SK Home Ad
Home ನಮ್ಮ ಜಿಲ್ಲೆ ಉತ್ತರ ಕನ್ನಡ ಮುರಿನಕಟ್ಟೆ ಧ್ವಂಸ ಪ್ರಕರಣ: ಕಿಡಿಗೇಡಿಗಳ ವಿರುದ್ಧ ಪ್ರಕರಣ

ಮುರಿನಕಟ್ಟೆ ಧ್ವಂಸ ಪ್ರಕರಣ: ಕಿಡಿಗೇಡಿಗಳ ವಿರುದ್ಧ ಪ್ರಕರಣ

0
159

ಉತ್ತರ ಕನ್ನಡ: ಭಟ್ಕಳ ನಗರ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿರುವ ಶಿರಸಿ ಮಾರಿಕಾಂಬೆ ದೇವಸ್ಥಾನಕ್ಕೆ ಸಂಬಂಧಿಸಿದ “ಮುರಿನಕಟ್ಟೆ”ಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ತಿಳಿಸಿದ್ದಾರೆ.

ರಾ.ಹೆ. 66ರ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿಯ ವೇಳೆ ವಾಹನ ಸಂಚಾರ ಹಾಗೂ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ROW ವ್ಯಾಪ್ತಿಯ ಸರ್ಕಾರಿ ಜಾಗದಲ್ಲಿ ಕೆಂಪುಕಲ್ಲಿನಿಂದ ಹೊಸ ಕಟ್ಟೆಯನ್ನು ನಿರ್ಮಿಸಿತ್ತು. ಆದರೆ ಮೇ 24ರಂದು ಆ ಕಟ್ಟೆಯನ್ನು ಕೆಲವರು ಏಕಾಏಕಿ ಧ್ವಂಸಗೊಳಿಸಿರುವುದು ಕಂಡುಬಂದಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುರಿನಕಟ್ಟೆ ದೇವಸ್ಥಾನದ ಕಟ್ಟಡವಲ್ಲ, ಬದಲಾಗಿ ಅಮ್ಮನವರ ಹೊರೆ ಇಡುವ ಸ್ಥಳವಾಗಿದ್ದು, ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಮೂಲ ಸ್ಥಳವನ್ನು ಯಥಾಸ್ಥಿತಿಯಲ್ಲೇ ಉಳಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಹೊಸದಾಗಿ ಸ್ಥಳಾಂತರಿಸುವ ಉದ್ದೇಶದಿಂದ ನಿರ್ಮಿಸಿದ್ದ ಕಟ್ಟೆಯನ್ನು ಹಾನಿಗೊಳಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜೊತೆಗೆ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಬಿ.ಎನ್.ಎಸ್.ಎಸ್. ಕಾಯ್ದೆಯ ಕಲಂ 163ರ ಅನ್ವಯ ಪ್ರತಿಬಂಧಕ ತಡೆಯಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.