ಬೆಂಗಳೂರು Archives - Samyukta Karnataka

‘PRC’ ವಿರುದ್ಧ ಅಮಿತ್ ಶಾಗೆ ಪತ್ರ ಬರೆದ ಸಚಿವೆ ಶೋಭಾ ಕರಂದ್ಲಾಜೆ
ಬೆಂಗಳೂರು : ಕರ್ನಾಟಕ ಸರ್ಕಾರ ಹೊರಡಿಸಿರುವ ‘ಕರ್ನಾಟಕ ಖಾಯಂ ನಿವಾಸಿ ಪ್ರಮಾಣಪತ್ರ (PRC), 2026’ ಅಧಿಸೂಚನೆಗೆ ಸಂಬಂಧಿಸಿದಂತೆ ತಕ್ಷಣ ಮಧ್ಯಪ್ರವೇಶಿಸುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

ಈ ಕುರಿತು ಬರೆದಿರುವ ಪತ್ರದಲ್ಲಿ, ಕರ್ನಾಟಕ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಖಾಯಂ ನಿವಾಸಿ ಪ್ರಮಾಣಪತ್ರ ವ್ಯವಸ್ಥೆಯು ಗಂಭೀರ ಸಾಂವಿಧಾನಿಕ, ಕಾನೂನು ಹಾಗೂ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಆತಂಕಗಳನ್ನು ಹುಟ್ಟುಹಾಕಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಶಿಕ್ಷಣ ಕ್ಷೇತ್ರ ನಿರ್ಲಕ್ಷ್ಯಕ್ಕೆ ಒಳಗಾಗಿದೆ: ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವರ ಆಕ್ರೋಶ

ಸಾಂವಿಧಾನಿಕ ಚೌಕಟ್ಟಿಗೆ ವಿರುದ್ಧ – ಶೋಭಾ ಆರೋಪ: ಭಾರತದ ಸಂವಿಧಾನವು ದೇಶದಾದ್ಯಂತ ಎಲ್ಲಾ ನಾಗರಿಕರಿಗೆ ಏಕರೂಪದ ಪೌರತ್ವವನ್ನು ಕಲ್ಪಿಸಿದೆ. ಇಂತಹ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ “ಖಾಯಂ ನಿವಾಸಿ” ಎಂಬ ಪ್ರತ್ಯೇಕ ವರ್ಗವನ್ನು ಸೃಷ್ಟಿಸಲು ಮುಂದಾಗಿರುವುದು ಸಾಂವಿಧಾನಿಕ ಚೌಕಟ್ಟಿಗೆ ವಿರುದ್ಧವಾಗಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಸಂವಿಧಾನದ 14ನೇ ವಿಧಿ ಎಲ್ಲಾ ನಾಗರಿಕರಿಗೆ ಸಮಾನತೆಯ ಹಕ್ಕನ್ನು ನೀಡುತ್ತದೆ. ಆದರೆ ಯಾವುದೇ ಸಾಂವಿಧಾನಿಕ ಅಥವಾ ಶಾಸನಬದ್ಧ ಅಧಿಕಾರವಿಲ್ಲದೆ “ಖಾಯಂ ನಿವಾಸಿ” ಎಂಬ ಪ್ರತ್ಯೇಕ ವರ್ಗವನ್ನು ಸೃಷ್ಟಿಸುವುದು ಕಾನೂನುಬದ್ಧವಾಗಿ ಪ್ರಶ್ನಾರ್ಹವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಉಡುಪಿಯಲ್ಲಿ ಖಾಸಗಿ ಶಾಲಾ ಬಸ್ ಪಲ್ಟಿ: ಏಳು ಮಂದಿಗೆ ಗಾಯ

ಅಕ್ರಮ ವಲಸಿಗರಿಗೆ ಅವಕಾಶ ಸಿಗುವ ಆತಂಕ : ಪತ್ರದಲ್ಲಿ ರಾಷ್ಟ್ರೀಯ ಭದ್ರತೆಯ ವಿಚಾರವನ್ನೂ ಉಲ್ಲೇಖಿಸಿರುವ ಶೋಭಾ ಕರಂದ್ಲಾಜೆ, ಪಿಆರ್‌ಸಿ ನೀಡುವ ಮಾನದಂಡಗಳು ಸ್ಥಳೀಯ ದಾಖಲೆಗಳು ಹಾಗೂ ಕಂದಾಯ ಅಧಿಕಾರಿಗಳ ಪರಿಶೀಲನೆಗೆ ಹೆಚ್ಚು ಅವಲಂಬಿತವಾಗಿರುವುದರಿಂದ, ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ ವ್ಯಕ್ತಿಗಳು ಅಥವಾ ವಿದೇಶಿ ಪ್ರಜೆಗಳು ಕೂಡ ವಂಚನೆಯ ಮೂಲಕ ಈ ಪ್ರಮಾಣಪತ್ರ ಪಡೆಯುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಒಮ್ಮೆ ಪಿಆರ್‌ಸಿ ಪಡೆದ ನಂತರ, ಅದನ್ನು ವಿವಿಧ ಸರ್ಕಾರಿ ಸೌಲಭ್ಯಗಳು, ಶೈಕ್ಷಣಿಕ ಪ್ರವೇಶಗಳು, ಉದ್ಯೋಗಾವಕಾಶಗಳು ಹಾಗೂ ಇತರ ಹಕ್ಕುಗಳನ್ನು ಪಡೆಯಲು ಬಳಸಿಕೊಳ್ಳಬಹುದಾಗಿದೆ. ಇದರಿಂದ ಅಕ್ರಮ ವಾಸ್ತವ್ಯಕ್ಕೆ ಪರೋಕ್ಷವಾಗಿ ಕಾನೂನುಬದ್ಧತೆ ಸಿಗುವ ಅಪಾಯವಿದೆ ಎಂದು ಅವರು ಹೇಳಿದ್ದಾರೆ.

ರಾಷ್ಟ್ರೀಯ ಭದ್ರತೆಗೆ ಧಕ್ಕೆ? : ಪೌರತ್ವ, ವಿದೇಶಿಯರು, ವಲಸೆ ಹಾಗೂ ಆಂತರಿಕ ಭದ್ರತೆ ಕುರಿತ ವಿಷಯಗಳು ಸಂವಿಧಾನದ ಪ್ರಕಾರ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಟ್ಟಿವೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಖಾಯಂ ನಿವಾಸಿ ಸ್ಥಾನಮಾನ ನೀಡಲು ಮುಂದಾಗಿರುವುದು ಕೇಂದ್ರದ ಅಧಿಕಾರ ವ್ಯಾಪ್ತಿಗೆ ಹಸ್ತಕ್ಷೇಪ ಮಾಡುವ ಸಾಧ್ಯತೆಯಿದೆ ಎಂದು ಶೋಭಾ ಕರಂದ್ಲಾಜೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ‘ಶ್ರೀ ರಾಮ ಭೂಮಿ’ ಚಿತ್ರದಲ್ಲಿ ಅನುಪಮ್ ಖೇರ್ ಹೊಸ ಲುಕ್

ಸರಿಯಾದ ಪೌರತ್ವ ಪರಿಶೀಲನೆಯಿಲ್ಲದೆ ಇಂತಹ ಪ್ರಮಾಣಪತ್ರಗಳನ್ನು ನೀಡಿದರೆ, ಅಕ್ರಮ ವಲಸಿಗರು ಆಡಳಿತಾತ್ಮಕ ವ್ಯವಸ್ಥೆಯಲ್ಲಿ ವಿಲೀನಗೊಳ್ಳುವ ಸಾಧ್ಯತೆ ಇದೆ. ಇದು ರಾಷ್ಟ್ರೀಯ ಭದ್ರತೆ ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಗಂಭೀರ ಪರಿಣಾಮ ಉಂಟುಮಾಡಬಹುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

The post ‘PRC’ ವಿರುದ್ಧ ಅಮಿತ್ ಶಾಗೆ ಪತ್ರ ಬರೆದ ಸಚಿವೆ ಶೋಭಾ ಕರಂದ್ಲಾಜೆ appeared first on Samyukta Karnataka.

ನಮ್ಮ ಮೆಟ್ರೋ ಗ್ರೀನ್ ಲೈನ್‌ನಲ್ಲಿ ತಾಂತ್ರಿಕ ಸಮಸ್ಯೆ: ಸಂಚಾರ ವಿಳಂಬ!
ಬೆಂಗಳೂರು ಹಸಿರು ಮಾರ್ಗ ಮೆಟ್ರೋ ಸೇವೆಯಲ್ಲಿ ತಾಂತ್ರಿಕ ದೋಷ; ಪ್ರಯಾಣಿಕರಿಗೆ ತಾತ್ಕಾಲಿಕ ತೊಂದರೆ

ಬೆಂಗಳೂರು: ನಗರದ ನಿತ್ಯ ಲಕ್ಷಾಂತರ ಪ್ರಯಾಣಿಕರ ಜೀವನಾಡಿಯಾಗಿರುವ ನಾಡಪ್ರಭು ಕೆಂಪೇಗೌಡ ಮೆಟ್ರೋ ರೈಲು ನಿಗಮದ (BMRCL) ಹಸಿರು ಮಾರ್ಗ ಮೆಟ್ರೋ ಸೇವೆಯಲ್ಲಿ ತಾಂತ್ರಿಕ ದೋಷ ಉಂಟಾಗಿ, ಗುರುವಾರ ಬೆಳಿಗ್ಗೆ ಕೆಲಕಾಲ ಸಂಚಾರದಲ್ಲಿ ವಿಳಂಬ ಉಂಟಾಯಿತು. ಈ ಬಗ್ಗೆ BMRCL ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಮಾಹಿತಿ ನೀಡಿದ್ದು, ಸಮಸ್ಯೆಯನ್ನು ತುರ್ತಾಗಿ ಪರಿಹರಿಸಲು ತಾಂತ್ರಿಕ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದೆ.

BMRCL ಪ್ರಕಟಣೆಯ ಪ್ರಕಾರ, ಹಸಿರು ಮಾರ್ಗದಲ್ಲಿ ಸಂಭವಿಸಿದ ತಾಂತ್ರಿಕ ಸಮಸ್ಯೆಯಿಂದಾಗಿ ರೈಲುಗಳ ಸಂಚಾರದಲ್ಲಿ ವಿಳಂಬ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ನಿಲ್ದಾಣಗಳಲ್ಲಿ ಹೆಚ್ಚುವರಿ ಸಮಯ ಕಾಯಬೇಕಾದ ಪರಿಸ್ಥಿತಿ ಎದುರಾಯಿತು. ಕೆಲವು ನಿಲ್ದಾಣಗಳಲ್ಲಿ ಜನಸಂದಣಿ ಕೂಡ ಹೆಚ್ಚಾಗಿದ್ದು, ಕಚೇರಿಗೆ ತೆರಳುತ್ತಿದ್ದವರು ಮತ್ತು ವಿದ್ಯಾರ್ಥಿಗಳು ತೊಂದರೆ ಅನುಭವಿಸಿದರು.

ಇದನ್ನೂ ಓದಿ: ಅರಬೈಲ್ ಘಾಟ್ ಬಳಿ ಭೀಕರ ಅಪಘಾತ: ಧಾರವಾಡ ಮೂಲದ ಆರು ಜನ ಸಾವು!

“ಸಮಸ್ಯೆಯನ್ನು ತುರ್ತಾಗಿ ಪರಿಹರಿಸಲು ನಮ್ಮ ತಾಂತ್ರಿಕ ಸಿಬ್ಬಂದಿ ಆದ್ಯತೆಯ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದು, ಸಾಧ್ಯವಾದಷ್ಟು ಬೇಗ ಸಾಮಾನ್ಯ ಮೆಟ್ರೋ ಸಂಚಾರವನ್ನು ಪುನಃಸ್ಥಾಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಉಂಟಾದ ಅನಾನುಕೂಲತೆಗೆ ವಿಷಾದಿಸುತ್ತೇವೆ” ಎಂದು BMRCL ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು ಮೆಟ್ರೋದಲ್ಲಿ ಇತ್ತೀಚಿನ ದಿನಗಳಲ್ಲಿ ಹಲವು ಬಾರಿ ತಾಂತ್ರಿಕ ದೋಷಗಳು ವರದಿಯಾಗಿದ್ದು, ನೇರಳೆ ಮಾರ್ಗ ಮತ್ತು ಹಸಿರು ಮಾರ್ಗಗಳಲ್ಲಿ ಕೆಲಕಾಲ ಸೇವೆ ವ್ಯತ್ಯಯ ಉಂಟಾಗಿದ್ದ ಘಟನೆಗಳು ನಡೆದಿವೆ. ಇಂತಹ ಘಟನೆಗಳಿಂದ ನಿತ್ಯ ಪ್ರಯಾಣಿಕರು ಪರ್ಯಾಯ ಸಾರಿಗೆ ವ್ಯವಸ್ಥೆಗೆ ಮೊರೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.

ಇದನ್ನೂ ಓದಿ: ಅಯೋಗ್ಯ 2 ಚಿತ್ರದ ಎರಡನೇ ಹಾಡು ಅನಾವರಣ

ಪ್ರಸ್ತುತ ತಾಂತ್ರಿಕ ತಂಡ ಸಮಸ್ಯೆ ನಿವಾರಣೆಗೆ ಶ್ರಮಿಸುತ್ತಿದ್ದು, ಶೀಘ್ರದಲ್ಲೇ ಮೆಟ್ರೋ ಸೇವೆ ಸಾಮಾನ್ಯ ಸ್ಥಿತಿಗೆ ಮರಳುವ ನಿರೀಕ್ಷೆಯಿದೆ. ಪ್ರಯಾಣಿಕರು ಮೆಟ್ರೋ ನಿಲ್ದಾಣಗಳಿಗೆ ತೆರಳುವ ಮುನ್ನ BMRCL ಅಧಿಕೃತ ಸಾಮಾಜಿಕ ಜಾಲತಾಣ ಹಾಗೂ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಸೇವೆಯ ಮಾಹಿತಿ ಪರಿಶೀಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಅಂಕಣ ಬರಹ | ಎಸ್‌ಐಆರ್: `ರಾಜ್ಯ’ಕೀಯ ಚೆಸ್ ಆಡಿದ ಡಿಕೆ!

The post ನಮ್ಮ ಮೆಟ್ರೋ ಗ್ರೀನ್ ಲೈನ್‌ನಲ್ಲಿ ತಾಂತ್ರಿಕ ಸಮಸ್ಯೆ: ಸಂಚಾರ ವಿಳಂಬ! appeared first on Samyukta Karnataka.

ನಮ್ಮ ಮೆಟ್ರೋ ಹಳಿಗೆ ಹಾರಿದ ಯುವತಿ : ಜೀವ ಉಳಿಸಿದ ಸಿಬ್ಬಂದಿ
ಹಸಿರು ಮಾರ್ಗದ ಮೆಟ್ರೋ ಹಳಿಗೆ ಹಾರಿದ ಯುವತಿ : ಬಿಎಂಆರ್‌ಸಿಎಲ್ ಸಿಬ್ಬಂದಿಯ ತ್ವರಿತ ಕಾರ್ಯಾಚರಣೆಯಿಂದ ತಪ್ಪಿದ ದುರಂತ – 10 ನಿಮಿಷ ವಿಳಂಬಗೊಂಡ ರೈಲು ಸಂಚಾರ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಸಿರು ಮಾರ್ಗದ (Green Line) ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಶುಕ್ರವಾರ (ಜುಲೈ 4) ಮಧ್ಯಾಹ್ನ ನಡೆದ ಘಟನೆ ಕೆಲಕಾಲ ಆತಂಕಕ್ಕೆ ಕಾರಣವಾಯಿತು. ಯುವತಿಯೊಬ್ಬಳು ಇದ್ದಕ್ಕಿದ್ದಂತೆ ಮೆಟ್ರೋ ಹಳಿಗೆ ಹಾರಿದ ಪರಿಣಾಮ ರೈಲು ಸಂಚಾರದಲ್ಲಿ ಸುಮಾರು 10 ನಿಮಿಷಗಳ ಕಾಲ ವ್ಯತ್ಯಯ ಉಂಟಾಯಿತು. ಆದರೆ ಬಿಎಂಆರ್‌ಸಿಎಲ್ ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ಭಾರಿ ಅನಾಹುತವೊಂದು ತಪ್ಪಿದೆ.

ಮಧ್ಯಾಹ್ನ ಸುಮಾರು 12:25 ಗಂಟೆ ವೇಳೆಗೆ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಹಳಿಗೆ ಯುವತಿ ಹಾರುತ್ತಿದ್ದಂತೆ ನಿಲ್ದಾಣ ನಿಯಂತ್ರಕರು ಹಾಗೂ ಭದ್ರತಾ ಸಿಬ್ಬಂದಿ ಕೂಡಲೇ ಎಚ್ಚೆತ್ತು ತುರ್ತು ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಿದರು.

ಇದನ್ನೂ ಓದಿ: KR ಸರ್ಕಲ್‌ನಲ್ಲಿ ಎರಡು BMTC ಬಸ್‌ಗಳ ನಡುವೆ ಸರಣಿ ಅಪಘಾತ

ಸಮಯಪ್ರಜ್ಞೆಯಿಂದ ತಪ್ಪಿದ ದುರಂತ : ಮೆಟ್ರೋ ಸಿಬ್ಬಂದಿ ಕ್ಷಣಾರ್ಧದಲ್ಲೇ ಕಾರ್ಯಪ್ರವೃತ್ತರಾಗಿ ಹಳಿಯಲ್ಲಿದ್ದ ಯುವತಿಯನ್ನು ಯಾವುದೇ ಗಾಯಗಳಾಗದಂತೆ ಸುರಕ್ಷಿತವಾಗಿ ಮೇಲಕ್ಕೆ ಎತ್ತಿ ರಕ್ಷಿಸಿದರು. ಸಿಬ್ಬಂದಿಯ ತ್ವರಿತ ಸ್ಪಂದನೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ.

10 ನಿಮಿಷ ವಿಳಂಬವಾದ ಮೆಟ್ರೋ ಸೇವೆ : ಘಟನೆಯ ಹಿನ್ನೆಲೆಯಲ್ಲಿ ಹಸಿರು ಮಾರ್ಗದ ಮೆಟ್ರೋ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಬಳಿಕ ಹಳಿ ಪ್ರದೇಶವನ್ನು ಸಂಪೂರ್ಣವಾಗಿ ಸುರಕ್ಷಿತವೆಂದು ಖಚಿತಪಡಿಸಿಕೊಂಡ ನಂತರ ಮಧ್ಯಾಹ್ನ 12:34 ಗಂಟೆಗೆ ರೈಲು ಸಂಚಾರವನ್ನು ಪುನರಾರಂಭಿಸಲಾಯಿತು. ಈ ಕಾರಣದಿಂದ ಪ್ರಯಾಣಿಕರು ಸುಮಾರು 10 ನಿಮಿಷಗಳ ಕಾಲ ವಿಳಂಬವನ್ನು ಅನುಭವಿಸಿದರು.

ಇದನ್ನೂ ಓದಿ: KR ಸರ್ಕಲ್‌ನಲ್ಲಿ ಅಪಘಾತ: ಆಸ್ಪತ್ರೆಗೆ ಭೇಟಿ ನೀಡಿದ ಸಾರಿಗೆ ಸಚಿವ

ಕಾರಣದ ಕುರಿತು ತನಿಖೆ : ಘಟನೆಯ ಬಳಿಕ ಯುವತಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಆಕೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಯುವತಿ ಹಳಿಗೆ ಹಾರಲು ಕಾರಣವೇನು ಎಂಬುದರ ಕುರಿತು ಬಿಎಂಆರ್‌ಸಿಎಲ್ ಅಧಿಕಾರಿಗಳು ಹಾಗೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಹಿಂದೆಯೂ ನಡೆದಿದ್ದ ಇಂತಹ ಘಟನೆಗಳು : ಬೆಂಗಳೂರಿನ ಮೆಟ್ರೋ ನಿಲ್ದಾಣಗಳಲ್ಲಿ ಈ ರೀತಿಯ ಘಟನೆಗಳು ಇದೇ ಮೊದಲಲ್ಲ. ಈ ಹಿಂದೆ ನಾಡಪ್ರಭು ಕೆಂಪೇಗೌಡ (ಮೆಜೆಸ್ಟಿಕ್) ಮೆಟ್ರೋ ನಿಲ್ದಾಣದ ಹಸಿರು ಮಾರ್ಗದಲ್ಲಿ ಡಿ ಗ್ರೂಪ್ ನೌಕರರೊಬ್ಬರು ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಆಗಲೂ ಮೆಟ್ರೋ ಸಿಬ್ಬಂದಿ ಸಮಯೋಚಿತವಾಗಿ ರಕ್ಷಣೆ ನೀಡಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು.

ಇದನ್ನೂ ಓದಿ: ಮೀಸಲಾತಿಗೆ ಜಾತಿಗಿಂತ ಆರ್ಥಿಕ ಸ್ಥಿತಿ ಮುಖ್ಯ: ಶ್ರೀಶೈಲ ಜಗದ್ಗುರುಗಳು

ಸುರಕ್ಷತಾ ಕ್ರಮಗಳನ್ನು ಮತ್ತಷ್ಟು ಬಲಪಡಿಸಿದ್ದರೂ, ಇಂತಹ ಘಟನೆಗಳು ಮರುಕಳಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಪ್ರಯಾಣಿಕರ ಸುರಕ್ಷತೆಯನ್ನು ಮತ್ತಷ್ಟು ಹೆಚ್ಚಿಸಲು ಹೆಚ್ಚುವರಿ ಜಾಗೃತಿ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಅಗತ್ಯವಿದೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

HDMCಯಲ್ಲಿ ಕಮಲ ಮುಡಿಗೆ ಮೇಯರ್-ಉಪಮೇಯರ್ ಪಟ್ಟ!

The post ನಮ್ಮ ಮೆಟ್ರೋ ಹಳಿಗೆ ಹಾರಿದ ಯುವತಿ : ಜೀವ ಉಳಿಸಿದ ಸಿಬ್ಬಂದಿ appeared first on Samyukta Karnataka.

KR ಸರ್ಕಲ್‌ನಲ್ಲಿ ಅಪಘಾತ: ಆಸ್ಪತ್ರೆಗೆ ಭೇಟಿ ನೀಡಿದ ಸಾರಿಗೆ ಸಚಿವ
ಬೆಂಗಳೂರು: ನಗರದ ಕೆಆರ್ ಸರ್ಕಲ್‌ನಲ್ಲಿ ಎರಡು ಬಿಎಂಟಿಸಿ ಇವಿ ಬಸ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡಿರುವ ಪ್ರಯಾಣಿಕರ ಆರೋಗ್ಯವನ್ನು ಸಾರಿಗೆ ಸಚಿವ ಬೈರತಿ ಸುರೇಶ್ ಶನಿವಾರ ಸೆಂಟ್ ಮಾರ್ಥಾಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಗಾಯಾಳುಗಳೊಂದಿಗೆ ಮಾತನಾಡಿದ ಅವರು, ವೈದ್ಯರಿಂದ ಆರೋಗ್ಯ ಸ್ಥಿತಿಯ ಕುರಿತು ಮಾಹಿತಿ ಪಡೆದುಕೊಂಡು ಸೂಕ್ತ ಚಿಕಿತ್ಸೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಆಸ್ಪತ್ರೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬೈರತಿ ಸುರೇಶ್, “ಕೆಆರ್ ಸರ್ಕಲ್‌ನಲ್ಲಿ ಇಂದು ಬೆಳಿಗ್ಗೆ ಎರಡು ಇವಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಒಟ್ಟು 16 ಮಂದಿ ಗಾಯಗೊಂಡಿದ್ದು, ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ದೇವರ ದಯೆಯಿಂದ ಕೆಲವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಕೆಲವರನ್ನು ಈಗಾಗಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: KR ಸರ್ಕಲ್‌ನಲ್ಲಿ ಎರಡು BMTC ಬಸ್‌ಗಳ ನಡುವೆ ಸರಣಿ ಅಪಘಾತ

ಗಂಭೀರವಾಗಿ ಗಾಯಗೊಂಡಿರುವ ಮೂವರು ಪ್ರಯಾಣಿಕರಿಗೆ ಎಂಆರ್‌ಐ ಹಾಗೂ ಸಿಟಿ ಸ್ಕ್ಯಾನ್ ಪರೀಕ್ಷೆ ನಡೆಸಲಾಗಿದೆ ಎಂದು ಅವರು ತಿಳಿಸಿದರು. ವೈದ್ಯರು ಅವರ ಆರೋಗ್ಯದ ಮೇಲೆ ನಿರಂತರ ನಿಗಾ ಇರಿಸಿದ್ದು, ಅಗತ್ಯ ಚಿಕಿತ್ಸೆ ಮುಂದುವರಿದಿದೆ ಎಂದರು.

ಅಪಘಾತದ ಕುರಿತು ಮಾಹಿತಿ ನೀಡಿದ ಸಚಿವರು, “ಒಂದು ಬಿಎಂಟಿಸಿ ಬಸ್ ಸಿಗ್ನಲ್‌ನಲ್ಲಿ ನಿಂತಿದ್ದ ವೇಳೆ ಹಿಂದಿನಿಂದ ಬಂದ ಮತ್ತೊಂದು ಬಿಎಂಟಿಸಿ ಇವಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಘಟನೆ ನಡೆದ ಕೂಡಲೇ ಬಿಎಂಟಿಸಿ ಸಿಬ್ಬಂದಿ ಹಾಗೂ ತುರ್ತು ಸೇವಾ ಸಿಬ್ಬಂದಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುವ ಕಾರ್ಯವನ್ನು ತ್ವರಿತವಾಗಿ ನಡೆಸಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಹಾವೇರಿ ಮೂಲದ ಯೋಧ ಯಶೋಧರ ಕರ್ತವ್ಯದ ವೇಳೆ ಹುತಾತ್ಮ

ಅಪಘಾತದಲ್ಲಿ ಗಾಯಗೊಂಡ ಎಲ್ಲ ಪ್ರಯಾಣಿಕರ ಚಿಕಿತ್ಸಾ ವೆಚ್ಚವನ್ನು ಕರ್ನಾಟಕ ಸರ್ಕಾರವೇ ಭರಿಸಲಿದೆ ಎಂದು ಸಚಿವ ಬೈರತಿ ಸುರೇಶ್ ಭರವಸೆ ನೀಡಿದರು. ಯಾವುದೇ ಗಾಯಾಳುವಿಗೆ ಚಿಕಿತ್ಸೆಯಲ್ಲಿ ತೊಂದರೆಯಾಗದಂತೆ ಅಗತ್ಯ ವೈದ್ಯಕೀಯ ಸೌಲಭ್ಯ ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಇದೇ ವೇಳೆ ಅಪಘಾತಕ್ಕೆ ನಿಖರ ಕಾರಣವೇನು ಎಂಬುದನ್ನು ಬಿಎಂಟಿಸಿ ಅಧಿಕಾರಿಗಳು ಹಾಗೂ ಸಂಚಾರ ಪೊಲೀಸರು ಪರಿಶೀಲಿಸುತ್ತಿದ್ದು, ಚಾಲನಾ ನಿರ್ಲಕ್ಷ್ಯ ಅಥವಾ ತಾಂತ್ರಿಕ ದೋಷ ಕಾರಣವಾಗಿದೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ. ಅಪಘಾತದಿಂದ ಕೆಲಕಾಲ ಕೆಆರ್ ಸರ್ಕಲ್ ಪ್ರದೇಶದಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ನಂತರ ಪೊಲೀಸರು ಹಾಗೂ ಬಿಎಂಟಿಸಿ ಸಿಬ್ಬಂದಿ ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಸಹಜ ಸ್ಥಿತಿಗೆ ತಂದರು.

ಅಕ್ರಮ ಸಾಗಾಟಕ್ಕೆ ಬ್ರೇಕ್: ₹97 ಸಾವಿರ ಮೌಲ್ಯದ ಪಡಿತರ ಅಕ್ಕಿ ಜಪ್ತಿ

The post KR ಸರ್ಕಲ್‌ನಲ್ಲಿ ಅಪಘಾತ: ಆಸ್ಪತ್ರೆಗೆ ಭೇಟಿ ನೀಡಿದ ಸಾರಿಗೆ ಸಚಿವ appeared first on Samyukta Karnataka.

KR ಸರ್ಕಲ್‌ನಲ್ಲಿ ಎರಡು BMTC ಬಸ್‌ಗಳ ನಡುವೆ ಸರಣಿ ಅಪಘಾತ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೆಆರ್ ಸರ್ಕಲ್‌ನಲ್ಲಿ ಶನಿವಾರ ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು, ಸಿಗ್ನಲ್‌ನಲ್ಲಿ ನಿಂತಿದ್ದ ಬಿಎಂಟಿಸಿ ಬಸ್‌ಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಎರಡು ಬಿಎಂಟಿಸಿ ಬಸ್‌ಗಳ ನಡುವೆ ಸರಣಿ ಡಿಕ್ಕಿ ಉಂಟಾಗಿ, ಚಾಲಕ ಸೇರಿದಂತೆ 13 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಅಪಘಾತದ ತೀವ್ರತೆಗೆ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದುಬಂದಿದೆ. ಅಪಘಾತದ ಬಳಿಕ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕೆಲಕಾಲ ಪ್ರಯಾಣಿಕರಲ್ಲಿ ಗೊಂದಲ ಉಂಟಾಯಿತು.

ಇದನ್ನೂ ಓದಿ: ಹೆದ್ದಾರಿ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಅಪಘಾತದ ವೇಳೆ ಹಿಂಬದಿಯ ಬಸ್‌ನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಮಹಿಳೆಯೊಬ್ಬರ ಕಾಲು ಬಸ್‌ನ ಅವಶೇಷಗಳ ನಡುವೆ ಸಿಲುಕಿಕೊಂಡಿತ್ತು. ಮಹಿಳೆ ತೀವ್ರ ನೋವಿನಿಂದ ಕಿರುಚುತ್ತಾ ಸಹಾಯಕ್ಕಾಗಿ ಕಾಯುತ್ತಿದ್ದು, ಅವರ ಕಾಲಿಗೆ ಗಂಭೀರ ಗಾಯವಾಗಿ ಹೆಚ್ಚಿನ ರಕ್ತಸ್ರಾವವಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಆಗಮಿಸಿ, ಸ್ಥಳೀಯರ ಸಹಕಾರದೊಂದಿಗೆ ಹಾರೆ, ಕಬ್ಬಿಣದ ರಾಡ್ ಹಾಗೂ ಇತರ ಉಪಕರಣಗಳ ನೆರವಿನಿಂದ ಸುಮಾರು ಅರ್ಧಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿದರು. ನಂತರ ಮಹಿಳೆಯ ಕಾಲನ್ನು ಸುರಕ್ಷಿತವಾಗಿ ಹೊರತೆಗೆದು ತಕ್ಷಣವೇ ಅಂಬುಲೆನ್ಸ್ ಮೂಲಕ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಕೆಲವು ವರದಿಗಳ ಪ್ರಕಾರ, ಮಹಿಳೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಸ್‌ನೊಳಗೆ ಸಿಲುಕಿಕೊಂಡಿದ್ದರು.

ಇದನ್ನೂ ಓದಿ: ಹುಬ್ಬಳ್ಳಿಗೆ ಮೇಯರ್, ಧಾರವಾಡಕ್ಕೆ ಉಪ ಮೇಯರ್ ಸ್ಥಾನ ಫಿಕ್ಸ್!

ಅಪಘಾತದ ರಭಸಕ್ಕೆ ಎರಡೂ ಬಿಎಂಟಿಸಿ ಬಸ್‌ಗಳ ಮುಂಭಾಗ ಹಾಗೂ ಹಿಂಭಾಗದ ಭಾಗಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನಗಳನ್ನು ತೆರವುಗೊಳಿಸಲು ಕ್ರೇನ್ ಬಳಸಲಾಗಿದೆ. ಈ ಕಾರ್ಯಾಚರಣೆಯಿಂದ ಕೆಆರ್ ಸರ್ಕಲ್‌ನಲ್ಲಿ ಹಲವು ಗಂಟೆಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪ್ರಮುಖ ರಸ್ತೆಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು.

ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಾಹನಗಳ ಸಂಚಾರವನ್ನು ನಿಯಂತ್ರಿಸುವ ಜೊತೆಗೆ ಅಪಘಾತದ ನಿಖರ ಕಾರಣವನ್ನು ಪರಿಶೀಲಿಸುತ್ತಿದ್ದಾರೆ. ಟೆಂಪೋ ಅತಿವೇಗ ಅಥವಾ ನಿರ್ಲಕ್ಷ್ಯದ ಚಾಲನೆಯಿಂದ ಈ ಅಪಘಾತ ಸಂಭವಿಸಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ.

ಹಾವೇರಿ ಮೂಲದ ಯೋಧ ಯಶೋಧರ ಕರ್ತವ್ಯದ ವೇಳೆ ಹುತಾತ್ಮ

The post KR ಸರ್ಕಲ್‌ನಲ್ಲಿ ಎರಡು BMTC ಬಸ್‌ಗಳ ನಡುವೆ ಸರಣಿ ಅಪಘಾತ appeared first on Samyukta Karnataka.

BLOಗಳಿಂದ ನಿಯಮ ಉಲ್ಲಂಘನೆ: ಕಳ್ಳ ಮತದಾರರನ್ನು ಅರ್ಹರನ್ನಾಗಿಸಲು ಕಾಂಗ್ರೆಸ್ ಯತ್ನ; ಕುಮಾರಸ್ವಾಮಿ ಚಾಟಿ
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪವನ್ನ ಮಾಡಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ನಡೆಯುತ್ತಿದೆ ಎಂದು ದೂರಿದ್ದಾರೆ. ಆಡಳಿತಾರೂಢ ಸರ್ಕಾರವು ಚುನಾವಣಾ ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ಅಕ್ರಮಗಳಿಗೆ ಪ್ರೇರಣೆ ನೀಡುತ್ತಿದೆ ಎಂದು ನೇರವಾಗಿ ಚಾಟಿ ಬೀಸಿದ್ದಾರೆ.

ಬಾಂಗ್ಲಾದೇಶದಿಂದ ಅಕ್ರಮವಾಗಿ ಬಂದವರನ್ನು ಇಲ್ಲಿ ಪೋಷಿಸಲಾಗುತ್ತಿದ್ದು, ಅವರನ್ನು ವ್ಯವಸ್ಥಿತವಾಗಿ ಮತದಾರರ ಪಟ್ಟಿಗೆ ಸೇರಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಹೇಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯವಾಗಿ ರಾಮನಗರ ಮತ್ತು ಚನ್ನಪಟ್ಟಣ ಭಾಗದಲ್ಲಿ ಸುಮಾರು 8 ರಿಂದ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾದೇಶ ಮೂಲದ ನಿವಾಸಿಗಳಿದ್ದು, ಆ ಎಲ್ಲರಿಗೂ ನಕಲಿ ಗುರುತಿನ ಚೀಟಿಗಳನ್ನು (ಫೇಕ್ ಐಡಿ) ಸೃಷ್ಟಿಸಿಕೊಡಲಾಗುತ್ತಿದೆ. ಈ ಕಳ್ಳ ಮತದಾರರನ್ನು ಅಧಿಕೃತ ಮತದಾರರನ್ನಾಗಿ ಪರಿವರ್ತಿಸುವ ದೊಡ್ಡ ಜಾಲವೇ ಕೆಲಸ ಮಾಡುತ್ತಿದೆ ಎಂದು ಹೆಚ್‌ಡಿಕೆ ಆತಂಕ ವ್ಯಕ್ತಪಡಿಸಿದ್ದಾರೆ.

ಹಾಗೇ ನಿಯಮಗಳ ಪ್ರಕಾರ ಬೂತ್ ಮಟ್ಟದ ಅಧಿಕಾರಿಗಳು (BLOಗಳು) ಮನೆ ಮನೆಗೆ ಭೇಟಿ ನೀಡಿ ಮತದಾರರ ಪರಿಶೀಲನೆ ನಡೆಸಬೇಕು. ಆದ್ರೆ ಪ್ರಸ್ತುತ ಬಿಎಲ್ಓಗಳು ಮನೆಗಳಿಗೆ ಹೋಗುವ ಬದಲು, ಕಲ್ಯಾಣ ಮಂಟಪ ಹಾಗೂ ಚೌಲ್ಟ್ರಿಗಳಲ್ಲಿ ಜನರನ್ನು ಒಟ್ಟಿಗೆ ಕೂರಿಸಿ ನಿಯಮಬಾಹಿರವಾಗಿ ಎಸ್‌ಐಆರ್ ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ದೂರಿದ್ದಾರೆ. ಈ ಮೂಲಕ ಇಡೀ ಪ್ರಕ್ರಿಯೆಯ ಪಾರದರ್ಶಕತೆಯನ್ನು ಗಾಳಿಗೆ ತೂರಲಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ನಂತರ ರಾಜ್ಯದಲ್ಲಿ ನಡೆಯುತ್ತಿರುವ ಈ ಎಲ್ಲಾ ಗಂಭೀರ ಲೋಪದೋಷಗಳು ಮತ್ತು ಅಕ್ರಮಗಳ ಬಗ್ಗೆ ಕೇಂದ್ರ ಸಚಿವರು ಈಗಾಗಲೇ ಚುನಾವಣಾ ಆಯೋಗಕ್ಕೆ ಅಧಿಕೃತವಾಗಿ ದೂರು ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಇಂತಹ ಅಕ್ರಮ ಮತದಾನ ಪ್ರಕ್ರಿಯೆಗಳು ಚುನಾವಣೆಯ ನಿಷ್ಪಕ್ಷಪಾತ ತನದ ಮೇಲೆ ಪರಿಣಾಮ ಬೀರಲಿದ್ದು, ಚುನಾವಣಾ ಆಯೋಗವು ತಕ್ಷಣವೇ ಮಧ್ಯಪ್ರವೇಶಿಸಬೇಕು. ಈ ನಿಟ್ಟಿನಲ್ಲಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

The post BLOಗಳಿಂದ ನಿಯಮ ಉಲ್ಲಂಘನೆ: ಕಳ್ಳ ಮತದಾರರನ್ನು ಅರ್ಹರನ್ನಾಗಿಸಲು ಕಾಂಗ್ರೆಸ್ ಯತ್ನ; ಕುಮಾರಸ್ವಾಮಿ ಚಾಟಿ appeared first on Samyukta Karnataka.

ಪಾದಚಾರಿಗಳ ಸುರಕ್ಷತೆಗಾಗಿ ಫುಟ್‌ಪಾತ್‌ ತೆರವು: ವ್ಯಾಪಾರಿಗಳಿಗೆ ಕೃಷ್ಣಭೈರೇಗೌಡ ಮನವಿ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಪ್ರಮುಖ ರಸ್ತೆಗಳಲ್ಲಿ ಪಾದಚಾರಿ ಮಾರ್ಗಗಳ (ಫುಟ್‌ಪಾತ್) ಒತ್ತುವರಿ ತೆರವು ಕಾರ್ಯಾಚರಣೆ ಗುರುವಾರವೂ ಮುಂದುವರಿದಿದೆ. ಸುಪ್ರೀಂಕೋರ್ಟ್ ನಿರ್ದೇಶನ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಜೆಸಿಬಿ, ಟ್ರ್ಯಾಕ್ಟರ್‌ಗಳ ಸಹಾಯದಿಂದ ವ್ಯಾಪಕ ಕಾರ್ಯಾಚರಣೆ ನಡೆಸಿದರು.

ಬೆಂಗಳೂರು  ಪ್ರಮುಖ ರಸ್ತೆಗಳಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಸಿದ್ದು, ಸಾರ್ವಜನಿಕರ ಸುರಕ್ಷತೆಗಾಗಿ ಸುಪ್ರೀಂಕೋರ್ಟ್ ಆದೇಶದಂತೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.pic.twitter.com/3Wzm8OZM0Z
— Samyukta Karnataka (@SamyuktaKarnatk) July 2, 2026

ಜಿಬಿಎ ಜುಲೈ 1ರವರೆಗೆ ಪಾದಚಾರಿ ಮಾರ್ಗಗಳಲ್ಲಿನ ಒತ್ತುವರಿಯನ್ನು ಸ್ವಯಂಪ್ರೇರಿತವಾಗಿ ತೆರವುಗೊಳಿಸಲು ಗಡುವು ನೀಡಿತ್ತು. ಗಡುವು ಮುಗಿದ ಬಳಿಕವೂ ತೆರವುಗೊಳಿಸದ ಹಿನ್ನೆಲೆಯಲ್ಲಿ ಅಧಿಕಾರಿಗಳು ವಿವಿಧ ಪ್ರದೇಶಗಳಲ್ಲಿ ಪೆಟ್ಟಿಗೆ ಅಂಗಡಿಗಳು, ತಳ್ಳುವ ಗಾಡಿಗಳು, ತಾತ್ಕಾಲಿಕ ಶೆಡ್‌ಗಳು, ಕ್ಯಾನೋಪಿಗಳು, ಜಾಹೀರಾತು ಫಲಕಗಳು, ಬ್ಯಾನರ್‌ಗಳು, ಫ್ಲೆಕ್ಸ್‌ಗಳು, ಒಎಫ್‌ಸಿ ಕೇಬಲ್‌ಗಳು, ಕಟ್ಟಡ ಸಾಮಗ್ರಿಗಳು ಹಾಗೂ ಇತರೆ ಅಕ್ರಮ ನಿರ್ಮಾಣಗಳನ್ನು ತೆರವುಗೊಳಿಸಿದರು.

ಇದನ್ನೂ ಓದಿ: ಬೆಂಗಳೂರು: ಕಲ್ಲು ಕ್ವಾರಿ ದುರಂತ – ಬಂಡೆ ಕುಸಿದು 7 ಕಾರ್ಮಿಕರ ಸಾವು

ಈ ವೇಳೆ ಹಲವು ಕಡೆ ಬೀದಿ ಬದಿ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಿಬಿಎಂಪಿಯಿಂದ ಗುರುತಿನ ಚೀಟಿ ಪಡೆದು ಹಲವು ವರ್ಷಗಳಿಂದ ವ್ಯಾಪಾರ ನಡೆಸುತ್ತಿದ್ದೇವೆ. ಏಕಾಏಕಿ ತೆರವುಗೊಳಿಸಿದರೆ ನಮ್ಮ ಜೀವನೋಪಾಯಕ್ಕೆ ಸಂಕಷ್ಟ ಉಂಟಾಗುತ್ತದೆ ಎಂದು ವ್ಯಾಪಾರಿಗಳು ಅಳಲು ತೋಡಿಕೊಂಡರು. ಕೆಲವೆಡೆ ಅಧಿಕಾರಿಗಳು ಹಾಗೂ ವ್ಯಾಪಾರಿಗಳ ನಡುವೆ ವಾಗ್ವಾದವೂ ನಡೆಯಿತು. ಪರಿಸ್ಥಿತಿ ಉದ್ವಿಗ್ನವಾಗುತ್ತಿದ್ದಂತೆ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಕಾರ್ಯಾಚರಣೆ ಕುರಿತು ಪ್ರತಿಕ್ರಿಯಿಸಿದ ಸಚಿವ ಕೃಷ್ಣ ಬೈರೇಗೌಡ, ಸುಪ್ರೀಂಕೋರ್ಟ್ ಆದೇಶದಂತೆ ಒತ್ತುವರಿ ತೆರವು ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು. ಪಾದಚಾರಿ ಮಾರ್ಗಗಳ ಮೇಲಿನ ಒತ್ತುವರಿಯಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿದ್ದು, ಅಪಘಾತಗಳೂ ಹೆಚ್ಚುತ್ತಿವೆ. ಆದ್ದರಿಂದ ಹೆಚ್ಚು ಜನ ಸಂಚರಿಸುವ ಪ್ರಮುಖ ರಸ್ತೆಗಳಲ್ಲಿ ಮೊದಲ ಹಂತದಲ್ಲಿ ಒತ್ತುವರಿ ತೆರವುಗೊಳಿಸಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಆರೋಪ: ಉಪನ್ಯಾಸಕನ ವಿರುದ್ಧ FIR

ಬೆಂಗಳೂರು ನಗರದಲ್ಲಿ ಸುಮಾರು 15 ಸಾವಿರ ಕಿಲೋಮೀಟರ್ ಪಾದಚಾರಿ ಮಾರ್ಗಗಳಿದ್ದು, ಮೊದಲ ಹಂತದಲ್ಲಿ ಸುಮಾರು 2 ಸಾವಿರ ಕಿಲೋಮೀಟರ್ (ಶೇ.20) ವ್ಯಾಪ್ತಿಯ ಪ್ರಮುಖ ಮಾರ್ಗಗಳನ್ನು ಒತ್ತುವರಿ ಮುಕ್ತಗೊಳಿಸುವ ಗುರಿ ಹೊಂದಲಾಗಿದೆ ಎಂದು ಸಚಿವರು ತಿಳಿಸಿದರು.

ಅದೇ ವೇಳೆ, ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯಕ್ಕೂ ಸರ್ಕಾರ ಬದ್ಧವಾಗಿದೆ. ಆದ್ಯತೆಯ ರಸ್ತೆಗಳನ್ನು ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ಪಾದಚಾರಿಗಳಿಗೆ ತೊಂದರೆಯಾಗದ ರೀತಿಯಲ್ಲಿ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಪಾದಚಾರಿ ಮಾರ್ಗಗಳು ಸಾರ್ವಜನಿಕರ ಹಕ್ಕಾಗಿದ್ದು, ಅವುಗಳನ್ನು ಒತ್ತುವರಿ ಮುಕ್ತವಾಗಿಡಲು ನಾಗರಿಕರು, ವ್ಯಾಪಾರಿಗಳು ಹಾಗೂ ವಾಣಿಜ್ಯ ಸಂಸ್ಥೆಗಳು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

52 ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆಗೆ ಹೈಕೋರ್ಟ್ ಬ್ರೇಕ್!

The post ಪಾದಚಾರಿಗಳ ಸುರಕ್ಷತೆಗಾಗಿ ಫುಟ್‌ಪಾತ್‌ ತೆರವು: ವ್ಯಾಪಾರಿಗಳಿಗೆ ಕೃಷ್ಣಭೈರೇಗೌಡ ಮನವಿ appeared first on Samyukta Karnataka.

ಬೆಂಗಳೂರು: ಕಲ್ಲು ಕ್ವಾರಿ ದುರಂತ – ಬಂಡೆ ಕುಸಿದು 7 ಕಾರ್ಮಿಕರ ಸಾವು
ಬೆಂಗಳೂರು/ರಾಮನಗರ: ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಾಪಟ್ಟಣ ಗ್ರಾಮದ ಸಮೀಪದ ಕಾವೇರಿ ಕಂಪನಿಗೆ ಸೇರಿದ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಬಿಹಾರ ಮೂಲದ ಏಳು ಕಾರ್ಮಿಕರು ಸಾವಿಗೀಡಾಗಿರುವ ಭೀಕರ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ದುರಂತ ಸಂಭವಿಸಿದ ವೇಳೆ ಕಾರ್ಮಿಕರು ಕ್ವಾರಿಯ ಕೆಳಭಾಗದಲ್ಲಿ ಕೆಲಸ ಮಾಡುತ್ತಿದ್ದು, ಮೇಲ್ಭಾಗದಲ್ಲಿ ಹಿಟಾಚಿ ಯಂತ್ರದ ಮೂಲಕ ಬಂಡೆ ತೆರವು ಕಾರ್ಯ ನಡೆಯುತ್ತಿತ್ತು.

ಸುಮಾರು 100 ಅಡಿ ಎತ್ತರದ ಪ್ರದೇಶದಲ್ಲಿ ಹೊಸ ಕ್ರಷರ್ ಘಟಕಕ್ಕೆ ಜಾಗ ಸಿದ್ಧಪಡಿಸುವ ಕಾರ್ಯ ನಡೆಯುತ್ತಿದ್ದ ವೇಳೆ ಮೇಲಿನಿಂದ ಬಂಡೆ ಕುಸಿದು ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಿದ್ದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆಯ ಬಳಿಕ ಸ್ಥಳಕ್ಕೆ ತಾವರೆಕೆರೆ ಪೊಲೀಸರು, ರಕ್ಷಣಾ ಸಿಬ್ಬಂದಿ ಹಾಗೂ ಹಿರಿಯ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಹೇ ರಾಮ್… ಏಕೆ ಮೂಕನಾದೆ ಪ್ರಭು ಶ್ರೀರಾಮ್!

ಸ್ಥಳೀಯರ ಮಾಹಿತಿ ಪ್ರಕಾರ, ಕ್ವಾರಿಯಲ್ಲಿ ಸುರಕ್ಷತಾ ಕ್ರಮಗಳನ್ನು ಸಮರ್ಪಕವಾಗಿ ಪಾಲಿಸದೆ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಇದೇ ವೇಳೆ ಬಂಡೆ ಒಡೆಯಲು ಜಿಲೆಟಿನ್ ಸ್ಫೋಟಕಗಳನ್ನು ಬಳಸಲಾಗಿದ್ದು, ಸ್ಫೋಟದ ತೀವ್ರತೆಯಿಂದ ಬಂಡೆ ಕುಸಿದಿರಬಹುದು ಎಂಬ ಶಂಕೆಯೂ ವ್ಯಕ್ತವಾಗಿದೆ. ಅಕ್ರಮ ಗಣಿಗಾರಿಕೆ ನಡೆಯುತ್ತಿತ್ತೇ ಎಂಬ ಆಯಾಮದಲ್ಲಿಯೂ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಮೃತ ಕಾರ್ಮಿಕರ ಗುರುತಿನ ಪರಿಶೀಲನೆ ನಡೆಯುತ್ತಿದ್ದು, ಬಂಡೆ ಅವಶೇಷಗಳಡಿ ಇನ್ನೂ ಕೆಲವರು ಸಿಲುಕಿರುವ ಸಾಧ್ಯತೆ ಇರುವುದರಿಂದ ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಘಟನೆಗೆ ಸಂಬಂಧಿಸಿದಂತೆ ಹಿಟಾಚಿ ಚಾಲಕ ಸೇರಿದಂತೆ ಸಂಬಂಧಪಟ್ಟವರ ವಿರುದ್ಧ ನಿರ್ಲಕ್ಷ್ಯದ ಆರೋಪ ಕೇಳಿಬಂದಿದ್ದು, ಪೊಲೀಸ್ ತನಿಖೆಯ ಬಳಿಕ ಸ್ಪಷ್ಟ ಚಿತ್ರಣ ಹೊರಬರುವ ನಿರೀಕ್ಷೆಯಿದೆ.

ವಾಟ್ಸಾಪ್ Username ವೈಶಿಷ್ಟ್ಯಕ್ಕೆ ಬ್ರೇಕ್ – Metaಗೆ ಕೇಂದ್ರ ನೋಟಿಸ್

The post ಬೆಂಗಳೂರು: ಕಲ್ಲು ಕ್ವಾರಿ ದುರಂತ – ಬಂಡೆ ಕುಸಿದು 7 ಕಾರ್ಮಿಕರ ಸಾವು appeared first on Samyukta Karnataka.

ಎಸ್‌ಐಆರ್ ಅಧಿಕಾರಿಗಳ ಮೇಲೆ ರಾಜ್ಯ ಸರ್ಕಾರದ ಒತ್ತಡ
ಬೆಂಗಳೂರು: ಎಸ್‌ಐಆರ್ ಪ್ರಕ್ರಿಯೆಯಲ್ಲಿ ರಾಜ್ಯದ ಅಧಿಕಾರಿಗಳು ಅನರ್ಹರನ್ನು ಮತದಾರರ ಪಟ್ಟಿಗೆ ಸೇರಿಸದಂತೆ ಹಾಗೂ ಅರ್ಹ ಮತದಾರರ ಹೆಸರು ಕೈಬಿಡದಂತೆ ಚುನಾವಣಾ ಆಯೋಗವು ಈಗಾಗಲೇ ಪ್ರತಿಯೊಂದು ಜಿಲ್ಲೆಯಲ್ಲಿ ರಚಿಸಿರುವ ವಿಜಿಲೆನ್ಸ್ ತಂಡಗಳಿಗೆ ಖಡಕ್ ಸೂಚನೆ ನೀಡಬೇಕು. ಅಲ್ಲದೆ, ಈ ಕುರಿತು ಚುನಾವಣಾ ಆಯೋಗವು ಸಾರ್ವಜನಿಕವಾಗಿ ಸ್ಪಷ್ಟ ನಿರ್ದೇಶನವನ್ನು ಪ್ರಕಟಿಸಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ನಿನ್ನೆಯಿಂದ ಎನ್ಯೂಮರೇಷನ್ ಫಾರ್ಮ್ ವಿತರಣೆಯೊಂದಿಗೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ವೇಳೆ ರಾಜ್ಯದ ಕೆಲ ಅಧಿಕಾರಿಗಳು ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ಒತ್ತಡಕ್ಕೆ ಮಣಿದು ಕಾರ್ಯನಿರ್ವಹಿಸುವಂತೆ ಸೂಚನೆ ನೀಡಲಾಗಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ, ಪ್ರತಿಯೊಂದು ಜಿಲ್ಲೆಯ ಜಿಲ್ಲಾ ಚುನಾವಣಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಚುನಾವಣಾ ಕಾರ್ಯ ನೋಡಿಕೊಳ್ಳುವ ಅಧಿಕಾರಿಗಳು, ಪಿಡಿಒಗಳು ಹಾಗೂ ಮತದಾರರ ಪರಿಷ್ಕರಣೆಯಲ್ಲಿ ತೊಡಗಿರುವ ಕಂದಾಯ ಇಲಾಖೆ ಅಧಿಕಾರಿಗಳು ಯಾವುದೇ ರೀತಿಯ ರಾಜಕೀಯ ಒತ್ತಡಕ್ಕೆ ಮಣಿಯದೆ, ಸಂಪೂರ್ಣ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ಅನರ್ಹರನ್ನು ಮತದಾರರ ಪಟ್ಟಿಗೆ ಸೇರಿಸದಂತೆ ಹಾಗೂ ಅರ್ಹ ಮತದಾರರ ಹೆಸರು ಕೈಬಿಡದಂತೆ ಚುನಾವಣಾ ಆಯೋಗವು ಈಗಾಗಲೇ ಪ್ರತಿಯೊಂದು ಜಿಲ್ಲೆಯಲ್ಲಿ ರಚಿಸಿರುವ ವಿಜಿಲೆನ್ಸ್ ತಂಡಗಳಿಗೆ ಖಡಕ್ ಸೂಚನೆ ನೀಡಬೇಕು. ಅಲ್ಲದೆ, ಈ ಕುರಿತು ಚುನಾವಣಾ ಆಯೋಗವು ಸಾರ್ವಜನಿಕವಾಗಿ ಸ್ಪಷ್ಟ ನಿರ್ದೇಶನವನ್ನು ಪ್ರಕಟಿಸಬೇಕೆಂದು ಆಗ್ರಹಿಸಿದ್ದಾರೆ.

ಹಳೆಯ ವೈಷಮ್ಯ: ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿ

The post ಎಸ್‌ಐಆರ್ ಅಧಿಕಾರಿಗಳ ಮೇಲೆ ರಾಜ್ಯ ಸರ್ಕಾರದ ಒತ್ತಡ appeared first on Samyukta Karnataka.

ಸಿದ್ದರಾಮಯ್ಯ ಕಡೆಗಣನೆ ಕಾಂಗ್ರೆಸ್‌ಗೆ ‘ಆತ್ಮಹತ್ಯಾತ್ಮಕ’: ಸ್ವಪಕ್ಷೀಯರಿಗೆ ಕೆ.ಎನ್. ರಾಜಣ್ಣ ಪರೋಕ್ಷ ವಾರ್ನಿಂಗ್!
ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ‘ಟಗರು’ ಎಂದೇ ಖ್ಯಾತರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಸೈಡ್‌ಲೈನ್ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂಬ ದಟ್ಟ ವದಂತಿಗಳ ಬೆನ್ನಲ್ಲೇ, ಮಾಜಿ ಸಚಿವ ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಅವರನ್ನು ಕಡೆಗಣಿಸುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ‘ದೊಡ್ಡ ಬ್ಲಂಡರ್’ (ಮಹಾ ಎಡವಟ್ಟು) ಆಗಲಿದೆ ಎಂದು ಅವರು ಸ್ವಪಕ್ಷದ ನಾಯಕರಿಗೆ ಬಹಿರಂಗವಾಗಿಯೇ ಎಚ್ಚರಿಸಿದ್ದಾರೆ.

ಪ್ರೋಟೋಕಾಲ್ ಲೋಪಕ್ಕೆ ಆಕ್ರೋಶ: ಇತ್ತೀಚಿನ ಕೆಲವು ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಿದ್ದರಾಮಯ್ಯ ಅವರಿಗೆ ಸೂಕ್ತ ಸ್ಥಾನಮಾನ ಹಾಗೂ ಶಿಷ್ಟಾಚಾರದ (Protocol) ಗೌರವ ಸಿಗುತ್ತಿಲ್ಲ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿವೆ. ಈ ಬಗ್ಗೆ ಮಾತನಾಡಿದ ರಾಜಣ್ಣ, “ಪ್ರತಿಯೊಂದು ಸರ್ಕಾರಿ ಕಾರ್ಯಕ್ರಮಕ್ಕೂ ತನ್ನದೇ ಆದ ಘನತೆ ಮತ್ತು ಪ್ರೋಟೋಕಾಲ್ ಇರುತ್ತದೆ. ಅಧಿಕಾರಿಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಒಂದು ವೇಳೆ ಮಾಜಿ ಮುಖ್ಯಮಂತ್ರಿಗಳ ವಿಷಯದಲ್ಲಿ ಉದ್ದೇಶಪೂರ್ವಕವಾಗಿ ಲೋಪವೆಸಗಿದ್ದರೆ, ಅಂತಹ ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಸರ್ಕಾರ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಮಾಸ್ ಲೀಡರ್ ಮರೆತರೆ ಪಕ್ಷಕ್ಕೆ ಗಂಡಾಂತರ: ತಮ್ಮ ರಾಜಕೀಯ ಅಸ್ತಿತ್ವದ ಬಗ್ಗೆ ಮಾತನಾಡುತ್ತಾ, “ನಾನು ಯಾರ ನೆರಳಿನಲ್ಲೂ ಬೆಳೆಯುವವನಲ್ಲ ಅಥವಾ ಯಾರ ಆಶ್ರಯಕ್ಕೂ ಹೋಗುವವನಲ್ಲ. ನನ್ನದೇ ಆದ ಸ್ವತಂತ್ರ ಅಸ್ತಿತ್ವವಿದೆ. ಆದರೆ ಸಿದ್ದರಾಮಯ್ಯ ಅವರ ವ್ಯಕ್ತಿತ್ವವೇ ಬೇರೆ. ಅವರು ಕೇವಲ ಒಬ್ಬ ನಾಯಕನಲ್ಲ, ಅವರು ಜನಸಾಮಾನ್ಯರ ಕಣ್ಮಣಿ. ಸಿದ್ದರಾಮಯ್ಯ ಅಪ್ಪಟ ‘ಮಾಸ್ ಲೀಡರ್’. ಅಂತಹ ದೈತ್ಯ ಶಕ್ತಿಯನ್ನು ಮೂಲೆಗುಂಪು ಮಾಡಲು ಯಾರಿಗೂ ಸಾಧ್ಯವಿಲ್ಲ. ಒಂದು ವೇಳೆ ಅಂತಹ ಪ್ರಯತ್ನ ನಡೆದರೆ ಅದು ಪಕ್ಷಕ್ಕೆ ದೊಡ್ಡ ಹಾನಿ ತರಲಿದೆ” ಎಂದು ರಾಜಣ್ಣ ಪ್ರತಿಪಾದಿಸಿದರು.

2028ರ ಚುನಾವಣಾ ಗುರಿ: ಕಾಂಗ್ರೆಸ್ ಪಕ್ಷದ ಭವಿಷ್ಯದ ಬಗ್ಗೆ ಹೈಕಮಾಂಡ್‌ಗೆ ಸಂದೇಶ ರವಾನಿಸಿದ ರಾಜಣ್ಣ, “ಸಿದ್ದರಾಮಯ್ಯ ಅವರನ್ನು ದೂರವಿಟ್ಟು ಪಕ್ಷ ಸಂಘಟನೆ ಮಾಡುತ್ತೇವೆ ಎಂದು ಯಾರಾದರೂ ಭಾವಿಸಿದ್ದರೆ, ಅದು ಆತ್ಮಹತ್ಯಾತ್ಮಕ ನಿರ್ಧಾರವಾಗುತ್ತದೆ. ಸಿದ್ದರಾಮಯ್ಯ ಅವರನ್ನು ಪೂರ್ಣ ವಿಶ್ವಾಸಕ್ಕೆ ತೆಗೆದುಕೊಂಡು, ಅವರ ಶಕ್ತಿಯನ್ನು ಬಳಸಿಕೊಂಡರೆ ಮಾತ್ರ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯ. ಅವರನ್ನು ಸೈಡ್‌ಲೈನ್ ಮಾಡುವುದು ಎಂದರೆ ಗೆಲ್ಲುವ ಕುದುರೆಯನ್ನು ಮನೆಯಲ್ಲಿ ಕೂರಿಸಿದಂತೆ” ಎಂದು ಮಾರ್ಮಿಕವಾಗಿ ಹೇಳಿದರು.

ರಾಜಣ್ಣ ಅವರ ಈ ಮಾತುಗಳು ಈಗ ರಾಜ್ಯ ಕಾಂಗ್ರೆಸ್ ಘಟಕದಲ್ಲಿ ಹೊಸ ಸಂಚಲನ ಮೂಡಿಸಿದ್ದು, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಬಣಗಳ ನಡುವಿನ ಮುಸುಕಿನ ಗುದ್ದಾಟಕ್ಕೆ ಇದು ಹೊಸ ಆಯಾಮ ನೀಡಿದಂತಿದೆ.

The post ಸಿದ್ದರಾಮಯ್ಯ ಕಡೆಗಣನೆ ಕಾಂಗ್ರೆಸ್‌ಗೆ ‘ಆತ್ಮಹತ್ಯಾತ್ಮಕ’: ಸ್ವಪಕ್ಷೀಯರಿಗೆ ಕೆ.ಎನ್. ರಾಜಣ್ಣ ಪರೋಕ್ಷ ವಾರ್ನಿಂಗ್! appeared first on Samyukta Karnataka.