ಬಳ್ಳಾರಿ Archives - Samyukta Karnataka

ಬಳ್ಳಾರಿಯಲ್ಲಿ NIA ದಾಳಿ : ಕೌಲಬಜಾರ್‌ನಲ್ಲಿ ಶೋಧ ಕಾರ್ಯಾಚರಣೆ
ನಿಷೇಧಿತ ಉಗ್ರ ಸಂಘಟನೆಗಳ ಸಂಪರ್ಕ ಆರೋಪ: ಬಳ್ಳಾರಿಯಲ್ಲಿ ಎನ್‌ಐಎ ಶೋಧ ಕಾರ್ಯಾಚರಣೆ

ಬಳ್ಳಾರಿ: ನಿಷೇಧಿತ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಬುಧವಾರ ಬಳ್ಳಾರಿ ನಗರದ ಕೌಲಬಜಾರ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ಆಂಧ್ರ ಪ್ರದೇಶದ ಎನ್‌ಟಿಆರ್ ಜಿಲ್ಲೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆಯ ಭಾಗವಾಗಿ ಎನ್‌ಐಎ ಅಧಿಕಾರಿಗಳ ತಂಡವು ಕೌಲಬಜಾರ್ ನಿವಾಸಿ ಅಬ್ದುಲ್ ಸಲಾಮ್ ಅವರ ಮನೆಗೆ ಭೇಟಿ ನೀಡಿ ಹಲವು ಗಂಟೆಗಳ ಕಾಲ ದಾಖಲೆಗಳ ಪರಿಶೀಲನೆ ನಡೆಸಿದೆ. ಈ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ಕೆಲವು ದಾಖಲೆಗಳು, ಮೊಬೈಲ್ ಫೋನ್ ಹಾಗೂ ಡಿಜಿಟಲ್ ಮಾಹಿತಿಯನ್ನು ಪರಿಶೀಲನೆಗಾಗಿ ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: ಭಯೋತ್ಪಾದನಾ ಪಿತೂರಿ: ಕರ್ನಾಟಕ ಸೇರಿ ದೇಶದಾದ್ಯಂತ NIA ದಾಳಿ

ಏನಿದು ಪ್ರಕರಣ? : ಎನ್‌ಐಎ ತನಿಖೆಯ ಪ್ರಕಾರ, ಆನ್‌ಲೈನ್ ಮೂಲಕ ಮೂಲಭೂತವಾದದ ಪ್ರಚಾರ, ಧಾರ್ಮಿಕ ಪ್ರಚೋದನೆ ಮತ್ತು ನಿಷೇಧಿತ ಉಗ್ರ ಸಂಘಟನೆಗಳ ಪರ ಚಟುವಟಿಕೆ ನಡೆಸಿದ ಆರೋಪದಡಿ ಎನ್‌ಟಿಆರ್ ಜಿಲ್ಲೆಯ ರೆಹಮತುಲ್ಲ ಷರೀಫ್ ವಿರುದ್ಧ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ ಈ ಪ್ರಕರಣದಲ್ಲಿ ಬಳ್ಳಾರಿ ಮೂಲದ ಅಬ್ದುಲ್ ಸಲಾಮ್ ಅವರ ಸಂಪರ್ಕವೂ ಬೆಳಕಿಗೆ ಬಂದಿತ್ತು.

ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದ ಎನ್‌ಐಎ ಅಧಿಕಾರಿಗಳು ಇದೇ ವರ್ಷದ ಮಾರ್ಚ್ 26ರಂದು ಅಬ್ದುಲ್ ಸಲಾಮ್ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಬಳಿಕ ಡಿಜಿಟಲ್ ಸಾಕ್ಷ್ಯಗಳು, ಸಾಮಾಜಿಕ ಜಾಲತಾಣಗಳಲ್ಲಿನ ಚಟುವಟಿಕೆಗಳು ಹಾಗೂ ಆನ್‌ಲೈನ್ ಸಂಪರ್ಕಗಳ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದರು.

ಇದನ್ನೂ ಓದಿ: KBJNL ಇಇ ಬಸನಗೌಡ ಮನೆ ಸೇರಿ 7 ಕಡೆ ಲೋಕಾಯುಕ್ತರ ದಾಳಿ

ಮತ್ತೆ ಬಳ್ಳಾರಿಗೆ ಎನ್‌ಐಎ ಅಧಿಕಾರಿಗಳ ಭೇಟಿ : ಪ್ರಕರಣದ ತನಿಖೆಯನ್ನು ಮತ್ತಷ್ಟು ವಿಸ್ತರಿಸಿರುವ ಎನ್‌ಐಎ ಅಧಿಕಾರಿಗಳು ಮತ್ತೆ ಬಳ್ಳಾರಿಗೆ ಆಗಮಿಸಿ ಶೋಧ ಕಾರ್ಯಾಚರಣೆ ನಡೆಸಿರುವುದು ಕುತೂಹಲ ಮೂಡಿಸಿದೆ. ತನಿಖೆಯ ಭಾಗವಾಗಿ ವಶಪಡಿಸಿಕೊಂಡಿರುವ ಮೊಬೈಲ್ ಫೋನ್, ಎಲೆಕ್ಟ್ರಾನಿಕ್ ಸಾಧನಗಳು ಮತ್ತು ಇತರ ಡಿಜಿಟಲ್ ಮಾಹಿತಿಯನ್ನು ತಾಂತ್ರಿಕ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಮಟ್ಟದಲ್ಲಿ ತನಿಖೆ : ದೇಶದ ವಿವಿಧ ಭಾಗಗಳಲ್ಲಿ ಉಗ್ರ ಚಟುವಟಿಕೆಗಳಿಗೆ ಸಂಬಂಧಿಸಿದ ಜಾಲಗಳನ್ನು ಪತ್ತೆಹಚ್ಚಲು ಹಾಗೂ ಆನ್‌ಲೈನ್ ಮೂಲಕ ನಡೆಯುತ್ತಿರುವ ಮೂಲಭೂತವಾದದ ಪ್ರಚಾರವನ್ನು ತಡೆಯಲು ಎನ್‌ಐಎ ಹಲವು ರಾಜ್ಯಗಳಲ್ಲಿ ಸಮನ್ವಯಿತ ಕಾರ್ಯಾಚರಣೆಗಳನ್ನು ನಡೆಸುತ್ತಿದೆ. ಇದೇ ತನಿಖೆಯ ಭಾಗವಾಗಿ ಬಳ್ಳಾರಿಯಲ್ಲೂ ಶೋಧ ಕಾರ್ಯಾಚರಣೆ ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತರ ಶಾಕ್

ಈವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಬಂಧನಗಳು ನಡೆದಿರುವ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೆ, ತನಿಖೆ ಮುಂದುವರಿದಿದ್ದು, ಡಿಜಿಟಲ್ ಸಾಕ್ಷ್ಯಗಳ ವಿಶ್ಲೇಷಣೆ ಬಳಿಕ ಇನ್ನಷ್ಟು ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ.

‘ಟಾಕ್ಸಿಕ್’ ನಿರ್ಮಾಣ ಸಂಸ್ಥೆ KVN ಪ್ರೊಡಕ್ಷನ್ಸ್‌ನಿಂದ ಅರ್ಜಿ ಆಹ್ವಾನ

The post ಬಳ್ಳಾರಿಯಲ್ಲಿ NIA ದಾಳಿ : ಕೌಲಬಜಾರ್‌ನಲ್ಲಿ ಶೋಧ ಕಾರ್ಯಾಚರಣೆ appeared first on Samyukta Karnataka.

ಚಾರಿತ್ರ್ಯಕ್ಕೆ ಡಬಲ್ ಮರ್ಡರ್: ರಾಜಿ ಪಂಚಾಯತಿ ವೇಳೆ ರಕ್ತಪಾತ!
ಬಳ್ಳಾರಿ: ಪತ್ನಿಯ ಚಾರಿತ್ರ್ಯದ ಬಗ್ಗೆ ಮೂಡಿದ್ದ ಅನುಮಾನವೇ ದಾರುಣ ‌ ಡಬಲ್ ಮರ್ಡರ್‌ಗೆ ಕಾರಣವಾಗಿರುವ ಘಟನೆ ಬಳ್ಳಾರಿ ನಗರದ ಗುಗ್ಗರಹಟ್ಟಿ ಪ್ರದೇಶದಲ್ಲಿ ಮಂಗಳವಾರ ನಡೆದಿದೆ. ಪತ್ನಿ ಹಾಗೂ ಕುಟುಂಬದ ಕಲಹ ಬಗೆಹರಿಸಲು ರಾಜಿ ಪಂಚಾಯತಿಗೆ ಬಂದಿದ್ದ ಮಾವನನ್ನು ಪತಿ ಮತ್ತು ಆತನ ತಂದೆ ಸೇರಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ.

ಬಳ್ಳಾರಿ ನಗರದ ಗುಗ್ಗರಹಟ್ಟಿಯಲ್ಲಿ ಪತ್ನಿಯ ಚಾರಿತ್ರ್ಯದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಪತಿ, ರಾಜಿ ಪಂಚಾಯತಿಗೆ ಬಂದಿದ್ದ ಮಾವ ಹಾಗೂ ಪತ್ನಿಯನ್ನು ಚಾಕುವಿನಿಂದ ಹತ್ಯೆ ಮಾಡಿದ ಆರೋಪ ಕೇಳಿಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.https://t.co/w0xMNuG0Im pic.twitter.com/ebO3RfN5zk
— Samyukta Karnataka (@SamyuktaKarnatk) July 7, 2026

ಈ ಘಟನೆ ನಗರದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಮೃತರನ್ನು ನಾಗಲಕ್ಷ್ಮೀ (24) ಹಾಗೂ ಅವರ ತಂದೆ ಶ್ರೀನಿವಾಸ (48) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಲಕ್ಷ್ಮಿಯ ಪತಿ ತೇಜಾ (29) ಹಾಗೂ ಆತನ ತಂದೆ ಗುರುಶಂಕರ (50) ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ‘ಸಿನಿಮಾ ಎಲ್ಲಕ್ಕಿಂತ ದೊಡ್ಡದು’: ‘ಕರಾವಳಿ’ ವಿವಾದದ ಬಗ್ಗೆ ರಾಜ್ ಬಿ. ಶೆಟ್ಟಿ ಬೇಸರ

ಸಂಸಾರದಲ್ಲಿ ನಿರಂತರ ಕಲಹ : ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ತೇಜಾ ತನ್ನ ಪತ್ನಿ ನಾಗಲಕ್ಷ್ಮಿಯ ಚಾರಿತ್ರ್ಯದ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದು, ಇದೇ ವಿಚಾರವಾಗಿ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಕುಟುಂಬದಲ್ಲಿ ಉಂಟಾಗಿದ್ದ ಭಿನ್ನಾಭಿಪ್ರಾಯವನ್ನು ಬಗೆಹರಿಸಲು ನಾಗಲಕ್ಷ್ಮಿಯ ತಂದೆ ಶ್ರೀನಿವಾಸ ಅವರು ಮಂಗಳವಾರ ತೇಜಾ ಮನೆಗೆ ರಾಜಿ ಪಂಚಾಯತಿಗಾಗಿ ಆಗಮಿಸಿದ್ದರು.

ಮಾತಿನ ಚಕಮಕಿಯಿಂದ ದುರಂತ : ರಾಜಿ ಮಾತುಕತೆ ನಡೆಯುತ್ತಿದ್ದ ವೇಳೆ ಮಾತಿನ ಚಕಮಕಿ ತೀವ್ರಗೊಂಡಿದೆ. ಈ ವೇಳೆ ಕೋಪಗೊಂಡ ತೇಜಾ ಹಾಗೂ ಆತನ ತಂದೆ ಗುರುಶಂಕರ ಅವರು ಚಾಕುವಿನಿಂದ ನಾಗಲಕ್ಷ್ಮೀ ಮತ್ತು ಶ್ರೀನಿವಾಸ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಇದನ್ನೂ ಓದಿ: ಕಾಕ್ರೋಚ್ ಪಕ್ಷದ ‘X’ ಖಾತೆ ತಡೆ ಆದೇಶ ರದ್ದುಗೊಳಿಸಿದ ದೆಹಲಿ ಹೈಕೋರ್ಟ್

ಇಸ್ತ್ರಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಕುಟುಂಬ : ಆರೋಪಿಗಳ ಕುಟುಂಬ ದೋಬಿ (ಇಸ್ತ್ರಿ) ವೃತ್ತಿಯನ್ನು ಮಾಡಿಕೊಂಡು ಜೀವನ ಸಾಗಿಸುತ್ತಿತ್ತು ಎಂದು ತಿಳಿದುಬಂದಿದೆ. ಕುಟುಂಬ ಕಲಹವೇ ಈ ದುರಂತಕ್ಕೆ ಕಾರಣವಾಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಪೊಲೀಸರ ತನಿಖೆ ಆರಂಭ : ಘಟನಾ ಸ್ಥಳಕ್ಕೆ ಎಪಿಎಂಸಿ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದು, ಹತ್ಯೆಯ ಹಿಂದಿನ ನಿಖರ ಕಾರಣ ಹಾಗೂ ಘಟನೆಯ ಸಂಪೂರ್ಣ ವಿವರವನ್ನು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ‘PDO ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ’– ಡೆತ್‌ನೋಟ್‌ನಲ್ಲಿ ಆರೋಪ

ಪ್ರಾಥಮಿಕ ಮಾಹಿತಿ ಪ್ರಕಾರ ಪತ್ನಿಯ ಮೇಲಿನ ಅನುಮಾನವೇ ಈ ದ್ವಿ-ಹತ್ಯೆಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದ್ದರೂ, ನಿಖರ ಕಾರಣ ಪೊಲೀಸ್ ತನಿಖೆ ಪೂರ್ಣಗೊಂಡ ಬಳಿಕವೇ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಯನಾಡ್‌ನಲ್ಲಿ ಮತ್ತೆ ಭೂಕುಸಿತ : ಹಲವರು ಸಿಲುಕಿರುವ ಶಂಕೆ

The post ಚಾರಿತ್ರ್ಯಕ್ಕೆ ಡಬಲ್ ಮರ್ಡರ್: ರಾಜಿ ಪಂಚಾಯತಿ ವೇಳೆ ರಕ್ತಪಾತ! appeared first on Samyukta Karnataka.

ಎಸ್‌ಐಆರ್ ಪ್ರಕ್ರಿಯೆ ತಕ್ಷಣವೇ ರದ್ದುಪಡಿಸಿ
ಬಳ್ಳಾರಿ: ರಾಜ್ಯ ಸರ್ಕಾರ ಎಸ್‌ಐಆರ್ ಪ್ರಕ್ರಿಯೆಯ ಪಾವಿತ್ರ‍್ಯವನ್ನು ಹಾಳು ಮಾಡುತ್ತಿದೆ. ಚುನಾವಣಾ ವ್ಯವಸ್ಥೆಯನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದೆ. ಪಶ್ಚಿಮ ಬಂಗಾಳ ಮಾದರಿಯಲ್ಲಿ ಕೇಂದ್ರ ಚುನಾವಣೆ ಆಯೋಗದ ಮಧ್ಯಸ್ಥಿಕೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆಯಬೇಕು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಒತ್ತಾಯಿಸಿದರು.

ಹಾವಂಬಾವಿಯಲ್ಲಿನ ಅವರ ನಿವಾಸದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತಕ್ಷಣ ರದ್ದುಪಡಿಸಬೇಕು. ಎಸ್‌ಐಆರ್ ಸಮೀಕ್ಷೆ ಪಾರದರ್ಶಕವಾಗಿ ನಡೆಯುತ್ತಿಲ್ಲ. ರಾಜ್ಯ ಸರಕಾರ ತನ್ನ ಮೂಗಿನ ನೇರಕ್ಕೆ ಎಸ್‌ಐಆರ್ ನಡೆಸುತ್ತಿದೆ. ಅಕ್ರಮ ವಲಸಿಗರು, ಕಳ್ಳ ಮತದಾರರನ್ನು ರಕ್ಷಿಸುವ ರೀತಿಯಲ್ಲಿ ಕಾರ್ಯ ನಡೆಯುತ್ತಿದೆ. ಕೆಲ ಬಿಎಲ್‌ಒಗಳು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸದೇ ಕರ್ತವ್ಯ ನಿರ್ವಹಿಸುತ್ತಿದ್ದು, ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸುವ ಬದಲು ಶಾದಿ ಮಹಲ್, ಮಸೀದಿ ಹಾಗೂ ಸಮುದಾಯ ಭವನಗಳಲ್ಲಿ ಕುಳಿತು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ದೂರಿದರು. ಇಂತಹ ರೀತಿಯಲ್ಲಿ ನಡೆಸಿರುವ ಸಮೀಕ್ಷೆಯನ್ನು ಕೂಡಲೇ ರದ್ದುಪಡಿಸಿ, ನಿಯಮ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಬಂಧಿಸಬೇಕು ಎಂದು ಒತ್ತಾಯಿಸಿದರು.

ಅಕ್ರಮವಾಗಿ ದೇಶ ಪ್ರವೇಶಿಸಿರುವ ಬಾಂಗ್ಲಾದೇಶಿ ವಲಸಿಗರಿಗೆ ಗುರುತಿನ ಚೀಟಿ ಒದಗಿಸಲು ಸರ್ಕಾರ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದ ಶ್ರೀರಾಮುಲು, ಇಂತಹ ಅಕ್ರಮಗಳು ದೇಶದ ಭದ್ರತೆಗೆ ಅಪಾಯಕಾರಿಯಾಗಿವೆ. ಕಾಂಗ್ರೆಸ್ ಪಕ್ಷವು ಮತಬ್ಯಾಂಕ್ ರಾಜಕಾರಣಕ್ಕಾಗಿ ಇಂತಹ ನೀತಿಗಳನ್ನು ಅನುಸರಿಸುತ್ತಿದೆ. ಕಾಂಗ್ರೆಸ್ ಸರ್ಕಾರಕ್ಕೆ ದೇಶದ ಭದ್ರತೆಗಿಂತ ರಾಜಕಾರಣ ಮುಖ್ಯವಾಗಿದೆ ಎಂದು ಆರೋಪಿಸಿದರು.

2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿ.ಶ್ರೀರಾಮುಲು, ಅಕ್ರಮಗಳ ಮೂಲಕ ಚುನಾವಣಾ ಪ್ರಕ್ರಿಯೆಯನ್ನು ದಾರಿ ತಪ್ಪಿಸಿ ಅಧಿಕಾರಕ್ಕೆ ಬರಲು ಸರ್ಕಾರ ಪ್ರಯತ್ನಿಸುತ್ತಿದೆ. 2028ರಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬುದು ಕಾಂಗ್ರೆಸ್ ನಾಯಕರ ಹಗಲು ಕನಸು ಎಂದು ಟೀಕಿಸಿದರು.

9 ವರ್ಷದ ಬಹಿಷ್ಕಾರ ಮತ್ತೆ ವೈರಲ್: ಉಪನ್ಯಾಸಕನಿಂದ ದೂರು

The post ಎಸ್‌ಐಆರ್ ಪ್ರಕ್ರಿಯೆ ತಕ್ಷಣವೇ ರದ್ದುಪಡಿಸಿ appeared first on Samyukta Karnataka.

ಬಂದೂಕು ಹಿಡಿದು ರೀಲ್ಸ್: ಮೂವರು ಯುವಕರ ವಿರುದ್ಧ ಪ್ರಕರಣ
ಬಳ್ಳಾರಿಯ ಕೌಲ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಕಲಿ ಡಬಲ್ ಬ್ಯಾರೆಲ್ ಬಂದೂಕು ಹಾಗೂ ಪಿಸ್ತೂಲ್ ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಮೂವರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣಗಳ ಮೇಲಿನ ನಿಗಾವನ್ನು ಪೊಲೀಸರು ಮತ್ತಷ್ಟು ಬಿಗಿಗೊಳಿಸಿದ್ದಾರೆ.

ಬಳ್ಳಾರಿ: ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೀಕ್ಷಣೆ ಮತ್ತು ಗಮನ ಸೆಳೆಯುವ ಉದ್ದೇಶದಿಂದ ನಕಲಿ ಶಸ್ತ್ರಾಸ್ತ್ರಗಳನ್ನು ಬಳಸಿಕೊಂಡು ರೀಲ್ಸ್ ಮಾಡಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದ ಆರೋಪದಡಿ ಬಳ್ಳಾರಿಯ ಮೂವರು ಯುವಕರ ವಿರುದ್ಧ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದ ಕೌಲ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಬಂಡಿಹಟ್ಟಿ ಗ್ರಾಮದ ಎಚ್.ಎಲ್.ಸಿ. ಕಾಲುವೆ ದಂಡೆ ಬಳಿ ಆರೋಪಿಗಳು ನಕಲಿ ಡಬಲ್ ಬ್ಯಾರೆಲ್ ಬಂದೂಕು ಹಾಗೂ ಪಿಸ್ತೂಲ್ ಹಿಡಿದು ವಿಡಿಯೋ ಚಿತ್ರೀಕರಿಸಿ, ಬಳಿಕ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಸಾರ್ವಜನಿಕರಲ್ಲಿ ಆತಂಕ ಮೂಡಿಸುವ ರೀತಿಯಲ್ಲಿದ್ದ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂಪ್ರೇರಿತವಾಗಿ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ ಬಾಲಕಿ ದೂರು: POCSO ಪ್ರಕರಣದಲ್ಲಿ PSI ಬಂಧನ!

ನಕಲಿ ಶಸ್ತ್ರಾಸ್ತ್ರ ವಶಕ್ಕೆ ಕ್ರಮ : ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳು ಬಳಸಿದ್ದ ನಕಲಿ ಡಬಲ್ ಬ್ಯಾರೆಲ್ ಬಂದೂಕು ಹಾಗೂ ಪಿಸ್ತೂಲ್ ವಶಪಡಿಸಿಕೊಳ್ಳುವ ಪ್ರಕ್ರಿಯೆ ಕೈಗೊಂಡಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದ್ದು, ರೀಲ್ಸ್ ಚಿತ್ರೀಕರಣದ ಹಿಂದಿನ ಉದ್ದೇಶ ಹಾಗೂ ಇತರೆ ಮಾಹಿತಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸರ ವಿಶೇಷ ನಿಗಾ : ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳು ಹಾಗೂ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸಾಮಾಜಿಕ ಜಾಲತಾಣಗಳ ಮೇಲ್ವಿಚಾರಣೆಗಾಗಿ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಸಾರ್ವಜನಿಕರು ಹಂಚಿಕೊಳ್ಳುವ ಫೋಟೋ, ವಿಡಿಯೋ, ರೀಲ್ಸ್, ಬರಹ ಸೇರಿದಂತೆ ಎಲ್ಲ ರೀತಿಯ ಪೋಸ್ಟ್‌ಗಳ ಮೇಲೆ ನಿರಂತರ ನಿಗಾ ಇರಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ‘ಗ್ರಾಮಾಯಣ’ Review: ಗ್ರಾಮೀಣ ಬದುಕಿನ ಹೋರಾಟಕ್ಕೆ ಸಿನಿ ರೂಪ

ಪ್ರಚೋದನಕಾರಿ ಪೋಸ್ಟ್‌ಗಳಿಗೆ ಕಠಿಣ ಕ್ರಮದ ಎಚ್ಚರಿಕೆ : ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುವ, ಕೋಮು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ಅಥವಾ ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ಎಚ್ಚರಿಕೆ ನೀಡಿದ್ದಾರೆ.

ಯುವಕರಿಗೆ ಪೊಲೀಸರ ಮನವಿ : ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಉದ್ದೇಶದಿಂದ ಕಾನೂನುಬಾಹಿರ ಅಥವಾ ಭಯ ಹುಟ್ಟಿಸುವ ರೀತಿಯ ವಿಡಿಯೋಗಳನ್ನು ಚಿತ್ರೀಕರಿಸಿ ಹಂಚಿಕೊಳ್ಳಬಾರದು. ಇಂತಹ ಕೃತ್ಯಗಳು ಕಾನೂನು ಕ್ರಮಕ್ಕೆ ಕಾರಣವಾಗುವುದರ ಜೊತೆಗೆ ಸಮಾಜದಲ್ಲಿ ಆತಂಕ ಸೃಷ್ಟಿಸುವ ಸಾಧ್ಯತೆಯೂ ಇರುವುದರಿಂದ ಜವಾಬ್ದಾರಿಯುತವಾಗಿ ಸಾಮಾಜಿಕ ಜಾಲತಾಣಗಳನ್ನು ಬಳಸುವಂತೆ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ತಂದೆ-ಮಗನ ಹೊಸ ಸಿನಿಮಾಗಳಿಗೆ ಮುಹೂರ್ತ: DK ಸಮ್ಮುಖದಲ್ಲಿ ಶುಭಾರಂಭ

The post ಬಂದೂಕು ಹಿಡಿದು ರೀಲ್ಸ್: ಮೂವರು ಯುವಕರ ವಿರುದ್ಧ ಪ್ರಕರಣ appeared first on Samyukta Karnataka.

ಅಕ್ರಮ ಸಾಗಾಟಕ್ಕೆ ಬ್ರೇಕ್: ₹97 ಸಾವಿರ ಮೌಲ್ಯದ ಪಡಿತರ ಅಕ್ಕಿ ಜಪ್ತಿ
ಬಳ್ಳಾರಿ: ಜಿಲ್ಲೆಯಲ್ಲಿಯೂ ಅಕ್ರಮ ಪಡಿತರ ಅಕ್ಕಿ ಸಾಗಾಟದ ವಿರುದ್ಧ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಮುಂದುವರಿಸಿದ್ದು, ಆಹಾರ ಇಲಾಖೆ ಮತ್ತು ಹಚೋಳ್ಳಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ 30 ರಿಂದ 40 ಕ್ವಿಂಟಲ್ ಪಡಿತರ ಅಕ್ಕಿ ಹಾಗೂ ಸಾಗಾಟಕ್ಕೆ ಬಳಸಲಾಗುತ್ತಿದ್ದ ಬೊಲೆರೊ ಗೂಡ್ಸ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನನ್ನು ಬಂಧಿಸಲಾಗಿದ್ದು, ಇಬ್ಬರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಲೂಕಿನ ಬೈರಗಾಮದಿನ್ನಿ ಗ್ರಾಮದಿಂದ ನಾಡಂಗ ಗ್ರಾಮದ ಕಡೆಗೆ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಅಧಿಕಾರಿಗಳಿಗೆ ಲಭಿಸಿತ್ತು. ಇದರ ಆಧಾರದ ಮೇಲೆ ಆಹಾರ ನಿರೀಕ್ಷಕ ವಿಜಯಕುಮಾರ್ ನೇತೃತ್ವದ ತಂಡ ಹಚೋಳ್ಳಿ ಪೊಲೀಸರೊಂದಿಗೆ ಜಂಟಿಯಾಗಿ ದಾಳಿ ನಡೆಸಿತು.

ಇದನ್ನೂ ಓದಿ: ಹಾವೇರಿ ಮೂಲದ ಯೋಧ ಯಶೋಧರ ಕರ್ತವ್ಯದ ವೇಳೆ ಹುತಾತ್ಮ

ದಾಳಿ ವೇಳೆ ಬೊಲೆರೊ ಗೂಡ್ಸ್ ವಾಹನವನ್ನು ತಡೆದು ಪರಿಶೀಲಿಸಲಾಯಿತು. ಪರಿಶೀಲನೆ ಸಂದರ್ಭದಲ್ಲಿ ವಾಹನದಲ್ಲಿ 35 ರಿಂದ 40 ಕೆ.ಜಿ. ತೂಕದ 80 ಚೀಲಗಳಲ್ಲಿ ಒಟ್ಟು 30 ರಿಂದ 40 ಕ್ವಿಂಟಲ್ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಪತ್ತೆಯಾಯಿತು. ವಶಪಡಿಸಿಕೊಂಡ ಅಕ್ಕಿಯ ಅಂದಾಜು ಮೌಲ್ಯ ಸುಮಾರು ₹97,280 ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಡಿತರ ವ್ಯವಸ್ಥೆಯ ಮೂಲಕ ಸಾರ್ವಜನಿಕರಿಗೆ ವಿತರಿಸಬೇಕಾದ ಅಕ್ಕಿಯನ್ನು ಅಕ್ರಮವಾಗಿ ಬೇರೆಡೆ ಸಾಗಿಸಲಾಗುತ್ತಿತ್ತು ಎಂಬ ಶಂಕೆ ವ್ಯಕ್ತವಾಗಿದೆ.

ಅಧಿಕಾರಿಗಳು ಅಕ್ಕಿ ಮತ್ತು ಸಾಗಾಟಕ್ಕೆ ಬಳಸುತ್ತಿದ್ದ ಬೊಲೆರೊ ವಾಹನವನ್ನು ವಶಪಡಿಸಿಕೊಂಡಿದ್ದು, ವಾಹನ ಚಾಲಕನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿಗಾಗಿ ತನಿಖೆ ಮುಂದುವರಿದಿದೆ.

ಇದನ್ನೂ ಓದಿ: KR ಸರ್ಕಲ್‌ನಲ್ಲಿ ಎರಡು BMTC ಬಸ್‌ಗಳ ನಡುವೆ ಸರಣಿ ಅಪಘಾತ

ಈ ಸಂಬಂಧ ಕೇಶವ ಹಾಗೂ ವೆಂಕಟೇಶ್ ವಿರುದ್ಧ ಹಚೋಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಅಕ್ರಮ ಪಡಿತರ ಅಕ್ಕಿ ಸಾಗಾಟದ ಹಿಂದೆ ಇನ್ನೂ ದೊಡ್ಡ ಜಾಲವಿದೆಯೇ ಎಂಬ ಕುರಿತು ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಸಾರ್ವಜನಿಕ ವಿತರಣಾ ವ್ಯವಸ್ಥೆಯ ಅಡಿಯಲ್ಲಿ ಬಡ ಹಾಗೂ ಅರ್ಹ ಕುಟುಂಬಗಳಿಗೆ ನೀಡಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುವವರ ವಿರುದ್ಧ ಮುಂದಿನ ದಿನಗಳಲ್ಲೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ತಪ್ಪಿದ ಮುಂಗಾರು ಅಬ್ಬರ: ಕೃಷಿ, ವಿದ್ಯುತ್ ಉತ್ಪಾದನೆಗೆ ಹೆಚ್ಚಿದ ಆತಂಕ

The post ಅಕ್ರಮ ಸಾಗಾಟಕ್ಕೆ ಬ್ರೇಕ್: ₹97 ಸಾವಿರ ಮೌಲ್ಯದ ಪಡಿತರ ಅಕ್ಕಿ ಜಪ್ತಿ appeared first on Samyukta Karnataka.

ಕಾಮಗಾರಿಗೆ ಲಂಚ: ಇಬ್ಬರು ಇಂಜಿನಿಯರ್‌ಗಳು ಲೋಕಾ ಬಲೆಗೆ
ಬಳ್ಳಾರಿಯಲ್ಲಿ ಲೋಕಾಯುಕ್ತ ಬಲೆಗೆ ಇಬ್ಬರು ಕೆ.ಯು.ಡಬ್ಲ್ಯು.ಎಸ್‌.ಡಿ.ಬಿ. ಇಂಜಿನಿಯರ್‌ಗಳು; ₹55 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಬಂಧನ

ಬಳ್ಳಾರಿ: ಖಾಸಗಿ ಲೇಔಟ್‌ಗೆ ನೀರು ಸರಬರಾಜು ಹಾಗೂ ಒಳಚರಂಡಿ ಕಾಮಗಾರಿಯ ಎಸ್ಟಿಮೇಟ್‌ಗೆ ಅನುಮೋದನೆ ನೀಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (KUWSDB)ಯ ಇಬ್ಬರು ಇಂಜಿನಿಯರ್‌ಗಳು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಲೋಕಾಯುಕ್ತ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಸಹಾಯಕ ಇಂಜಿನಿಯರ್ ಅಶೋಕ್ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ಕಾಶಿನಾಥ್ ಅವರನ್ನು ಲಂಚದ ಹಣದೊಂದಿಗೆ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ರಾಜ್ಯದ 8 ಜಿಲ್ಲೆಗಳಲ್ಲಿ ಹೊಸ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ

₹75 ಸಾವಿರ ಬೇಡಿಕೆ, ₹55 ಸಾವಿರಕ್ಕೆ ಒಪ್ಪಂದ : ಮಾಹಿತಿಯ ಪ್ರಕಾರ, ನಗರದ ರಾಘವೇಂದ್ರ ಕಾಲೋನಿ 2ನೇ ಹಂತದ ಸಮೀಪದ 2.47 ಎಕರೆ ವಿಸ್ತೀರ್ಣದ ಖಾಸಗಿ ಲೇಔಟ್‌ಗೆ ನೀರು ಸರಬರಾಜು ಹಾಗೂ ಒಳಚರಂಡಿ ಕಾಮಗಾರಿಯ ಎಸ್ಟಿಮೇಟ್‌ಗೆ ಅನುಮೋದನೆ ನೀಡುವ ಸಂಬಂಧ ಸಹಾಯಕ ಇಂಜಿನಿಯರ್ ಅಶೋಕ್ ಅವರು ದೂರುದಾರ ವೀರೇಶ್ ಅವರಿಂದ ಆರಂಭದಲ್ಲಿ ₹75 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನಂತರ ಮಾತುಕತೆಯ ಮೂಲಕ ₹55 ಸಾವಿರಕ್ಕೆ ಒಪ್ಪಂದ ಮಾಡಿಕೊಂಡಿದ್ದರೆಂದು ಆರೋಪಿಸಲಾಗಿದೆ.

ಲೋಕಾಯುಕ್ತಕ್ಕೆ ದೂರು : ಲಂಚ ನೀಡಲು ಇಚ್ಛಿಸದ ದೂರುದಾರ ವೀರೇಶ್, ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಅಧಿಕಾರಿಗಳು ಬಲೆ ಬೀಸಿ ಕಾರ್ಯಾಚರಣೆ ನಡೆಸಿದರು. ಯೋಜನೆಯಂತೆ, ದೂರುದಾರರಿಂದ ₹55 ಸಾವಿರ ಲಂಚದ ಹಣವನ್ನು ಸಹಾಯಕ ಇಂಜಿನಿಯರ್ ಅಶೋಕ್ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಕಚೇರಿಯಲ್ಲೇ ದಾಳಿ ನಡೆಸಿ ಅವರನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದರು.

ಇದನ್ನೂ ಓದಿ: 200 CCTV ಪರಿಶೀಲನೆ: ₹1.5 ಕೋಟಿಯ 604 ಸ್ಮಾರ್ಟ್‌ಫೋನ್ ವಶ

ಕಾರ್ಯನಿರ್ವಾಹಕ ಇಂಜಿನಿಯರ್‌ಗೂ ಹಣ ಹಸ್ತಾಂತರ : ದಾಳಿಯ ವೇಳೆ ಲಂಚದ ಹಣದಲ್ಲಿ ಪಾಲಿನ ಮೊತ್ತವನ್ನು ಕಾರ್ಯನಿರ್ವಾಹಕ ಇಂಜಿನಿಯರ್ ಕಾಶಿನಾಥ್ ಅವರಿಗೆ ನೀಡುತ್ತಿದ್ದ ಸಂದರ್ಭದಲ್ಲಿಯೂ ಅಧಿಕಾರಿಗಳು ಸ್ಥಳದಲ್ಲೇ ದಾಳಿ ನಡೆಸಿ, ಅವರನ್ನೂ ಹಣದೊಂದಿಗೆ ವಶಕ್ಕೆ ಪಡೆದಿದ್ದಾರೆ. ಈ ಬೆಳವಣಿಗೆಯಿಂದ ಇಲಾಖೆಯಲ್ಲಿನ ಭ್ರಷ್ಟಾಚಾರದ ಬಗ್ಗೆ ಮತ್ತೊಮ್ಮೆ ಪ್ರಶ್ನೆಗಳು ಮೂಡಿದ್ದು, ಪ್ರಕರಣದ ತನಿಖೆ ತೀವ್ರಗೊಂಡಿದೆ.

ತನಿಖೆ ಮುಂದುವರಿಕೆ : ಇಬ್ಬರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಲಂಚದ ಬೇಡಿಕೆ ಹಾಗೂ ಹಣದ ಹಂಚಿಕೆ ಕುರಿತು ಸವಿಸ್ತಾರ ವಿಚಾರಣೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ಯಾರಾದರೂ ಅಧಿಕಾರಿಗಳು ಅಥವಾ ಮಧ್ಯವರ್ತಿಗಳ ಪಾತ್ರವಿದೆಯೇ ಎಂಬ ಬಗ್ಗೆಯೂ ತನಿಖೆ ಮುಂದುವರಿದಿದೆ.

e-ವಾಹನ ಸ್ಥಗಿತಗೊಳಿಸುತ್ತಿದ್ದ : 3 ಆ್ಯಪ್‌ಗಳಿಗೆ ಸರ್ಕಾರದ ಬ್ರೇಕ್

The post ಕಾಮಗಾರಿಗೆ ಲಂಚ: ಇಬ್ಬರು ಇಂಜಿನಿಯರ್‌ಗಳು ಲೋಕಾ ಬಲೆಗೆ appeared first on Samyukta Karnataka.

Splendor ಟಾರ್ಗೆಟ್: 1 ಬೈಕ್ ಬೆನ್ನಟ್ಟಿದ ಪೊಲೀಸರಿಗೆ ಸಿಕ್ಕವು 41 ಬೈಕ್‌ಗಳು!
ಬಳ್ಳಾರಿ ಪೊಲೀಸರು ಸರಣಿ ಬೈಕ್ ಕಳ್ಳನನ್ನು ಬಂಧಿಸಿದ್ದು, ಕಳೆದ ಒಂದು ವರ್ಷದಲ್ಲಿ 41 ಬೈಕ್‌ಗಳನ್ನು ಕದ್ದು ಮಾರಾಟ ಮಾಡಿದ್ದಾನೆ ಎನ್ನಲಾಗಿದೆ. ಹೀರೋ ಹೋಂಡಾ ಮತ್ತು ಸ್ಪ್ಲೆಂಡರ್ ಬೈಕ್‌ಗಳನ್ನೇ ಗುರಿಯಾಗಿಸಿಕೊಂಡಿದ್ದ ಕಾರಣ ಆರೋಪಿ ‘ಸ್ಪ್ಲೆಂಡರ್ ಸಿದ್ದ ರೆಡ್ಡಿ’ ಎಂದೇ ಕುಖ್ಯಾತನಾಗಿದ್ದ.

ಬಳ್ಳಾರಿ: ಹೀರೋ ಹೋಂಡಾ ಹಾಗೂ ವಿಶೇಷವಾಗಿ ಸ್ಪ್ಲೆಂಡರ್ ಬೈಕ್‌ಗಳನ್ನು ಕಳವು ಮಾಡುವುದನ್ನೇ ಕಸುಬಾಗಿಸಿಕೊಂಡಿದ್ದ ಕುಖ್ಯಾತ ಸರಣಿ ಬೈಕ್ ಕಳ್ಳನನ್ನು ಬಳ್ಳಾರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಒಂದು ವರ್ಷದಲ್ಲಿ ಬರೋಬ್ಬರಿ 41 ಬೈಕ್‌ಗಳನ್ನು ಕದ್ದು ಮಾರಾಟ ಮಾಡಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಕಳುವಾದ ವಾಹನಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬಳ್ಳಾರಿ ಪೊಲೀಸರು ಸರಣಿ ಬೈಕ್ ಕಳ್ಳನನ್ನು ಬಂಧಿಸಿದ್ದು, ಕಳೆದ ಒಂದು ವರ್ಷದಲ್ಲಿ 41 ಬೈಕ್‌ಗಳನ್ನು ಕದ್ದು ಮಾರಾಟ ಮಾಡಿದ್ದಾನೆ ಎನ್ನಲಾಗಿದೆ. ಹೀರೋ ಹೋಂಡಾ ಮತ್ತು ಸ್ಪ್ಲೆಂಡರ್ ಬೈಕ್‌ಗಳನ್ನೇ ಗುರಿಯಾಗಿಸಿಕೊಂಡಿದ್ದ ಕಾರಣ ಆರೋಪಿ 'ಸ್ಪ್ಲೆಂಡರ್ ಸಿದ್ದ ರೆಡ್ಡಿ' ಎಂದೇ ಕುಖ್ಯಾತನಾಗಿದ್ದ.https://t.co/ODyh1qdDi0 pic.twitter.com/y7l82dB0A1
— Samyukta Karnataka (@SamyuktaKarnatk) June 25, 2026

ಬಂಧಿತ ಆರೋಪಿಯನ್ನು ಬಳ್ಳಾರಿ ನಗರದ ಅಹಂಭಾವಿ ನಿವಾಸಿ ಸಿದ್ದರೆಡ್ಡಿ ಎಂದು ಗುರುತಿಸಲಾಗಿದ್ದು, ಆತ ಮೂಲತಃ ಆಟೋ ಚಾಲಕನಾಗಿದ್ದಾನೆ. ಆದರೆ ಕಳೆದ ಕೆಲವು ವರ್ಷಗಳಿಂದ ಬೈಕ್ ಕಳವು ಪ್ರಕರಣಗಳಲ್ಲಿ ತೊಡಗಿಸಿಕೊಂಡಿದ್ದ ಆತ, ವಿಶೇಷವಾಗಿ ಹೀರೋ ಹೋಂಡಾ ಕಂಪನಿಯ ಬೈಕ್‌ಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ನಡೆಸುತ್ತಿದ್ದ ಎನ್ನಲಾಗಿದೆ.

ಇದನ್ನೂ ಓದಿ: 3 ರಾಜ್ಯಗಳು ಒಟ್ಟಾಗಿ ನೀರಾವರಿ ಸಮಸ್ಯೆ ಬಗೆಹರಿಸೋಣ: ಡಿಕೆ

ಆರೋಪಿ ಹೀರೋ ಹೋಂಡಾ ಹಾಗೂ ಸ್ಪ್ಲೆಂಡರ್ ಬೈಕ್‌ಗಳ ಲಾಕ್ ತೆರೆಯುವಲ್ಲಿ ಪರಿಣತಿ ಹೊಂದಿದ್ದ ಕಾರಣ, ಪೊಲೀಸ್ ವಲಯ ಹಾಗೂ ಸ್ಥಳೀಯರಲ್ಲಿ ‘ಸ್ಪ್ಲೆಂಡರ್ ಸಿದ್ದ ರೆಡ್ಡಿ’ ಎಂದೇ ಕುಖ್ಯಾತನಾಗಿದ್ದ. ಕಳುವು ಮಾಡಿದ ಬೈಕ್‌ಗಳಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಸೇರಿದಂತೆ ವಿವಿಧ ಜಿಲ್ಲೆಗಳ ಗ್ರಾಮೀಣ ಭಾಗಗಳಲ್ಲಿ ಮಾರಾಟ ಮಾಡುತ್ತಿದ್ದ ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಇತ್ತೀಚೆಗೆ ಸಿರುಗುಪ್ಪ ಪಟ್ಟಣದಲ್ಲಿ ನಡೆದ ಬೈಕ್ ಕಳವು ಪ್ರಕರಣವನ್ನು ಬೆನ್ನಟ್ಟಿದ ಪೊಲೀಸರು, ಸಿಸಿಟಿವಿ ದೃಶ್ಯಗಳು ಮತ್ತು ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿ ಕಳೆದ ಒಂದು ವರ್ಷದಲ್ಲಿ 41 ಬೈಕ್‌ಗಳನ್ನು ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕನ್ನಡ ಪಠ್ಯಪುಸ್ತಕ ವಿವಾದ: ‘ಕೃಷ್ಣ’ ಹೆಸರಿನ ಬಗ್ಗೆ NCERT ಸ್ಪಷ್ಟನೆ

ವಶಪಡಿಸಿಕೊಂಡಿರುವ 41 ಬೈಕ್‌ಗಳಲ್ಲಿ ಸುಮಾರು 30 ಬೈಕ್‌ಗಳು ಸ್ಪ್ಲೆಂಡರ್ ಮಾದರಿಯದ್ದಾಗಿದ್ದು, ಉಳಿದವು ಹೀರೋ ಹೋಂಡಾ ಕಂಪನಿಯ ಇತರೆ ಮಾದರಿಯ ವಾಹನಗಳಾಗಿವೆ ಎನ್ನುವುದು ವಿಶೇಷ. ಒಂದು ಬೈಕ್ ಕಳವು ಪ್ರಕರಣವನ್ನು ಭೇದಿಸಲು ಆರಂಭಿಸಿದ ತನಿಖೆ, ಕೊನೆಗೆ 41 ಬೈಕ್ ಕಳವು ಜಾಲವನ್ನು ಪತ್ತೆಹಚ್ಚುವಂತೆ ಮಾಡಿದ್ದು, ಆರೋಪಿಯ ಚಾಣಾಕ್ಷತನಕ್ಕೆ ಪೊಲೀಸರು ಕ್ಷಣಕಾಲ ದಂಗಾಗಿದ್ದಾರೆ.

ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದ್ದು, ಇನ್ನಷ್ಟು ಕಳವು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಕೇಂದ್ರದಿಂದ ಬೆಂಬಲ ಬೆಲೆ ನೆರವು

The post Splendor ಟಾರ್ಗೆಟ್: 1 ಬೈಕ್ ಬೆನ್ನಟ್ಟಿದ ಪೊಲೀಸರಿಗೆ ಸಿಕ್ಕವು 41 ಬೈಕ್‌ಗಳು! appeared first on Samyukta Karnataka.

ಜಿಂದಾಲ್ ಏರ್‌ಪೋರ್ಟ್‌ಗೆ ಬಂದಿಳಿದ ಕರ್ನಾಟಕ, ಆಂಧ್ರ ಮುಖ್ಯಮಂತ್ರಿಗಳು!
ಕೊಪ್ಪಳದಲ್ಲಿ ಇಂದು ತುಂಗಭದ್ರಾ ಜಲಾಶಯದ 33 ಹೊಸ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ನಡೆಯಲಿದ್ದು, ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಬಳ್ಳಾರಿ : ಕರ್ನಾಟಕ ಸೇರಿದಂತೆ ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ನೀರಾವರಿ ವ್ಯವಸ್ಥೆಗೆ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾದ 33 ಹೊಸ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮ ಇಂದು (ಜೂನ್ 25) ಕೊಪ್ಪಳ ಜಿಲ್ಲೆಯಲ್ಲಿ ನಡೆಯಲಿದೆ. ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಈ ಮಹತ್ವದ ಕಾರ್ಯಕ್ರಮ ಜರುಗಲಿದ್ದು, ಇದು ತುಂಗಭದ್ರಾ ಅಣೆಕಟ್ಟಿನ ಇತಿಹಾಸದಲ್ಲಿ ಮಹತ್ವದ ಘಟ್ಟವೆಂದು ಪರಿಗಣಿಸಲಾಗಿದೆ.

ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹಾಗೂ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ ಕರ್ನಾಟಕ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿಗಳು ವಿಶೇಷ ವಿಮಾನದ ಮೂಲಕ ಜಿಂದಾಲ್ ವಿಜಯನಗರ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

ಕೊಪ್ಪಳ ತಾಲೂಕಿನ ಮುನಿರಾಬಾದ್ ಗ್ರಾಮದ ಪ್ರೌಢಶಾಲೆ ಆವರಣದಲ್ಲಿ ಕಾರ್ಯಕ್ರಮಕ್ಕಾಗಿ ಬೃಹತ್ ವೇದಿಕೆ ನಿರ್ಮಿಸಲಾಗಿದ್ದು, ಬೆಳಗ್ಗೆ 11 ಗಂಟೆಗೆ ಮೂವರು ಮುಖ್ಯಮಂತ್ರಿಗಳು ತುಂಗಭದ್ರಾ ಅಣೆಕಟ್ಟಿನ ಹೊಸ ಕ್ರಸ್ಟ್ ಗೇಟ್‌ಗಳನ್ನು ಅಧಿಕೃತವಾಗಿ ಲೋಕಾರ್ಪಣೆ ಮಾಡಲಿದ್ದಾರೆ. ರಾಜ್ಯದ ಸಚಿವರು, ಶಾಸಕರು, ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಸೇರಿದಂತೆ ಸಾವಿರಾರು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ತುಂಗಭದ್ರಾ ಜಲಾಶಯವು ಕರ್ನಾಟಕದ ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ವಿಜಯನಗರ ಜಿಲ್ಲೆಗಳ ಕೃಷಿಗೆ ಪ್ರಮುಖ ಆಧಾರವಾಗಿದ್ದು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿಯೂ ಲಕ್ಷಾಂತರ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸುತ್ತದೆ. ಹಳೆಯ ಗೇಟ್‌ಗಳ ಬದಲಿಗೆ ಹೊಸ ಕ್ರಸ್ಟ್ ಗೇಟ್‌ಗಳನ್ನು ಅಳವಡಿಸುವ ಮೂಲಕ ಅಣೆಕಟ್ಟಿನ ಸುರಕ್ಷತೆ ಮತ್ತು ನೀರು ನಿರ್ವಹಣಾ ಸಾಮರ್ಥ್ಯ ಮತ್ತಷ್ಟು ಬಲಗೊಳ್ಳಲಿದೆ.

ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮುನಿರಾಬಾದ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಭದ್ರತಾ ದೃಷ್ಟಿಯಿಂದ ಶಾಲೆ ಸುತ್ತಮುತ್ತ ವಿಶೇಷ ನಿಗಾವಹಿಸಲಾಗಿದೆ. ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಉಪಸ್ಥಿತಿಯಿಂದ ಕಾರ್ಯಕ್ರಮಕ್ಕೆ ವಿಶೇಷ ಮಹತ್ವ ಸಿಕ್ಕಿದೆ.

ವೆನೆಜುವೆಲಾ: ಭೂಕಂಪದ ಅಟ್ಟಹಾಸ – 7.5 ಕಂಪನಕ್ಕೆ ದೇಶವೇ ತಲ್ಲಣ!

The post ಜಿಂದಾಲ್ ಏರ್‌ಪೋರ್ಟ್‌ಗೆ ಬಂದಿಳಿದ ಕರ್ನಾಟಕ, ಆಂಧ್ರ ಮುಖ್ಯಮಂತ್ರಿಗಳು! appeared first on Samyukta Karnataka.

ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ತುಂಗಭದ್ರೆ: ಮದುವಣಗಿತ್ತಿಯಂತೆ ಸಿಂಗಾರಗೊಂಡ ಜಲಾಶಯ
ಮಲ್ಲಿಕಾರ್ಜುನ ಚಿಲ್ಕರಾಗಿ
ಬಳ್ಳಾರಿ\ಕೊಪ್ಪಳ: ತುಂಗಭದ್ರೆ ಜಲಾಶಯ ನಿರ್ಮಾಣ ಇತಿಹಾಸದಲ್ಲೇ ಎದುರಾಗಿದ್ದ ಗಂಡಾಂತರದಿಂದ ಪಾರಾಗಿ 33 ಹೊಸ ಕ್ರಸ್ಟ್‌ಗೇಟ್‌ಗಳ ಅಳವಡಿಕೆ ಮೂಲಕ ಹೊಸ ಚೈತನ್ಯ ಪಡೆದ ಅಣೆಕಟ್ಟೆಯಲ್ಲಿ ಸಂತಸ ಮೇಳೈಸಿದೆ. ಈ ಬಾರಿ ಮುಂಗಾರು ಮಳೆ ಕೊರತೆಯಿಂದ ಜಲಾಶಯದಲ್ಲಿ ನೀರಿಲ್ಲ ಎನ್ನುವ ಕೊರಗು, ಶಾಶ್ವತವಾಗಿ ಸಿಕ್ಕ ಪರಿಹಾರದ ಮುಂದೆ ಮಂಕಾಗಿದೆ.

ಗುರುವಾರ 25ರಂದು ಮುಂಜಾನೆ 11 ಗಂಟೆಗೆ ತುಂಗಭದ್ರಾ ಜಲಾಶಯದ ಹೊಸ 33 ಕ್ರಸ್ಟ್ ಗೇಟಗಳ ಉದ್ಘಾಟನೆ ಕಾರ್ಯಕ್ರಮವು ಈ ಭಾಗದ ರೈತಾಪಿ ಸಮೂಹದ ಬಾಳು ಹಸನಾಗಿಸುವಲ್ಲಿ ಆಶಾಕಿರಣ ಮೂಡಿಸಿದೆ.

ಎಲ್ಲಿ-ಏನು ಕಾರ್ಯಕ್ರಮ?: 2024ರ ಆ.10ರಂದು ತುಂಗಭದ್ರೆ ಜಲಾಶಯದ 19ನೇ ಕ್ರಸ್ಟ್‌ಗೇಟ್ ಕೊಚ್ಚಿ ಹೋಗಿದ್ದರಿಂದ ಹರಿಯುವ ನೀರಿನಲ್ಲಿ ತಾತ್ಕಾಲಿಕವಾಗಿ ಸ್ಟಾಪ್‌ಲಾಗ್ ಗೇಟ್ ಅಳವಡಿಸಿ ಡ್ಯಾಂನ್ನು ರಕ್ಷಣೆ ಮಾಡಲಾಗಿತ್ತು. ಬಳಿಕೆ ತಜ್ಞರ ಸೂಚನೆ ಮೇರೆಗೆ ಜಲಾಶಯದ 33 ಕ್ರಸ್ಟ್ ಗೇಟುಗಳನ್ನು ಬದಲಾಯಿಸಲಾಗಿದ್ದು, 52 ಕೋಟಿ ವೆಚ್ಚದಲ್ಲಿ ಮರು ನಿರ್ಮಿಸಲಾಗಿದೆ. ಇದರ ಲೋಕಾರ್ಪಣೆಯನ್ನು ಹೊಸಪೇಟೆಯ ಟಿಬಿ ಬೋರ್ಡ್ ವ್ಯಾಪ್ತಿಯ ಗೇಟ್ ನಂ. 18ರ ಬಳಿ ಸಿಎಂ ಡಿ.ಕೆ. ಶಿವಕುಮಾರ್ ಮಾಡಲಿದ್ದಾರೆ.

ಬಳಿಕ ಕೊಪ್ಪಳದ ಮುನಿರಾಬಾದ್‌ನ ಸರಕಾರಿ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್, ರಾಜಭೂಷಣ ಚೌಧರಿ, ವಿ. ಸೋಮಣ್ಣ, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ, ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೇಲ್ಮನೆ ಸಭಾಪತಿ ಬಸವರಾಜ ಹೊರಟ್ಟಿ, ಆಂಧ್ರದ ಸಿಎಂ ಚಂದ್ರಬಾಬು ನಾಯ್ಡು, ಉಪಮುಖ್ಯಮಂತ್ರಿ ಕೆ. ಪವನ್‌ಕಲ್ಯಾಣ, ಸಚಿವರಾದ ಡಾ. ನಿಮ್ಮಲ ರಾಮನಾಯ್ಡು, ಪಯ್ಯವುಲ ಕೇಶವ್, ತೆಲಂಗಾಣದ ಮುಖ್ಯಮಂತ್ರಿ ಎ.ರೇವಂತರೆಡ್ಡಿ, ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ್, ಸಚಿವರಾದ ಎನ್. ಉತ್ತಮಕುಮಾರ್‌ರೆಡ್ಡಿ ಹಾಗೂ ಕೇಂದ್ರ ಜಲ ಆಯೋಗದ ಸದಸ್ಯರು, ಐಎಎಸ್ ಅಧಿಕಾರಿಗಳು ಹಾಗೂ ನಾಲ್ಕು ಜಿಲ್ಲೆಯ ಶಾಸಕರುಗಳು ಸಾಕ್ಷಿಯಾಗಲಿದ್ದಾರೆ.

ಕೃಷ್ಣೆ-ತಂಗಭದ್ರೆ ಜೋಡಣೆಗೆ ಮುನ್ನುಡಿ?: ಕೃಷ್ಣಾ ಮತ್ತು ತುಂಗಭದ್ರಾ ನದಿಗಳ ಜೋಡಣೆಗೆ ಕೇಂದ್ರ ಸರಕಾರದ ಮುಂದೆ ಪ್ರಸ್ತಾವನೆ ಸಲ್ಲಿಸಲು ಮೂರು ರಾಜ್ಯದ ಸಿಎಂಗಳು ಉತ್ಸುಕರಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದನ್ನು ಘೋಷಣೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಈ ಹಿಂದೆ ಕ್ರಸ್ಟ್‌ಗೇಟ್ ಕೊಚ್ಚಿ ಹೋದಾಗ ಜಲಸಂಪನ್ಮೂಲ ಇಲಾಖೆ ಸಚಿವರಾಗಿದ್ದ ಡಿಕೆ ಶಿವಕುಮಾರ್ ಇದನ್ನು ಸವಾಲಾಗಿಯೇ ಸ್ವೀಕರಿಸಿದ್ದರು. ಈಗ ಹೊಸ ಗೇಟ್‌ಗಳ ಉದ್ಘಾಟನಾ ಸಂಭ್ರಮದ ಹೊತ್ತಲ್ಲೇ ಮತ್ತೊಂದು ಕೊಡುಗೆ ನೀಡುವ ನಿರ್ಣಯ ಸಿಎಂ ಡಿಕೆ ಶಿವಕುಮಾರ್ ಕೈಗೊಂಡಂತಿದೆ. ಇದಕ್ಕೆ ಪೂರಕವೆಂಬಂತೆ ಕೊಪ್ಪಳದ ಕಾರಟಗಿಯಲ್ಲಿ ಮಾಜಿ ಸಚಿವ ಶಿವರಾಜ ತಂಗಡಗಿ ಮಾತನಾಡಿದ್ದಾರೆ. `ಕೃಷ್ಣಾ ತುಂಗಭದ್ರಾ ನದಿ ಜೋಡಣೆ ಬಗ್ಗೆ ಸರ್ಕಾರದ ಆಲೋಚನೆ ಇದೆ. ಕೇಂದ್ರ ಸಚಿವರ ಎದುರು ನದಿ ಜೋಡಣೆ ಬಗ್ಗೆ ಪ್ರಸ್ತಾಪ ಮಾಡಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಯಾರಿ ಮಾಡಿದ್ದಾರೆ. ಕ್ರಸ್ಟ್ ಗೇಟ್ ಉದ್ಘಾಟನೆ ಬಳಿಕ ಈ ಪ್ರಸ್ತಾವನೆಯನ್ನು ಖುದ್ದಾಗಿ ಕೇಂದ್ರ ಜಲಶಕ್ತಿ ಸಚಿವರಿಗೆ ಸಲ್ಲಿಸಲಿದ್ದಾರೆ ಎಂದು ತಂಗಡಗಿ ಹೇಳಿದ್ದಾರೆ.

ಮಾಜಿ ಸಚಿವರ ಹೇಳಿಕೆ ಹಾಗೂ ಮೂರು ರಾಜ್ಯದ ಉತ್ಸುಕತೆ ನದಿ ಜೋಡಣೆಯಂತಹ ಪ್ರಮುಖ ಯೋಜನೆಗೆ ಕ್ರಸ್ಟ್ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮ ಸಾಕ್ಷಿಯಾಗುವ ಸಾಧ್ಯತೆಗಳಿವೆ.

ವರದಿ ಪುರಸ್ಕಾರ?: ಈ ಹಿಂದೆಯೇ ಪೂರ್ವಾಭಿಮುಖ ಮತ್ತು ಪಶ್ಚಿಮಾಭಿಮುಖವಾಗಿ ಹರಿಯುವ ನದಿಗಳ ಜೋಡಣೆ ಮೂಲಕ ರಾಜ್ಯದಲ್ಲಿ ಕುಡಿವ ನೀರಿನ ದಾಹ, ನೀರಾವರಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎನ್ನುವ ಅಂಶ ಪ್ರಸ್ತಾಪಿಸಿ ಹಲವು ತಜ್ಞರು ಸಲ್ಲಿಸಿದ ವರದಿಗಳು ಕೇಂದ್ರ ಮತ್ತು ರಾಜ್ಯ ಸರಕಾರದ ಮುಂದೆ ಇದ್ದವು.

ಆದರೆ ನದಿ ಜೋಡಣೆಯಂತಹ ಕ್ರಮಕ್ಕೆ ಕೇಂದ್ರ ಸದ್ಯಕ್ಕೆ ಆಸಕ್ತಿ ತೋರುತ್ತಿಲ್ಲ. ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ತುಂಗಭದ್ರಾ ಹೂಳು ತೆರವು, ಸಮಾನಾಂತರ ಜಲಾಶಯ ನಿರ್ಣಯದ ಬಗ್ಗೆಯೇ ವಿಶೇಷ ಸಭೆ ಐಆರ್‌ಬಿನಲ್ಲಿ ಕರೆದಿದ್ದಾರೆ. ಹೊಸ ತಂತ್ರಜ್ಞಾನ ಬಳಸಿ ಹೂಳು ತೆರವು ಬಗ್ಗೆ ಪರಿಷ್ಕರಣೆ ಆಲೋಚನೆ ಈ ಸಭೆಯ ಮುಂದೆ ಪ್ರಸ್ತಾಪವಾಗುವ ಸಾಧ್ಯತೆ ಇದೆ. ಅಲ್ಲದೇ ಸಮಾನಾಂತರ ಜಲಾಶಯದ ಬಗ್ಗೆಯೂ ಚರ್ಚೆಗಳು ನಡೆಯಲಿದ್ದು, ಜೂ. 25ರ ಸಭೆ ಅಂತಿಮ ನಿರ್ಣಯಕ್ಕೆ ಸಾಕ್ಷಿಯಾಗಲಿದೆ.

ವೀರೇಶ್ವರ ಪುಣ್ಯಾಶ್ರಮದಲ್ಲಿ ಶೀತಲ ಸಮರ: ಟ್ರಸ್ಟಿಗಳಿಂದ ಜೀವ ಬೆದರಿಕೆ

The post ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ತುಂಗಭದ್ರೆ: ಮದುವಣಗಿತ್ತಿಯಂತೆ ಸಿಂಗಾರಗೊಂಡ ಜಲಾಶಯ appeared first on Samyukta Karnataka.

ಶಾಸಕ ಗಣೇಶ್ ಪರ ಬೀದಿಗಿಳಿದ ಬೆಂಬಲಿಗರು: ಸಚಿವ ಸ್ಥಾನಕ್ಕೆ ಆಗ್ರಹ
ಬಳ್ಳಾರಿ: ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್. ಗಣೇಶ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಆಗ್ರಹಿಸಿ ಬಳ್ಳಾರಿಯಲ್ಲಿ ಬುಧವಾರ ನೂರಾರು ಬೆಂಬಲಿಗರು ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಏಳು ತಾಯಿ ಮಕ್ಕಳ ದೇವಸ್ಥಾನದಿಂದ ರಾಯಲ್ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಶಾಸಕ ಗಣೇಶ್ ಅವರ ಸೇವೆಯನ್ನು ಪರಿಗಣಿಸಿ ಸಚಿವ ಸ್ಥಾನ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ನೂರಾರು ಕಾರ್ಯಕರ್ತರು ಹಾಗೂ ಬೆಂಬಲಿಗರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಪರಿಣಾಮವಾಗಿ ರಾಯಲ್ ವೃತ್ತ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಾಯಿತು.

ಇದನ್ನೂ ಓದಿ: ಬೆಳ್ಳಂಬೆಳಗ್ಗೆ ED ರೈಡ್: ಅಬಕಾರಿ ಹೆಚ್ಚುವರಿ ಆಯುಕ್ತರ ನಿವಾಸ ಸೇರಿ 6 ಕಡೆ ದಾಳಿ

ಪ್ರತಿಭಟನಾಕಾರರು ಮಾತನಾಡಿ, ಕಂಪ್ಲಿ ಕ್ಷೇತ್ರದಿಂದ ಸತತ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜೆ.ಎನ್. ಗಣೇಶ್ ಅವರು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಜನಸೇವಕನಾಗಿ ಗುರುತಿಸಿಕೊಂಡಿದ್ದಾರೆ. ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಗೌರವಿಸಬೇಕು ಎಂದು ಆಗ್ರಹಿಸಿದರು.

ಇದಲ್ಲದೆ, ಮಾಜಿ ಸಚಿವ ಬಿ. ಶ್ರೀರಾಮುಲು ಅವರ ಅಳಿಯ ಸುರೇಶ್ ಬಾಬು ಅವರನ್ನು ಸತತ ಎರಡು ಬಾರಿ ಚುನಾವಣೆಯಲ್ಲಿ ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಕ್ಷೇತ್ರದಲ್ಲಿ ಬಲಪಡಿಸುವಲ್ಲಿ ಗಣೇಶ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಬೆಂಬಲಿಗರು ಹೇಳಿದರು.

ಇದನ್ನೂ ಓದಿ: ಅಗ್ನಿ ಅವಘಡ: ಉದ್ಯೋಗ ಭವನ ಬಳಿ 200ಕ್ಕೂ ಅಧಿಕ ಶೆಡ್‌ಗಳು ಭಸ್ಮ!

ಕಂಪ್ಲಿ ಕ್ಷೇತ್ರ ರಚನೆಯಾದ ಬಳಿಕ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಬಲಪಡಿಸುವಲ್ಲಿ ಗಣೇಶ್ ಅವರ ಕೊಡುಗೆ ಮಹತ್ವದ್ದಾಗಿದೆ. ಬಳ್ಳಾರಿ ಜಿಲ್ಲೆಯ ನಾಲ್ಕು ಎಸ್‌ಟಿ ಮೀಸಲು ಕ್ಷೇತ್ರಗಳಲ್ಲಿ ಪಕ್ಷವನ್ನು ಇನ್ನಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಅವರಿಗೆ ಸಚಿವ ಸ್ಥಾನ ನೀಡುವುದು ಅಗತ್ಯ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ರಜನಿಕಾಂತ್ 173ನೇ ಸಿನಿಮಾಗೆ ‘ಧರ್ಮನ್’ ಹೆಸರು ಫಿಕ್ಸ್!

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಶಾಸಕ ಗಣೇಶ್ ಪರವಾಗಿ ಬೆಂಬಲಿಗರು ನಡೆಸಿದ ಈ ಪ್ರತಿಭಟನೆಗೆ ರಾಜಕೀಯ ಮಹತ್ವ ಸಿಕ್ಕಿದೆ.

ಅದಾನಿ ಗ್ರೂಪ್‌ : ಪರಮಾಣು ಶಕ್ತಿಯಿಂದ ಬಂದರುಗಳವರೆಗೆ ವಿಸ್ತರಣೆ

The post ಶಾಸಕ ಗಣೇಶ್ ಪರ ಬೀದಿಗಿಳಿದ ಬೆಂಬಲಿಗರು: ಸಚಿವ ಸ್ಥಾನಕ್ಕೆ ಆಗ್ರಹ appeared first on Samyukta Karnataka.