಲ್ಲಿ ಗೆಲುವು ಸಾಧಿಸಿದೆ.

ಈಡನ್ ಗಾರ್ಡನ್‌ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಟಾಸ್‌ ಗೆದ್ದು ಮೊದಲು ಫೀಲ್ಡಿಂಗ್‌ ಆಯ್ದುಕೊಂಡಿದೆ.

ಪ್ಲೇಆಫ್ ರೇಸ್‌ನಲ್ಲಿ ಅನಿಶ್ಚಿತತೆ ಎದುರಿಸುತ್ತಿರುವ ಕೆಕೆಆರ್‌ಗೆ ಮುಂದಿನ ಹಂತಕ್ಕೇರಲು ಇಂದಿನ ಗೆಲುವು ಅತ್ಯಂತ ನಿರ್ಣಾಯಕವಾಗಿದೆ.

ಈಗಾಗಲೇ ಮುಂಬೈ ಇಂಡಿಯನ್ಸ್ ಟೂರ್ನಿಯಿಂದ ಅಧಿಕೃತವಾಗಿ ಹೊರಬಿದ್ದಿದ್ದು, ಮರ್ಯಾದೆ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದೆ.

ಅಂಕಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್‌ 9ನೇ ಸ್ಥಾನದಲ್ಲಿದ್ದರೆ, ಕೋಲ್ಕತ್ತಾ 8ನೇ ಸ್ಥಾನದಲ್ಲಿದೆ.