Home Advertisement
Home ನಮ್ಮ ಜಿಲ್ಲೆ ಧಾರವಾಡ `ಮುಸ್ಲಿಂ ಲೀಗ್’ ಆಗಿ ಪರಿವರ್ತನೆಯಾದ ಕಾಂಗ್ರೆಸ್

`ಮುಸ್ಲಿಂ ಲೀಗ್’ ಆಗಿ ಪರಿವರ್ತನೆಯಾದ ಕಾಂಗ್ರೆಸ್

0
52

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ಮುಸ್ಲಿಂ ತುಷ್ಟೀಕರಣ ನೀತಿ ಮಿತಿಮೀರಿದ್ದು, ಮಹಮ್ಮದ್ ಅಲಿ ಜಿನ್ನಾ ಸ್ಥಾಪನೆ ಮಾಡಿದ ಮುಸ್ಲಿಂ ಲೀಗ್‌ನ ಎಲ್ಲ ಅಂಶಗಳನ್ನು ಅಳವಡಿಸಿಕೊಂಡು ಮುಸ್ಲಿಂ ಲೀಗ್ ಆಗಿ ಆ ಪಕ್ಷ ಪರಿವರ್ತನೆಯಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಳಂದ, ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ಹಲವು ಕಡೆ ಗಲಭೆ ಮಾಡಿದ ಮತಾಂಧ ಮುಸ್ಲಿಂ ಗಲಭೆಕೋರರ ಮೇಲಿನ ಕ್ರಿಮಿನಲ್ ಪ್ರಕರಣ ವಾಪಸ್ ಪಡೆದಿರುವುದು ಇದಕ್ಕೆ ತಾಜಾ ಉದಾಹರಣೆಯಾಗಿದೆ. ಅಲ್ಲದೇ, ಮುಸ್ಲಿಂ ಅಲ್ಪಸಂಖ್ಯಾತರಿಗೆ ಹೆಚ್ಚು ಅನುದಾನ, ನಿವೇಶನ, ಹತ್ತು ಹಲವು ಯೋಜನೆ ಮೂಲಕ ಓಲೈಕೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡಿದೆ. ಗಲಭೆಕೋರರ ವಿರುದ್ಧದ ಪ್ರಕರಣ ವಾಪಸ್ ಪಡೆದಿರುವ ನಿರ್ಧಾರವನ್ನು ರಾಜ್ಯ ಸರ್ಕಾರ ಮರು ಪರಿಶೀಲನೆ ಮಾಡಬೇಕು. ಇಲ್ಲದೇ ಇದ್ದರೆ, ಕಾನೂನು ಹೋರಾಟ ಮಾಡುತ್ತೇವೆ ಎಂದು ಸಚಿವ ಜೋಶಿ ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ಪಕ್ಷದಲ್ಲಿ ಹಿರಿಯರು, ಬುದ್ಧಿವಂತರು ಸಾಕಷ್ಟು ಜನರಿದ್ದಾರೆ. ಆದರೆ, ಅವರೆಲ್ಲರೂ ಕುರಿ ಮಂದೆಯಲ್ಲಿ ಸಿಕ್ಕ ಹುಲಿಗಳಂತಾಗಿದ್ದಾರೆ ಎಂದು ಸಚಿವ ಜೋಶಿ ಛೇಡಿಸಿದರು. ಕೇಂದ್ರ ಸರ್ಕಾರವು ಬಿಪಿಎಲ್ ಕಾರ್ಡ್‌ದಾರರಿಗೆ ಪ್ರತಿಯೊಬ್ಬರಿಗೆ 5 ಕೆಜಿ ಅಕ್ಕಿ ಕೊಡುತ್ತಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹತ್ತು ಕೆಜಿ ಅಕ್ಕಿ ಕೊಡುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ. ಅನ್ನಭಾಗ್ಯ ಎಂದು ಹೇಳಿ ಕೇಂದ್ರ ಸರ್ಕಾರದ ಅಕ್ಕಿ ಕೊಡುವ ವಿಷಯ ಮರೆಮಾಚಲು ನಾಚಿಕೆ ಆಗುವುದಿಲ್ಲವೇ? ಎಂದು ಪ್ರಶ್ನಿಸಿದರು.