ಮುಂಬೈ: ಸತತ ಎರಡನೇ ಬಾರಿಗೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕಹಿ ಸುದ್ದಿಯೊಂದು ಎದುರಾಗಿದೆ.
ತಂಡದ ಸ್ಫೋಟಕ ಬ್ಯಾಟರ್ ಟಿಮ್ ಡೇವಿಡ್ ಅವರಿಗೆ ಪಂದ್ಯದ ಶುಲ್ಕದ ಶೇ. 50 ರಷ್ಟು ದಂಡ ಹಾಗೂ ಎರಡು ಡಿಮೆರಿಟ್ ಅಂಕಗಳನ್ನು ನೀಡಲಾಗಿದೆ. ಹೀಗಾಗಿ ಡೇವಿಡ್ ಐಪಿಎಲ್ 2027ರ ಮೊದಲ ಪಂದ್ಯದಲ್ಲಿ ಆಡುವಂತಿಲ್ಲ.
ಗುಜರಾತ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್‌ನ 10ನೇ ಓವರ್‌ನಲ್ಲಿ ಅಂಪೈರ್ ನಿತಿನ್ ಮೆನನ್ ಅವರ ಬಳಿಗೆ ಐಸ್ ಬ್ಯಾಗ್ ಎಸೆದಿರುವುದರಿಂದಾಗಿ ಟಿಮ್ ಡೇವಿಡ್ ಅವರನ್ನು ಒಂದು ಪಂದ್ಯಕ್ಕೆ ನಿಷೇಧಿಸಲಾಗಿದೆ.
ಐಸಿಸಿ ನೀತಿ ಸಂಹಿತೆ ಹಂತ 1 ಅನ್ನು ಉಲ್ಲಂಘಿಸಿದ್ದಕ್ಕಾಗಿ ಈ ಕ್ರಮ ತೆಗೆದುಕೊಳ್ಳಲಾಗಿದ್ದು, ಐಪಿಎಲ್ ಆಡಳಿತ ಮಂಡಳಿ ಅಧಿಕೃತವಾಗಿ ಇದನ್ನು ಪ್ರಕಟಿಸಿದೆ.






















