ನಂದಿನಿ ಶರ್ಮಾ ಐತಿಹಾಸಿಕ ಪದಾರ್ಪಣೆ; ಮೂರು ವಿಕೆಟ್ ಕಬಳಿಕೆ
ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಮಹಿಳಾ ವಿಶ್ವಕಪ್‌ಗೆ ಪೂರ್ವಭಾವಿಯಾಗಿ ಆರಂಭವಾದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ಮಹಿಳಾ ತಂಡ (India women’s national cricket team) ಭರ್ಜರಿ ಪ್ರದರ್ಶನ ನೀಡಿ ಇಂಗ್ಲೆಂಡ್ ತಂಡದ ವಿರುದ್ಧ 38 ರನ್‌ಗಳ ಗೆಲುವು ದಾಖಲಿಸಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಸಮತೋಲನದ ಪ್ರದರ್ಶನ ನೀಡಿದ ಭಾರತ ಮಹಿಳಾ ತಂಡ ಸರಣಿಯನ್ನು ಆತ್ಮವಿಶ್ವಾಸದಿಂದ ಆರಂಭಿಸಿದೆ.
ಟಾಸ್ ಸೋತರೂ ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ತಂಡ ಆರಂಭದಲ್ಲಿ ಕೆಲವು ಆಘಾತಗಳನ್ನು ಅನುಭವಿಸಿತು. ಆರಂಭಿಕ ಆಟಗಾರ್ತಿಯರಾದ ಸ್ಮೃತಿ ಮಂಧನಾ ಮತ್ತು ಶಫಾಲಿ ವರ್ಮಾ ರನ್ ಕಲೆಹಾಕುವಲ್ಲಿ ವಿಫಲರಾದರು. ಆದರೆ ನಂತರ ಕಣಕ್ಕಿಳಿದ ಯಾಸ್ತಿಕಾ ಭಾಟೀಯಾ ಮತ್ತು ಜೆಮಿಮಾ ರೊಡ್ರಿಗಸ್ ಜೋಡಿ ಇಂಗ್ಲೆಂಡ್ ಬೌಲರ್‌ಗಳ ವಿರುದ್ಧ ಆಕ್ರಮಣಕಾರಿ ಆಟ ಪ್ರದರ್ಶಿಸಿತು.
ಇದನ್ನೂ ಓದಿ: IPLನಲ್ಲಿ ಸ್ಮಾರ್ಟ್ ಸನ್‌ಗ್ಲಾಸ್ ನಿಷೇಧಿಸಿದ BCCI
ಪವರ್‌ಪ್ಲೇ ಅವಧಿಯಲ್ಲೇ ಈ ಜೋಡಿ 73 ರನ್‌ಗಳ ಜೊತೆಯಾಟ ನೀಡಿದ್ದು, ಒಟ್ಟು ಮೂರನೇ ವಿಕೆಟ್‌ಗೆ 76 ಎಸೆತಗಳಲ್ಲಿ 126 ರನ್‌ಗಳ ಅಮೋಘ ಜೊತೆಯಾಟ ದಾಖಲಿಸಿತು. ಯಾಸ್ತಿಕಾ ಭಾಟಿಯಾ 40 ಎಸೆತಗಳಲ್ಲಿ 9 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 54 ರನ್ ಸಿಡಿಸಿದರೆ, ಜೆಮಿಮಾ ರೊಡ್ರಿಗಸ್ 10 ಬೌಂಡರಿ ಮತ್ತು 1 ಸಿಕ್ಸರ್ ಸಹಿತ 69 ರನ್ ಬಾರಿಸಿ ತಂಡದ ಮೊತ್ತವನ್ನು ಬಲಪಡಿಸಿದರು.
ಆಲ್‌ರೌಂಡರ್ ದೀಪ್ತಿ ಶರ್ಮಾ ಕೂಡ 4 ಬೌಂಡರಿ ನೆರವಿನಿಂದ 22 ರನ್ ಬಾರಿಸಿದರು. 20 ಓವರಗಳಲ್ಲಿ ಭಾರತ ತಂಡ 7 ವಿಕೆಟ್ ಕಳೆದು ಕೊಂಡು 188 ರನ್ ಪ್ರೇರಿಪಿಸಿತು. ಇಂಗ್ಲೆಂಡ್ ಪರ ಲಾರೆನ್‌ಬೆಲ್ 34 ರನ್ ನೀಡಿ 3 ವಿಕೆಟ್ ಪಡೆದು ಉತ್ತಮ ಬೌಲಿಂಗ್ ಪ್ರದರ್ಶಿಸಿದರು.
ಇದನ್ನೂ ಓದಿ: ರಾಜ್ಯಪಾಲರಿಂದ ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ
ಗೆಲುವಿಗೆ ಸವಾಲಿನ ಮೊತ್ತ ಬೆನ್ನಟ್ಟಿದ ಇಂಗ್ಲೆಂಡ್ ತಂಡ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು. ಭಾರತೀಯ ಬೌಲರ್‌ಗಳ ನಿಯಂತ್ರಿತ ದಾಳಿಗೆ ಇಂಗ್ಲೆಂಡ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 150 ರನ್‌ಗಳಿಗೆ ಸೀಮಿತವಾಯಿತು.
ಈ ಪಂದ್ಯದಲ್ಲಿ ಭಾರತದ ಯುವ ವೇಗಿ ನಂದಿನಿ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ತಮ್ಮ ಚೊಚ್ಚಲ ಪಂದ್ಯದಲ್ಲೇ ಅವರು ನಾಲ್ಕು ಓವರ್‌ಗಳಲ್ಲಿ 34 ರನ್ ನೀಡಿ 3 ವಿಕೆಟ್ ಕಬಳಿಸಿ ಗಮನ ಸೆಳೆದರು.
ಇದನ್ನೂ ಓದಿ: ರಾಹುಲ್ ಭೇಟಿಯಾದ ಸಿದ್ದರಾಮಯ್ಯ: ಅಪ್ಪುಗೆ ಫೋಟೋ ವೈರಲ್
ಈ ಮೂಲಕ ನಂದಿನಿ ಶರ್ಮಾ ಭಾರತದ ಪರ ಟಿ20 ಅಂತರರಾಷ್ಟ್ರೀಯ ಚೊಚ್ಚಲ ಪಂದ್ಯದಲ್ಲೇ ಮೂರು ವಿಕೆಟ್ ಪಡೆದ ಎರಡನೇ ವೇಗದ ಬೌಲರ್ ಎಂಬ ದಾಖಲೆ ನಿರ್ಮಿಸಿದರು. ಇದಕ್ಕೂ ಮೊದಲು 2010ರಲ್ಲಿ ಸೋನಿಯಾ ದಬೀರ್ ಇಂಗ್ಲೆಂಡ್ ವಿರುದ್ಧದ ಚೊಚ್ಚಲ ಟಿ20 ಪಂದ್ಯದಲ್ಲಿ 23 ರನ್ ನೀಡಿ 3 ವಿಕೆಟ್ ಪಡೆದಿದ್ದರು.
ಮಹಿಳಾ ವಿಶ್ವಕಪ್‌ಗೆ ಮುನ್ನ ಭಾರತ ತಂಡದ ಈ ಗೆಲುವು ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದ್ದು, ಮುಂದಿನ ಪಂದ್ಯಗಳ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.






















