Home Advertisement
Home ಕ್ರೀಡೆ IPL 2026: ಪಂಜಾಬ್‌ಗೆ ಮಾಡು ಇಲ್ಲವೇ ಮಡಿ ಪಂದ್ಯ

IPL 2026: ಪಂಜಾಬ್‌ಗೆ ಮಾಡು ಇಲ್ಲವೇ ಮಡಿ ಪಂದ್ಯ

0
70

ಲಖನೌ: ಟಾಟಾ ಐಪಿಎಲ್ 2026ರ ಲೀಗ್ ಹಂತದ ಅಂತಿಮ ಘಟ್ಟದ ರೋಚಕತೆಯಲ್ಲಿ, ಶನಿವಾರ ನಡೆಯಲಿರುವ 68ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಲಖನೌ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ. ಲಖನೌನ ಪ್ರಸಿದ್ಧ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಹೈ-ವೋಲ್ಟೇಜ್ ಪಂದ್ಯ ಆರಂಭವಾಗಲಿದೆ.

ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡವು ಈ ಋತುವಿನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದ್ದು, ಲಖನೌ ನೆಲದಲ್ಲಿ ಮರಳಿ ಗೆಲುವಿನ ಹಳಿಗೆ ಮರಳುವ ತವಕದಲ್ಲಿದೆ. ತಂಡದ ಬ್ಯಾಟಿಂಗ್ ವಿಭಾಗದಲ್ಲಿ ಶಶಾಂಕ್ ಸಿಂಗ್ ಮತ್ತು ಬೌಲಿಂಗ್‌ನಲ್ಲಿ ಅರ್ಷದೀಪ್ ಸಿಂಗ್ ಅವರ ಪ್ರದರ್ಶನ ಪ್ರಮುಖವಾಗಿದೆ.

ಮತ್ತೊಂದೆಡೆ, ರಿಷಭ್ ಪಂತ್ ಸಾರಥ್ಯದ ಲಖನೌ ಸೂಪರ್ ಜೈಂಟ್ಸ್ ತಂಡಕ್ಕೆ ಇದು ತವರು ಮೈದಾನದ ಪಂದ್ಯವಾಗಿದ್ದು, ಪ್ಲೇಆಫ್ ರೇಸ್‌ನಲ್ಲಿ ಮುನ್ನಡೆಯಲು ಈ ಗೆಲುವು ಅತ್ಯಂತ ನಿರ್ಣಾಯಕವಾಗಿದೆ. ತಂಡದ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಅದ್ಭುತ ಫಾರ್ಮ್ನಲ್ಲಿದ್ದು, ನಿಕೋಲಸ್ ಪೂರನ್ ಅವರ ಬಲ ಲಖನೌ ತಂಡಕ್ಕಿದೆ.

ಏಕಾನಾ ಮೈದಾನದ ನಿಧಾನಗತಿಯ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ಸಹಕಾರಿಯಾಗಲಿದ್ದು, ಟಾಸ್ ಗೆಲ್ಲುವ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಉಭಯ ತಂಡಗಳಿಗೂ ಪ್ರತಿಷ್ಠೆಯ ಕಣವಾಗಿರುವ ಈ ಪಂದ್ಯದಲ್ಲಿ ರೋಚಕ ಹೋರಾಟ ನಿರೀಕ್ಷಿಸಲಾಗಿದೆ.

ಇತ್ತ ಲಖನೌಗೂ ಈ ಪಂದ್ಯ ಗೆದ್ದು ಮಾನ ಉಳಿಸಿಕೊಳ್ಳಬೇಕಿದೆ. ಲೀಗ್‌ನಲ್ಲಿ ಈಗಲೇ ಎಲ್‌ಎಸ್‌ಜಿ ಸೋತು ಟೂರ್ನಿಯಿಂದ ಹೊರಗುಳಿದಿದ್ದು, ತನ್ನ ಕೊನೆಯ ಪಂದ್ಯದಲ್ಲಿ ಪಂಜಾಬ್‌ಗೆ ಆಘಾತ ನೀಡುವ ಸಾಧ್ಯತೆಗಳಿವೆ. ಅತ್ತ ಪಂಜಾಬ್ ಗೆದ್ದರೂ, ರಾಜಸ್ಥಾನ ಮುಂದಿನ ಪಂದ್ಯದಲ್ಲಿ ಮುಂಬೈ ವಿರುದ್ಧ ಸೋಲಬೇಕಾಗುತ್ತದೆ. ಆಗ ಮಾತ್ರ ಪಂಜಾಬ್ ಪ್ಲೇಆಫ್ ಸೇರಿಕೊಳ್ಳಲಿದೆ.

ಪಂದ್ಯ ಆರಂಭ: ರಾತ್ರಿ 7.30ಕ್ಕೆ