ಖ್ಯಾತ ಚಲನಚಿತ್ರ ನಿರ್ಮಾಪಕ ಕೆ. ವಿಶ್ವನಾಥ್ ನಿಧನ

0
10

ಹೈದರಾಬಾದ್‌: ಶಂಕರಾಭರಣಂ, ಸಾಗರ ಸಂಗಮಂ, ಸ್ವಾತಿ ಮುತ್ಯಂ ಮತ್ತು ಸ್ವರ್ಣ ಕಮಲಂ ಮುಂತಾದ ಅಪ್ರತಿಮ ಚಿತ್ರಗಳ ಮೂಲಕ ಜನಪ್ರಿಯರಾಗಿದ್ದ ತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕ ಕೆ.ವಿಶ್ವನಾಥ್ ಅವರು ಹೈದರಾಬಾದ್‌ನ ತಮ್ಮ ನಿವಾಸದಲ್ಲಿ ಗುರುವಾರ ಕೊನೆಯುಸಿರೆಳೆದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಅವರು ಐದು ಬಾರಿ ರಾಷ್ಟ್ರ ಪ್ರಶಸ್ತಿ ವಿಜೇತರಾಗಿದ್ದು, ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು.
1992 ರಲ್ಲಿ, ಅವರಿಗೆ ಪದ್ಮಶ್ರೀ ಮತ್ತು 2017 ರಲ್ಲಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಲಾಯಿತು. ಅವರು ನಾಲ್ಕು ದಶಕಗಳ ಕಾಲದ ವೃತ್ತಿಜೀವನದಲ್ಲಿ ಎಂಟು ಬಾರಿ ಫಿಲ್ಮ್‌ಫೇರ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

Previous articleಮುನಿಯಪ್ಪ ಬೆಂಬಲಿಗರ ಬಹಿರಂಗ ಬಂಡಾಯ
Next articleಯಾರೂ ಲಿಮಿಟ್ ಮೀರಿ ಹೋಗ್ಬಾರ‍್ದು: ಸತೀಶ ಖಡಕ್ ಎಚ್ಚರಿಕೆ