SK Home Ad
Home ಸುದ್ದಿ ರಾಜ್ಯ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್‌

ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್‌

0
410

ಬೆಂಗಳೂರು: ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್‌ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.

ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಗಂಗಾಧರ ಅಜ್ಜಯ್ಯನವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಅಧಿಕೃತವಾಗಿ ಅವರು ಅಧಿಕಾರ ಸ್ವೀಕಾರ ಮಾಡಿದರು.

ಸಂಪ್ರದಾಯಿಕ ರೇಷ್ಮೆ ಉಡುಗೆಯಲ್ಲಿ ಮಿಂಚಿದ ಡಿ.ಕೆ. ಶಿವಕುಮಾರ್‌ ಅವರಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧನೆ ಮಾಡಿದರು.

ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ಅವರು, ಸ್ವಾಮೀಜಿ, ಫಾದರ್ ಹಾಗೂ ಮೌಲ್ವಿ ಸೇರಿದಂತೆ ಸರ್ವಧರ್ಮಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದೆ ಪ್ರಿಯಾಂಕಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು, ಉದ್ಯಮಿಗಳು ಸೇರಿದಂತೆ ಅನೇಕರು ಪದಗ್ರಹಣಕ್ಕೆ ಸಾಕ್ಷಿಯಾದರು.