ಚಿಕ್ಕಬಳ್ಳಾಪುರ Archives - Samyukta Karnataka

ಮಕ್ಕಳಾಗದ ಕಾರಣಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ತಾಲೂಕಿನ ನಂದಿಕ್ರಾಸ್ ಬಳಿ ರಸ್ತೆಯ ಪಕ್ಕದ ರೈತನ ಜಮೀನಿನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವವೊಂದು ಪತ್ತೆಯಾಗಿದ್ದು, ಸ್ಥಳದಲ್ಲಿ ಡೆತ್‌ನೋಟ್ ದೊರೆತಿರುವುದರಿಂದ ಇದೊಂದು ಆತ್ಮಹತ್ಯೆ ಎಂಬ ಶಂಕೆ ವ್ಯಕ್ತವಾಗಿದೆ.

ಧಾರವಾಡ ಮೂಲದ ಸಂಗಪ್ಪ (40) ಮೃತ ವ್ಯಕ್ತಿಯೆಂದು ತಿಳಿದು ಬಂದಿದ್ದು, ತಾಲೂಕಿನ ನಂದಿಕ್ರಾಸ್ ಬಳಿ ಸರ್ವಿಸ್ ರಸ್ತೆಯ ರೈತ ಆಂಜಿನಪ್ಪ ಎಂಬುವರ ಜಮೀನಿನಲ್ಲಿ ಕೊಳೆತ ಸ್ಥಿತಿಯಲ್ಲಿ ಸಂಗಪ್ಪನ ಶವ ಪತ್ತೆಯಾಗಿದೆ..

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಮೃತ ಸಂಗಪ್ಪ ಅವರು ಮದುವೆಯಾಗಿದ್ದರೂ ಸಂತಾನವಾಗಿರಲಿಲ್ಲ. ಈ ವಿಚಾರವಾಗಿ ಮನೆಯಲ್ಲಿ ಪದೇ ಪದೆ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಈ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಅದರಲ್ಲಿ ಆತ್ಮಹತ್ಯೆಗೆ ತಾನೇ ಕಾರಣ ಎಂದು ಸಂಗಪ್ಪ ಬರೆದಿರುವುದಾಗಿ ತಿಳಿದು ಬಂದಿದೆ. ಆದರೆ ಧಾರವಾಡ ಮೂಲದ ವ್ಯಕ್ತಿ ಇಲ್ಲಿ ಯಾಕೆ ಬಂದು ಆತ್ಮಹತ್ಯೆ ಮಾಡಿಕೊಂಡರು ಎಂದು ಅನುಮಾನ ವ್ಯಕ್ತವಾಗಿದೆ.

ತಾಲೂಕಿನ ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಎಸ್‌ಪಿ ಕುಶಾಲ್ ಚೌಕ್ಸೆ, ಎಎಸ್‌ಪಿ ಜನನಾಥ್ ರೈ, ಡಿವೈಎಸ್‌ಪಿ ಪ್ರಕಾಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

The post ಮಕ್ಕಳಾಗದ ಕಾರಣಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ appeared first on Samyukta Karnataka.

ಬಾಗೇಪಲ್ಲಿ ಶಾಸಕ ಸ್ಥಾನ ರದ್ದು ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ
ಆಸ್ತಿ ಘೋಷಣೆ ವಿವಾದ: ಬಾಗೇಪಲ್ಲಿ ಪ್ರಕರಣದಲ್ಲಿ ಹೈಕೋರ್ಟ್ ತೀರ್ಪು ತಡೆದ ಸುಪ್ರೀಂ ಕೋರ್ಟ್

ಬೆಂಗಳೂರು/ಚಿಕ್ಕಬಳ್ಳಾಪುರ: ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ S. N. ಸುಬ್ಬಾರೆಡ್ಡಿ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ Supreme Court of India ತಾತ್ಕಾಲಿಕ ತಡೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು ವಿಚಾರಣೆ ನಡೆಸಿ ಹೈಕೋರ್ಟ್ ಆದೇಶದ ಜಾರಿಗೆ ಸ್ಟೇ ನೀಡಿ, ಸೆಪ್ಟೆಂಬರ್ 7ಕ್ಕೆ ಮುಂದಿನ ವಿಚಾರಣೆಗೆ ದಿನಾಂಕ ನಿಗದಿ ಮಾಡಿದೆ. ಜೊತೆಗೆ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಪ್ರಕರಣದ ಹಿನ್ನೆಲೆ: 2023ರ ವಿಧಾನಸಭಾ ಚುನಾವಣೆಯ ವೇಳೆ ನಾಮಪತ್ರ ಸಲ್ಲಿಸುವಾಗ ಸಂಪೂರ್ಣ ಆಸ್ತಿ ವಿವರಗಳನ್ನು ಘೋಷಣೆ ಮಾಡಿಲ್ಲ ಮತ್ತು ಕ್ರಿಮಿನಲ್ ಪ್ರಕರಣಗಳ ಮಾಹಿತಿಯನ್ನು ಮರೆಮಾಚಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪರಾಜಿತ ಅಭ್ಯರ್ಥಿ Muniraju ಅವರು 2023ರ ಜೂನ್ 24ರಂದು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನಲ್ಲಿ ವಿನಯ ಕುಲಕರ್ಣಿಗೆ ಬಿಗ್ ರಿಲೀಫ್

ವಿಚಾರಣೆ ವೇಳೆ ಆಸ್ತಿ ಘೋಷಣೆಯಲ್ಲಿ ಉಲ್ಲಂಘನೆ ನಡೆದಿದೆ ಎಂದು ಕಂಡು ಹೈಕೋರ್ಟ್ ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಅಮಾನ್ಯಗೊಳಿಸಿತ್ತು.

ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ: ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಬ್ಬಾರೆಡ್ಡಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪೀಠವು ಹೈಕೋರ್ಟ್ ಆದೇಶದ ಜಾರಿಗೆ ತಾತ್ಕಾಲಿಕ ತಡೆ ನೀಡಿ, ಪ್ರಕರಣದ ಸವಿಸ್ತಾರ ವಿಚಾರಣೆಗೆ ಮುಂದಿನ ದಿನಾಂಕ ನಿಗದಿಪಡಿಸಿದೆ.

ಈ ಆದೇಶದ ಪರಿಣಾಮವಾಗಿ ಅಂತಿಮ ತೀರ್ಪು ಬರುವವರೆಗೆ ಎಸ್‌.ಎನ್‌. ಸುಬ್ಬಾರೆಡ್ಡಿ ಬಾಗೇಪಲ್ಲಿ ಶಾಸಕರಾಗಿ ಮುಂದುವರಿಯಲಿದ್ದಾರೆ.

ಇದನ್ನೂ ಓದಿ: ದೆಹಲಿ ಮದ್ಯ ನೀತಿ ಪ್ರಕರಣ: ಕೇಜ್ರಿವಾಲ್, ಸಿಸೋಡಿಯಾ ಸೇರಿ 23 ಮಂದಿಗೆ ಖುಲಾಸೆ

ಕೋರ್ಟ್ ಆದೇಶದ ನಂತರ ಬಾಗೇಪಲ್ಲಿ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಕಾಂಗ್ರೆಸ್ ವಲಯದಲ್ಲಿ ಇದನ್ನು “ತಾತ್ಕಾಲಿಕ ನ್ಯಾಯ” ಎಂದು ಸ್ವಾಗತಿಸಿದರೆ, ಬಿಜೆಪಿ ವಲಯವು ಅಂತಿಮ ವಿಚಾರಣೆಯಲ್ಲಿ ಸತ್ಯ ಹೊರಬರುತ್ತದೆ ಎಂದು ಪ್ರತಿಕ್ರಿಯಿಸಿದೆ.

ಇದನ್ನೂ ಓದಿ: ₹9.34 ಬಾಕಿಗೆ ಬ್ಯಾಂಕ್ ಕರೆ: 66 ಪೈಸೆ ವಾಪಸ್ ಕೇಳಿದ ರೈತ

ಕಾನೂನು ತಜ್ಞರ ಪ್ರಕಾರ, ನಾಮಪತ್ರದ ಘೋಷಣೆಗಳಲ್ಲಿ ಮಾಹಿತಿ ಮರೆಮಾಚಿದ ಪ್ರಕರಣಗಳು ಮುಂದಿನ ದಿನಗಳಲ್ಲಿ ಮತ್ತಷ್ಟು ಕಠಿಣ ಪರಿಶೀಲನೆಗೆ ಒಳಪಡುವ ಸಾಧ್ಯತೆ ಇದೆ.

₹9.34 ಬಾಕಿಗೆ ಬ್ಯಾಂಕ್ ಕರೆ: 66 ಪೈಸೆ ವಾಪಸ್ ಕೇಳಿದ ರೈತ

The post ಬಾಗೇಪಲ್ಲಿ ಶಾಸಕ ಸ್ಥಾನ ರದ್ದು ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ appeared first on Samyukta Karnataka.

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟ ಬೆಂಬಲಿಸಿ: ಸಿಎಂ ಕರೆ
ಚಿಕ್ಕಬಳ್ಳಾಪುರ: ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಚಿಕ್ಕಬಳ್ಳಾಪುರದಲ್ಲಿ ನಡೆದ ನರೇಗಾ ಬಚಾವ್ ಆಂದೋಲನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶಾದ್ಯಂತ ‘ಮನರೇಗಾ ಉಳಿಸಿ’ ಅಭಿಯಾನ ಪ್ರಾರಂಭಿಸಲಾಗಿದೆ. ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಭಾಜಪ ಸರ್ಕಾರ ಮನರೆಗಾವನ್ನು ರದ್ದುಪಡಿಸಿ, ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಜಾರಿ ಮಾಡಿದೆ. ಮನರೇಗಾದ ರದ್ದು ಅಗತ್ಯವಿರಲಿಲ್ಲ. ಕೂಲಿಕಾರರು, ಆದಿವಾಸಿಗಳು, ಸಣ್ಣ ರೈತರಿಗೆ, ಮಹಿಳೆಯರಿಗೆ ಉದ್ಯೋಗದ ಅನುಕೂಲ ಕಲ್ಪಿಸುವ ದಿಸೆಯಲ್ಲಿ 2005ರಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ, ನಾಯಕಿ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಈ ಕಾಯ್ದೆ ಜಾರಿಯಾಯಿತು. ಇದೇ ಕಾಯ್ದೆಯಲ್ಲದೇ, ಶಿಕ್ಷಣ, ಆಹಾರ, ಮಾಹಿತಿ ಹಕ್ಕು ಸೇರಿದಂತೆ ಹಲವು ಜನಪರ ಕಾಯ್ದೆಗಳನ್ನು ಜಾರಿಗೆ ತಂದಿದ್ದರು. ಆದರೆ ಈ ಎಲ್ಲ ಜನಪರ ಕಾಯ್ದೆಗಳನ್ನು ದುರ್ಬಲಗೊಳಿಸುವ ಕೆಲಸವನ್ನು ಮೋದಿಯವರ ನೇತೃತ್ವದ ಸರ್ಕಾರ ಮಾಡುತ್ತಿದೆ ಎಂದರು.

ಇದನ್ನೂ ಓದಿ: ಹಂಪಿ ಕನ್ನಡ ವಿಶ್ವವಿದ್ಯಾಲಯ: 3 ಜನ ಸಾದಕರಿಗೆ ನಾಡೋಜ ಪ್ರಕಟ

ಮನರೇಗಾ ಅಡಿ 12.16 ಕೋಟಿ ಜನರಿಗೆ ಉದ್ಯೋಗ: ಸದನದಲ್ಲಿ ಕೇವಲ 8 ಗಂಟೆಗಳ ಕಾಲ ಚರ್ಚೆ ಮಾಡಿದ ಕೇಂದ್ರ ಸರ್ಕಾರ, ನಂತರ ಹೊಸ ಕಾಯ್ದೆಯನ್ನು ಜಾರಿಗೆ ತಂದರು. ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಜೀವಿಕ ಮಿಷನ್ ಗ್ರಾಮೀಣ ಕಾಯ್ದೆ, 12.16 ಕೋಟಿ ಜನರು ಕೆಲಸ ಪಡೆಯುತ್ತಿದ್ದರು. ಇದರಲ್ಲಿ ಸುಮಾರು 53 % ಉದ್ಯೋಗ ಪಡೆಯುತ್ತಿದ್ದರು. ಅಲ್ಲದೇ ಪರಿಶಿಷ್ಟ ಜಾತಿಯ 17% ಮತ್ತು ಪರಿಶಿಷ್ಟ ವರ್ಗದ 11% ಜನರು ಉದ್ಯೋಗ ಪಡೆಯುತ್ತಿದ್ದರು. ಈ ಎಲ್ಲ ಜನರ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ ಎಂದರು.

ಗ್ರಾಮಸ್ವರಾಜ್ಯ ಪರಿಕಲ್ಪನೆಗೆ ಶಕ್ತಿ ತುಂಬಿದ್ದ ಮನರೇಗಾ: ಮನರೇಗಾ ಕಾಯ್ದೆಗೆ ಗ್ರಾಮೀಣಾಭಿವೃದ್ಧಿಯ ಕನಸು ಕಂಡಿದ್ದ ಮಹಾತ್ಮಾ ಗಾಂಧಿಯವರ ಹೆಸರನ್ನು ಇಡಲಾಗಿತ್ತು. ಅವರ ಗ್ರಾಮ ಸ್ವರಾಜ್ಯದ ಕಲ್ಪನೆಗೆ ಮನರೇಗಾ ಶಕ್ತಿ ತುಂಬಿತ್ತು. 100 ದಿನಗಳ ಉದ್ಯೋಗದ ಖಾತ್ರಿ ನೀಡುತ್ತಿದ್ದ ಮನರೇಗಾ ಕಾಯ್ದೆಯಡಿ, ಕೂಲಿಕಾರರು ತಮ್ಮ ಸ್ಥಳೀಯ ಮಟ್ಟದಲ್ಲಿಯೇ ಕೆಲಸ ಮಾಡಬಹುದಿತ್ತು. ಗ್ರಾಮ ಪಂಚಾಯತಿ ಮತ್ತು ಗ್ರಾಮ ಸಭೆಗಳು ನಿರ್ಧರಿಸುವ ಅಧಿಕಾರವಿತ್ತು. ಆದರೀಗ ಈ ನಿರ್ಧಾರವನ್ನು ಕೇಂದ್ರ ಸರ್ಕಾರವೇ ಕೈಗೊಳ್ಳಲಿದೆ. ಕೇಂದ್ರದ ಅನುದಾನ, ಅನುಮತಿ ಇಲ್ಲದೇ, ಇಲ್ಲಿನ ಗ್ರಾಮ ಪಂಚಾಯತಿಯಲ್ಲಿ ಕೆಲಸವಾಗಲು ಸಾಧ್ಯ. ಆದ್ದರಿಂದ ಮನರೇಗಾವನ್ನು ಮುಂದುವರೆಸಬೇಕೆಂಬುದು ಕಾಂಗ್ರೆಸ್ ಸರ್ಕಾರದ ಒತ್ತಾಯವಾಗಿದೆ. ಮನರೇಗಾದಲ್ಲಿ 100 ದಿನ ಭತ್ಯೆಯನ್ನು ತಪ್ಪದೇ ಕೊಡಲಾಗುತ್ತಿತ್ತು. ಹೊಸ ಕಾಯ್ದೆಯಂತೆ ಕೇಂದ್ರ 60% ಅನುದಾನ ಮತ್ತು ರಾಜ್ಯಗಳು 40% ಅನುದಾನ ಕೊಡಬೇಕಾಗಿದೆ. ರಾಜ್ಯದ ಹಿತವನ್ನು ಕಾಪಾಡುವಲ್ಲಿ ಕೇಂದ್ರ ಸೋತಿದೆ. ಅದ್ದರಿಂದ ವಿಬಿ ಜಿ ರಾಮ್ ಜಿ ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸಲು ದೇಶಾದ್ಯಂತ ಕಾಂಗ್ರೆಸ್ ಹೋರಾಟ ಮಾಡುತ್ತಿದೆ ಎಂದರು.

ಇದನ್ನೂ ಓದಿ: ‘ಗುಲಾಮಗಿರಿಯ ಸಂಕೇತಗಳಿಂದ ಮುಕ್ತಿ’: ರಾಜಾಜಿ ಪ್ರತಿಮೆ ಇಂದು ರಾಷ್ಟ್ರಪತಿ ಭವನದಲ್ಲಿ ಅನಾವರಣ

ಬೇಡಿಕೆ ಈಡೇರುವವರೆಗೂ ಹೋರಾಟ: ವಿಬಿ ಜಿ ರಾಮ್ ಜಿ ಯೋಜನೆಯನ್ನು ಸಂಪೂರ್ಣವಾಗಿ ರದ್ದುಪಡಿಸಿ, ಮನರೇಗಾ ಮರು ಜಾರಿಗೊಳಿಸಬೇಕು. ಜನರ ಉದ್ಯೋಗದ ಹಕ್ಕನ್ನು ಮರುಸ್ಥಾಪಿಸಬೇಕು. ಪಂಚಾಯತ್ ಸ್ವಯಂ ಆಡಳಿತದ ಹಕ್ಕು ಮರುಸ್ಥಾಪನೆ, ದಿನಕ್ಕೆ 400 ರೂ.ಗಳ ಕನಿಷ್ಠ ವೇತನವನ್ನು ದೇಶಾದ್ಯಂತ ನೀಡಬೇಕು. ಈ ಬೇಡಿಕೆಗಳು ಈಡೇರುವವರೆಗೆ ನಮ್ಮ ಆಂದೋಲನ ನಿಲ್ಲುವುದಿಲ್ಲ ಎಂದರು.

ರೈತ ವಿರೋಧಿ ಕಾಯ್ದೆಗಳನ್ನು ಹೋರಾಟದ ಫಲವಾಗಿ ರದ್ದುಗೊಳಿಸಲಾಯಿತು. ಅದೇ ರೀತಿಯಲ್ಲಿ ಈ ಹೋರಾಟ ನಿಲ್ಲುವುದಿಲ್ಲ. ಈ ಹೋರಾಟಕ್ಕೆ ರಾಜ್ಯದ ಜನರೆಲ್ಲರೂ ನಮ್ಮ ಜೊತೆಯಾಗಬೇಕು. ಹಳ್ಳಿಗಾಡಿನ ಜನರಿಗೆ ಅನುಕೂಲ ಕಲ್ಪಿಸುವ ಮನರೇಗಾ ಯೋಜನೆಯ ಮರುಸ್ಥಾಪಿಸುವ ಕಾಂಗ್ರೆಸ್‌ನ ಸಾರ್ಥಕ ಉದ್ದೇಶಕ್ಕೆ ಜನರು ಬೆಂಬಲಿಸಬೇಕು.

The post ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟ ಬೆಂಬಲಿಸಿ: ಸಿಎಂ ಕರೆ appeared first on Samyukta Karnataka.

ರಾಜೀವ್‌ಗೌಡ 14 ದಿನ ನ್ಯಾಯಾಂಗ ಬಂಧನ
ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ಪೌರಾಯುಕ್ತೆಗೆ ಧಮಕಿ ಹಾಕಿದ ಪ್ರಕರಣದ ಆರೋಪಿ ರಾಜೀವ್‌ಗೌಡನನ್ನು ಸೋಮವಾರ ಕೇರಳದಲ್ಲಿ ಬಂಧಿಸಿರುವ ಪೊಲೀಸರು ಮಂಗಳವಾರ ಶಿಡ್ಲಘಟ್ಟದಲ್ಲಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶ ಹೊರಡಿಸಿದೆ.

ಇದೇ ವೇಳೆ ರಾಜೀವ್‌ಗೌಡ ಪರ ವಕೀಲ ವಿವೇಕ್ ರೆಡ್ಡಿ ವಾದ ಮಂಡಿಸಿ ಜಾಮೀನು ಅರ್ಜಿ ಸಲ್ಲಿಸಿದರೆ, ಪೊಲೀಸರ ಪರ ವಾದವನ್ನು ಮಂಡಿಸಿದ ವಕೀಲ ಮೊಹಮ್ಮದ್ ಖ್ವಾಜಾ, ಆರೋಪಿ ಮೊಬೈಲ್ ಸೀಜ್ ಮಾಡಬೇಕಿದೆ. ಪರಾರಿಯಾಗಲು ಬಳಸಿದ್ದ ಕಾರು ವಶಕ್ಕೆ ಪಡೆಯಬೇಕಿದೆ. ಇನ್ನೂ ವಿಚಾರಣೆ ನಡೆಸಬೇಕಿದ್ದು, ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ವಾದಿಸಿದರು.

ಅಂತಿಮವಾಗಿ ರಾಜೀವ್‌ಗೌಡನ ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ, ಆತನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶಿಸಿದೆ. ಅಲ್ಲದೆ ರಾಜೀವ್‌ಗೌಡ ತಲೆಮರೆಸಿಕೊಳ್ಳಲು ಸಹಕಾರ ನೀಡಿದ್ದ ಆರೋಪದಡಿ ಬಂಧಿತನಾಗಿರುವ ಉದ್ಯಮಿ ಮೈಕಲ್ ಜೋಸೆಫ್ ರೇಗೋ ಎಂಬುವರಿಗೆ ಷರತ್ತುಬದ್ಧ ಜಾಮೀನು ನೀಡಿದೆ.

ಸಹಕರಿಸಿದ ಸ್ನೇಹಿತನ ಬಂಧನ: ರಾಜೀವ್ ಗೌಡ ಬಂಧನದ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಸ್‌ಪಿ ಕುಶಲ್ ಚೌಕ್ಸೆ, ಪೌರಾಯುಕ್ತೆಗೆ ಧಮಿಕಿ ಹಾಕಿರುವ ಪ್ರಕರಣದಡಿ ರಾಜೀವ್‌ಗೌಡನನ್ನು ಕೇರಳದ ಮಲ್ಲೇಪುರಂ ಜಿಲ್ಲೆಯ ಹೋಟೆಲ್ ಬಳಿ ವಶಕ್ಕೆ ಪಡೆದು, ಈತನಿಗೆ ತಲೆಮರೆಸಿಕೊಳ್ಳಲು ಸಹಕಾರ ನೀಡಿದ ಆರೋಪದಡಿ ಉದ್ಯಮಿ ಹಾಗೂ ಆತನ ಕಾರನನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ಸಿನಿಮಾವೊಂದರ ಬ್ಯಾನರ್ ತೆರವು ವಿಚಾರದಲ್ಲಿ ಪೌರಾಯುಕ್ತೆ ಅಮೃತಗೌಡರಿಗೆ ಆರೋಪಿ ರಾಜೀವ್ ಗೌಡ ಧಮಕಿ ಹಾಕಿದ್ದು, ಈ ಕುರಿತು ಕಳೆದ ಜ. 14ರಂದು ಪೌರಾಯುಕ್ತೆ ಶಿಡ್ಲಘಟ್ಟ ನಗರಸಭೆಯಲ್ಲಿ ದೂರು ನೀಡಿದ್ದರು. ಅಲ್ಲದೆ ಮುಖಂಡ ಶ್ರೀನಿವಾಸಗೌಡ ಎಂಬುವರು ದೂರು ದಾಖಲಿಸಿದ್ದರು.

ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದ ರಾಜೀವ್‌ಗೌಡನ ಪತ್ತೆಗೆ ಮೂರು ತಂಡಗಳನ್ನು ರಚಿಸಲಾಗಿತ್ತು. ಸತತ ಪ್ರಯತ್ನದ ನಂತರ ದೊರೆತ ಮಾಹಿತಿಯಂತೆ ಆರೋಪಿಯನ್ನು ಕೇರಳದಲ್ಲಿ ಬಂಧಿಸಿದ್ದು, ಈತನಿಗೆ ಸಹಕಾರ ನೀಡಿದ ಆರೋಪದಡಿ ಫರ್ನೀಚರ್ ಉದ್ಯಮಿ ಮೈಕಲ್ ಜೋಸೆಫ್ ರೇಗೋ ವಶಕ್ಕೆ ಪಡೆಯಲಾಗಿದೆ. ಇವರ ಕಾರನ್ನು ಜಪ್ತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

The post ರಾಜೀವ್‌ಗೌಡ 14 ದಿನ ನ್ಯಾಯಾಂಗ ಬಂಧನ appeared first on Samyukta Karnataka.

ಅನಧಿಕೃತ ಬ್ಯಾನರ್ ತೆರವು: ನಗರಸಭೆ ಪೌರಾಯುಕ್ತರಿಗೆ ಬೆದರಿಕೆ ಕರೆ…
ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ನಗರಸಭೆಯಲ್ಲಿ ಅನಧಿಕೃತವಾಗಿ ಹಾಕಿದ್ದ ಬ್ಯಾನರ್ ತೆರವು ಮಾಡಿದ ಕಾರಣಕ್ಕೆ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಘಟನೆ ಆಡಳಿತ ವಲಯದಲ್ಲಿ ಆತಂಕ ಮೂಡಿಸಿದ್ದು, ಸಿಬ್ಬಂದಿಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಬ್ಯಾನರ್ ವಿವಾದದ ಹಿನ್ನೆಲೆ: ಕೆಪಿಸಿಸಿ ರಾಜ್ಯ ಸಂಯೋಜಕ ಹಾಗೂ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡ, ಸಚಿವ ಜಮೀರ್ ಅಹ್ಮದ್ ಅವರ ಪುತ್ರ ಝೈದ್ ಖಾನ್ ಅಭಿನಯದ ‘ಕಲ್ಟ್’ ಸಿನಿಮಾ ಪ್ರಚಾರಕ್ಕೆ ಸಂಬಂಧಿಸಿದ ಬ್ಯಾನರ್‌ಗಳನ್ನು ಶಿಡ್ಲಘಟ್ಟ ನಗರದಲ್ಲಿ ಅಳವಡಿಸಿದ್ದರು. ನಗರದ ರಸ್ತೆ ಮಧ್ಯೆ ಹಾಕಲಾಗಿದ್ದ ಒಂದು ಬ್ಯಾನರ್‌ನಿಂದ ಅಪಘಾತ ಸಂಭವಿಸಿದೆ ಎಂಬ ದೂರು ನಗರಸಭೆಗೆ ಬಂದ ಹಿನ್ನೆಲೆಯಲ್ಲಿ, ನಗರಸಭೆ ಅಧಿಕಾರಿಗಳು ನಿಯಮಾನುಸಾರ ಕ್ರಮ ಕೈಗೊಂಡು ಆ ಬ್ಯಾನರ್ ಅನ್ನು ತೆರವು ಮಾಡಿದ್ದರು.

ಇದನ್ನೂ ಓದಿ:  ಭೀಕರ ರೈಲು ದುರಂತ: ರೈಲಿನ ಮೇಲೆ ಕ್ರೇನ್ ಕುಸಿದು 22 ಪ್ರಯಾಣಿಕರು ಮೃತ್ಯು

ಪೌರಾಯುಕ್ತೆಗೆ ಫೋನ್‌ನಲ್ಲಿ ಬೆದರಿಕೆ: ಈ ಬ್ಯಾನರ್ ತೆರವು ಕಾರ್ಯಾಚರಣೆಯಿಂದ ಕೋಪಗೊಂಡ ರಾಜೀವ್ ಗೌಡ ಅವರು, ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ದೂರವಾಣಿ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೆ, “ನಗರಸಭೆಗೆ ಬೆಂಕಿ ಹಾಕಿಸುತ್ತೇನೆ” “ದಂಗೆ ಮಾಡಿಸುತ್ತೇನೆ” ಎಂಬ ರೀತಿಯಲ್ಲಿ ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

ಸಿಬ್ಬಂದಿಯಲ್ಲಿ ಭಯ – ನಗರಸಭೆ ಮುಂದೆ ಪ್ರತಿಭಟನೆ: ಕಾಂಗ್ರೆಸ್ ಮುಖಂಡನ ಈ ಬೆದರಿಕೆಗಳಿಂದ ನಗರಸಭೆಯ ಸಿಬ್ಬಂದಿ ಭಯಭೀತರಾಗಿದ್ದು, ತಮ್ಮ ಸುರಕ್ಷತೆ ಹಾಗೂ ಆಡಳಿತಾಧಿಕಾರಿಗಳ ಗೌರವ ಕಾಪಾಡುವಂತೆ ಆಗ್ರಹಿಸಿ ಇಂದು ನಗರಸಭೆ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾಕಾರರು, ಜನಪ್ರತಿನಿಧಿಗಳಾಗಲಿ, ರಾಜಕೀಯ ನಾಯಕರಾಗಲಿ ಕಾನೂನಿನ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳಿಗೆ ಬೆದರಿಕೆ ಹಾಕುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:  ಗಾಳಿಪಟದ ದಾರ ಕುತ್ತಿಗೆ ಕೊಯ್ದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಆಡಳಿತದ ಗೌರವಕ್ಕೆ ಧಕ್ಕೆ?: ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ತೆಗೆದುಕೊಂಡ ಕ್ರಮಕ್ಕೆ ರಾಜಕೀಯ ಒತ್ತಡ ಹಾಗೂ ಬೆದರಿಕೆಗಳು ಎದುರಾಗುತ್ತಿರುವುದು ಆಡಳಿತಾತ್ಮಕ ಸ್ವಾತಂತ್ರ್ಯ ಮತ್ತು ಕಾನೂನು ಸುವ್ಯವಸ್ಥೆ ಕುರಿತು ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ. ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದರತ್ತ ಸಾರ್ವಜನಿಕರ ಗಮನ ನೆಟ್ಟಿದೆ.

The post ಅನಧಿಕೃತ ಬ್ಯಾನರ್ ತೆರವು: ನಗರಸಭೆ ಪೌರಾಯುಕ್ತರಿಗೆ ಬೆದರಿಕೆ ಕರೆ… appeared first on Samyukta Karnataka.

ಚಿಕ್ಕಬಳ್ಳಾಪುರ ದುರಂತ: ಮೃತಪಟ್ಟ ಯುವಕರ ಕುಟುಂಬಕ್ಕೆ ವೈಯಕ್ತಿಕ ಪರಿಹಾರ ನೀಡಿದ ಸಂಸದ ಸುಧಾಕರ್‌
ಚಿಕ್ಕಬಳ್ಳಾಪುರ: ನಿನ್ನೆ ರಾತ್ರಿ ಚರ್ಚ್‌ನಲ್ಲಿ ಕ್ರಿಸ್‌ಮಸ್ ಸಂಭ್ರಮದಲ್ಲಿ ಪಾಲ್ಗೊಂಡು ಬೈಕ್‌ನಲ್ಲಿ ತಮ್ಮ ಗ್ರಾಮಕ್ಕೆ ಮರಳುತ್ತಿದ್ದ ವೇಳೆ, ಚಿಕ್ಕಬಳ್ಳಾಪುರ ತಾಲ್ಲೂಕಿನ ಅಜ್ಜವಾರ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಅಜ್ಜವಾರ ಗ್ರಾಮದ ನಾಲ್ವರು ಯುವಕರ ಮನೆಗಳಿಗೆ ಸಂಸದ ಡಾ. ಕೆ. ಸುಧಾಕರ್ ಅವರು ಭೇಟಿ ನೀಡಿ, ಮೃತರ ಪೋಷಕರು ಹಾಗೂ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ವೈಯಕ್ತಿಕ ಪರಿಹಾರ: ಈ ಸಂದರ್ಭದಲ್ಲಿ ಸಂಸದರು ಮೃತ ಯುವಕರ ಕುಟುಂಬಗಳಿಗೆ ತಲಾ ₹50,000 ಆರ್ಥಿಕ ಸಹಾಯಧನ ನೀಡಿದರು. ಅಕಾಲಿಕವಾಗಿ ಪ್ರಾಣ ಕಳೆದುಕೊಂಡ ಯುವಕರನ್ನು ನೆನೆದು ಮಾತನಾಡಿದ ಅವರು, “ಬಾಳಿ ಬದುಕಬೇಕಾದ ಯುವಕರು ಈ ರೀತಿ ದಾರುಣವಾಗಿ ಸಾವನ್ನಪ್ಪಿರುವುದು ಅತ್ಯಂತ ನೋವಿನ ಸಂಗತಿ. ಈ ದುರ್ಘಟನೆ ಇಡೀ ಅಜ್ಜವಾರ ಗ್ರಾಮವನ್ನೇ ಶೋಕ ಸಾಗರದಲ್ಲಿ ಮುಳುಗಿಸಿದೆ. ತಮ್ಮ ಮಕ್ಕಳನ್ನು ಕಳೆದುಕೊಂಡ ಹೆತ್ತವರ ದುಃಖ ಹೇಳತೀರದು. ಅವರ ನೋವಿನಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಭಾವನಾತ್ಮಕವಾಗಿ ಹೇಳಿದರು.

ಇದನ್ನೂ ಓದಿ: ಚಿಕ್ಕಬಳ್ಳಾಪುರ ಟಿಪ್ಪರ್–ಬೈಕ್ ಅಪಘಾತದಲ್ಲಿ ನಾಲ್ವರು ಸಾವು: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಈ ಕುರಿತು ಸಾಮಾಜಿಕ ಜಾಲತಾಣದಲ್ಲೂ ಪ್ರತಿಕ್ರಿಯೆ ನೀಡಿದ ಡಾ. ಕೆ. ಸುಧಾಕರ್, ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳಲ್ಲಿ ಯುವಕರು ಹೆಚ್ಚಾಗಿ ಪ್ರಾಣ ಕಳೆದುಕೊಳ್ಳುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದ್ದಾರೆ. ಹೆಲ್ಮೆಟ್ ಇಲ್ಲದೆ ಬೈಕ್ ಚಾಲನೆ, ಟ್ರಿಪಲ್ ರೈಡಿಂಗ್, ಅತಿಯಾದ ವೇಗ, ಹಾಗೂ ಸಂಚಾರ ನಿಯಮ ಉಲ್ಲಂಘನೆ ಇಂತಹ ದುಸ್ಸಾಹಸಗಳು ಕ್ಷಣಮಾತ್ರದಲ್ಲಿ ಜೀವಕ್ಕೆ ಕುತ್ತು ತರುತ್ತವೆ ಎಂದು ಎಚ್ಚರಿಸಿದರು.

ಯುವಕರು ವಾಹನ ಚಲಾಯಿಸುವಾಗ ಅತ್ಯಂತ ಜಾಗರೂಕತೆ ವಹಿಸಬೇಕು. ಜೊತೆಗೆ ಪೋಷಕರು ತಮ್ಮ ಮಕ್ಕಳಿಗೆ ಸಂಚಾರ ನಿಯಮಗಳ ಮಹತ್ವದ ಕುರಿತು ಸೂಕ್ತ ಮಾರ್ಗದರ್ಶನ ಹಾಗೂ ಮುನ್ನೆಚ್ಚರಿಕೆ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Train Fare: ಇಂದಿನಿಂದ ರೈಲು ಪ್ರಯಾಣ ದರ ಏರಿಕೆ

ಈ ದುರ್ಘಟನೆ ಬಳಿಕ ಅಜ್ಜವಾರ ಗ್ರಾಮದಲ್ಲಿ ಶೋಕದ ವಾತಾವರಣ ಮನೆಮಾಡಿದ್ದು, ಮೃತ ಯುವಕರ ಕುಟುಂಬಗಳ ಆಕ್ರಂದನ ಕಣ್ಣೀರಾಗಿಸಿದೆ.

KDಯ ಜೋಡೆತ್ತು ಹಾಡಿಗೆ ಜೋಗಿ ಪ್ರೇಮ್ ಗಾನ ಬಜಾನ

The post ಚಿಕ್ಕಬಳ್ಳಾಪುರ ದುರಂತ: ಮೃತಪಟ್ಟ ಯುವಕರ ಕುಟುಂಬಕ್ಕೆ ವೈಯಕ್ತಿಕ ಪರಿಹಾರ ನೀಡಿದ ಸಂಸದ ಸುಧಾಕರ್‌ appeared first on Samyukta Karnataka.

ಚಿಕ್ಕಬಳ್ಳಾಪುರ ಟಿಪ್ಪರ್–ಬೈಕ್ ಅಪಘಾತದಲ್ಲಿ ನಾಲ್ವರು ಸಾವು: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಜ್ಯದ ಜನರನ್ನು ತೀವ್ರವಾಗಿ ದುಃಖಕ್ಕೆ ತಳ್ಳಿದೆ. ಈ ದುರ್ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.

ಗುರುವಾರ ತಡರಾತ್ರಿ ಅಜ್ಜವಾರ ಗೇಟ್ ಬಳಿ ಟಿಪ್ಪರ್ ಲಾರಿ ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರ ಮೇಲೆ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ಬಸ್‌ ಅಪಘಾತ ಪ್ರಕರಣ : ಬದುಕುಳಿಯದ ಬಸ್ ಚಾಲಕ

ಮೃತರನ್ನು ಅಜ್ಜವಾರ ಗ್ರಾಮದ ನಿವಾಸಿಗಳಾದ ಮನೋಜ್, ನರಸಿಂಹಮೂರ್ತಿ, ನಂದೀಶ್ ಮತ್ತು ಅರುಣ್ ಎಂದು ಗುರುತಿಸಲಾಗಿದೆ. ನಾಲ್ವರೂ ಸ್ನೇಹಿತರಾಗಿದ್ದು, ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಈ ಭೀಕರ ಅಪಘಾತದ ವಿಷಯವನ್ನು ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದರು. ಮೃತರ ಕುಟುಂಬಗಳಿಗೆ ತಕ್ಷಣ ನೆರವು ನೀಡುವಂತೆ ಅವರು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಸಿಎಂ ಪರಿಹಾರ ಘೋಷಣೆ ಮಾಡಿದ್ದಾರೆ. ಪರಿಹಾರ ವಿತರಣೆಗೆ ಯಾವುದೇ ವಿಳಂಬವಾಗದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ.

ಆರು ತಿಂಗಳ ಹಿಂದೆ ಪ್ರೀತಿಸಿ ಮದುವೆ: ಮೃತರ ಪೈಕಿ ನರಸಿಂಹಮೂರ್ತಿ ಅವರ ವಿವಾಹ ಕೆಲ ತಿಂಗಳ ಹಿಂದಷ್ಟೇ ನಡೆದಿದ್ದು, ಪ್ರೀತಿಸಿ ಮದುವೆಯಾಗಿದ್ದ ಯುವತಿ ಮದುವೆಯಾದ ಆರು ತಿಂಗಳೊಳಗೇ ವಿಧಿಯಾಟಕ್ಕೆ ಗಂಡನನ್ನು ಕಳೆದುಕೊಂಡಿರುವುದು ಕುಟುಂಬದ ಆಕ್ರಂದನವನ್ನು ಇನ್ನಷ್ಟು ಹೆಚ್ಚಿಸಿದೆ. ಮನೆಗೆ ಆಧಾರವಾಗಿದ್ದ ಯುವಕರ ಅಕಾಲಿಕ ಮರಣದಿಂದ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ.

ಇದನ್ನೂ ಓದಿ: ಮೈಸೂರು ಅರಮನೆ ಮುಂಭಾಗ ಗ್ಯಾಸ್ ಸಿಲಿಂಡರ್ ಸ್ಫೋಟ: ಓರ್ವ ಸಾವು, ಹಲವರಿಗೆ ಗಂಭೀರ ಗಾಯ

ಘಟನೆ ನಡೆದ ಅಜ್ಜವಾರ ರಸ್ತೆ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಶೋಕದ ವಾತಾವರಣ ಆವರಿಸಿದ್ದು, ಗ್ರಾಮಸ್ಥರು ದುಃಖದಲ್ಲಿ ಮುಳುಗಿದ್ದಾರೆ. ಕ್ರಿಸ್ಮಸ್ ಸಂಭ್ರಮದ ಹೊತ್ತಿನಲ್ಲಿ ಈ ರೀತಿಯ ದುರ್ಘಟನೆ ಸಂಭವಿಸಿರುವುದು ಎಲ್ಲರ ಮನಕಲಕುವಂತಾಗಿದೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ “ಚಿಕ್ಕಬಳ್ಳಾಪುರ ನಗರದ ಹೊರವಲಯದ ಅಜ್ಜವಾರ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಸಾವಿಗೀಡಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬದ ಆಧಾರವಾಗಿದ್ದ ಯುವಕರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುತ್ತಿದೆ. ತಮ್ಮವರನ್ನು ಕಳೆದುಕೊಂಡ ನೋವನ್ನು ಭರಿಸುವ ಶಕ್ತಿ ಆ ಕುಟುಂಬಗಳಿಗೆ ಸಿಗಲಿ” ಎಂದು ತಿಳಿಸಿದ್ದಾರೆ.

The post ಚಿಕ್ಕಬಳ್ಳಾಪುರ ಟಿಪ್ಪರ್–ಬೈಕ್ ಅಪಘಾತದಲ್ಲಿ ನಾಲ್ವರು ಸಾವು: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ appeared first on Samyukta Karnataka.

ಬಾಡಿಗೆ ಮನೆಯಲ್ಲಿ ವೃದ್ಧ ದಂಪತಿ ಶವವಾಗಿ ಪತ್ತೆ
ಚಿಕ್ಕಬಳ್ಳಾಪುರ(ಗುಡಿಬಂಡೆ): ಬಾಡಿಗೆ ಮನೆಯೊಂದರಲ್ಲಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿರುವ ಘಟನೆ ತಾಲೂಕಿನ ಪೋಲಂಪಲ್ಲಿಯಲ್ಲಿ ನಡೆದಿದೆ.

ಜಂಗಾಲಹಳ್ಳಿ ಮೂಲದ ಅಶ್ವತ್ಥಪ್ಪ (70), ಮತ್ತು ಅವರ ಪತ್ನಿ ಹನುಮಕ್ಕ (60) ಮೃತ ದಂಪತಿ. ಇವರು ಪೋಲಂಪಲ್ಲಿ ಗ್ರಾಮದಲ್ಲಿ ಬಾಡಿಗೆ ಮನೆ ಪಡೆದು ಜೀವನ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಆದರೆ ಇಂದು ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ.

ಈ ವೃದ್ಧ ದಂಪತಿ ವಾಸವಿದ್ದ ಮನೆಯ ಬಾಗಿಲು ಕೆಲ ದಿನಗಳಿಂದ ತೆಗೆಯದಿರುವುದನ್ನು ಗಮನಿಸಿದ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸೋಮವಾರ ಬೆಳಗ್ಗೆ ಪೊಲೀಸರೇ ಮನೆಯ ಬಾಗಿಲು ಮುರಿದು ಒಳ ಪ್ರವೇಶಿಸಿದ್ದು, ವೃದ್ಧ ದಂಪತಿ ಶವವಾಗಿರುವುದು ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಗುಡಿಬಂಡೆ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿಗೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಇದು ಆರ್ಥಿಕ ಸಂಕಷ್ಟವೋ ಅಥವಾ ಕೌಟುಂಬಿಕ ಕಲಹಗಳ ಪರಿಣಾಮವೋ ಎಂಬ ಕುರಿತು ಪೊಲೀಸರ ತನಿಖೆ ಮುಂದುವರೆದಿದೆ.

The post ಬಾಡಿಗೆ ಮನೆಯಲ್ಲಿ ವೃದ್ಧ ದಂಪತಿ ಶವವಾಗಿ ಪತ್ತೆ appeared first on Samyukta Karnataka.

ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ: ಸಿದ್ದರಾಮಯ್ಯ
ಚಿಕ್ಕಬಳ್ಳಾಪುರ (ಶಿಡ್ಲಘಟ್ಟ): ಐದು ತಿಂಗಳ ಹಿಂದೆ ಹೈಕಮಾಂಡ್ ಸಚಿವ ಸಂಪುಟ ಪುನರ್ ರಚನೆ ಮಾಡಲು ಸೂಚಿಸಲಾಗಿತ್ತು. ಆದರೆ ನಾನು ಎರಡೂವರೆ ವರ್ಷ ತುಂಬಿದ ನಂತರ ಮಾಡೋಣ ಎಂದು ತಿಳಿಸಿದ್ದೆ. ಇದೀಗ ಯಾವ ಸೂಚನೆ ನೀಡುತ್ತಾರೋ ಅದರಂತೆ ನಡೆಯುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವನ್ನು ನಾನು ಹಾಗೂ ಡಿ.ಕೆ. ಶಿವಕುಮಾರ್ ಒಪ್ಪಬೇಕು ಎಂದರು.

ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದ ಅವರು, ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ವೆಚ್ಚ ಮಾಡಲಾಗುತ್ತಿದೆ ಎಂದು ಹೇಳಿದರು.

ಚಿಕ್ಕಬಳ್ಳಾಪುರದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡುತ್ತಿದ್ದೇವೆ. ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಸುಳ್ಳು ಬಿಟ್ಟರೆ ಬೇರೇನೂ ಹೇಳಲು ಬರುವುದಿಲ್ಲ. ಸುಳ್ಳೇ ಅವರ ಮನೆ ದೇವರು ಎಂದರು.

ನಾವು ನುಡಿದಂತೆ ನಡೆಸಿದ್ದೇವೆ, ಗ್ಯಾರಂಟಿ ಯೋಜನೆಗಳಿಗೆ ಒಂದು ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವೆಚ್ಚ ಮಾಡಲಾಗಿದೆ. ನಾವು ನುಡಿದಂತೆ ನಡೆದ ಸರ್ಕಾರ ಎಂದು ಹೇಳಿದ್ದೆವು. ಅದರಂತೆ ನಡೆದಿದ್ದೇವೆ ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ ಹನುಮಂತಪುರ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಸುಮಾರು 2 ಸಾವಿರ ಕೋಟಿ ಮೊತ್ತದ ಜಿಲ್ಲೆಯ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ ಮತ್ತು ಎಚ್‌ಎನ್ ವ್ಯಾಲಿ ಮೂರನೇ ಹಂತದ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ ಶಂಕುಸ್ಥಾಪನೆ ನೆರವೇರಿಸಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಿಸಿದರು.

The post ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ: ಸಿದ್ದರಾಮಯ್ಯ appeared first on Samyukta Karnataka.

2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ!
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಅಭಿವೃದ್ಧಿಯ ಸಂಗಮವಾಗಿದೆ. 2 ಸಾವಿರ ಕೋಟಿ ರೂ. ಮೊತ್ತದ ಅಭಿವೃದ್ಧಿ ಕೆಲಸವನ್ನು ವಿರೋಧ ಪಕ್ಷದ ಶಾಸಕರ ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ ಎಂದರೆ ನಮ್ಮ ಜನಪರ ಧೋರಣೆಯನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಈ ಕ್ಷೇತ್ರದ ಅಭಿವೃದ್ಧಿಗೆ ಇಡೀ ಸರ್ಕಾರವೇ ಬಂದಿದೆ ಎಂದರೆ ನಮಗೆ ಜನರ ಮೇಲಿನ ಪ್ರೀತಿಯೇ ಕಾರಣವಾಗಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಮುಕಾರ ಹೇಳಿದ್ದಾರೆ.

ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹನುಮಂತಪುರ ಗ್ರಾಮದಲ್ಲಿ ಆಯೋಜಿಸಿದ್ದ, ಚಿಕ್ಕಬಳ್ಳಾಪುರ ಹೈಟೆಕ್‌ ಗೂಡಿನ ಮಾರುಕಟ್ಟೆ, ಹೆಚ್‌.ಎನ್‌ ವ್ಯಾಲಿ 3ನೇ ಹಂತದ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು, ಸುಧಾಕರ್ ಅವರು ಹಾಗೂ ಕೃಷ್ಣಬೈರೇಗೌಡರು ನನ್ನ ಬೆನ್ನತ್ತಿದ್ದು, 2027 ರ ಹೊತ್ತಿಗೆ ಎರಡು ಜಿಲ್ಲೆಗಳಿಗೆ ಎತ್ತಿನಹೊಳೆ ನೀರು ಹರಿಸಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಪೂರಕವಾಗಿ ನಾವು ಕೆಲಸ ಮಾಡುತ್ತಿದ್ದೇವೆ. ನಾವು ಪರ್ಯಾಯವಾಗಿ ಕಂದಾಯ ಭೂಮಿ ನೀಡಿದ್ದರೂ ಕೇಂದ್ರ ಪರಿಸರ ಇಲಾಖೆ ಅರಣ್ಯ ಭೂಮಿ ಬಳಕೆಗೆ ಅನುಮತಿ ನೀಡುತ್ತಿಲ್ಲ.

ಕೆ. ಸಿ. ವ್ಯಾಲಿ ಯೋಜನೆಯ ಮೊದಲ ಹಂತದಲ್ಲಿ 143 ಕೆರೆ ತುಂಬಿಸಲಾಗಿದೆ. 2ನೇ ಹಂತದಲ್ಲಿ 272 ಕೆರೆ ಭರ್ತಿ ಮಾಡುತ್ತಿದ್ದೇವೆ. ಈ ಯೋಜನೆಯನ್ನು ವಿಶ್ವಬ್ಯಾಂಕ್ ಕೂಡ ಹೊಗಳಿದೆ. ಹೆಚ್. ಎನ್. ವ್ಯಾಲಿ ಯೋಜನೆಯ ಮೊದಲ ಹಂತದಲ್ಲಿ 65 ಕೆರೆಗಳನ್ನು ತುಂಬಿಸುವ ಕೆಲಸ ಮಾಡಿದ್ದೇವೆ. ಬೆಂಗಳೂರಲ್ಲಿ ಕೆರೆಗಳ ಇಂಟರ್‌ಲಿಂಕ್ ಮಾಡೋಕೆ ಅಂತ 1700 ಕೋಟಿ ರೂಪಾಯಿ ಮೊತ್ತದ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ನೆಲಮಂಗಲದಲ್ಲಿ ವೃಷಭಾವತಿಯಿಂದ 70 ಕೆರೆ ತುಂಬಿಸಲಾಗುತ್ತಿದೆ.

ಕೆರೆಗಳನ್ನು ತುಂಬಿಸುವುದು ನಮ್ಮ ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿ. ವ್ಯವಸಾಯಕ್ಕೆ ಹಾಗೂ ಕುಡಿಯುವುದಕ್ಕೆ ನೀರನ್ನು ನೀಡುವುದೇ ನಮ್ಮ ಉದ್ದೇಶ. ಏಳನೇ ಗ್ಯಾರಂಟಿಯಾಗಿ 1,11,11,111 ಜನರಿಗೆ ಖಾತೆಗಳನ್ನು ನೀಡಿ ಭೂಮಿ ಗ್ಯಾರಂಟಿ ನೀಡಿದ್ದೇವೆ.

ಚಿಕ್ಕಬಳ್ಳಾಪುರ ಮತ್ತು ಕೋಲಾರದ ಜನತೆ ಬಗ್ಗೆ ನನಗೆ ಅಪಾರ ಗೌರವ. ಏಕೆಂದರೆ ನೀವು ಶ್ರಮ ಜೀವಿಗಳು, ನೀರಿನ ಬೆಲೆ ಅರಿತಿರುವವರು. ತರಕಾರಿ, ಹೂ, ಹಣ್ಣು ಸೇರಿದಂತೆ ಅನೇಕ ಕೃಷಿ ಉತ್ಪನ್ನಗಳನ್ನು ರಾಜ್ಯಕ್ಕೆ ನೀಡುತ್ತಿರುವವರು. ಅಶುದ್ಧ ನೀರನ್ನು ಶುದ್ಧೀಕರಣಗೊಳಿಸಿ ಅದನ್ನು ನಿಮ್ಮ ಕೆರೆಗಳಿಗೆ ಹರಿಸುವ ಕೆಲಸ ಮಾಡಲಾಗುತ್ತಿದೆ. ಇಡೀ ದೇಶವೇ ಈ ಯೋಜನೆಯನ್ನು ಹೊಗಳುತ್ತಿದೆ.

ಶಿಡ್ಲಘಟ್ಟದ ನೀರು ಅತ್ಯುತ್ತಮವಾದುದು, ರೇಷ್ಮೆ ನೂಲು ಉತ್ತಮವಾಗಿ ಬರುತ್ತದೆ ಎಂದು ಇಲ್ಲಿಂದ ಟ್ಯಾಂಕರ್‌ನಲ್ಲಿ ನೀರು ತಂದು ನಮ್ಮ ಊರಿನಲ್ಲಿ ನೂಲು ತೆಗೆಯಲಾಗುತ್ತದೆ. ಚೈನಾದಿಂದ ರೇಷ್ಮೆ ಆಮದು ಕಡಿಮೆಯಾದ ಕಾರಣಕ್ಕೆ ನಮ್ಮ ರೇಷ್ಮೆಗೆ ಅತ್ಯುತ್ತಮ ಬೆಲೆ ಬಂದಿದೆ.

ದೇವರು ನಮಗೆ ಕೊಟ್ಟಿರುವುದು ಎರಡು, ಒಂದು ಕೊಟ್ಟು ಹೋಗುವುದು, ಮತ್ತೊಂದು ಬಿಟ್ಟು ಹೋಗುವುದು, ಹಾಗೆಯೇ ಏನೇನು ಕೊಡಬೇಕೋ ಅದನ್ನು ಕೊಟ್ಟು ಹೋಗುತ್ತಿದ್ದೇವೆ, ಈ ಕ್ಷೇತ್ರಕ್ಕೆ ಏನೇನು ಬೇಕೋ ಅದನ್ನು ಬಿಟ್ಟು ಹೋಗುತ್ತಿದ್ದೇವೆ. ನಿಮ್ಮ ಆಶೀರ್ವಾದ ಸದಾ ನಮ್ಮ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

The post 2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ! appeared first on Samyukta Karnataka.