SK Home Ad
Home ಸುದ್ದಿ ರಾಜ್ಯ ಖಾತೆ ಬಗ್ಗೆ ಸಂತೋಷವೂ ಇಲ್ಲ, ದುಃಖವೂ ಇಲ್ಲ

ಖಾತೆ ಬಗ್ಗೆ ಸಂತೋಷವೂ ಇಲ್ಲ, ದುಃಖವೂ ಇಲ್ಲ

0
5

ಬೆಂಗಳೂರು: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್‌ ಅವರ ನೇತೃತ್ವದ ಹೊಸ ಸಚಿವ ಸಂಪುಟ ರಚನೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ ನಾಯಕರಿಂದ ಭಿನ್ನಾಭಿಪ್ರಾಯ, ಅಸಮಾಧಾನ ಸ್ಫೋಟಗೊಂಡಿರುವ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿ ಸಮಚಿತ್ತದ ನಿಲುವು ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನದ ಬಗ್ಗೆ ʻನನಗೆ ಯಾವುದೇ ನೋವೂ ಇಲ್ಲ, ಸಂತೋಷವೂ ಇಲ್ಲ, ದುಃಖವೂ ಇಲ್ಲ’ ಎಂದು ವಾಸ್ತವಿಕ ನಿಲುವನ್ನು ವ್ಯಕ್ತಪಡಿಸಿದ್ದಾರೆ.

ರಾಜಕಾರಣದಲ್ಲಿ ಪ್ರಮೋಷನ್ ಅಥವಾ ಉನ್ನತ ಹುದ್ದೆಗಳ ಬಯಕೆ ಇರುವುದು ತೀರಾ ಸಾಮಾನ್ಯ. ಆದರೆ ಎಲ್ಲರಿಗೂ ಉನ್ನತ ಸ್ಥಾನಗಳನ್ನು ನೀಡಲು ಸಾಧ್ಯವಿಲ್ಲ ಕೆಲವರಿಗೆ ಮಾತ್ರ ಅದು ಲಭ್ಯವಾಗುತ್ತದೆ. ಈ ಎಲ್ಲ ಗೊಂದಲಗಳನ್ನು ಸಿಎಂ ಬಗೆಹರಿಸಲಿದ್ದಾರೆ, ಒಂದೆರಡು ದಿನ ಕಾಯೋಣ ಎಂದು ಹೇಳಿದ್ದಾರೆ.

ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ ಅಷ್ಟೇ. ಆದರೆ ಈ ಇಡೀ ಪರಿಸ್ಥಿತಿಯನ್ನು ಸಮಾಧಾನಪಡಿಸುವ ಹಾಗೂ ಪರ್ಯಾಯ ವ್ಯವಸ್ಥೆ ಮಾಡುವ ಸಂಪೂರ್ಣ ಸಾಮರ್ಥ್ಯ ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಇದೆ. ಮುಂದಿನ ಒಂದು ಅಥವಾ ಎರಡು ದಿನಗಳಲ್ಲಿ ಈ ಎಲ್ಲ ಸಮಸ್ಯೆಗಳು ಸರಿಹೋಗುತ್ತವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಎಲ್ಲ ಗೊಂದಲಗಳನ್ನು ಸಿಎಂ ಬಗೆಹರಿಸಲಿದ್ದಾರೆ, ನಮಗೆ ಯಾವ ಖಾತೆ ಇದೆಯೋ (ಲೋಕೋಪಯೋಗಿ ಇಲಾಖೆ), ಅದನ್ನೇ ಮುಂದುವರಿಸಿದ್ದಾರೆ, ನಾನು ಕೆಲಸ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.