ಚಿಕ್ಕಮಗಳೂರು Archives - Samyukta Karnataka

ಚಿಕ್ಕಮಗಳೂರಿನಲ್ಲಿ ಗಂಡು ಹುಲಿ ಮೃತದೇಹ ಪತ್ತೆ: ತನಿಖೆ ಆರಂಭ
ಚಿಕ್ಕಮಗಳೂರು : ಜಿಲ್ಲೆಯ ಚಿಕ್ಕಮಗಳೂರು ತಾಲ್ಲೂಕಿನ ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಮುತ್ತೋಡಿ ಪ್ರಾದೇಶಿಕ ವಲಯದ ಹೊಸ ತೋಟ ಪ್ರದೇಶದಲ್ಲಿರುವ ಖಾಸಗಿ ಕಾಫಿ ತೋಟದಲ್ಲಿ ಗಂಡು ಹುಲಿಯ ಮೃತದೇಹ ಪತ್ತೆಯಾಗಿರುವುದು ಅರಣ್ಯ ಇಲಾಖೆ ಹಾಗೂ ವನ್ಯಜೀವಿ ಪ್ರೇಮಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ.

ಸೋಮವಾರ ಸಂಜೆ ಸ್ಥಳೀಯರಿಗೆ ಕಾಫಿ ತೋಟದಲ್ಲಿ ಹುಲಿಯ ಮೃತದೇಹ ಕಾಣಿಸಿಕೊಂಡಿದ್ದು, ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಹಿರಿಯ ಅರಣ್ಯ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರಕ್ಕೆ CEO ನೇಮಕ: ಅರ್ಜಿ ಆಹ್ವಾನಿಸಿದ ಟ್ರಸ್ಟ್

ಒಂದು ದಿನದ ಹಿಂದೆಯೇ ಸಾವು? : ಪ್ರಾಥಮಿಕ ಮಾಹಿತಿಯ ಪ್ರಕಾರ, ಹುಲಿ ಸುಮಾರು ಒಂದು ದಿನದ ಹಿಂದೆಯೇ ಮೃತಪಟ್ಟಿರಬಹುದು ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ. ಆದರೆ, ಹುಲಿಯ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ವಿಷಪ್ರಯೋಗ, ವಿದ್ಯುತ್ ಸ್ಪರ್ಶ, ಇತರ ಪ್ರಾಣಿಗಳೊಂದಿಗೆ ಕಾದಾಟ ಅಥವಾ ಸಹಜ ಕಾರಣ ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ.

ಮರಣೋತ್ತರ ಪರೀಕ್ಷೆ ಇಂದು : ಕೇಂದ್ರ ಸರ್ಕಾರದ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (NTCA) ಮಾರ್ಗಸೂಚಿಗಳ ಪ್ರಕಾರ ಮಂಗಳವಾರ ಹುಲಿಯ ಮರಣೋತ್ತರ ಪರೀಕ್ಷೆ (ಪೋಸ್ಟ್‌ಮಾರ್ಟಂ) ನಡೆಸಲಾಗುತ್ತದೆ. ಈ ಪರೀಕ್ಷೆಯ ವರದಿ ಬಂದ ಬಳಿಕವೇ ಹುಲಿಯ ಸಾವಿಗೆ ನಿಖರ ಕಾರಣ ಏನು ಎಂಬುದು ಸ್ಪಷ್ಟವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಗೋಹತ್ಯೆ ನಿಷೇಧಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್

ಮರಣೋತ್ತರ ಪರೀಕ್ಷೆಯನ್ನು ವಿಡಿಯೋಗ್ರಫಿ ಮತ್ತು ಅಗತ್ಯ ವೈಜ್ಞಾನಿಕ ವಿಧಾನಗಳ ಮೂಲಕ ನಡೆಸಲಾಗಲಿದ್ದು, ಅದರ ವರದಿಯನ್ನು ಎನ್‌ಟಿಸಿಎಗೆ ಸಲ್ಲಿಸಲಾಗುತ್ತದೆ.

ವನ್ಯಜೀವಿ ಪ್ರೇಮಿಗಳ ಆತಂಕ : ಹುಲಿಯ ಸಾವಿನ ಘಟನೆಗೆ ವನ್ಯಜೀವಿ ಪ್ರೇಮಿಗಳು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶವು ರಾಜ್ಯದ ಪ್ರಮುಖ ಹುಲಿ ಆವಾಸ ಪ್ರದೇಶಗಳಲ್ಲಿ ಒಂದಾಗಿದ್ದು, ಇಲ್ಲಿ ಹುಲಿಗಳ ಸಂರಕ್ಷಣೆಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಹುಲಿ ಸಾವನ್ನಪ್ಪಿರುವುದು ಆತಂಕಕಾರಿ ಬೆಳವಣಿಗೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: H. D ರೇವಣ್ಣಗೆ ಮತ್ತೆ ಕಾನೂನು ಸಂಕಷ್ಟ: ಸುಪ್ರೀಂನಿಂದ ನೋಟಿಸ್

ಹುಲಿಯ ಸಾವು ಸಹಜ ಕಾರಣದಿಂದ ಸಂಭವಿಸಿದೆಯೇ ಅಥವಾ ಮಾನವ ಹಸ್ತಕ್ಷೇಪದಿಂದ ಆಗಿದೆಯೇ ಎಂಬುದನ್ನು ಸಮಗ್ರ ತನಿಖೆ ನಡೆಸಿ ಸತ್ಯಾಂಶ ಹೊರತರುವಂತೆ ಅವರು ಒತ್ತಾಯಿಸಿದ್ದಾರೆ. ತಪ್ಪಿತಸ್ಥರು ಇದ್ದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಕರಣ ದಾಖಲು : ಈ ಸಂಬಂಧ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದ್ದು, ಹುಲಿಯ ಸಾವಿನ ಕುರಿತು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವೇ ಪ್ರಕರಣದ ನಿಜವಾದ ಕಾರಣ ಬಹಿರಂಗವಾಗುವ ನಿರೀಕ್ಷೆಯಿದೆ.

ಲಾರ್ಡ್ಸ್ ಅಖಾಡದಲ್ಲಿ ಭಾರತದ ದರ್ಬಾರ್: ಮಹಿಳಾ ತಂಡದ ದಾಖಲೆ

The post ಚಿಕ್ಕಮಗಳೂರಿನಲ್ಲಿ ಗಂಡು ಹುಲಿ ಮೃತದೇಹ ಪತ್ತೆ:  ತನಿಖೆ ಆರಂಭ appeared first on Samyukta Karnataka.

ಕಾಡುಕೋಣ ದಾಳಿಗೆ ಮಹಿಳೆ ಬಲಿ
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಮೃತರನ್ನು ಶೀಲಾ (52) ಎಂದು ಗುರುತಿಸಲಾಗಿದ್ದು, ಅವರು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕಾಡುಕೋಣ ದಾಳಿ ನಡೆಸಿದೆ. ದಾಳಿಯ ವೇಳೆ ಕಾಡುಕೋಣ ಮಹಿಳೆಯ ಕುತ್ತಿಗೆ ಹಾಗೂ ಹೊಟ್ಟೆ ಭಾಗಕ್ಕೆ ಬಲವಾಗಿ ತಿವಿದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಶೀಲಾ ಅವರನ್ನು ಸ್ಥಳೀಯರು ತಕ್ಷಣ ತೋಟದಿಂದ ಆಸ್ಪತ್ರೆಗೆ ಸಾಗಿಸಲು ಮುಂದಾದರೂ, ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ.

ಘಟನೆಯಿಂದ ಬಿಳಗುಳಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅರಣ್ಯ ಪ್ರದೇಶಗಳ ಸಮೀಪ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರ ಸುರಕ್ಷತೆಗಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪೋಕ್ಸೊ ಪ್ರಕರಣ: ಆರೋಪಿಗೆ 10 ವರ್ಷ ಜೈಲು, ₹30 ಸಾವಿರ ದಂಡ

The post ಕಾಡುಕೋಣ ದಾಳಿಗೆ ಮಹಿಳೆ ಬಲಿ appeared first on Samyukta Karnataka.

ಕಾಫಿನಾಡಲ್ಲಿ ಭಾರೀ ಮಳೆ-ಜನಜೀವನ ಅಸ್ತವ್ಯಸ್ತ
ಚಿಕ್ಕಮಗಳೂರು: ಕಾಫಿನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮೂಡಿಗೆರೆ ತಾಲೂಕಿನ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ತಾಲೂಕಿನಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಮೂಡಿಗೆರೆ ಪಟ್ಟಣ ಸೇರಿದಂತೆ ಕೊಟ್ಟಿಗೆಹಾರ, ಬಾಳೂರು, ಬಣಕಲ್ ಹಾಗೂ ಚಾರ್ಮಾಡಿ ಘಾಟ್ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಬೆಳಿಗ್ಗೆಯಿಂದ ಎಡೆ ಬಿಡದೆ ಸುರಿಯುತ್ತಿರುವ ಮಳೆಯಿಂದ ರಸ್ತೆಗಳ ಮೇಲೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ರಸ್ತೆಯ ಚಾರ್ಮಾಡಿ ಘಾಟ್‌ನಲ್ಲಿ ಭಾರೀ ಮಳೆ ಹಾಗೂ ಗಾಳಿಯಿಂದ ವಾಹನ ಸಂಚಾರ ನಿಧಾನಗೊಂಡಿದ್ದು, ಮಲೆನಾಡಿನ ಕೆಲವೆಡೆ ಬಿಟ್ಟು ಬಿಟ್ಟು ಮಳೆ ಸುರಿಯಲಾರಂಭಿಸಿದೆ.

ಭಾನುವಾರ ಮಧ್ಯಾಹ್ನದಿಂದಲೇ ಮಲೆನಾಡು ಭಾಗದಲ್ಲಿ ಭೀಕರ ಗಾಳಿ ಹಾಗೂ ಭಾರಿ ಮಳೆ ಸುರಿಯುತ್ತಿದೆ. ಗಾಳಿಯ ತೀವ್ರತೆಗೆ ಬೃಹತ್ ಗಾತ್ರದ ಮರಗಳು ರಸ್ತೆಗಳಿಗೆ ಉರುಳಿಬಿದ್ದಿದ್ದು, ಹತ್ತಾರು ಗ್ರಾಮಗಳ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಮರಗಳನ್ನು ತೆರವುಗೊಳಿಸಿ ಸಂಚಾರ ಮುಕ್ತಗೊಳಿಸಲು ಸ್ಥಳೀಯ ಆಡಳಿತ ಶ್ರಮಿಸುತ್ತಿದೆ.

ಸಿಡಿಲು ಮತ್ತು ಭಾರಿ ಗಾಳಿಗೆ ಮರಗಳು, ವಿದ್ಯುತ್ ಕಂಬ ಹಾಗೂ ತಂತಿಗಳ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಸಂಪೂರ್ಣ ಕಟ್ ಆಗಿದೆ. ಮಲೆನಾಡಿನ ಹತ್ತಾರು ಹಳ್ಳಿಗಳು ಕತ್ತಲಲ್ಲಿ ಮುಳುಗಿದ್ದು, ಸಾರ್ವಜನಿಕರು ತೀವ್ರ ಕಂಗಾಲಾಗಿದ್ದಾರೆ.

ವಚನಾನಂದ ಶ್ರೀ ಪೋಕ್ಸೊ ಪ್ರಕರಣ: ಜು. 13ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

The post ಕಾಫಿನಾಡಲ್ಲಿ ಭಾರೀ ಮಳೆ-ಜನಜೀವನ ಅಸ್ತವ್ಯಸ್ತ appeared first on Samyukta Karnataka.

ಗೃಹಜ್ಯೋತಿ ಗೊಂದಲಗಳಿಗೆ ಸಚಿವ ಜಾರ್ಜ್ ಸ್ಪಷ್ಟನೆ
ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.

ಚಿಕ್ಕಮಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ ಕುರಿತಾಗಿ ಹರಿದಾಡುತ್ತಿರುವ ಗೊಂದಲಗಳಿಗೆ ಸ್ಪಷ್ಟನೆ ನೀಡಿದರು.

ಬದಲಿಗೆ, ಯೋಜನೆಯ ಸೌಲಭ್ಯ ನಿಜವಾದ ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪುವಂತೆ ಮಾಡುವ ಉದ್ದೇಶದಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಮನೆಮನೆಗೆ ಅರ್ಜಿ ನಮೂನೆಗಳನ್ನು ವಿತರಿಸಲಾಗುವುದು. ಅರ್ಜಿ ವಿತರಣೆಯ ವೇಳೆ ಯೋಜನೆಯ ಮಾನದಂಡಗಳು ಹಾಗೂ ಅರ್ಹತೆ ಕುರಿತು ಸಾರ್ವಜನಿಕರಿಗೆ ಸಂಪೂರ್ಣ ಮಾಹಿತಿ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿ ಸುಮಾರು 1 ಕೋಟಿ 64 ಲಕ್ಷ ಫಲಾನುಭವಿಗಳು ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದಾರೆ. ಅರ್ಹರಲ್ಲದವರು ಸೌಲಭ್ಯ ಪಡೆಯುವುದನ್ನು ತಡೆಯುವುದು ಹಾಗೂ ನಿಜವಾದ ಅರ್ಹರನ್ನು ಗುರುತಿಸುವ ಉದ್ದೇಶದಿಂದ ಮಾತ್ರವೇ ಮಾಹಿತಿ ಸಂಗ್ರಹ ನಡೆಯುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

ಇದೇ ವೇಳೆ, ಅರ್ಜಿ ನಮೂನೆಯಲ್ಲಿ ಜಾತಿ ವಿವರಗಳನ್ನು ಕೇಳುತ್ತಿರುವ ಕುರಿತು ವ್ಯಕ್ತವಾಗಿರುವ ಆಕ್ಷೇಪಗಳಿಗೆ ಪ್ರತಿಕ್ರಿಯಿಸಿದ ಸಚಿವ ಕೆ.ಜೆ. ಜಾರ್ಜ್, ಜಾತಿ ಮಾಹಿತಿ ಪಡೆಯುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದರು.

ಇದು ಕೇವಲ ಮಾಹಿತಿ ಸಂಗ್ರಹದ ಉದ್ದೇಶಕ್ಕಷ್ಟೇ ಸೀಮಿತವಾಗಿದ್ದು, ಯಾವುದೇ ರೀತಿಯ ತಾರತಮ್ಯಕ್ಕೆ ಅವಕಾಶವಿಲ್ಲ. ಅರ್ಹತೆ ಹೊಂದಿರುವ ಪ್ರತಿಯೊಬ್ಬ ಫಲಾನುಭವಿಗೂ ಯಾವುದೇ ಭೇದಭಾವವಿಲ್ಲದೆ ಗೃಹಜ್ಯೋತಿ ಯೋಜನೆಯ ಸೌಲಭ್ಯ ದೊರೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಅಯೋಧ್ಯೆ ಘಟನೆ ಎಚ್ಚರಿಕೆ ಘಂಟೆ: ಹುಂಡಿ ನಿರ್ವಹಣೆಗೆ ಏಕರೂಪ ನಿಯಮ

The post ಗೃಹಜ್ಯೋತಿ ಗೊಂದಲಗಳಿಗೆ ಸಚಿವ ಜಾರ್ಜ್ ಸ್ಪಷ್ಟನೆ appeared first on Samyukta Karnataka.

ಐದು ದಶಕಗಳ ಬಳಿಕ ದಲಿತರಿಗೆ ದೇವಸ್ಥಾನ ಪ್ರವೇಶ
ಕಡೂರು: ಕಳೆದ ಐದು ದಶಕಗಳಿಂದ ದೇವಸ್ಥಾನಕ್ಕೆ ಪ್ರವೇಶ ಇಲ್ಲದೆ ಇದ್ದ ನಿಡಘಟ್ಟ ಗ್ರಾಮದ ದಲಿತರು ಮಂಗಳವಾರ ತಹಸೀಲ್ದಾರ್ ನೇತೃತ್ವದಲ್ಲಿ ಆಂಜನೇಯಸ್ವಾಮಿ ದೇವಸ್ಥಾನ ಪ್ರವೇಶ ಪಡೆದರು.

ತಾಲೂಕಿನ ಇತಿಹಾಸ ಪ್ರಸಿದ್ಧ ನಿಡಘಟ್ಟದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಗ್ರಾಮದ ದಲಿತರು ಪ್ರವೇಶಿಸಿ ದೇವರ ದರ್ಶನ ಪಡೆದರು. ಇಲ್ಲಿಯವರೆಗೂ ಈ ದೇವಸ್ಥಾನಕ್ಕೆ ದಲಿತರ ಪ್ರವೇಶವಿರಲಿಲ್ಲ. ಯಾವುದೋ ಮೂಢನಂಬಿಕೆ ಹಾಗೂ ಹಿಂದಿನಿಂದಲೂ ನಡೆದುಬಂದ ಪದ್ಧತಿಯಂತೆ ದಲಿತರು ದೇವಸ್ಥಾನಕ್ಕೆ ಪ್ರವೇಶ ಮಾಡುತ್ತಿರಲಿಲ್ಲ. ಬದಲಾದ ಕಾಲಮಾನದಲ್ಲಿ ದಲಿತರಿಗೂ ಪ್ರವೇಶಾವಕಾಶ ನೀಡಬೇಕೆಂಬ ಮನವಿಯನ್ನು ಗ್ರಾಮದ ದಲಿತ ಮುಖಂಡರು ತಹಶೀಲ್ದಾರ್ ಸಿ.ಎಸ್. ಪೂರ್ಣಿಮಾ ಅವರಿಗೆ ಸಲ್ಲಿಸಿದ್ದರು.

ತಹಶೀಲ್ದಾರ್ ನೇತೃತ್ವದಲ್ಲಿ ದೇವಸ್ಥಾನ ಆಡಳಿತ ಮಂಡಳಿ ಒಳಗೊಂಡಂತೆ ದಲಿತ ಮುಖಂಡರ ಸಮ್ಮುಖದಲ್ಲಿ ತಾಲೂಕು ಕಚೇರಿಯಲ್ಲಿ ನಡೆದ ಶಾಂತಿ ಸೌರ್ಹಾದತೆಯ ಸಭೆಯಲ್ಲಿ ಎಲ್ಲರ ಸ್ಪಂದನೆಯೊದಿಗೆ ದೇವಾಲಯ ಪ್ರವೇಶಕ್ಕೆ ಒಮ್ಮತ ಮೂಡಿ, ಪ್ರಕರಣ ಸುಖಾಂತ್ಯ ಕಂಡಿತು.

ತಹಶೀಲ್ದಾರ್ ನೇತೃತ್ವದಲ್ಲಿ ಪ್ರವೇಶ: ಮಂಗಳವಾರ ದೇವಸ್ಥಾನಕ್ಕೆ ಆಗಮಿಸಿದ ತಹಶೀಲ್ದಾರ್ ಸಿ.ಎಸ್. ಪೂರ್ಣಿಮಾ, ತಾಪಂ ಇಒ ಸಿ.ಆರ್. ಪ್ರವೀಣ್, ಸಮಾಜ ಕಲ್ಯಾಣಾಧಿಕಾರಿ ನಟರಾಜ್, ಡಿವೈಎಸ್ಪಿ ಪರಶುರಾಮಪ್ಪ, ಸಿಪಿಐ ರಫೀಕ್ ನೇತೃತ್ವದ ಪೊಲೀಸ್ ಸಿಬ್ಬಂದಿಯೊಂದಿಗೆ ದೇವಾಲಯ ಪ್ರಾಂಗಣದ ಬಳಿ ನೆರೆದಿದ್ದ ಗ್ರಾಮದ ದಲಿತರು, ಅಧಿಕಾರಿಗಳ ಸಮ್ಮುಖದಲ್ಲಿ ದೇವಾಲಯವನ್ನು ಪ್ರವೇಶಿಸಿ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ನಂತರ ತಹಶೀಲ್ದಾರ್ ಸಮ್ಮುಖದಲ್ಲಿ ದಲಿತರು ದೇವಸ್ಥಾನ ಪ್ರವೇಶಿಸಿ ದೇವರ ತೀರ್ಥ ಪ್ರಸಾದ ಸ್ವೀಕರಿಸಿ ದಶಕಗಳ ಕಾಲ ನಡೆದುಬಂದಿದ್ದ ಪದ್ಧತಿಗೆ ಕೊನೆ ಹಾಡಿದರು.

36 ವರ್ಷಗಳ ಬಳಿಕ ಸರಳಾ ಭಟ್ ಹತ್ಯೆ ಪ್ರಕರಣಕ್ಕೆ ಹೊಸ ತಿರುವು

The post ಐದು ದಶಕಗಳ ಬಳಿಕ ದಲಿತರಿಗೆ ದೇವಸ್ಥಾನ ಪ್ರವೇಶ appeared first on Samyukta Karnataka.

ಅರಣ್ಯಾಧಿಕಾರಿ ನಿವಾಸ ಸೇರಿ ಹಲವು ಕಡೆ ಲೋಕಾಯುಕ್ತ ದಾಳಿ
ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕಾರ್ಯಾಚರಣೆ; ಎಸಿಎಫ್ ನಿವಾಸ ಸೇರಿ ಹಲವು ಕಡೆ ಶೋಧ

ಚಿಕ್ಕಮಗಳೂರು: ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಹಾಗೂ ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಆರೋಪಗಳ ಹಿನ್ನೆಲೆಯಲ್ಲಿ ಅಸಿಸ್ಟೆಂಟ್ ಕನ್ಸರ್ವೇಟರ್ ಆಫ್ ಫಾರೆಸ್ಟ್ (ಎಸಿಎಫ್) ಆಗಿ ಕಾರ್ಯನಿರ್ವಹಿಸುತ್ತಿರುವ ಮೋಹನ್ ಅವರಿಗೆ ಸೇರಿದ ಮನೆ ಮತ್ತು ಇತರ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಮುಂಜಾನೆ ದಿಢೀರ್ ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳ ಈ ಕಾರ್ಯಾಚರಣೆ ಚಿಕ್ಕಮಗಳೂರು ನಗರ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಏಕಕಾಲದಲ್ಲಿ ನಡೆದಿದ್ದು, ಅಧಿಕಾರಿಯ ಆಸ್ತಿ, ಹಣಕಾಸು ವ್ಯವಹಾರಗಳು ಹಾಗೂ ಆಸ್ತಿ ಸಂಪಾದನೆಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ನಿವೃತ್ತಿಯ ಬೆನ್ನಲ್ಲೇ ಲೋಕಾಯುಕ್ತ ಶಾಕ್: ಮಾಜಿ ಕಚೇರಿ ಅಧೀಕ್ಷಕ ಮನೆ ಸೇರಿ 5 ಕಡೆ ದಾಳಿ

ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಮೋಹನ್ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಬೆಳಗಿನ ಜಾವವೇ ದಾಳಿ ನಡೆಸಿ ಶೋಧ ಕಾರ್ಯ ಆರಂಭಿಸಿತು. ಇದೇ ವೇಳೆ ಕಡೂರು ಪಟ್ಟಣದಲ್ಲಿರುವ ಅವರ ಸಹೋದರಿಯ ನಿವಾಸದಲ್ಲಿಯೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಲೋಕಾಯುಕ್ತ ಡಿವೈಎಸ್‌ಪಿ ತಿರುಮಲೇಶ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಹಲವು ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದು, ಮಹತ್ವದ ದಾಖಲೆಗಳು, ಬ್ಯಾಂಕ್ ವ್ಯವಹಾರಗಳ ಮಾಹಿತಿ, ಭೂಮಿ ಮತ್ತು ಇತರೆ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ: ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ವಿಜಯನಗರದಲ್ಲಿ ಲೋಕಾಯುಕ್ತ ದಾಳಿ

ಮೋಹನ್ ಅವರ ವಿರುದ್ಧ ಅಧಿಕಾರ ದುರುಪಯೋಗಪಡಿಸಿಕೊಂಡು ಕಾನೂನುಬಾಹಿರವಾಗಿ ಆಸ್ತಿ ಸಂಪಾದನೆ ಮಾಡಿರುವ ಕುರಿತು ದೂರುಗಳು ಬಂದಿದ್ದ ಹಿನ್ನೆಲೆಯಲ್ಲಿ ಲೋಕಾಯುಕ್ತರು ತನಿಖೆ ಆರಂಭಿಸಿದ್ದರು. ಪ್ರಾಥಮಿಕ ಮಾಹಿತಿ ಮತ್ತು ದಾಖಲೆಗಳ ಆಧಾರದ ಮೇಲೆ ನ್ಯಾಯಾಲಯದಿಂದ ಅನುಮತಿ ಪಡೆದು ಈ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ದಾಳಿಯ ವೇಳೆ ವಶಪಡಿಸಿಕೊಂಡ ದಾಖಲೆಗಳು, ಬ್ಯಾಂಕ್ ಖಾತೆಗಳ ವಿವರಗಳು, ಸ್ಥಿರ ಮತ್ತು ಚರಾಸ್ತಿಗಳ ಮಾಹಿತಿ ಸೇರಿದಂತೆ ವಿವಿಧ ದಾಖಲೆಗಳ ಪರಿಶೀಲನೆ ಮುಂದುವರಿದಿದೆ. ಶೋಧ ಕಾರ್ಯ ಪೂರ್ಣಗೊಂಡ ಬಳಿಕವೇ ಪತ್ತೆಯಾದ ಆಸ್ತಿಗಳ ಮೌಲ್ಯ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು ಬಹಿರಂಗವಾಗುವ ಸಾಧ್ಯತೆ ಇದೆ.

ಲೋಕಾಯುಕ್ತ ಅಧಿಕಾರಿಗಳ ಈ ದಿಢೀರ್ ಕಾರ್ಯಾಚರಣೆ ಅರಣ್ಯ ಇಲಾಖೆಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ತನಿಖೆಯ ಫಲಿತಾಂಶದತ್ತ ಸಾರ್ವಜನಿಕರು ಕುತೂಹಲದಿಂದ ಗಮನ ಹರಿಸಿದ್ದಾರೆ.

RSS ನೋಂದಣಿ ವಿಚಾರ: ಖರ್ಗೆ ಪ್ರಶ್ನೆಗೆ ಮೋಹನ್ ಭಾಗವತ್ ಪ್ರತಿಕ್ರಿಯೆ

The post ಅರಣ್ಯಾಧಿಕಾರಿ ನಿವಾಸ ಸೇರಿ ಹಲವು ಕಡೆ ಲೋಕಾಯುಕ್ತ ದಾಳಿ appeared first on Samyukta Karnataka.

ಬುರುಡೆ ಪ್ರಕರಣದ ಷಡ್ಯಂತ್ರ: ಸುಮೊಟೋ ಕೇಸ್ ದಾಖಲಿಸಿ
ಚಿಕ್ಕಮಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದ ಹಿಂದಿರುವ ಉದ್ದೇಶವೇನು? ಜೊತೆಗೆ ವೀರೇಂದ್ರ ಹೆಗ್ಗಡೆ ಅವರ ಕುಟುಂಬದ ಮೇಲೆ ಯಾವ ಕಾರಣಕ್ಕೆ ಅಪಪ್ರಚಾರ ನಡೆಸಿದರು ಎಂಬ ಬಗ್ಗೆಯೂ ಸುಮೊಟೊ ಕೇಸ್ ದಾಖಲಿಸಿ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುರುಡೆ ಪ್ರಕರಣದಲ್ಲಿ ಭಾಗಿಯಾಗಿದ್ದವರನ್ನು ಎಲ್ಲಿ ಇಡಬೇಕಿತ್ತೋ ಅಲ್ಲಿಯೇ ಇಡಬೇಕಿತ್ತು. ಆದರೆ ಅವರನ್ನು ಚುನಾವಣಾ ಪ್ರಚಾರದಲ್ಲಿ ಬಳಕೆ ಮಾಡಿಕೊಂಡರು. ಅಂತ ವ್ಯಕ್ತಿಗಳ ವಿರುದ್ಧ ಸರ್ಟಿಫಿಕೇಟ್ ಕೊಡುವ ಕೆಲಸವನ್ನು ಗೃಹ ಸಚಿವರು ಮಾಡಬಾರದು. ತನಿಖೆ ನಡೆಯುವ ಮೊದಲೇ ಸರ್ಟಿಫಿಕೇಟ್ ನೀಡಿದರೆ ಗೃಹ ಸಚಿವರು ಪಕ್ಷಪಾತಿಗಳಾಗುತ್ತಾರೆ. ಜೊತೆಗೆ ಧರ್ಮಸ್ಥಳ ಪ್ರಕರಣವನ್ನು ಮುಚ್ಚಿ ಹಾಕುವ ಮನಸ್ಥಿತಿ ಸರ್ಕಾರಕ್ಕೆ ಇದೆ ಎಂಬ ಭಾವನೆ ಜನರಲ್ಲಿ ಬರುತ್ತದೆ ಎಂದು ಎಚ್ಚರಿಸಿದರು.

ಷಡ್ಯಂತ್ರ ಇದೀಗ ಬಯಲಾಗಿದೆ. ಧಾರ್ಮಿಕ ಕೇಂದ್ರದ ಬಗ್ಗೆ ಅಪನಂಬಿಕೆ ಹುಟ್ಟಿಸುವುದೇ ಈ ಷಡ್ಯಂತರದ ಸಂಚಿನ ಭಾಗವಾಗಿತ್ತು. ಅಲ್ಲದೆ ವೀರೇಂದ್ರ ಹೆಗ್ಗಡೆ ಅವರ ಕುಟುಂಬಕ್ಕೆ ಅಗೌರವ ತರುವ ದೊಡ್ಡ ಹುನ್ನಾರವು ನಡೆದಿದೆ ಎಂದು ಹೇಳಿ, ನಕ್ಸಲರನ್ನು ಬೆಂಬಲಿಸುವ, ಅರಾಜಕತೆಯನ್ನೇ ಉಸಿರಾಗಿಸಿಕೊಂಡಿರುವ ವ್ಯಕ್ತಿ ಷಡ್ಯಂತರದಲ್ಲಿ ಪಾಲುದಾರನಾಗಿದ್ದಾನೆ ಎನ್ನುವ ಮಾಹಿತಿ ಇದೆ. ಸರ್ಕಾರಕ್ಕೆ ಪ್ರಾಮಾಣಿಕತೆ ಇದ್ದರೆ ಕೂಡಲೇ ಈ ಬಗ್ಗೆ ಸುಮೋಟೋ ಪ್ರಕರಣ ದಾಖಲಿಸಿಕೊಂಡು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಇನ್ನೊಂದು ಆಯಾಮದಲ್ಲಿ ತನಿಖೆ ನಡೆಸಬೇಕು. ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಕುಟುಂಬದ ವಿರುದ್ಧ ಏಕೆ ಷಡ್ಯಂತರ ಮಾಡಿದರು. ಇದಕ್ಕೆ ಫಂಡಿಂಗ್ ಎಲ್ಲಿಂದ ಬಂತು ಎಂಬ ಬಗ್ಗೆಯೂ ತನಿಖೆಯಾಗಬೇಕು. ಈ ಷಡ್ಯಂತರದ ಹಿಂದೆ ಮತಾಂತರ ಮಾಫಿಯಾ ಇದೆಯೇ? ಶ್ರದ್ಧಾ ಕೇಂದ್ರಗಳನ್ನು ಟಾರ್ಗೆಟ್ ಮಾಡಿದ್ದರೆ? ಎಂಬ ಬಗ್ಗೆಯೂ ತನಿಖೆಯಾಗಬೇಕು. ಸರ್ಕಾರದ ನೇತೃತ್ವದ ಸಮಗ್ರ ತನಿಖೆಯಿಂದ ನ್ಯಾಯ ಸಿಗಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಅಮಿತ್ ಶಾ ಭೇಟಿ ಮಾಡಿದ ಸಿಎಂ ಡಿಕೆಶಿ: ಪ್ರಮುಖ ವಿಷಯಗಳ ಚರ್ಚೆ

The post ಬುರುಡೆ ಪ್ರಕರಣದ ಷಡ್ಯಂತ್ರ: ಸುಮೊಟೋ ಕೇಸ್ ದಾಖಲಿಸಿ appeared first on Samyukta Karnataka.

ಚಾರ್ಮಾಡಿ ಘಾಟಿಯಲ್ಲಿ ಗುಡ್ಡದಿಂದ ಕಲ್ಲುಗಳ ಕುಸಿತ
ಮೂಡಿಗೆರೆ: ದಕ್ಷಿಣ ಕನ್ನಡ ಮತ್ತು ಕಾಫಿನಾಡನ್ನು ಸಂಪರ್ಕಿಸುವ ಪ್ರಮುಖ ಕೊಂಡಿ ಚಾರ್ಮಾಡಿ ಘಾಟಿಯ ಬಿದಿರುತಳ ಬಸ್ ನಿಲ್ದಾಣದ ಬಳಿಯ ರಸ್ತೆ ಪಕ್ಕದ ಎತ್ತರದ ಗುಡ್ಡದಿಂದ ಸಣ್ಣ ಪ್ರಮಾಣದಲ್ಲಿ ಕಲ್ಲುಗಳು ಜರಿದಿವೆ.

ಕಳೆದ ಒಂದು ತಿಂಗಳಿನಿಂದ ಮಲೆನಾಡು ಭಾಗದಲ್ಲಿ ಮುಂಗಾರು ಪೂರ್ವ ಮಳೆ ನಿರಂತರವಾಗಿ ಸುರಿದ ಪರಿಣಾಮ ಭೂಮಿಯ ತೇವಾಂಶ ಹೆಚ್ಚಾದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಅದೃಷ್ಟವಶಾತ್ ಯಾವುದೇ ವಾಹನಗಳಿಗೆ ಹಾನಿಯಾಗಿಲ್ಲ ಹಾಗೂ ವಾಹನ ಸಂಚಾರಕ್ಕೂ ತೊಂದರೆ ಉಂಟಾಗಿಲ್ಲ.

ಇತ್ತೀಚೆಗಷ್ಟೇ ಮುಂಗಾರು ಮಳೆಗಾಲ ಆರಂಭಗೊಂಡಿದ್ದು, ಇನ್ನೂ ಮೂರು ತಿಂಗಳ ಕಾಲ ಮಳೆ ಆರ್ಭಟಿಸುವ ಸಂದರ್ಭದಲ್ಲಿ ಚಾರ್ಮಾಡಿ ಘಾಟ್ ಸೇರಿದಂತೆ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಹಾಗೂ ಗುಡ್ಡ ಕುಸಿತದ ಭೀತಿ ಎದುರಾಗಿದೆ.

ಎರಡು ದಿನಗಳ ಹಿಂದಷ್ಟೇ ಚಿಕ್ಕಮಗಳೂರು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಚಾರ್ಮಾಡಿ ಘಾಟ್‌ನ ಸಂಭವನೀಯ ಭೂಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಅದರ ಬೆನ್ನಲ್ಲೇ ಇದೀಗ ಸಣ್ಣ ಪ್ರಮಾಣದಲ್ಲಿ ಕಲ್ಲುಗಳು ಜರಿದಿರುವುದು ಆತಂಕಕ್ಕೆ ಕಾರಣವಾಗಿದೆ. ಮಳೆಗಾಲದಲ್ಲಿ ಚಾರ್ಮಾಡಿ ಘಾಟ್ ಮೂಲಕ ಸಂಚರಿಸುವ ವಾಹನ ಸವಾರರು ಎಚ್ಚರಿಕೆಯಿಂದ ಪ್ರಯಾಣಿಸಬೇಕಿದೆ.

ಅಮಿತ್ ಶಾ ಭೇಟಿ ಮಾಡಿದ ಸಿಎಂ ಡಿಕೆಶಿ: ಪ್ರಮುಖ ವಿಷಯಗಳ ಚರ್ಚೆ

The post ಚಾರ್ಮಾಡಿ ಘಾಟಿಯಲ್ಲಿ ಗುಡ್ಡದಿಂದ ಕಲ್ಲುಗಳ ಕುಸಿತ appeared first on Samyukta Karnataka.

ಲಂಚ ಬೇಡಿಕೆ: ಇಬ್ಬರು ಸರ್ಕಾರಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ
ಜಮೀನಿನ ಸ್ಕೆಚ್‌ಗಾಗಿ ₹20 ಸಾವಿರ ಬೇಡಿಕೆ; ₹15 ಸಾವಿರ ಲಂಚ ಪಡೆಯುವಾಗ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇಬ್ಬರು ಸರ್ಕಾರಿ ಸಿಬ್ಬಂದಿ ಬಂಧನ

ಚಿಕ್ಕಮಗಳೂರು: ಜಮೀನಿನ ಸ್ಕೆಚ್ ತಯಾರಿಸುವ ಕೆಲಸಕ್ಕಾಗಿ ರೈತನೊಬ್ಬರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಮೂಡಿಗೆರೆ ಕಚೇರಿಯ ಇಬ್ಬರು ಸರ್ಕಾರಿ ಸಿಬ್ಬಂದಿಯನ್ನು ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಬೀಳಿಸಿ ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಬಂಧಿತರನ್ನು ಎಡಿಎಲ್ಆರ್ (Assistant Director of Land Records) ಮಂಜೇಶ್ ಹಾಗೂ ಕೇಸ್ ವರ್ಕರ್ ಸುಮಾ ಎಂದು ಗುರುತಿಸಲಾಗಿದೆ. ಜಮೀನಿನ ಸ್ಕೆಚ್ ತಯಾರಿಕೆ ಮತ್ತು ಸಂಬಂಧಿತ ದಾಖಲೆಗಳ ಪ್ರಕ್ರಿಯೆ ಪೂರ್ಣಗೊಳಿಸುವುದಕ್ಕಾಗಿ ರೈತರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಇವರ ವಿರುದ್ಧ ಕೇಳಿಬಂದಿದೆ.

ಇದನ್ನೂ ಓದಿ: ಲಂಚ ಪಡೆಯುತ್ತಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

ರೈತನಿಂದ ₹20 ಸಾವಿರ ಲಂಚಕ್ಕೆ ಬೇಡಿಕೆ : ಮೂಲಗಳ ಪ್ರಕಾರ, ಮೂಡಿಗೆರೆ ತಾಲ್ಲೂಕಿನ ರೈತ ಡಿ.ಡಿ. ಮಂಜುನಾಥ್ ಅವರ ಜಮೀನಿನ ಸ್ಕೆಚ್ ತಯಾರಿಸುವ ಕಾರ್ಯಕ್ಕೆ ಸಂಬಂಧಿಸಿದಂತೆ ಎಡಿಎಲ್ಆರ್ ಮಂಜೇಶ್ ಹಾಗೂ ಕೇಸ್ ವರ್ಕರ್ ಸುಮಾ ಅವರು ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಸರ್ಕಾರಿ ಕೆಲಸಕ್ಕೆ ಅನಗತ್ಯ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿದ ರೈತರು ಈ ಬಗ್ಗೆ ಲೋಕಾಯುಕ್ತ ಅಧಿಕಾರಿಗಳ ಮೊರೆ ಹೋಗಿದ್ದರು.

ಲೋಕಾಯುಕ್ತರಿಗೆ ದೂರು : ಲಂಚದ ಬೇಡಿಕೆಯಿಂದ ಬೇಸತ್ತ ರೈತ ಡಿ.ಡಿ. ಮಂಜುನಾಥ್ ಅವರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ದೂರಿನ ಪರಿಶೀಲನೆ ನಡೆಸಿದ ಅಧಿಕಾರಿಗಳು ಆರೋಪದ ಬಗ್ಗೆ ಪ್ರಾಥಮಿಕ ಮಾಹಿತಿ ಸಂಗ್ರಹಿಸಿ, ದಾಳಿ ನಡೆಸಲು ಯೋಜನೆ ರೂಪಿಸಿದರು.

ಇದನ್ನೂ ಓದಿ: ಅಕ್ರಮಗಳಿಗೆ ಸಾಥ್ ಆರೋಪ: CPI ವಿರುದ್ಧ ಅಮಾನತು ಆದೇಶ

₹15 ಸಾವಿರ ಸ್ವೀಕರಿಸುವಾಗ ಬಲೆ: ಲೋಕಾಯುಕ್ತ ಅಧಿಕಾರಿಗಳು ರೂಪಿಸಿದ ಕಾರ್ಯಾಚರಣೆಯಂತೆ ಇಂದು ಇಬ್ಬರು ಸಿಬ್ಬಂದಿ ₹15 ಸಾವಿರ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಲಾಯಿತು. ಹಣ ಪಡೆಯುತ್ತಿದ್ದ ಸಂದರ್ಭದಲ್ಲೇ ಅಧಿಕಾರಿಗಳು ಅವರನ್ನು ರೆಡ್‌ಹ್ಯಾಂಡ್ ಆಗಿ ಹಿಡಿದು ಬಂಧಿಸಿದರು. ಈ ಕಾರ್ಯಾಚರಣೆಯಲ್ಲಿ ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

DYSP ತಿರುಮಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ: ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ಅವರ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಲೋಕಾಯುಕ್ತ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ತಂಡ ಭಾಗವಹಿಸಿತ್ತು. ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.

ಇದನ್ನೂ ಓದಿ: ಬೆಳ್ಳಂಬೆಳಗ್ಗೆ ರೌಡಿಶೀಟರ್‌ಗಳಿಗೆ ಶಾಕ್: ಅಕ್ರಮ ಚಟುವಟಿಕೆಗಳಿಗೆ ಖಡಕ್ ಎಚ್ಚರಿಕೆ

ಘಟನೆ ಸಂಬಂಧ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಂಚದ ಬೇಡಿಕೆಯ ಹಿಂದೆ ಇನ್ನಾವುದೇ ಅಂಶಗಳಿವೆಯೇ ಎಂಬುದರ ಕುರಿತು ತನಿಖೆ ಮುಂದುವರಿದಿದೆ. ಜೊತೆಗೆ ಸರ್ಕಾರಿ ಕೆಲಸಗಳಿಗಾಗಿ ಸಾರ್ವಜನಿಕರಿಂದ ಅಕ್ರಮವಾಗಿ ಹಣ ವಸೂಲಿ ಮಾಡಿರುವ ಬಗ್ಗೆ ಇತರೆ ದೂರುಗಳಿವೆಯೇ ಎಂಬುದನ್ನೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಈ ಘಟನೆ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಇಲಾಖೆ ಕೈಗೊಳ್ಳುತ್ತಿರುವ ನಿರಂತರ ಕಾರ್ಯಾಚರಣೆಗಳ ಮತ್ತೊಂದು ಉದಾಹರಣೆಯಾಗಿದ್ದು, ಸಾರ್ವಜನಿಕರಿಂದ ಲಂಚದ ಬೇಡಿಕೆ ಎದುರಾದರೆ ನಿರ್ಭಯವಾಗಿ ದೂರು ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಟೆಸ್ಟ್‌ನಲ್ಲಿ ಮಿಂಚಿದ ಮಾನವ್ ಸುತಾರ್‌ಗೆ ಕೌಂಟಿ ಕ್ರಿಕೆಟ್‌ನಲ್ಲಿ ಅವಕಾಶ

The post ಲಂಚ ಬೇಡಿಕೆ: ಇಬ್ಬರು ಸರ್ಕಾರಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ appeared first on Samyukta Karnataka.

ಕಾಂಗ್ರೆಸ್‌ಗೆ ಸಿದ್ದು ಕರೆತರಲು ಡಿಕೆಶಿ ಪಾತ್ರ ದೊಡ್ಡದು
ಕಡೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಒಕ್ಕಲಿಗ ಸಮಾಜಕ್ಕೆ ಮುಖ್ಯಮಂತ್ರಿ ಸ್ಥಾನ ಅವಕಾಶ ನೀಡಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರುವಲ್ಲಿ ಡಿ.ಕೆ. ಶಿವಕುಮಾರ್ ಪಾತ್ರವೇ ಹೆಚ್ಚಿನದು ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಸೋನಿಯಾ ಗಾಂಧಿಯವರಿಗೆ ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಲಾಭವೇನು ಎಂಬುದರ ಬಗ್ಗೆ ವಿವರವಾಗಿ ತಿಳಿಸಿದ್ದರು, ಒಕ್ಕಲಿಗ ಮುಖಂಡರು ಸಿದ್ದರಾಮಯ್ಯನವರಿಗೆ ಬೆಂಬಲ ನೀಡಿದ್ದರು, ಈಗ ಒಕ್ಕಲಿಗರಿಗೆ ಮುಖ್ಯಮಂತ್ರಿ ಸ್ಥಾನ ನೀಡುತ್ತಿರುವುದು ಸಾಮರಸ್ಯದ ರಾಜಕಾರಣ ಆಗಲಿದೆ ಎಂದರು.

ಪ್ರಜಾಪ್ರಭುತ್ವದಲ್ಲಿ ಇದ್ದೇವೆ ಯಾವುದೇ ಒಂದು ಜಾತಿಯ ಮತಗಳಿಂದ ಗೆಲ್ಲಲು ಸಾಧ್ಯವಿಲ್ಲ, ಎಲ್ಲಾ ಜಾತಿ ಜನಾಂಗ ಎಲ್ಲ ಧರ್ಮದವರ ಸಹಕಾರದಿಂದ ಮಾತ್ರ ಗೆಲ್ಲಲು ಸಾಧ್ಯ. ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯನವರಿಗೆ ಯಾವುದೇ ಜವಾಬ್ದಾರಿ ನೀಡಿದರೂ ಅವರು ಸಮರ್ಥವಾಗಿ ನಿಭಾಯಿಸುತ್ತಾರೆ, ಜನರ ಜೊತೆಯಲ್ಲಿ ಬೆರೆಯುವ ಪಕ್ಷಗಳು ಎಂದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು, ಜನರ ಜೊತೆಯಲ್ಲಿ ಬೆರೆಯದ ಪಕ್ಷ ಬಿಜೆಪಿ ಧರ್ಮ, ಜಾತಿಯ ಹೆಸರಿನಲ್ಲಿ ರಾಜಕೀಯ ಮಾಡುತ್ತಾರೆ, ಜನತೆ ಇವರಿಗೆ ಲೆಕ್ಕಕ್ಕಿಲ್ಲ. ಅಕ್ಷರ, ಅನ್ನ ಜನರಿಗೆ ಅವಶ್ಯ, ಧರ್ಮವನ್ನು ಇಟ್ಟುಕೊಂಡು ಇನ್ನೂ ಎಷ್ಟು ದಿನ ರಾಜಕಾರಣ ಮಾಡುತ್ತೀರಿ. ಜನರ ಜೊತೆಯಲ್ಲಿ ಬೆರೆಯುವುದನ್ನು ರೂಢಿಸಿಕೊಳ್ಳುವಂತೆ ಸಲಹೆ ನೀಡಿದರು.

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

The post ಕಾಂಗ್ರೆಸ್‌ಗೆ ಸಿದ್ದು ಕರೆತರಲು ಡಿಕೆಶಿ ಪಾತ್ರ ದೊಡ್ಡದು appeared first on Samyukta Karnataka.