ಕೊಡಗು Archives - Samyukta Karnataka

ಕೊಡಗಿನ ಕಾಫಿ ತೋಟದಲ್ಲಿ ಕಾಡಾನೆ ಶವ ಪತ್ತೆ
ಕೊಡಗು: ಕೊಡಗು ಜಿಲ್ಲೆಯ ಕಕ್ಕಬೆ ಸಮೀಪದ ನಾಲಡಿ ಗ್ರಾಮದಲ್ಲಿ ಕಾಫಿ ತೋಟವೊಂದರಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ತೋಟದಲ್ಲಿ ಕೆಲಸಕ್ಕೆ ಬಂದ ಕಾರ್ಮಿಕರು ಬೆಳಿಗ್ಗೆ ಆನೆಯ ಮೃತದೇಹವನ್ನು ಗಮನಿಸಿ ತೋಟದ ಮಾಲೀಕರಿಗೆ ಮಾಹಿತಿ ನೀಡಿದ್ದು, ಬಳಿಕ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಘಟನೆ ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ನಡೆದಿದ್ದು, ಪರದಂಡ ಡಾಲಿ ಅವರಿಗೆ ಸೇರಿದ ಕಾಫಿ ತೋಟದಲ್ಲಿ ಕಾಡಾನೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಇದನ್ನೂ ಓದಿ: ‘ಸಿನಿಮಾ ಎಲ್ಲಕ್ಕಿಂತ ದೊಡ್ಡದು’: ‘ಕರಾವಳಿ’ ವಿವಾದದ ಬಗ್ಗೆ ರಾಜ್ ಬಿ. ಶೆಟ್ಟಿ ಬೇಸರ

ಕಾರ್ಮಿಕರಿಗೆ ಕಂಡುಬಂದ ಮೃತದೇಹ : ಮಂಗಳವಾರ ಬೆಳಿಗ್ಗೆ ಎಂದಿನಂತೆ ಕಾಫಿ ತೋಟದಲ್ಲಿ ಕೆಲಸ ಆರಂಭಿಸಿದ ಕಾರ್ಮಿಕರು ತೋಟದ ಒಳಭಾಗದಲ್ಲಿ ಕಾಡಾನೆ ಅಚಲವಾಗಿ ಬಿದ್ದಿರುವುದನ್ನು ಕಂಡಿದ್ದಾರೆ. ಹತ್ತಿರ ಹೋಗಿ ಪರಿಶೀಲಿಸಿದಾಗ ಆನೆ ಮೃತಪಟ್ಟಿರುವುದು ದೃಢಪಟ್ಟಿದ್ದು, ತಕ್ಷಣವೇ ತೋಟದ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ಮಾಲೀಕರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಕೊಡಗು ಜಿಲ್ಲೆಯ ಕಕ್ಕಬೆ ಸಮೀಪದ ನಾಲಡಿ ಗ್ರಾಮದ ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ತೋಟದ ಕಾರ್ಮಿಕರು ಮಾಹಿತಿ ನೀಡಿದ ಬಳಿಕ ಅರಣ್ಯ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಾವಿನ ನಿಖರ ಕಾರಣ ತಿಳಿಯಲು ತನಿಖೆ ಆರಂಭಿಸಲಾಗಿದೆ.https://t.co/GmmTOMlroM pic.twitter.com/tItv4T8d6G
— Samyukta Karnataka (@SamyuktaKarnatk) July 7, 2026

ಸಾವಿನ ಕಾರಣ ಇನ್ನೂ ನಿಗೂಢ : ಪ್ರಾಥಮಿಕ ಪರಿಶೀಲನೆಯಲ್ಲಿ ಕಾಡಾನೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಅನಾರೋಗ್ಯ, ವಿದ್ಯುತ್ ಸ್ಪರ್ಶ, ವಿಷಪ್ರಾಶನ ಅಥವಾ ಇನ್ನಾವುದೇ ಕಾರಣದಿಂದ ಸಾವು ಸಂಭವಿಸಿತೇ ಎಂಬ ಎಲ್ಲಾ ಆಯಾಮಗಳಲ್ಲಿ ಅರಣ್ಯ ಇಲಾಖೆ ತನಿಖೆ ನಡೆಸುತ್ತಿದೆ. ಪಶುವೈದ್ಯರ ತಂಡದಿಂದ ಮರಣೋತ್ತರ ಪರೀಕ್ಷೆ (ಪೋಸ್ಟ್‌ಮಾರ್ಟಂ) ನಡೆಸಿದ ಬಳಿಕವೇ ಸಾವಿನ ನಿಖರ ಕಾರಣ ಬಹಿರಂಗವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಕಾಕ್ರೋಚ್ ಪಕ್ಷದ ‘X’ ಖಾತೆ ತಡೆ ಆದೇಶ ರದ್ದುಗೊಳಿಸಿದ ದೆಹಲಿ ಹೈಕೋರ್ಟ್

ಅರಣ್ಯ ಇಲಾಖೆ ಪರಿಶೀಲನೆ : ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾಫಿ ತೋಟದ ಸುತ್ತಮುತ್ತ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿರುವ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು, ಆನೆಯ ವಯಸ್ಸು, ಆರೋಗ್ಯ ಸ್ಥಿತಿ ಹಾಗೂ ಸಾವಿಗೆ ಕಾರಣವಾದ ಅಂಶಗಳ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಅಧಿಕಾರಿಗಳು ಸ್ಥಳೀಯರಿಂದಲೂ ಮಾಹಿತಿ ಪಡೆದು ಪ್ರಕರಣದ ಎಲ್ಲಾ ಆಯಾಮಗಳನ್ನು ಪರಿಶೀಲಿಸುತ್ತಿದ್ದಾರೆ.

ಕೊಡಗಿನಲ್ಲಿ ಹೆಚ್ಚುತ್ತಿರುವ ಮಾನವ-ಕಾಡಾನೆ ಸಂಘರ್ಷ : ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಕಾಡಾನೆಗಳ ಓಡಾಟ ಹೆಚ್ಚಾಗಿದ್ದು, ಕಾಫಿ ತೋಟಗಳು ಹಾಗೂ ಕೃಷಿ ಜಮೀನುಗಳಿಗೆ ಆನೆಗಳು ನುಗ್ಗುವ ಘಟನೆಗಳು ಸಾಮಾನ್ಯವಾಗಿವೆ. ಇದರಿಂದ ರೈತರು ಹಾಗೂ ತೋಟದ ಮಾಲೀಕರು ಆತಂಕದಲ್ಲಿದ್ದಾರೆ.

ಇದನ್ನೂ ಓದಿ: ‘PDO ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ’– ಡೆತ್‌ನೋಟ್‌ನಲ್ಲಿ ಆರೋಪ

ಇದೇ ವೇಳೆ ಕಾಡಾನೆಗಳ ಸಾವಿನ ಪ್ರಕರಣಗಳೂ ಹೆಚ್ಚುತ್ತಿರುವುದು ಪರಿಸರ ಪ್ರೇಮಿಗಳ ಕಳವಳಕ್ಕೆ ಕಾರಣವಾಗಿದೆ. ಇತ್ತೀಚಿನ ಘಟನೆಗಳ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕಾಡು ಪ್ರಾಣಿಗಳ ಸುರಕ್ಷತೆ ಹಾಗೂ ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಹೆಚ್ಚಿನ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ವಯನಾಡ್‌ನಲ್ಲಿ ಮತ್ತೆ ಭೂಕುಸಿತ : ಹಲವರು ಸಿಲುಕಿರುವ ಶಂಕೆ

The post ಕೊಡಗಿನ ಕಾಫಿ ತೋಟದಲ್ಲಿ ಕಾಡಾನೆ ಶವ ಪತ್ತೆ appeared first on Samyukta Karnataka.

ಮಡಿಕೇರಿ: ಆಟವಾಡುವ ವೇಳೆ LED ಬಲ್ಬ್ ನುಂಗಿದ 8 ತಿಂಗಳ ಮಗು
ಮಡಿಕೇರಿ: ಎಂಟು ತಿಂಗಳ ಕಂದಮ್ಮ ಎಲ್‌ಇಡಿ ಬಲ್ಬ್ ನುಂಗಿದ ಆತಂಕಕಾರಿ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ನಗರದಲ್ಲಿ ನಡೆದಿದ್ದು, ವೈದ್ಯರ ಸಮಯೋಚಿತ ಚಿಕಿತ್ಸೆಯಿಂದ ಮಗುವಿನ ಪ್ರಾಣ ಉಳಿದಿದೆ.

ಮನೆಯಲ್ಲಿದ್ದ ವೇಳೆ ಮಗು ಏಕಾಏಕಿ ವಿಪರೀತವಾಗಿ ಅಳಲು ಆರಂಭಿಸಿದೆ. ಮಗುವಿನ ಅಳುವಿನ ಕಾರಣ ತಿಳಿಯದೇ ಗಾಬರಿಗೊಂಡ ಪೋಷಕರು ತಕ್ಷಣವೇ ಮಗುವನ್ನು ಮಡಿಕೇರಿ ನಗರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರು ಮಗುವಿನ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಎಕ್ಸ್‌ರೇ ಮಾಡಿಸಿದ್ದಾರೆ. ಈ ವೇಳೆ ಮಗುವಿನ ಗಂಟಲು ಭಾಗದಲ್ಲಿ ಸಣ್ಣ ಲೋಹದ ವಸ್ತುವೊಂದು ಸಿಲುಕಿರುವುದು ಪತ್ತೆಯಾಗಿದೆ. ಆರಂಭದಲ್ಲಿ ಮಗು ಪಿನ್ ಅಥವಾ ಇತರೆ ಲೋಹದ ವಸ್ತುವನ್ನು ನುಂಗಿರಬಹುದೆಂದು ವೈದ್ಯರು ಶಂಕಿಸಿದ್ದರು.

ಇದನ್ನೂ ಓದಿ: ಕೊಪ್ಪಳದಲ್ಲಿ ಭೀಕರ ಅಪಘಾತ: ಮಂತ್ರಾಲಯ ಯಾತ್ರೆ ಹೊರಟಿದ್ದ ನಾಲ್ವರು ಸಾವು!

ಆದರೆ ಬಳಿಕ ಲ್ಯಾರಿಂಗೊಸ್ಕೋಪ್ ಪರೀಕ್ಷೆ ನಡೆಸಿದಾಗ, ಮಗುವಿನ ಗಂಟಲಲ್ಲಿ ಎಲ್‌ಇಡಿ ಬಲ್ಬ್ ಸಿಲುಕಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಇಎನ್‌ಟಿ ತಜ್ಞೆ ಡಾ. ರಾಜಶ್ರಿ ಹಾಗೂ ಮಕ್ಕಳ ತಜ್ಞ ಡಾ. ಖುಶ್ವಂತ್ ಅವರ ನೇತೃತ್ವದ ವೈದ್ಯರ ತಂಡ ಯಾವುದೇ ಶಸ್ತ್ರಚಿಕಿತ್ಸೆ ನಡೆಸದೇ ಅತ್ಯಂತ ಎಚ್ಚರಿಕೆಯಿಂದ ಬಲ್ಬ್ ಅನ್ನು ಹೊರತೆಗೆದಿದೆ.

ಆಟವಾಡುವ ಸಂದರ್ಭದಲ್ಲೇ ಮಗು ಬಲ್ಬ್ ನುಂಗಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸದ್ಯ ಮಗುವಿನ ಆರೋಗ್ಯ ಸ್ಥಿರವಾಗಿದ್ದು, ವೈದ್ಯರ ಸಮಯೋಚಿತ ಚಿಕಿತ್ಸೆ ಹಾಗೂ ಪೋಷಕರ ತಕ್ಷಣದ ಕ್ರಮದಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ.

ಪ್ರತಿಪಕ್ಷ ನಾಯಕನಾಗಿ ಎರಡು ವರ್ಷ ಪೂರೈಸಿದ ರಾಹುಲ್ ಗಾಂಧಿ

The post ಮಡಿಕೇರಿ: ಆಟವಾಡುವ ವೇಳೆ LED ಬಲ್ಬ್ ನುಂಗಿದ 8 ತಿಂಗಳ ಮಗು appeared first on Samyukta Karnataka.

ಮಡಿಕೇರಿ: ಕಾಡಾನೆ ದಾಳಿಗೆ ಐಜಿಪಿ ಪತ್ನಿ ಸಾವು
ಮಡಿಕೇರಿ: ಕಾಫಿ ತೋಟದ ವೀಕ್ಷಣೆಗೆಂದು ತೆರಳಿದ್ದ ಮಹಿಳೆಯೊಬ್ಬರು ಕಾಡಾನೆಯೊಂದರ ಹಠಾತ್ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕೊಡಗಿನ ತಿತಿಮತಿ ಬಳಿಯ ಕೋಣನಕಟ್ಟೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ನಾಗಲ್ಯಾಂಡ್ ಕೇಡರ್ ಹಿರಿಯ ಐಪಿಎಸ್ ಅಧಿಕಾರಿ ಐಜಿಪಿ ಅಣ್ಣಳಮಾಡ ಸುನೀಲ್ ಅಚ್ಚಯ್ಯ ಎಂಬವರ ಪತ್ನಿ ಸಂಧ್ಯಾ ಅಚ್ಚಯ್ಯ (51) ಮೃತಪಟ್ಟವರು. ಸಂಧ್ಯಾ ಅವರೊಟ್ಟಿಗಿದ್ದ ಇಬ್ಬರು ಕಾರ್ಮಿಕರಿಗೆ ಗಾಯಗಳಾಗಿದ್ದು ಇವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಂಧ್ಯಾ ತಮ್ಮ ಇಬ್ಬರು ಪುತ್ರಿಯರ ಜೊತೆಯಲ್ಲಿ ಬೆಂಗಳೂರಿನ ಸುಲ್ತಾನ್ ಪಾಳ್ಯದಲ್ಲಿ ವಾಸವಾಗಿದ್ದರು. ಕೋಣನಕಟ್ಟೆಗೆ ಆಗಮಿಸಿದ್ದ ಅವರು ಕಾರ್ಮಿಕರೊಂದಿಗೆ ತೋಟ ನೋಡಲೆಂದು ತೆರಳಿದ್ದ ಸಮಯ ಈ ದುರ್ಘಟನೆ ನಡೆದಿದೆ.

ದಾಳಿಗೆ ಸಿಲುಕಿ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದ ಸಂಧ್ಯಾ ಅವರನ್ನು ಆಸ್ಪತ್ರೆಗೆ ಸಾಗಿಸಲು ಯತ್ನಿಸಿದರೂ ಕರೆದೊಯ್ಯುವ ಸಮಯ ಮೃತಪಟ್ಟರು. ಅವರ ಪತಿ ಸುನೀಲ್ ಅಚ್ಚಯ್ಯ ನವದೆಹಲಿಯಲ್ಲಿ ಕರ್ತವ್ಯದಲ್ಲಿದ್ದು, ಇನ್ನಷ್ಟೇ ಆಗಮಿಸಬೇಕಾಗಿದೆ.

ಅರಬ್ಬಿ ಸಮುದ್ರಕ್ಕೆ ಹೊಸ ಬೇಟೆಗಾರ ಐಎನ್‌ಎಸ್ ಮಲ್ವಾನ್

The post ಮಡಿಕೇರಿ: ಕಾಡಾನೆ ದಾಳಿಗೆ ಐಜಿಪಿ ಪತ್ನಿ ಸಾವು appeared first on Samyukta Karnataka.

ಕೊಡಗಿನಲ್ಲಿ ಭೀಕರ ದುರಂತ: ಆನೆಗಳ ಕಾದಾಟದ ವೇಳೆ ಕಾಲ್ತುಳಿತಕ್ಕೆ ಸಿಲುಕಿ ಪ್ರವಾಸಿ ಮಹಿಳೆ ದುರ್ಮರಣ
ಕೊಡಗು: ಪ್ರಕೃತಿಯ ಸೌಂದರ್ಯವನ್ನು ಆಸ್ವಾದಿಸಲು ಕುಟುಂಬದೊಂದಿಗೆ ಆಗಮಿಸಿದ್ದ ಪ್ರವಾಸಿ ಮಹಿಳೆಯೊಬ್ಬರು ಆನೆಗಳ ನಡುವಿನ ಭೀಕರ ಕಾದಾಟದ ವೇಳೆ ಕಾಡಾನೆಯ ಕಾಲ್ತುಳಿತಕ್ಕೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ದೈನಂದಿನ ಜಂಜಾಟಗಳಿಂದ ದೂರ ಸರಿದು, ಪ್ರಕೃತಿಯ ಮಡಲಲ್ಲಿ ನಾಲ್ಕು ದಿನ ನೆಮ್ಮದಿಯಿಂದ ಕಳೆಯೋಣ ಎಂದು ಬಂದಿದ್ದ ಕರಾವಳಿ ಮೂಲದ ಕುಟುಂಬವೊಂದು ವಿಧಿಯ ಕ್ರೂರ ಆಟಕ್ಕೆ ತುತ್ತಾಗಿದೆ. ಮೃತ ಮಹಿಳೆ ತನ್ನ ಪತಿ ಹಾಗೂ ಆರು ವರ್ಷದ ಪುಟ್ಟ ಹೆಣ್ಣು ಮಗಳೊಂದಿಗೆ ಕೊಡಗು ಪ್ರವಾಸಕ್ಕೆ ಬಂದಿದ್ದರು ಎನ್ನಲಾಗಿದೆ.

ಸ್ಥಳೀಯ ಆನೆಗಳ ಕ್ಯಾಂಪ್‌ನಲ್ಲಿ ಆನೆಗಳಿಗೆ ಸ್ನಾನ ಮಾಡಿಸುವ ಪ್ರಕ್ರಿಯೆಯನ್ನು ವೀಕ್ಷಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕ್ಯಾಂಪ್‌ನಲ್ಲಿದ್ದ ಆನೆಗಳ ಆಟವನ್ನು ಕಂಡು ಪ್ರವಾಸಿಗರೆಲ್ಲಾ ಸಂಭ್ರಮಿಸುತ್ತಿದ್ದ ಕ್ಷಣದಲ್ಲೇ, ಇದ್ದಕ್ಕಿದ್ದಂತೆ ಆನೆಗಳ ನಡುವೆ ಭೀಕರ ಜಗಳ ಆರಂಭವಾಗಿದೆ. ಮದವೇರಿದ ದೈತ್ಯ ಜೀವಿಗಳ ಆರ್ಭಟ ಮತ್ತು ಘರ್ಜನೆಗೆ ಇಡೀ ಆವರಣವೇ ನಡುಗಿದ್ದು, ಸುತ್ತಲೂ ನೆರೆದಿದ್ದ ಸಾರ್ವಜನಿಕರು ಪ್ರಾಣಭಯದಿಂದ ದಿಕ್ಕಾಪಾಲಾಗಿ ಓಡಲಾರಂಭಿಸಿದರು. ಈ ವೇಳೆ ಉಂಟಾದ ಗೊಂದಲದಲ್ಲಿ ಮಹಿಳೆ ಆನೆಯ ಮುಸ್ಠಿಗೆ ಸಿಲುಕಿದ್ದಾರೆ.

ಕಾಡಾನೆಗಳ ಕಾದಾಟದ ತೀವ್ರತೆಗೆ ಸಿಲುಕಿದ ಅಮಾಯಕ ಮಹಿಳೆಯನ್ನು ಆನೆಯೊಂದು ಭೀಕರವಾಗಿ ತುಳಿದಿದೆ. ಪತಿ ಮತ್ತು ಆರು ವರ್ಷದ ಪುಟ್ಟ ಕಂದಮ್ಮನ ಕಣ್ಣೆದುರೇ ಮಹಿಳೆ ರಕ್ತದ ಮಡುವಿನಲ್ಲಿ ಜೀವ ಬಿಟ್ಟಿದ್ದು, ಸ್ಥಳದಲ್ಲಿದ್ದವರ ಕರುಳು ಹಿಂಡುವಂತಿತ್ತು. ಕಣ್ಣೆದುರೇ ಹೆಂಡತಿ ಹಾಗೂ ಹೆತ್ತ ಕರುಳು ಕೊನೆಯುಸಿರೆಳೆದಾಗ ಆ ಕುಟುಂಬ ಅನುಭವಿಸಿದ ನರಕಯಾತನೆ ಅಷ್ಟಿಷ್ಟಲ್ಲ. ಸಂತೋಷದಿಂದ ನಲಿಯಬೇಕಾಗಿದ್ದ ಪುಟ್ಟ ಮಗಳ ಕಣ್ಣುಗಳು ಭೀತಿಯಿಂದ ನಿಬ್ಬೆರಗಾಗಿದ್ದು, ಪ್ರೀತಿಯ ಸಂಸಾರದಲ್ಲಿ ಈಗ ಕತ್ತಲು ಆವರಿಸಿದೆ.

ನೆಮ್ಮದಿ ಅರಸಿ ಬಂದ ಜಾಗದಲ್ಲೇ ಪ್ರಾಣಪಕ್ಷಿ ಹಾರಿಹೋಗಿದ್ದು, ಇಡೀ ಕೊಡಗು ಜಿಲ್ಲೆಯನ್ನು ಈ ಘಟನೆ ಕಣ್ಣೀರಲ್ಲಿ ಮುಳುಗಿಸಿದೆ. ಪ್ರಕೃತಿಯ ವಿಸ್ಮಯವನ್ನು ಸವಿಯಲು ಹೋದವರು ಇಂದು ಕೇವಲ ನೆನಪಾಗಿ ಉಳಿಯುವಂತಾಗಿದೆ. ಸದ್ಯ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರವಾಸಿಗರ ಸುರಕ್ಷತೆಯ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

The post ಕೊಡಗಿನಲ್ಲಿ ಭೀಕರ ದುರಂತ: ಆನೆಗಳ ಕಾದಾಟದ ವೇಳೆ ಕಾಲ್ತುಳಿತಕ್ಕೆ ಸಿಲುಕಿ ಪ್ರವಾಸಿ ಮಹಿಳೆ ದುರ್ಮರಣ appeared first on Samyukta Karnataka.

ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡ ಶ್ರೀಮಂತಗೊಳಿಸಿವೆ
ಬೆಂಗಳೂರು: ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಇವರ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ 2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಜಂಬರ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

ಅರೆಭಾಷಿಕರದ್ದು ವಿಭಿನ್ನ ಸಂಸ್ಕೃತಿ: ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಅರೆಭಾಷೆ ಗೌಡರು ಹೆಚ್ಚಾಗಿ ವಾಸಿಸುತ್ತಿದ್ದು, ಇವರ ಜನಸಂಖ್ಯೆ ಮೂರು ಲಕ್ಷಕ್ಕೂ ಹೆಚ್ಚಿದೆ. 1882ನೇ ಗೆಜೆಟ್ ಬಂದಾಗ ಸಕಲೇಶಪುರದಲ್ಲಿದ್ದು, ಬರಗಾಲದ ಸಂದರ್ಭದಲ್ಲಿ ಹೇಮಾವತಿ ನದಿ ಬತ್ತಿದಾಗ ಪಕ್ಕದ ಜಿಲ್ಲೆ ಸುಳ್ಯಕ್ಕೆ ಬಂದು ನೆಲೆಯೂರುತ್ತಾರೆ. ತುಳು, ಕೊಂಕಣಿ ಜೊತೆಗೆ ಕನ್ನಡ ಸೇರಿ ಅರೆಭಾಷೆಯಾಗಿದೆ. ಹೋಗುತ್ತೇನೆ ಎನ್ನುವುದು ವೋನೆ, ಬರುತ್ತೇನೆ ಎನ್ನುವುದು ಬನೇ ಎಂದು ಹೇಳುತ್ತಾರೆ. ಹೀಗೆ ಕೆಲವು ಅಕ್ಷರಗಳು ಬಿಟ್ಟುಹೋಗಿ ಅರೆಭಾಷೆಯಾಗಿದೆ ಎಂದರು. ಮೂಲತಃ ಗೌಡ ಸಮುದಾಯಕ್ಕೆ ಸೇರಿರುವ ಇವರನ್ನು ಅರೆಭಾಷೆ ಗೌಡರು ಎನ್ನುತ್ತಾರೆ. ಅರೆಭಾಷಿಕರದ್ದು ವಿಭಿನ್ನ ಸಂಸ್ಕೃತಿಯಾಗಿದೆ ಎಂದರು.

ಕರ್ನಾಟಕದಲ್ಲಿ 230 ಸಣ್ಣ ಭಾಷೆಗಳಿವೆ: ಅರೆಭಾಷಿಕರಾಗಿದ್ದ ಕುರುಂಜಿ ವೆಂಕಟರಮಣಗೌಡರು, ನನಗೆ ಪರಿಚಿತರು ಎಂದು ಸ್ಮರಿಸಿದ ಮುಖ್ಯಮಂತ್ರಿಗಳು ಕರ್ನಾಟಕದಲ್ಲಿ 230 ಸಣ್ಣ ಭಾಷೆಗಳಿವೆ. ಇವೆಲ್ಲವೂ ಕನ್ನಡದಿಂದಲೇ ಹುಟ್ಟಿದ್ದು, ಅರೆಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಅಕಾಡೆಮಿ ಮಾಡಲಿ ಎಂದರು.

50 ಲಕ್ಷ ರೂ. ಬೇಡಿಕೆ ಈಡೇರಿಕೆಯ ಭರವಸೆ: ಭಾಗಮಂಡಲದಲ್ಲಿ ನಾಡಗೌಡ ಸಮುದಾಯಕ್ಕೆ ಒಂದು ಕೋಟಿ ರೂ. ಗಳನ್ನು ಹಿಂದೆ ಒದಗಿಸಲಾಗಿತ್ತು. ಪ್ರಸ್ತುತ 50 ಲಕ್ಷ ರೂ. ಬೇಡಿಕೆಯನ್ನು ಈಡೇರಿಸಲಾಗುವುದು. ಇತರೆ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ಕೊಡಬೇಕೆನ್ನುವ ಪ್ರಸ್ತಾವನೆ ಇದ್ದು, ಇದನ್ನು ಈಡೇರಿಸಲಾಗುವುದು ಎಂದು ಭರವಸೆಯಿತ್ತರು.

ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿಗೆ ಭಾಜನರಾದ ಕೆ.ಆರ್. ಗಂಡಾಧಾರ, ಯು.ಪಿ. ಶಿವಾನಂದ ಹಾಗೂ ಡಿ.ಎಸ್. ಆನಂದ ಅವರಿಗೆ ಸರ್ಕಾರದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಿದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಭೈರತಿ ಸುರೇಶ್, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಶಾಸಕ ಅಂತರಗೌಡ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಗಾಯತ್ರಿ ಇದ್ದರು.

The post ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡ  ಶ್ರೀಮಂತಗೊಳಿಸಿವೆ appeared first on Samyukta Karnataka.

ಕೊಡಗು: ಕನ್ನಡ ನಾಮಫಲಕ ಶೇ.60 ರಷ್ಟು ಕಡ್ಡಾಯ
ಕೊಡಗು ಜಿಲ್ಲೆಯಲ್ಲಿರುವ ಎಲ್ಲಾ ಅಂಗಡಿ, ಹೋಟೆಲ್, ವಾಣಿಜ್ಯ ಸಂಕೀರ್ಣ, ಕೈಗಾರಿಕೋದ್ಯಮ, ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳು ಹಾಗೂ ಪ್ರವಾಸೋದ್ಯಮ ಕೇಂದ್ರಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ.

ಜಿಲ್ಲಾಧಿಕಾರಿ ವೆಂಕಟ್ ರಾಜಾ ಈ ಕುರಿತು ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಸಂಬಂಧ ಸರ್ಕಾರದ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಈ ಸಂಬಂಧ ತಮ್ಮ ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ(ತಿದ್ದುಪಡಿ, ವಿದೇಯಕ, 2024 ಈ ಸಂಬಂಧ ಫೆಬ್ರವರಿ, 25ರಂದು ರಾಜ್ಯಪಾಲರಿಂದ ಒಪ್ಪಿಗೆ ದೊರೆತಿದ್ದು, ಜಿಲ್ಲೆಯ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ಯಮಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಇರಲೇಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ, ಮಂಜೂರಾತಿ ಪಡೆದ ಎಲ್ಲಾ ಸಂಸ್ಥೆಗಳಿಗೂ ಈ ಕಾಯ್ದೆ ಅನ್ವಯವಾಗಲಿದೆ. ಖಾಸಗಿ ಶಾಲಾ ಕಾಲೇಜುಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನರಂಜನಾ ಕೇಂದ್ರಗಳು, ಹೋಟೆಲ್ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ನಾಮಫಲಕಗಳ ಮೇಲ್ಬಾಗದಲ್ಲಿ ಕನ್ನಡಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸಬೇಕು/ ಬರೆಸಿರಬೇಕು ಎಂದರು.

ಜಿಲ್ಲೆಯ ಗಡಿ ಪ್ರದೇಶಗಳು, ಖಾಸಗಿ ಶಾಲೆಗಳಲ್ಲಿ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡಬೇಕು. ಈ ಕಾರ್ಯ ಆಗದಿದ್ದಲ್ಲಿ ಪ್ರಥಮ ಹಂತದಲ್ಲಿ 5 ಸಾವಿರ, ಎರಡನೇ ಹಂತದಲ್ಲಿ 10 ಸಾವಿರ ದಂಡ ಪಾವತಿಸಬೇಕಾಗುತ್ತದೆ. ನಂತರ ಪರವಾನಿಗೆಯನ್ನು ರದ್ದು ಪಡಿಸಲಾಗುತ್ತದೆ. ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಆನಂದ್ ಪ್ರಕಾಶ್ ಮೀನಾ ಸ್ಥಳೀಯ ಸಂಸ್ಥೆ ವ್ಯಾಪ್ತಿಯ ನಾಮಫಲಕಗಳಲ್ಲಿ ಕನ್ನಡ ಭಾಷೆ ಬಳಕೆ ಅನುಷ್ಠಾನ ಬಗ್ಗೆ ಹಲವು ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದೇಶಕರಾದ ಕುಮಾರ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಅನುಷ್ಠಾನ ಬಗ್ಗೆ ವಿವರಿಸಿದರು.

The post ಕೊಡಗು: ಕನ್ನಡ ನಾಮಫಲಕ ಶೇ.60 ರಷ್ಟು ಕಡ್ಡಾಯ appeared first on Samyukta Karnataka.

ಜಾತಿಗಣತಿ: ಕೊಡಗಿನಲ್ಲಿ ಶೇ 77ರಷ್ಟು ಸಮೀಕ್ಷೆ ಪೂರ್ಣ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ಸೆಪ್ಟೆಂಬರ್ 22ರಂದು ಪ್ರಾರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಮೀಕ್ಷೆಯನ್ನು ಅಕ್ಟೋಬರ್ 18ರ ತನಕ ವಿಸ್ತರಣೆ ಮಾಡಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಸಮೀಕ್ಷೆಯಲ್ಲಿ ಶೇ.77.86 ರಷ್ಟು ಪ್ರಗತಿಯಾಗಿದೆ. ಜಿಲ್ಲೆಯ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸುವ ಕಾರ್ಯವು ಜಿಲ್ಲೆಯಾದ್ಯಂತ ನಡೆಯುತ್ತಿದೆ ಎಂದು ಜಿಲ್ಲಾಡಳಿತ ಹೇಳಿದೆ.

ಈಗಾಗಲೇ ಗುರುತಿಸಲಾಗಿರುವ ಎಲ್ಲಾ ಮನೆಗಳಿಗೆ ಗಣತಿದಾರರು ಭೇಟಿ ನೀಡಿ, ಗಣತಿ ಕಾರ್ಯ ನಡೆಸುತ್ತಿದ್ದು, ಸಾರ್ವಜನಿಕರು ಕೂಡ ಸ್ವಯಂ ಆಗಿ ತಮ್ಮ ಮನೆಯ ಗಣತಿ ಮಾಡಿಕೊಳ್ಳಲು ಅನುಕೂಲವಾಗುವಂತೆ ಸೌಲಭ್ಯ ಸಿದ್ಧಪಡಿಸಲಾಗಿದೆ. ಸಾರ್ವಜನಿಕರು https://kscbcselfdeclaration.karnataka.gov.in/ ನಲ್ಲಿ ಸ್ವಯಂ ಮಾಹಿತಿ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಲಿಂಕ್‍ಅನ್ನು ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಪುಟದಲ್ಲಿ ʼನಾಗರಿಕʼ ಎಂಬುದನ್ನು ಆಯ್ಕೆ ಮಾಡಿದ್ದಲ್ಲಿ ಲಾಗಿನ್‍ನಲ್ಲಿ ಮುಂದುವರೆಯಲು ಕೋರಲಾಗುತ್ತದೆ. ನಂತರದಲ್ಲಿ ತಮ್ಮ ಮೊಬೈಲ್ ಸಂಖ್ಯೆ ನೀಡಿದ್ದಲ್ಲಿ, ಒಟಿಪಿ ಬರಲಿದ್ದು, ಅದನ್ನು ದಾಖಲು ಮಾಡಬೇಕಿದೆ.

ನಂತರ ತೆರೆಯುವ ಪುಟದಲ್ಲಿ ತಮ್ಮ ಸಮೀಕ್ಷೆಯ ಸ್ಥಿತಿಗತಿ ಕುರಿತಂತೆ ನಿಮ್ಮ ಸಮೀಕ್ಷೆ ಪೂರ್ಣಗೊಂಡಿದೆ ಅಥವಾ ಬಾಕಿ ಎಂದು ಕಾಣಬಹುದಾಗಿದ್ದು, ಇದುವರೆಗೆ ಸಮೀಕ್ಷೆ ನಡೆಯದೇ ಬಾಕಿ ಇದ್ದಲ್ಲಿ, ಇನ್ನೂ ಯಾವುದೇ ಕುಟುಂಬ ಸದಸ್ಯರನ್ನು ಸೇರಿಸಿಲ್ಲ ಫಾರ್ಮ್ ಭರ್ತಿ ಮಾಡಲು ಆರಂಭಿಸಿ ಎಂಬ ಸಂದೇಶ ಕಾಣಲಿದ್ದು, ಹೊಸ ಸಮೀಕ್ಷೆ ಆರಂಭಿಸಿ ಎಂಬುದನ್ನು ಕ್ಲಿಕ್ ಮಾಡಬೇಕಿದೆ. ನಂತರದ ಪುಟದಲ್ಲಿ ಈಗಾಗಲೇ ತಮ್ಮ ಮನೆಗೆ ಅಂಟಿಸಲಾಗಿರುವ ಸ್ಟಿಕ್ಕರ್‍ನಲ್ಲಿರುವ ನಂಬರ್ ಸಂಖ್ಯೆಯನ್ನು ದಾಖಲಿಸಿ ಸ್ಕ್ರೀನ್‍ನಲ್ಲಿ ಕೋರುವ ಮಾಹಿತಿ ದಾಖಲು ಮಾಡಬೇಕಿದೆ.

ಈ ಸಮೀಕ್ಷೆಗೆ ದಾಖಲೆಗಳ ಮಾಹಿತಿ ನೀಡುವ ಅವಶ್ಯಕತೆ ಇರುವುದರಿಂದ ತಮ್ಮ ಕುಟುಂಬದ ಸದಸ್ಯರ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ವಿಕಲಚೇತನರಾಗಿದ್ದರೆ ಯುಐಡಿ ಕಾರ್ಡ್ ಅಥವಾ ಅಂಗವಿಕಲ ಪ್ರಮಾಣ ಪತ್ರದ ದಾಖಲೆಗಳನ್ನು ತೆಗೆದಿರಿಸಿಕೊಂಡು ಸುಲಭವಾಗಿ ಈ ಸಮೀಕ್ಷೆ ಕಾರ್ಯದಲ್ಲಿ ತಾವೇ ಸ್ವಯಂ ಆಗಿ ಭಾಗವಹಿಸಬಹುದಾಗಿದ್ದು, ಸಮೀಕ್ಷೆ ಯಶಸ್ವಿಯಾದ ನಂತರ ಈ ಬಗ್ಗೆ ಮೊಬೈಲ್‍ಗೆ ಸಂದೇಶ ಬರಲಿದೆ.

ಗಣತಿದಾರರು ತಮ್ಮ ಮನೆಗೆ ಬರುವವರೆಗೆ ಕಾಯದೇ ಸಾರ್ವಜನಿಕರು ತಮಗೆ ಅನುಕೂಲವಾದ ಅವಧಿಯಲ್ಲಿ ಯಾವುದೇ ಪ್ರದೇಶದಿಂದ ಸಮೀಕ್ಷೆಯಲ್ಲಿ ಭಾಗವಹಿಸಬಹುದಾಗಿದ್ದು, ತಾವೇ ತಮ್ಮ ಮಾಹಿತಿಯನ್ನು ದಾಖಲು ಮಾಡುವುದರಿಂದ, ಯಾವುದೇ ಗೊಂದಲಗಳಿಲ್ಲದೆ ನಿಖರವಾಗಿ ತಮ್ಮ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿಯನ್ನು ಸಮೀಕ್ಷೆಯಲ್ಲಿ ತಿಳಿಸಲು ಸಾಧ್ಯವಾಗಲಿದೆ.

ಕೊಡಗು ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧಿಸಿದಂತೆ 1131 ಬ್ಲಾಕ್‍ಗಳಿದ್ದು, ಇದರಲ್ಲಿ 1,34,396 ಕುಟುಂಬಗಳ ಗುರಿಯಲ್ಲಿ ಈಗಾಗಲೇ 1,04,644 ಕುಟುಂಬಗಳ ಸಮೀಕ್ಷೆ ಆಗಿದ್ದು, ಶೇ.77.86 ರಷ್ಟು ಸಮೀಕ್ಷೆ ನಡೆದಿದೆ.

ತಾಲ್ಲೂಕುವಾರು ಸಮೀಕ್ಷೆಯ ಮಾಹಿತಿಯಂತೆ ಕುಶಾಲನಗರ ತಾಲ್ಲೂಕಿನಲ್ಲಿ 304 ಬ್ಲಾಕ್‍ಗಳಲ್ಲಿ 34,637 ಕುಟುಂಬಗಳಲ್ಲಿ 26,819 ಕುಟುಂಬಗಳ ಸಮೀಕ್ಷೆ ಆಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ 264 ಬ್ಲಾಕ್‍ಗಳಲ್ಲಿ 35,127 ಕುಟುಂಬಗಳಲ್ಲಿ 25,610 ಕುಟುಂಬಗಳ ಸಮೀಕ್ಷೆ ಆಗಿದೆ. ಪೊನ್ನಂಪೇಟೆ ತಾಲ್ಲೂಕಿನಲ್ಲಿ 87 ಬ್ಲಾಕ್‍ಗಳಲ್ಲಿ 10,337 ಕುಟುಂಬಗಳಲ್ಲಿ 8,743 ಕುಟುಂಬಗಳ ಸಮೀಕ್ಷೆ ಆಗಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ 266 ಬ್ಲಾಕ್‍ಗಳಲ್ಲಿ 29,402 ಕುಟುಂಬಗಳ ಗುರಿಯಲ್ಲಿ 24,428 ಕುಟುಂಬಗಳ ಸಮೀಕ್ಷೆ ಆಗಿದೆ.

ಹಾಗೆಯೇ ವಿರಾಜಪೇಟೆ ತಾಲ್ಲೂಕಿನಲ್ಲಿ 210 ಬ್ಲಾಕ್‍ಗಳಲ್ಲಿ 24,893 ಕುಟುಂಬಗಳ ಗುರಿಯಲ್ಲಿ 19,044 ಕುಟುಂಬಗಳ ಸರ್ವೇ ಆಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎ.ಎಸ್.ದೀಪಕ್ ತಿಳಿಸಿದ್ದಾರೆ.

The post ಜಾತಿಗಣತಿ: ಕೊಡಗಿನಲ್ಲಿ ಶೇ 77ರಷ್ಟು ಸಮೀಕ್ಷೆ ಪೂರ್ಣ appeared first on Samyukta Karnataka.

ಸಾಲು-ಸಾಲು ರಜೆ: ಕೊಡಗು ಹೋಂ ಸ್ಟೇ, ರೆಸಾರ್ಟ್‌ ಮಾಲೀಕರಿಗೆ ಮಹತ್ವದ ಸೂಚನೆ
ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರ ತನಕ ದಸರಾ-2025ರ ಅಂಗವಾಗಿ ಸಾಲು-ಸಾಲು ರಜೆ ಇದೆ. ಈ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯಲ್ಲಿಯೂ ಏರಿಕೆಯಾಗಲಿದೆ. ವಿವಿಧ ಜಿಲ್ಲೆಗಳ, ದೇಶ ಹಾಗೂ ವಿದೇಶದ ಪ್ರವಾಸಿಗರು ಜಿಲ್ಲೆಗೆ ಆಗಮಿಸಲಿದ್ದಾರೆ.

ಆದ್ದರಿಂದ ಕೊಡಗು ಜಿಲ್ಲಾಡಳಿತ ಪ್ರವಾಸಿಗರು ವಾಸ್ತವ್ಯ ಹೂಡುವ ಹೋಂ-ಸ್ಟೇ/ ರೆಸಾರ್ಟ್/ ಹೋಟೆಲ್-ಲಾಡ್ಜ್‌ಗಳಲ್ಲಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮಾಲೀಕರಿಗೆ ಸೂಚನೆ ನೀಡಿದೆ. ಎಲ್ಲಾ ರೆಸಾರ್ಟ್, ಹೋಟೆಲ್, ಹೋಂ-ಸ್ಟೇ ಮಾಲೀಕರು ನಿಯಮಗಳನ್ನು ಪಾಲನೆ ಮಾಡಬೇಕು ಎಂದು ನಿರ್ದೇಶನ ಕೊಡಲಾಗಿದೆ.

ಯಾವ-ಯಾವ ನಿಯಮಗಳು

ಅತಿಥಿಗಳು ಬಂದಾಗ ರಿಜಿಸ್ಟರ್ ಪುಸ್ತಕದಲ್ಲಿ ಆಗಮಿಸಿರುವ ಎಲ್ಲ ಪ್ರವಾಸಿಗರ ಹೆಸರು, ಆಧಾರ್ ಕಾರ್ಡ್, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ವಾಹನ ಸಂಖ್ಯೆ ಪಡೆಯುವುದು ಹಾಗೂ ವಿದೇಶಿಯರು ಬಂದಾಗ ಅವರ ವೀಸಾ ಪಾಸ್ ಪೋರ್ಟ್/ ವಿಮಾನ ಟಿಕೆಟ್ ಪರಿಶೀಲಿಸಿ ರಿಜಿಸ್ಟರ್‌ನಲ್ಲಿ ಕಡ್ಡಾಯವಾಗಿ ನಮೂದಿಸತಕ್ಕದ್ದು.

ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ ಸಂಪೂರ್ಣ ಮಾಹಿತಿ ಹಾಗೂ ಮಾರ್ಗ ನಕ್ಷೆಯನ್ನು ತಿಳಿಸುವುದು ಪ್ರವಾಸಿ ತಾಣಗಳು ತೆರೆಯುವ ಹಾಗೂ ಮುಚ್ಚುವ ವೇಳೆಯನ್ನು ಪ್ರವಾಸಿಗರಿಗೆ ತಿಳಿಸುವುದು.

ಕಡ್ಡಾಯವಾಗಿ ಮಾಲೀಕರು ಸದರಿ ಕಟ್ಟಡದಲ್ಲಿ ವಾಸವಿರತಕ್ಕದ್ದು ಹಾಗೂ ಪ್ರವಾಸಿಗರ ಜೊತೆ ಅವರ ಪ್ರವಾಸ ಕುರಿತು ಚರ್ಚಿಸಿ ಸೂಕ್ತ ಮಾರ್ಗದರ್ಶನ ನೀಡುವುದು ಹಾಗೂ ಸ್ಥಳೀಯ ಪದ್ಧತಿಗಳು ಮತ್ತು ಕಾನೂನುಗಳ ಬಗ್ಗೆ ತಿಳಿಸುವುದು. ಹೊರವಲಯಗಳಲ್ಲಿ ಅಥವಾ ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರು ತೆರಳದಂತೆ ಎಚ್ಚರಿಕೆ ವಹಿಸುವುದು. ಪ್ರಥಮ ಚಿಕಿತ್ಸೆ ಪೆಟ್ಟಿಗೆ ಹಾಗೂ ಬೆಂಕಿ ನಂದಕವನ್ನು ಕಡ್ಡಾಯವಾಗಿ ಅಳವಡಿಸುವುದು.

ಕಡ್ಡಾಯವಾಗಿ ಸಿಸಿಟಿವಿ ಅಳವಡಿಸುವುದು, ಸಿಸಿಟಿವಿಯ 45 ದಿನಗಳ ಫುಟೇಜ್‌ಗಳನ್ನು ಸಂಗ್ರಹಿಸಿಟ್ಟುಕೊಳ್ಳುವುದು ಹಾಗೂ ಸಿಸಿಟಿವಿಯನ್ನು ಸರಿಯಾಗಿ ನಿರ್ವಹಿಸುವುದು. ಹಾಗೂ ‘ನೀವು ಸಿಸಿಟಿವಿ ಕಣ್ಗಾವಲಿನಲ್ಲಿರುತ್ತೀರಿ’ ಎಂಬ ಫಲಕವನ್ನು ಕಡ್ಡಾಯವಾಗಿ ಅಳವಡಿಸುವುದು.

ಯಾವುದೇ ಅಹಿತಕರ ಘಟನೆ ಅಥವಾ ತಪ್ಪುಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಹಿಸಿ ಸರ್ಕಾರದ ಗಮನಕ್ಕೆ ತರತಕ್ಕದ್ದು, ಇಲ್ಲವಾದಲ್ಲಿ ಮಾಲೀಕರನ್ನೇ ಜವಾಬ್ದಾರರನ್ನಾಗಿ ಮಾಡಿ ಕಾನೂನು ಕ್ರಮಕೈಗೊಳ್ಳುವುದು. ಯಾವುದೇ ಮಾದಕ ವಸ್ತುಗಳು ಹಾಗೂ ಮದ್ಯಪಾನ ಇತ್ಯಾದಿಗಳಿಗೆ ಅವಕಾಶ ನೀಡದಂತೆ ಕ್ರಮವಹಿಸುವುದು.

ಅಕ್ಟೋಬರ್ 1 ರಂದು ಸಂಜೆ 6 ರಿಂದ ಅಕ್ಟೋಬರ್ 3ರ ಮುಂಜಾನೆ 6ರ ತನಕ ದಸರಾ ಹಾಗೂ ಗಾಂಧಿ ಜಯಂತಿ ಇರುವ ಹಿನ್ನೆಲೆಯಲ್ಲಿ ಎಲ್ಲ ಮದ್ಯ ಮಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದ್ದು, ಈ ಕಾರಣ ಯಾವುದೇ ಮದ್ಯದ ಬಾಟಲ್‍ಗಳನ್ನು ಹಾಗೂ ಯಾವುದೇ ರೀತಿಯ ಮಾದಕ ವಸ್ತುಗಳನ್ನು ಸಂಗ್ರಹಣೆ/ ಬಳಕೆ/ ಮಾರಾಟ ಮಾಡುವಂತಿಲ್ಲ ಹಾಗೂ ಮದ್ಯಪಾನ ಮಾಡಿ ಬಂದ/ ಸಂಗ್ರಹಣೆ ಮಾಡಿಕೊಂಡ ಬಂದಂತಹ ಪ್ರವಾಸಿಗರಿಗೆ ಕೊಠಡಿಗಳನ್ನು ನೀಡಲು ನಿರಾಕರಿಸುವುದು.

ಕಡ್ಡಾಯವಾಗಿ ಒಣತ್ಯಾಜ್ಯ ಹಾಗೂ ಹಸಿ ತ್ಯಾಜ್ಯಗಳ ಸಂಗ್ರಹಣೆಗೆ ಪ್ರತ್ಯೇಕ ಕಸದ ಬುಟ್ಟಿಗಳನ್ನು ಇಡುವುದು. ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ 2 ಲೀಟರ್‌ಗಳಿಗಿಂತ ಕಡಿಮೆ ಪ್ರಮಾಣದ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿಗಳನ್ನು ನಿಷೇಧಿಸಿದ್ದು, ಅದರಂತೆ ಸೂಕ್ತ ಕ್ರಮ ವಹಿಸುವುದು.

ತುರ್ತು ಸಮಯದಲ್ಲಿ 24×7 ಕಾರ್ಯನಿರ್ವಹಿಸುವ ಜಿಲ್ಲಾಧಿಕಾರಿ ಕಚೇರಿ ಸಹಾಯವಾಣಿ ಸಂಖ್ಯೆ 08272-221077, 08272-221099, ಜಿಲ್ಲಾ ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ 9480804900, 08272-228330 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು.

The post ಸಾಲು-ಸಾಲು ರಜೆ: ಕೊಡಗು ಹೋಂ ಸ್ಟೇ, ರೆಸಾರ್ಟ್‌ ಮಾಲೀಕರಿಗೆ ಮಹತ್ವದ ಸೂಚನೆ appeared first on Samyukta Karnataka.

ಕೊಡಗು: ವಿರಾಜಪೇಟೆ, ಕುಶಾಲನಗರ ಆಸ್ಪತ್ರೆ ಕುರಿತು ಅಪ್‌ಡೇಟ್
“ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆ ಜಿಲ್ಲಾಸ್ಪತ್ರೆಯಾಗಿ, ಹುದಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿ ಹಾಗೂ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರ ತಾಲ್ಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಕೊಡಗು ಜಿಲ್ಲೆ ವಿರಾಜಪೇಟೆ ಆಸ್ಪತ್ರೆ ಹಾಗೂ ಹುದಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರ ವೀಕ್ಷಣೆ ಬಳಿಕ ಮಾತನಾಡಿದ ಅವರು, ” ಬಾರಿ ಬಜೆಟ್ ಸಂದರ್ಭದಲ್ಲಿ ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕು ಎಂದು ಪ್ರಕಟಿಸಲಾಗಿತ್ತು. ಹಾಗೆಯೇ ಪೊನ್ನಂಪೇಟೆ ಮತ್ತು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲ್ಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಉದ್ದೇಶವಾಗಿತ್ತು” ಎಂದರು.

“ವಿರಾಜಪೇಟೆಯಲ್ಲಿ 400 ಹಾಸಿಗೆ ಆಸ್ಪತ್ರೆ ನಿರ್ಮಿಸುವ ಉದ್ದೇಶವಾಗಿತ್ತು. ಸದ್ಯ 250 ಹಾಸಿಗೆಯ ಆಸ್ಪತ್ರೆ ನಿರ್ಮಿಸಲಾಗುತ್ತಿದ್ದು, ವೈದ್ಯರು ಹಾಗೂ ಶುಶ್ರೂಷಕರು ಸೇರಿದಂತೆ ಸಿಬ್ಬಂದಿಗಳ ವಸತಿ ಗೃಹವನ್ನು ಸಹ ನಿರ್ಮಿಸಲಾಗುತ್ತಿದೆ ಸುಮಾರು 105 ಕೋಟಿ ರೂ. ವೆಚ್ಚದಲ್ಲಿ ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ” ಎಂದು ಮಾಹಿತಿ ನೀಡಿದರು.

“ಹುದಿಕೇರಿಯಲ್ಲಿ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ 30 ಹಾಸಿಗೆಯ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ. ಹಾಗೆಯೇ ಕುಶಾಲನಗರದಲ್ಲಿ 40 ಕೋಟಿ ರೂ. ವೆಚ್ಚದಲ್ಲಿ ತಾಲ್ಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ” ಎಂದು ಸಚಿವರು ಹೇಳಿದರು.

“ವಸತಿ ಗೃಹ ನಿರ್ಮಾಣ ಸೇರಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ವಾರ ಟೆಂಡರ್ ಆಹ್ವಾನಿಸಲಾಗುವುದು. ಜೊತೆಗೆ ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ವಿರಾಜಪೇಟೆ, ಹುದಿಕೇರಿ ಮತ್ತು ಕುಶಾಲನಗರ ಆಸ್ಪತ್ರೆ ಮೇಲ್ದರ್ಜೆಗೇರಿಸುವ ಸಂಬಂಧ ಭೂಮಿ ಪೂಜೆ ನೆರವೇರಿಸಲಾಗುವುದು” ಎಂದು ಸಚಿವರು ಘೋಷಣೆ ಮಾಡಿದರು.

“ಸ್ಥಳೀಯ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಪ್ರಯತ್ನದಿಂದ ವಿರಾಜಪೇಟೆ ಕ್ಷೇತ್ರದ ಆಸ್ಪತ್ರೆ ಸೇರಿದಂತೆ ಹೆಚ್ಚಿನ ಅಭಿವೃದ್ಧಿಗೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡುತ್ತಿದೆ. ನಾನು ಸಹ ಇದೇ ಜಿಲ್ಲೆಯವನಾಗಿರುವುದರಿಂದ ಜಿಲ್ಲೆಯ ಅಭಿವೃದ್ಧಿಗೆ ಕೈಜೋಡಿಸಲಾಗುವುದು” ಎಂದು ಸಚಿವರು ಭರವಸೆ ನೀಡಿದರು.

ಸಾಮಾಜಿಕ, ಆರ್ಥಿಕ ಸಮೀಕ್ಷೆ: “ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಕುರಿತು ಮಾತನಾಡಿದ ಸಚಿವರು, “ಪ್ರಜಾಪ್ರಭುತ್ವದಲ್ಲಿ ಯಾವುದೇ ಕೆಲಸ ಮಾಡುವಾಗ ಪರ ವಿರೋಧ ಇದ್ದೇ ಇರುತ್ತದೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಲ್ಲಾ ವರ್ಗದ ಜನರಿಗೆ ಸರ್ಕಾರದ ಕಾರ್ಯಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ತಲುಪಿಸಲು ಸಹಕಾರಿಯಾಗಲಿದೆ” ಎಂದರು.

“ಪ್ರತೀ ಬಡವರಿಗೂ ಮೀಸಲಾತಿ ಕಲ್ಪಿಸಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಆ ನಿಟ್ಟಿನಲ್ಲಿ ಸರ್ಕಾರದ ವಿಶೇಷ ಸೌಲಭ್ಯಗಳನ್ನು ತಲುಪಿಸುವುದು ಅತೀ ಮುಖ್ಯವಾಗಿದ್ದು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗುತ್ತದೆ” ಎಂದು ತಿಳಿಸಿದರು.

“ಬಡ ಜನರಿಗೆ ಕಾರ್ಯಕ್ರಮಗಳನ್ನು ತಲುಪಿಸುವಲ್ಲಿ ಅಂಕಿ ಅಂಶಗಳು ಅತೀ ಮುಖ್ಯವಾಗಿದ್ದು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗಿದೆ. ಅದನ್ನು ಬಿಟ್ಟು ಅಪಸ್ವರ ತೆಗೆಯುವುದು ಸರಿಯಲ್ಲ. ಅನುಮಾನ ಇದ್ದಲ್ಲಿ ಮಾಹಿತಿ ನೀಡಬಹುದಾಗಿದೆ. ಅದನ್ನು ಬಿಟ್ಟು ಗೊಂದಲ ನಿರ್ಮಾಣ ಮಾಡುವುದು ಬೇಡ” ಎಂದು ಕರೆ ನೀಡಿದರು.

ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, “ಚುನಾವಣಾ ಸಂದರ್ಭದಲ್ಲಿಯೇ ವಿರಾಜಪೇಟೆ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಬೇಕೆಂದು ಪ್ರಕಟಿಸಲಾಗಿತ್ತು. ಅದರಂತೆ ಈಗ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗುತ್ತದೆ. ಹಾಗೆಯೇ ಹುದಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ” ಎಂದು ಮಾಹಿತಿ ನೀಡಿದರು.

“ತಾಲ್ಲೂಕು ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಬೇಕು ಎಂದು ಪ್ರತ್ಯೇಕ ಪ್ರಣಾಳಿಕೆಯಲ್ಲಿ ಪ್ರಕಟಿಸಲಾಗಿತ್ತು, ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರು ಮತ್ತು ಸಚಿವರು ಸ್ಪಂದಿಸಿದ್ದಾರೆ. ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಒಳ್ಳೆಯ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು” ಎಂದು ಶಾಸಕರು ಭರವಸೆ ನೀಡಿದರು.

ಸಚಿವರು ವಿರಾಜಪೇಟೆಯ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ತೀವ್ರ ನಿಗಾ ಘಟಕ ಸೇರಿದಂತೆ ವಿವಿಧ ವಿಭಾಗಗಳಿಗೆ ತೆರಳಿ ಪರಿಶೀಲಿಸಿದರು. ಬಡ ಜನರಿಗೆ ಉತ್ತಮ ಆರೋಗ್ಯ ಸೇವೆ ಕಲ್ಪಿಸುವಂತೆ ವೈದ್ಯರಿಗೆ ಸೂಚಿಸಿದರು. ಹುದಿಕೇರಿಯಲ್ಲಿ ನಿರ್ಮಾಣವಾಗುವ ಸಮುದಾಯ ಆರೋಗ್ಯ ಕೇಂದ್ರ ಸ್ಥಳ ವೀಕ್ಷಿಸಿದರು.

The post ಕೊಡಗು: ವಿರಾಜಪೇಟೆ, ಕುಶಾಲನಗರ ಆಸ್ಪತ್ರೆ ಕುರಿತು ಅಪ್‌ಡೇಟ್ appeared first on Samyukta Karnataka.

ಕೊಡಗು: ಕಾವೇರಿ ತೀರ್ಥೋದ್ಭವ 2025 ದಿನಾಂಕ ಪ್ರಕಟ
ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ನಡೆಯುವ ಪವಿತ್ರ ಕಾವೇರಿ ತೀರ್ಥೋದ್ಭವ 2025ರ ದಿನಾಂಕ ಘೋಷಣೆಯಾಗಿದೆ. ತೀರ್ಥೋದ್ಭವ ಸಂಬಂಧ ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಸೂಚಿಸಿದ್ದಾರೆ.

ಪವಿತ್ರ ತೀರ್ಥೋದ್ಭವ ಈ ಬಾರಿ ಅಕ್ಟೋಬರ್ 17ರಂದು ಮಧ್ಯಾಹ್ನ 1.44ರ ಮಕರ ಲಗ್ನದಲ್ಲಿ ನಡೆಯಲಿದೆ. ಹೆಚ್ಚಿನ ಭಕ್ತಾಧಿಗಳು ಆಗಮಿಸುವ ಸಾಧ್ಯತೆ ಇದ್ದು, ಆದ್ದರಿಂದ ಅಗತ್ಯ ಕ್ರಮವಹಿಸುವಂತೆ ನಿರ್ದೇಶನ ನೀಡಲಾಗಿದೆ.

ಪೊಲೀಸ್ ಇಲಾಖೆ ಅಧಿಕಾರಿಗಳು ಪವಿತ್ರ ತೀರ್ಥೋದ್ಭವ ಸಂಬಂಧ ಅಗತ್ಯ ಬಂದೋಬಸ್ತ್ ಮಾಡಬೇಕು. ಸಾರಿಗೆ ಇಲಾಖೆ ಅಧಿಕಾರಿಗಳು ಅಗತ್ಯ ಬಸ್ ಸೌಲಭ್ಯ ಒದಗಿಸುವುದು, ಕಾವೇರಿ ನೀರಾವರಿ ನಿಗಮ, ಸೆಸ್ಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ತಮ್ಮ ಹಂತದಲ್ಲಿ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಚಿವರು ತಿಳಿಸಿದ್ದಾರೆ.

ಭಕ್ತರಿಗೆ ಅಗತ್ಯ ವ್ಯವಸ್ಥೆ: ಕೊಡಗು ಜಿಲ್ಲಾಡಳಿತದ ಸಲಹೆ ಸೂಚನೆಗಳನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಶುಚಿತ್ವಕ್ಕೆ ಒತ್ತು ನೀಡಬೇಕು. ಕುಡಿಯುವ ನೀರು ಪೂರೈಸಬೇಕು. ಭಕ್ತಾಧಿಗಳಿಗೆ ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಮಾಡಬೇಕು. ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ತಮ್ಮ ಕೆಲಸವನ್ನು ಚಾಚು ತಪ್ಪದೇ ನಿರ್ವಹಿಸುವಂತೆ ಸೂಚಿಸಲಾಗಿದೆ.

ಸೆಪ್ಟೆಂಬರ್ 26ರಿಂದ ವಿವಿಧ ಪೂಜಾ ಕಾರ್ಯಕ್ರಮಗಳು ಆರಂಭವಾಗಲಿದೆ. ಭಕ್ತಾಧಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಲಾಗುತ್ತದೆ. ನಾಡಿನ ಜೀವನದಿ ತಲಕಾವೇರಿಯ ಪವಿತ್ರ ತೀರ್ಥೋದ್ಭವ ಒಂದು ವಿಶಿಷ್ಟವಾಗಿದ್ದು, ಪವಿತ್ರ ತೀರ್ಥೋದ್ಭವ ಕಣ್ತುಂಬಿಕೊಳ್ಳಲು ಭಕ್ತಾದಿಗಳಿಗೆ ಕನಿಷ್ಠ ಮೂಲ ಸೌಲಭ್ಯ ಕಲ್ಪಿಸಬೇಕು ಎಂದು ತಿಳಿಸಲಾಗಿದೆ.

ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, “ನಗರಸಭೆ ಹಾಗೂ ಸ್ಥಳೀಯ ಸಂಸ್ಥೆಯಿಂದ ಸ್ವಚ್ಛತೆಗೆ ಒತ್ತು ನೀಡಲಾಗುವುದು. ಈ ಸಂಬಂಧ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು” ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ, “ಪ್ರತೀ ಬಾರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂದರ್ಭದಲ್ಲಿ ನೂಕು ನುಗ್ಗಲು ಉಂಟಾಗುತ್ತದೆ. ಇದನ್ನು ನಿಯಂತ್ರಿಸಲು ಭಕ್ತಾಧಿಗಳು ಸಹಕರಿಸಬೇಕು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಸೂಕ್ತ ಬಂದೋಬಸ್ತ್ ಮಾಡಲಾಗುವುದು. ಅಗತ್ಯ ಪೊಲೀಸರನ್ನು ನಿಯೋಜಿಸಲಾಗುವುದು” ಎಂದರು.

ವಾಹನಗಳ ನಿಲುಗಡೆಗೆ ವ್ಯವಸ್ಥೆ, ಸಂಚಾರ ದಟ್ಟಣೆ ನಿಯಂತ್ರಣ ಮಾಡುವುದು. ಭಕ್ತಾಧಿಗಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಗಮನಹರಿಸಲಾಗುವುದು. ಕಳೆದ ಬಾರಿ ಆಗಿರುವ ಲೋಪಗಳನ್ನು ಸರಿಪಡಿಸಿಕೊಂಡು ಈ ಬಾರಿ ಉತ್ತಮವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.

ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, “ಈ ಬಾರಿ ಪವಿತ್ರ ತೀರ್ಥೋದ್ಭವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುವುದರಿಂದ ಭಾಗಮಂಡಲ-ತಲಕಾವೇರಿ, ತಲಕಾವೇರಿ-ಭಾಗಮಂಡಲ ಮಾರ್ಗದಲ್ಲಿ 25ಕ್ಕೂ ಹೆಚ್ಚು ಬಸ್ಸು ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಸೂಚಿಸಿದರು. ಈ ಮಾರ್ಗದಲ್ಲಿ ಪ್ರಯಾಣಿಕರಿಗೆ ತೀರ್ಥೋದ್ಭವದಂದು ಉಚಿತ ಪ್ರಯಾಣಕ್ಕೆ ಅವಕಾಶ ಇದೆ” ಎಂದು ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಪವಿತ್ರ ತೀರ್ಥೋದ್ಭಕ್ಕೆ ಅಗತ್ಯ ವೈದ್ಯರು ಮತ್ತು ಶುಶ್ರೂಷಕರ ನಿಯೋಜನೆ, ಆಂಬ್ಯುಲೆನ್ಸ್ ಸೇವೆ ಹಾಗೂ ವೀಲ್‍ಚೇರ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವವನ್ನು ಜಿಲ್ಲೆಯಾದ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತದೆ. ಆ ನಿಟ್ಟಿನಲ್ಲಿ ಒಂದು ದಿನದ ಮಟ್ಟಿಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗುವುದು ಎಂದು ಹೇಳಿದರು.

The post ಕೊಡಗು: ಕಾವೇರಿ ತೀರ್ಥೋದ್ಭವ 2025 ದಿನಾಂಕ ಪ್ರಕಟ appeared first on Samyukta Karnataka.