SK Home Ad
Home ಸುದ್ದಿ ರಾಜ್ಯ ಡಿ.ಕೆ ಶಿವಕುಮಾರ್‌ ಜತೆಗೆ 13 ಜನ ಸಚಿವರಾಗಿ ಪ್ರಮಾಣ: ಇಲ್ಲಿದೆ ಲಿಸ್ಟ್

ಡಿ.ಕೆ ಶಿವಕುಮಾರ್‌ ಜತೆಗೆ 13 ಜನ ಸಚಿವರಾಗಿ ಪ್ರಮಾಣ: ಇಲ್ಲಿದೆ ಲಿಸ್ಟ್

0
200

ಬೆಂಗಳೂರು: ಕರ್ನಾಟಕ ರಾಜ್ಯ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್‌ ಅವರು ಬುಧವಾರ ಸಂಜೆ 4 ಗಂಟೆ 5 ನಿಮಿಷಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಅವರೊಂದಿಗೆ ಇನ್ನೂ 13 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸದ್ಯದ ಮಾಹಿತಿಯ ಪ್ರಕಾರ ಉಪಮುಖ್ಯಮಂತ್ರಿಯಾಗಿ ಡಾ. ಜಿ. ಪರಮೇಶ್ವರ್ ಮತ್ತು ಸಚಿವರಾಗಿ ಕೆ.ಹೆಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್ ಹಾಗೂ ಶರಣ ಪ್ರಕಾಶ್ ಪಾಟೀಲ್ ಅವರ ಹೆಸರುಗಳು ಪಟ್ಟಿಯಲ್ಲಿವೆ ಎನ್ನಲಾಗುತ್ತಿದೆ.

ರಾಜ್ಯ ಸರ್ಕಾರ ಅಥವಾ ಕಾಂಗ್ರೆಸ್ ಪಕ್ಷದಿಂದ ಈ ಕುರಿತು ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಆದರೆ, ಕಾಂಗ್ರೆಸ್‌ ಶಾಸಕಾಂಗ ಪಕ್ಷದ (CLP) ನಾಯಕ ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲರಿಗೆ ಸಚಿವ ಸಂಪುಟ ಸದಸ್ಯರಿಗೆ ಪ್ರಮಾಣವಚನ ಬೋಧಿಸುವಂತೆ ಮನವಿ ಮಾಡಿದ್ದಾರೆ ಎನ್ನುವ ಪತ್ರವೊಂದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.