SK Home Ad
Home ನಮ್ಮ ಜಿಲ್ಲೆ ಬೆಂಗಳೂರು ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ, ರಾಜ್ಯದಲ್ಲಿ ಮುಂದುವರೆಯುತ್ತೇನೆ

ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ, ರಾಜ್ಯದಲ್ಲಿ ಮುಂದುವರೆಯುತ್ತೇನೆ

0
169

ಬೆಂಗಳೂರು: ʻರಾಜ್ಯ ರಾಜಕಾರಣದಲ್ಲಿಯೇ ನಾನು ಮುಂದೆರಿಯುತ್ತೇನೆ ಹೊರತು, ರಾಷ್ಟ್ರ ರಾಜಕಾರಣಕ್ಕೆ ನಾನು ಹೋಗುವುದಿಲ್ಲʼ ಎಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ರಾಜೀನಾಮೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈಕಮಾಂಡ್‌ ರಾಜ್ಯಸಭೆಗೆ ಹೋಗಲು ಸೂಚಿಸಿದರು. ಆದರೆ, ನಾನು ಹೋಗುವುದಿಲ್ಲ ಎಂದು ವಿನಮ್ರವಾಗಿಯೇ ಹೇಳಿದ್ದೇನೆ. ನನಗೆ ರಾಷ್ಟ್ರ ರಾಜಕೀಯದಲ್ಲಿ ಆಸಕ್ತಿ ಇಲ್ಲ ಎಂದು ಹೇಳಿದರು.

ನನ್ನ ಕ್ಷೇತ್ರದ ಜನರು ನನ್ನನ್ನು ಶಾಸಕನನ್ನಾಗಿ ಆಯ್ಕೆ ಮಾಡಿದ್ದಾರೆ. ಇನ್ನೂ ಎರಡು ವರ್ಷಗಳ ಕಾಲ ಅವಧಿಯಿದ್ದು, ಕ್ಷೇತ್ರದ ಜನರ ಸೇವೆ ಜತೆಗೆ ರಾಜ್ಯದ ಜನರ ಸೇವೆ ಮಾಡುತ್ತೇನೆ ಎಂದು ಹೇಳಿದರು.

ಆದರೆ, ಕೊನೆಯವರೆಗೂ ಮುಂದಿನ ಮುಖ್ಯಮಂತ್ರಿಯ ಹೆಸರನ್ನು ಬಹಿರಂಗಪಡಿಸಿದ ಸಿದ್ದರಾಮಯ್ಯನವರು, ಮುಂದಿನ ಸಿಎಂ ಯಾರು ಎಂಬ ಪ್ರಶ್ನೆಗೆ ಅದನ್ನು ಹೈಕಮಾಂಡ್‌ ನಿರ್ಧರಿಸುತ್ತದೆ ಎಂದು ಹೇಳಿದರು.