SK Home Ad
Home ನಮ್ಮ ಜಿಲ್ಲೆ ಉತ್ತರ ಕನ್ನಡ ಭಟ್ಕಳ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ

ಭಟ್ಕಳ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ

0
97

ಕಾರವಾರ: ಕಪ್ಪೆಚಿಪ್ಪು ಸಂಗ್ರಹಿಸಲು ವೆಂಕಟಾಪುರ ನದಿಗೆ ತೆರಳಿದ್ದ ವೇಳೆ ದುರ್ಮರಣಕ್ಕೀಡಾದ 8 ಜನರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.

“ಇದೊಂದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಮಾನವೀಯ ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಇನ್ನೂ ಕೆಲವರು ಈ ದುರ್ಘಟನೆಯಲ್ಲಿ ಕಾಣೆಯಾಗಿರುವ ಮಾಹಿತಿಯಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಕಾಣೆಯಾದವರು ಬದುಕಿಬಂದು ತಮ್ಮವರನ್ನು ಕೂಡಿಕೊಳ್ಳಲಿ‌ ಎಂದು ನಾವೆಲ್ಲರೂ ದೇವರಲ್ಲಿ ಪ್ರಾರ್ಥಿಸೋಣ” ಎಂದು ಹೇಳಿದ್ದಾರೆ.