SK Home Ad
Home ಸುದ್ದಿ ರಾಜ್ಯ ಡಿಕೆಶಿ–ಸಿದ್ದರಾಮಯ್ಯ ಅಪ್ಪುಗೆ ಫೋಟೋ ವೈರಲ್: ರಾಜಕೀಯ ವಲಯದಲ್ಲಿ ಚರ್ಚೆ

ಡಿಕೆಶಿ–ಸಿದ್ದರಾಮಯ್ಯ ಅಪ್ಪುಗೆ ಫೋಟೋ ವೈರಲ್: ರಾಜಕೀಯ ವಲಯದಲ್ಲಿ ಚರ್ಚೆ

0
138

ನಾಯಕತ್ವ ಬದಲಾವಣೆ ಊಹಾಪೋಹ ಮಧ್ಯೆ ಸಿಎಂ–ಡಿಕೆಶಿ ಒಗ್ಗಟ್ಟಿನ ಸಂದೇಶ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಊಹಾಪೋಹಗಳು ಜೋರಾಗಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿಕುಮಾರ ಒಗ್ಗಟ್ಟಿನ ಸಂದೇಶ ನೀಡಿದ್ದಾರೆ.

ಗುರುವಾರ ಬೆಳಗ್ಗೆ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ನಡೆದ ಬ್ರೇಕ್‌ಫಾಸ್ಟ್ ಮೀಟಿಂಗ್ ವೇಳೆ ಡಿಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯರನ್ನು ತಬ್ಬಿಕೊಂಡು ಅಲಿಂಗನ ಮಾಡಿಕೊಂಡರು. ಬಳಿಕ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ದೃಶ್ಯಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿವೆ.

ಪ್ರತ್ಯೇಕ ಮಾತುಕತೆ : ಮಾಹಿತಿ ಪ್ರಕಾರ, ಡಿಕೆ ಶಿವಕುಮಾರ್ ಕಾವೇರಿ ನಿವಾಸಕ್ಕೆ ಆಗಮಿಸಿದ ಬಳಿಕ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು. ನಂತರ ಸಚಿವರೊಂದಿಗೆ ನಡೆದ ಸಭೆಯಲ್ಲಿ ಇಬ್ಬರೂ ನಾಯಕರು ಜೊತೆಯಾಗಿ ಕುಳಿತು ಚರ್ಚೆ ನಡೆಸಿದರು. ಸಭೆಯಲ್ಲಿ ಸಿದ್ದರಾಮಯ್ಯ ಅವರ ಅಕ್ಕಪಕ್ಕದಲ್ಲಿ ಡಿಕೆ ಶಿವಕುಮಾರ್ ಹಾಗೂ G ಪರಮೇಶ್ವರ ಕುಳಿತಿದ್ದರು.

ರಾಜಕೀಯ ಸಂದೇಶವೇ? : ಇತ್ತೀಚೆಗೆ ಕಾಂಗ್ರೆಸ್ ವಲಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ನಾಯಕತ್ವದ ವಿಚಾರವಾಗಿ ಹಲವು ರೀತಿಯ ಊಹಾಪೋಹಗಳು ಕೇಳಿಬರುತ್ತಿದ್ದವು. ಈ ಹಿನ್ನೆಲೆದಲ್ಲಿ ನಡೆದ ಸಿಎಂ–ಡಿಕೆಶಿ ಅಲಿಂಗನ ಮತ್ತು ಕಾಲಿಗೆ ಬಿದ್ದು ಆಶೀರ್ವಾದ ಪಡೆಯುವ ಘಟನೆ, ಪಕ್ಷದೊಳಗಿನ ಒಗ್ಗಟ್ಟು ಪ್ರದರ್ಶನದ ಭಾಗವೆಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

ಸಭೆಯಲ್ಲಿ ಭಾಗಿಯಾದ ನಾಯಕರು: ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಹಲವು ಸಚಿವರು ಮತ್ತು ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು. ಸಭೆಯಲ್ಲಿ ಭಾಗಿಯಾದ ಪ್ರಮುಖರು ಡಿಕೆ ಶಿವಕುಮಾರ್, ಪರಮೇಶ್ವರ್‌, ಭೈರತಿ ಸುರೇಶ್, ಸಂತೋಷ್ ಲಾಡ್, ಎಂಸಿ ಸುಧಾಕರ್, ಎಂಬಿ ಪಾಟೀಲ್, ಪ್ರಿಯಾಂಕ್ ಖರ್ಗೆ, ಎಸ್‌ಎಸ್‌ಮಲ್ಲಿಕಾರ್ಜುನ್‌, ಕೆಜೆ ಜಾರ್ಜ್, ಈಶ್ವರ್ ಖಂಡ್ರೆ, ಬೋಸರಾಜು. ಸೇರಿದಂತೆ ಅನೇಕ ಸಚಿವರು ಹಾಗೂ ಶಾಸಕರು ಉಪಸ್ಥಿತರಿದ್ದರು.

ಊಹಾಪೋಹಗಳಿಗೆ ತೆರೆ ಬೀಳುತ್ತದೆಯೇ? : ದೆಹಲಿ ಭೇಟಿಯ ಬಳಿಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು ಜೋರಾಗಿದ್ದ ಸಂದರ್ಭದಲ್ಲೇ ಈ ಸಭೆ ನಡೆದಿರುವುದು ವಿಶೇಷ ಗಮನ ಸೆಳೆದಿದೆ. ಸಿಎಂ ಮತ್ತು ಡಿಸಿಎಂ ಒಟ್ಟಿಗೆ ಕಾಣಿಸಿಕೊಂಡಿರುವುದು, ಪಕ್ಷದೊಳಗಿನ ಭಿನ್ನಮತಗಳ ಕುರಿತ ಚರ್ಚೆಗಳಿಗೆ ತಾತ್ಕಾಲಿಕ ತೆರೆ ಎಳೆಯುವ ಪ್ರಯತ್ನವೆಂದು ರಾಜಕೀಯ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗುತ್ತಿದೆ.