SK Home Ad
Home ಸುದ್ದಿ ರಾಜ್ಯ KEA ಮಹತ್ವದ ಘೋಷಣೆ: ನಾಳೆ UG CET ಫಲಿತಾಂಶ ಪ್ರಕಟಣೆ

KEA ಮಹತ್ವದ ಘೋಷಣೆ: ನಾಳೆ UG CET ಫಲಿತಾಂಶ ಪ್ರಕಟಣೆ

0
108

ಎಂಜಿನಿಯರಿಂಗ್, ಫಾರ್ಮಸಿ ಕನಸು ಹೊತ್ತ ವಿದ್ಯಾರ್ಥಿಗಳಿಗೆ ನಾಳೆ ಮಹತ್ವದ ದಿನ, ಶರಣು ಪ್ರಕಾಶ್ ಪಾಟೀಲ್ UG CET 2026 ಫಲಿತಾಂಶ ಬಿಡುಗಡೆಮಾಡಲಿದ್ದಾರೆ

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ 2026ನೇ ಸಾಲಿನ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆ (UG CET) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಜೂನ್ 6ರಂದು ಪ್ರಕಟಿಸಲಿದೆ.

ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಕೃತ ಮಾಹಿತಿ ನೀಡಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಶರಣು ಪ್ರಕಾಶ್ ಪಾಟೀಲ್ ಅವರು ನಾಳೆ ಬೆಳಿಗ್ಗೆ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಐಎಎಸ್ ತಿಳಿಸಿದ್ದಾರೆ.

ಫಲಿತಾಂಶ ಪ್ರಕಟಣೆ ಬಳಿಕ ಮಧ್ಯಾಹ್ನ 2 ಗಂಟೆಯಿಂದ ವಿದ್ಯಾರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್‌ಗಳ ಮೂಲಕ ತಮ್ಮ ಅಂಕಗಳು ಹಾಗೂ ಶ್ರೇಯಾಂಕವನ್ನು ಪರಿಶೀಲಿಸಬಹುದು. 2026ರ UG CET ಪರೀಕ್ಷೆಯು ಏಪ್ರಿಲ್ 22, 23 ಮತ್ತು 24ರಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆದಿತ್ತು. ಎಂಜಿನಿಯರಿಂಗ್, ಕೃಷಿ, ಪಶುವೈದ್ಯಕೀಯ, ಫಾರ್ಮಸಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಈ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಈ ಬಾರಿ ಕೂಡ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ತಮ್ಮ ರ್ಯಾಂಕ್ ಆಧರಿಸಿ ಮುಂದಿನ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.

ಫಲಿತಾಂಶ ಎಲ್ಲೆಲ್ಲಿ ನೋಡಬಹುದು? : ವಿದ್ಯಾರ್ಥಿಗಳು ಕೆಳಗಿನ ಅಧಿಕೃತ ವೆಬ್‌ಸೈಟ್‌ಗಳಲ್ಲಿ ತಮ್ಮ ಫಲಿತಾಂಶ ಪರಿಶೀಲಿಸಬಹುದು:

https://keaonline.karnataka.gov.in/ugcet_2026_results
https://keaonline.karnataka.gov.in/ugcet_2026_result
https://cetonline.karnataka.gov.in/kea

ಫಲಿತಾಂಶ ವೀಕ್ಷಿಸಲು ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ (Registration Number) ಅಥವಾ ಅಗತ್ಯ ಲಾಗಿನ್ ವಿವರಗಳನ್ನು ಬಳಸಬೇಕಾಗುತ್ತದೆ.

ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭಕ್ಕೆ ಸಿದ್ಧತೆ : ಫಲಿತಾಂಶ ಪ್ರಕಟವಾದ ಬಳಿಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೌನ್ಸೆಲಿಂಗ್ ವೇಳಾಪಟ್ಟಿ, ದಾಖಲೆ ಪರಿಶೀಲನೆ ಹಾಗೂ ಆಯ್ಕೆ ಪ್ರಕ್ರಿಯೆಯ ಮಾಹಿತಿಯನ್ನು ಪ್ರಕಟಿಸುವ ಸಾಧ್ಯತೆ ಇದೆ. ಆದ್ದರಿಂದ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳನ್ನು ನಿರಂತರವಾಗಿ ಪರಿಶೀಲಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ರಾಜ್ಯದ ಉನ್ನತ ಶಿಕ್ಷಣ ಪ್ರವೇಶ ಪ್ರಕ್ರಿಯೆಯಲ್ಲಿ ಪ್ರಮುಖ ಹಂತವಾಗಿರುವ CET ಫಲಿತಾಂಶ ಪ್ರಕಟಣೆ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯದ ದಿಕ್ಕು ನಿರ್ಧರಿಸಲಿದ್ದು, ನಾಳೆಯ ದಿನ ವಿದ್ಯಾರ್ಥಿಗಳಿಗೆ ಮಹತ್ವದ ದಿನವಾಗಿದೆ.