Home Advertisement
Home ನಮ್ಮ ಜಿಲ್ಲೆ ಬೆಂಗಳೂರು ಕಾಡುಗೊಲ್ಲರ ಸಂಘದ ರಾಜ್ಯಾಧ್ಯಕ್ಷ ರಾಜಣ್ಣ BJPಗೆ ಸೇರ್ಪಡೆ

ಕಾಡುಗೊಲ್ಲರ ಸಂಘದ ರಾಜ್ಯಾಧ್ಯಕ್ಷ ರಾಜಣ್ಣ BJPಗೆ ಸೇರ್ಪಡೆ

0
38

ಬೆಂಗಳೂರು : ಕಾಡುಗೊಲ್ಲರ ಸಂಘದ ರಾಜ್ಯಾಧ್ಯಕ್ಷ ರಾಜಣ್ಣ ಅವರು ತಮ್ಮ ಬೆಂಬಲಿಗರೊಂದಿಗೆ ಗುರುವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ. ವಿಜಯೇಂದ್ರ ಅವರು ರಾಜಣ್ಣ ಅವರನ್ನು ಪಕ್ಷಕ್ಕೆ ಅಧಿಕೃತವಾಗಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ವಿಜಯೇಂದ್ರ, ಬಿಜೆಪಿ ತತ್ವ ಮತ್ತು ಸಿದ್ಧಾಂತಗಳನ್ನು ಒಪ್ಪಿಕೊಂಡು ಹಾಗೂ ಪ್ರಧಾನಿ ನರೆಂದ್ರ ಮೋದಿ ಅವರ ನಾಯಕತ್ವದಲ್ಲಿ ವಿಶ್ವಾಸ ವ್ಯಕ್ತಪಡಿಸಿ ರಾಜಣ್ಣ ಅವರು ಪಕ್ಷ ಸೇರಿದ್ದಾರೆ ಎಂದು ಹೇಳಿದರು. “ರಾಜ್ಯದಲ್ಲಿ ಬಿಜೆಪಿಗೆ ಮತ್ತಷ್ಟು ಬಲ ತುಂಬುವ ಉದ್ದೇಶದಿಂದ ಯಾವುದೇ ನಿರೀಕ್ಷೆಗಳಿಲ್ಲದೆ ಅವರು ಪಕ್ಷ ಸೇರ್ಪಡೆಯಾಗಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷನಾಗಿ ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ” ಎಂದು ವಿಜಯೇಂದ್ರ ತಿಳಿಸಿದರು.

“ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ” ಎನ್ನುವುದು ಬಿಜೆಪಿಯ ಧ್ಯೇಯವಾಕ್ಯವಾಗಿದೆ. ಪಕ್ಷದ ವ್ಯವಸ್ಥೆಯಲ್ಲಿ ರಾಜಣ್ಣ ಹಾಗೂ ಅವರ ಬೆಂಬಲಿಗರಿಗೆ ಸಮರ್ಪಕ ಗೌರವ ನೀಡಿ, ಅವರ ಶಕ್ತಿಯನ್ನು ಸಂಘಟನಾ ಕಾರ್ಯದಲ್ಲಿ ಬಳಸಿಕೊಳ್ಳಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ Govind Karjol, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಯದುವೀರ್ ಒಡೆಯರ್, ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ರಾಜಣ್ಣ ಅವರ ಸೇರ್ಪಡೆ ಕಾಡುಗೊಲ್ಲರ ಸಮುದಾಯದಲ್ಲಿ ಬಿಜೆಪಿಗೆ ಮತ್ತಷ್ಟು ಬಲ ತರುವ ನಿರೀಕ್ಷೆ ವ್ಯಕ್ತವಾಗಿದ್ದು, ಮುಂದಿನ ದಿನಗಳಲ್ಲಿ ಸಂಘಟನಾ ಚಟುವಟಿಕೆಗಳಲ್ಲಿ ಅವರು ಸಕ್ರಿಯರಾಗಲಿದ್ದಾರೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.