ATM ನಲ್ಲಿ ಅಗ್ನಿ ಅವಘಡ

Advertisement

ಚಿಕ್ಕಮಗಳೂರು :  ಎಟಿಎಂಗೆ ಬೆಂಕಿ ಹೊತ್ತಿಕೊಂಡು, 5 ಲಕ್ಷ ಹಣ ಸೇರಿದಂತೆ 15 ಲಕ್ಷ ಮೌಲ್ಯದ ಎಟಿಎಂ ಯಂತ್ರ ಸಂಪೂರ್ಣ ಭಸ್ಮವಾದ ಘಟನೆ ನಡೆದಿದೆ. ನಗರದ IG ರಸ್ತೆಯ ಸಾರಗೋಡು ಆರ್ಕೆಡ್​ನಲ್ಲಿರುವ ಕರ್ನಾಟಕ ಬ್ಯಾಂಕ್​ನ ಶಾಖೆಯ ಕೆಳಭಾಗದಲ್ಲಿರುವ ಎಟಿಎಂನಲ್ಲಿ ಈ ಘಟನೆ ನಡೆದಿದ್ದು ಶಾರ್ಟ್ ಸರ್ಕ್ಯೂಟ್​ನಿಂದ ಎಟಿಎಂಗೆ ಬೆಂಕಿ ತಗುಲಿರುವ ಸಾಧ್ಯತೆ ಇದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು. ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ