ಮೈಸೂರು Archives - Samyukta Karnataka

ಎಸ್. ಜಾನಕಿ ಅಂತ್ಯಸಂಸ್ಕಾರಕ್ಕೆ ಕಣಿಯನಹುಂಡಿಯಲ್ಲಿ ಸಕಲ ಸಿದ್ಧತೆ
ಮೈಸೂರು: ವಿಧಿವಶರಾದ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ಅಂತ್ಯಸಂಸ್ಕಾರ ಇಂದು ಮೈಸೂರು ಜಿಲ್ಲೆಯ ಸರಗೂರು ಸಮೀಪದ ಕಣಿಯನಹುಂಡಿ ಗ್ರಾಮದಲ್ಲಿರುವ ಅವರ ತೋಟದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದ್ದು, ಸಿದ್ಧತೆಗಳು ನಡೆದಿವೆ. ಸಂಜೆ 5.30ರೊಳಗೆ ಅಂತಿಮ ವಿಧಿವಿಧಾನಗಳು ಪೂರ್ಣಗೊಳ್ಳಲಿವೆ.

ಜೀವಿತಾವಧಿಯಲ್ಲೇ ತಮ್ಮ ನಿಧನದ ಬಳಿಕ ತಾವು ಅತ್ಯಂತ ಪ್ರೀತಿಯಿಂದ ಬೆಳೆಸಿಕೊಂಡಿದ್ದ ತೋಟದಲ್ಲೇ ಅಂತ್ಯಸಂಸ್ಕಾರ ನಡೆಸಬೇಕೆಂದು ಎಸ್. ಜಾನಕಿ ತಮ್ಮ ಇಚ್ಛೆಯನ್ನು ಕುಟುಂಬ ಸದಸ್ಯರಿಗೆ ತಿಳಿಸಿದ್ದರು. ಅವರ ಕೊನೆಯ ಕೋರಿಕೆಗೆ ಗೌರವ ಸೂಚಿಸಿ, ಕಣಿಯನಹುಂಡಿ ಗ್ರಾಮದ ತೋಟದಲ್ಲೇ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ಹಾಗೂ ಜಿಲ್ಲಾಡಳಿತ ನಿರ್ಧರಿಸಿದೆ.

ಅಂತ್ಯಸಂಸ್ಕಾರಕ್ಕಾಗಿ ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಜೆಸಿಬಿ ಯಂತ್ರಗಳ ಮೂಲಕ ತೋಟದ ಜಾಗವನ್ನು ಸಮತಟ್ಟುಗೊಳಿಸುವುದು ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ಸಾರ್ವಜನಿಕರು ಹಾಗೂ ಗಣ್ಯರ ಆಗಮನದ ಹಿನ್ನೆಲೆಯಲ್ಲಿ ಭದ್ರತೆ ಮತ್ತು ಇತರೆ ವ್ಯವಸ್ಥೆಗಳನ್ನೂ ಮಾಡಲಾಗಿದೆ.

ದಕ್ಷಿಣ ಭಾರತದ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ ಎಸ್. ಜಾನಕಿ ಅವರಿಗೆ ಅಂತಿಮ ನಮನ ಸಲ್ಲಿಸಲು ಸಾವಿರಾರು ಅಭಿಮಾನಿಗಳು, ಕಲಾವಿದರು ಹಾಗೂ ಗಣ್ಯರು ಕಣಿಯನಹುಂಡಿ ಗ್ರಾಮಕ್ಕೆ ಆಗಮಿಸುವ ನಿರೀಕ್ಷೆಯಿದೆ.

S. Janaki: 17ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಹಾಡುಗಳಿಗೆ ಧ್ವನಿ

The post ಎಸ್. ಜಾನಕಿ ಅಂತ್ಯಸಂಸ್ಕಾರಕ್ಕೆ ಕಣಿಯನಹುಂಡಿಯಲ್ಲಿ ಸಕಲ ಸಿದ್ಧತೆ appeared first on Samyukta Karnataka.

S. Janaki: 17ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಹಾಡುಗಳಿಗೆ ಧ್ವನಿ
ಮೈಸೂರು: ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರು ಶನಿವಾರ (ಜುಲೈ 11) ವಯೋಸಹಜ ಅನಾರೋಗ್ಯದಿಂದ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು.

1938ರ ಏಪ್ರಿಲ್ 23ರಂದು ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಜನಿಸಿದ ಎಸ್. ಜಾನಕಿ ಅವರು ಬಾಲ್ಯದಲ್ಲಿಯೇ ಸಂಗೀತಾಭ್ಯಾಸ ಆರಂಭಿಸಿದರು. ಕೇವಲ ಮೂರು ವರ್ಷದ ವಯಸ್ಸಿನಲ್ಲೇ ಪೈಡಿಸ್ವಾಮಿ ಅವರ ಬಳಿ ಸಂಗೀತದ ಪಾಠ ಕಲಿಯಲು ಆರಂಭಿಸಿದ್ದ ಅವರು, ತಮ್ಮ ಅಪರೂಪದ ಗಾಯನ ಪ್ರತಿಭೆಯಿಂದ ಶೀಘ್ರವೇ ಗಮನ ಸೆಳೆದರು.

1956ರಲ್ಲಿ ಆಕಾಶವಾಣಿ ಆಯೋಜಿಸಿದ್ದ ಸಂಗೀತ ಸ್ಪರ್ಧೆಯಲ್ಲಿ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರಿಂದ ಪ್ರಶಸ್ತಿ ಸ್ವೀಕರಿಸಿದ ಜಾನಕಿ, ಬಳಿಕ ಚೆನ್ನೈಗೆ ತೆರಳಿ ಗಾಯನ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನ ಆರಂಭಿಸಿದರು. ಲತಾ ಮಂಗೇಶ್ಕರ್ ಹಾಡಿದ್ದ ʻರಸಿಕ್ ಬಲ್ಮಾ’ ಗೀತೆಯನ್ನು ಹಾಡಿ ಎವಿಎಮ್ ಸ್ಟುಡಿಯೋ ಸಂಸ್ಥೆಯ ಗಮನ ಸೆಳೆದ ಅವರು, ಅಲ್ಲಿಂದಲೇ ಚಿತ್ರರಂಗದಲ್ಲಿ ಹಿನ್ನೆಲೆ ಗಾಯಕಿಯಾಗಿ ಭದ್ರ ನೆಲೆ ಕಂಡುಕೊಂಡರು.

ಸುಮಾರು ಆರು ದಶಕಗಳಿಗೂ ಹೆಚ್ಚು ಕಾಲದ ಸಂಗೀತ ಪಯಣದಲ್ಲಿ ಎಸ್. ಜಾನಕಿ ಅವರು ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ, ಒಡಿಯಾ, ಬಂಗಾಳಿ, ಮರಾಠಿ, ಕೊಂಕಣಿ, ತುಳು, ಉರ್ದು, ಪಂಜಾಬಿ, ಸಿಂಹಳ ಸೇರಿದಂತೆ 17ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿದ್ದಾರೆ. ಕನ್ನಡ ಹಾಗೂ ಮಲಯಾಳಂ ಭಾಷೆಗಳಲ್ಲಿ ಅವರು ಅತಿ ಹೆಚ್ಚು ಹಾಡುಗಳನ್ನು ಹಾಡಿರುವುದು ವಿಶೇಷ.

ಅವರ ಅಪೂರ್ವ ಗಾಯನ ಸೇವೆಗೆ ನಾಲ್ಕು ಬಾರಿ ಅತ್ಯುತ್ತಮ ಹಿನ್ನೆಲೆ ಗಾಯಕಿ ರಾಷ್ಟ್ರ ಪ್ರಶಸ್ತಿ ಲಭಿಸಿದೆ. ಇದಲ್ಲದೆ ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ, ಕೇರಳ ಸೇರಿದಂತೆ ವಿವಿಧ ರಾಜ್ಯ ಸರ್ಕಾರಗಳಿಂದ 28ಕ್ಕೂ ಹೆಚ್ಚು ರಾಜ್ಯ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಮಧುರ ಕಂಠ, ಭಾವಪೂರ್ಣ ಗಾಯನ ಮತ್ತು ಭಾಷೆಗಳ ಮೇಲಿನ ಹಿಡಿತದಿಂದ ಎಸ್. ಜಾನಕಿ ಅವರು ಹಲವು ತಲೆಮಾರುಗಳ ಸಂಗೀತಾಸಕ್ತರ ಮನಸ್ಸಿನಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದಾರೆ.

ಗುಲಾಬಿ ಹೂವಿನಲ್ಲಿ ಜೀವಂತವಾಗಿದ್ದ ಪತಿಯ ನೆನಪು: ಎಸ್. ಜಾನಕಿಯ ಸರಳ ಜೀವನದ ಕಥೆ

The post S. Janaki: 17ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಹಾಡುಗಳಿಗೆ ಧ್ವನಿ appeared first on Samyukta Karnataka.

ಖ್ಯಾತ ಹಿನ್ನೆಲೆ ಗಾಯಕಿ, ಗಾನ ಕೊಗಿಲೆ ಎಸ್. ಜಾನಕಿ ನಿಧನ
ಮೈಸೂರು: ದಕ್ಷಿಣ ಭಾರತದ ಸಂಗೀತ ಲೋಕಕ್ಕೆ ಅಪಾರ ಕೊಡುಗೆ ನೀಡಿದ, “ಗಾನ ಕೋಗಿಲೆ” ಎಂದೇ ಖ್ಯಾತರಾಗಿದ್ದ ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರು ಶನಿವಾರ ಸಂಜೆ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್. ಜಾನಕಿ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರಿಗೆ ಹಠಾತ್ ಹೃದಯಾಘಾತ ಸಂಭವಿಸಿದ್ದು, ಆಸ್ಪತ್ರೆಗೆ ದಾಖಲಿಸಿದ ಬಳಿಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಸ್. ಜಾನಕಿ ಅವರು ಹಲವು ವರ್ಷಗಳಿಂದ ಮೈಸೂರಿನಲ್ಲಿ ನೆಲೆಸಿದ್ದು, ಶನಿವಾರ ಸಂಜೆ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯಕೀಯ ಪ್ರಯತ್ನಗಳು ಫಲಿಸದೆ ಅವರು ವಿಧಿವಶರಾದರು ಎನ್ನಲಾಗಿದೆ.

ಸಂಗೀತ ಲೋಕದ ಅಪರೂಪದ ಪ್ರತಿಭೆ: 1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಜನಿಸಿದ ಎಸ್. ಜಾನಕಿ, ಬಾಲ್ಯದಿಂದಲೇ ಸಂಗೀತದ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು. ಕೇವಲ ಮೂರು ವರ್ಷದ ವಯಸ್ಸಿನಲ್ಲೇ ನಾದಸ್ವರ ವಿದ್ವಾಂಸ ಶ್ರೀ ಪೈದಿಸ್ವಾಮಿ ಅವರ ಬಳಿ ಸಂಗೀತಾಭ್ಯಾಸ ಆರಂಭಿಸಿದ್ದರು. ತಮ್ಮ ವಿಶಿಷ್ಟ ಕಂಠಸಿರಿಯ ಮೂಲಕ ದಕ್ಷಿಣ ಭಾರತದ ಸಂಗೀತ ಕ್ಷೇತ್ರದಲ್ಲಿ ಅಪ್ರತಿಮ ಸ್ಥಾನವನ್ನು ಗಳಿಸಿದರು.

ಸಾವಿರಾರು ಹಾಡುಗಳ ಮೂಲಕ ಅಜರಾಮರ: ಐದು ದಶಕಗಳಿಗೂ ಹೆಚ್ಚು ಕಾಲದ ಸಂಗೀತ ಪಯಣದಲ್ಲಿ ಎಸ್. ಜಾನಕಿ ಅವರು ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ ಹಲವು ಭಾರತೀಯ ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡಿದ್ದಾರೆ. ಭಾವಪೂರ್ಣ ಗಾಯನ, ಶ್ರುತಿ ಶುದ್ಧತೆ ಹಾಗೂ ವಿಭಿನ್ನ ಶೈಲಿಯ ಹಾಡುಗಳನ್ನು ಸಮಾನವಾಗಿ ಹಾಡುವ ಸಾಮರ್ಥ್ಯದಿಂದ ಅವರು ಕೋಟ್ಯಂತರ ಸಂಗೀತಾಭಿಮಾನಿಗಳ ಮನಗೆದ್ದಿದ್ದರು.

ಕನ್ನಡ ಚಿತ್ರರಂಗದಲ್ಲಿಯೂ ಅವರು ಅನೇಕ ಸೂಪರ್‌ಹಿಟ್ ಹಾಡುಗಳಿಗೆ ಧ್ವನಿಯಾಗಿದ್ದು, ಹಲವು ತಲೆಮಾರುಗಳ ನೆಚ್ಚಿನ ಗಾಯಕಿಯಾಗಿ ಗುರುತಿಸಿಕೊಂಡಿದ್ದರು. ಸಂಗೀತ ನಿರ್ದೇಶಕರ ಮೊದಲ ಆಯ್ಕೆಯಾಗಿದ್ದ ಅವರು ಅನೇಕ ನಟಿಯರಿಗೆ ಹಿನ್ನೆಲೆ ಧ್ವನಿಯಾಗಿ ಅಪಾರ ಜನಪ್ರಿಯತೆ ಗಳಿಸಿದ್ದರು.

ಪ್ರಶಸ್ತಿ-ಪುರಸ್ಕಾರಗಳ ಗೌರವ: ಎಸ್. ಜಾನಕಿ ಅವರು ತಮ್ಮ ಗಾಯನ ಸೇವೆಗೆ ರಾಷ್ಟ್ರ ಮಟ್ಟದ ಅನೇಕ ಗೌರವಗಳನ್ನು ಪಡೆದಿದ್ದಾರೆ. ಅತ್ಯುತ್ತಮ ಹಿನ್ನೆಲೆ ಗಾಯಕಿಯಾಗಿ ಹಲವು ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾಗಿದ್ದರು. ವಿವಿಧ ರಾಜ್ಯ ಸರ್ಕಾರಗಳ ಪ್ರಶಸ್ತಿಗಳು ಸೇರಿದಂತೆ ಅನೇಕ ಪ್ರತಿಷ್ಠಿತ ಗೌರವಗಳು ಅವರಿಗೆ ಸಂದಿವೆ. ಭಾರತೀಯ ಸಂಗೀತ ಕ್ಷೇತ್ರಕ್ಕೆ ನೀಡಿದ ಅಪಾರ ಕೊಡುಗೆಯಿಂದ ಅವರು ಸದಾ ಸ್ಮರಣೀಯರಾಗಿದ್ದಾರೆ.

ಗಣ್ಯರ ಸಂತಾಪ: ಎಸ್. ಜಾನಕಿ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಚಿತ್ರರಂಗ, ಸಂಗೀತ ಕ್ಷೇತ್ರ ಹಾಗೂ ರಾಜಕೀಯ ವಲಯದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎಸ್. ಜಾನಕಿ ಅವರ ನಿಧನದೊಂದಿಗೆ ಭಾರತೀಯ ಚಿತ್ರರಂಗ ತನ್ನ ಅತ್ಯಂತ ಪ್ರತಿಭಾವಂತ ಹಾಗೂ ಅಪರೂಪದ ಗಾಯಕಿಯೊಬ್ಬರನ್ನು ಕಳೆದುಕೊಂಡಿದೆ. ಆದರೆ ಅವರು ಹಾಡಿರುವ ಸಾವಿರಾರು ಅಮರ ಗೀತೆಗಳು ಮುಂದಿನ ಪೀಳಿಗೆಗಳಿಗೂ ಅವರ ನೆನಪನ್ನು ಚಿರಸ್ಥಾಯಿಯಾಗಿ ಉಳಿಸಿಕೊಳ್ಳಲಿವೆ.

ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇರಳ CM ವಿ.ಡಿ. ಸತೀಶನ್ ಭೇಟಿ

The post ಖ್ಯಾತ ಹಿನ್ನೆಲೆ ಗಾಯಕಿ, ಗಾನ ಕೊಗಿಲೆ ಎಸ್. ಜಾನಕಿ ನಿಧನ appeared first on Samyukta Karnataka.

ವಿಶ್ವವಿಖ್ಯಾತ ಮೈಸೂರು ದಸರಾಗೆ ಮುಹೂರ್ತ ನಿಗದಿ
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುವ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2026ಕ್ಕೆ ದಿನಾಂಕ ಮತ್ತು ಶುಭ ಮುಹೂರ್ತಗಳನ್ನು ಅಧಿಕೃತವಾಗಿ ನಿಗದಿಪಡಿಸಲಾಗಿದ್ದು, ದಸರಾ ಸಿದ್ಧತೆಗಳಿಗೆ ಚಾಲನೆ ದೊರೆತಿದೆ. ಗಜಪಡೆಯ ಆಗಮನದಿಂದ ಹಿಡಿದು ದಸರಾ ಉದ್ಘಾಟನೆ ಹಾಗೂ ವಿಜಯದಶಮಿ ಜಂಬೂಸವಾರಿವರೆಗಿನ ಸಂಪೂರ್ಣ ವೇಳಾಪಟ್ಟಿ ಸಿದ್ಧವಾಗಿದ್ದು, ಮೈಸೂರಿನಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ.

ಆಗಸ್ಟ್ 26ರಂದು ಗಜಪಡೆಗೆ ಅದ್ದೂರಿ ಸ್ವಾಗತ : ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಗೆ ಆಗಸ್ಟ್ 26ರಂದು ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ಮೈಸೂರು ಅರಮನೆಯ ಪ್ರವೇಶ ದ್ವಾರದಲ್ಲಿ ಅದ್ದೂರಿಯಾಗಿ ಸ್ವಾಗತ ಕೋರಲಾಗುತ್ತದೆ.

ಇದನ್ನೂ ಓದಿ: ವಯಸ್ಸು 12, ಸಾಧನೆ ಅಪಾರ: ಉದ್ಯಮಿಗಳಿಗೆ ವರವಾದ Ai ಆವಿಷ್ಕಾರ!

ಗಜಪಡೆಯ ಆಗಮನದೊಂದಿಗೆ ದಸರಾ ಸಿದ್ಧತೆಗಳಿಗೆ ಮತ್ತಷ್ಟು ವೇಗ ಸಿಗಲಿದ್ದು, ಅರಮನೆ ಆವರಣದಲ್ಲಿ ಆನೆಗಳಿಗೆ ವಿಶೇಷ ತಾಲೀಮು ಹಾಗೂ ಪೌಷ್ಟಿಕ ಆಹಾರ ವ್ಯವಸ್ಥೆ ಆರಂಭವಾಗಲಿದೆ.

ಅಕ್ಟೋಬರ್ 11ರಂದು ದಸರಾ ಉದ್ಘಾಟನೆ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅಕ್ಟೋಬರ್ 11ರ ಭಾನುವಾರ ಮುಂಜಾನೆ ಚಾಲನೆ ದೊರೆಯಲಿದೆ. ಸಂಪ್ರದಾಯದಂತೆ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ರಾಜ್ಯ ಸರ್ಕಾರ ಶೀಘ್ರದಲ್ಲೇ ಉದ್ಘಾಟಕರ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಕಾಶ್ಮೀರದ ಯುವ ಉದ್ಯಮಿಗೆ ಕನ್ನಡಿಗರಿಂದ ಪ್ರಶಂಸೆಗಳ ಮಹಾಪೂರ

ಕಳೆದ ವರ್ಷ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ದಸರಾ ಮಹೋತ್ಸವವನ್ನು ಉದ್ಘಾಟಿಸಿದ್ದರು.

ಅಕ್ಟೋಬರ್ 21ರಂದು ವಿಜಯದಶಮಿ ಜಂಬೂಸವಾರಿ : ದಸರಾ ಮಹೋತ್ಸವದ ಅತ್ಯಂತ ಪ್ರಮುಖ ಕಾರ್ಯಕ್ರಮವಾದ ವಿಜಯದಶಮಿ ಜಂಬೂಸವಾರಿ ಅಕ್ಟೋಬರ್ 21ರಂದು ನಡೆಯಲಿದೆ. ಸಾಂಪ್ರದಾಯಿಕ ಶುಭ ಮುಹೂರ್ತದಂತೆ ಅಂದು ಸಂಜೆ 4.10 ಗಂಟೆಗೆ ಮೀನಾ ಲಗ್ನದಲ್ಲಿ ಮುಖ್ಯಮಂತ್ರಿ ಜಂಬೂಸವಾರಿಗೆ ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ. ಬಳಿಕ ಅಲಂಕೃತ ಅಂಬಾರಿಯಲ್ಲಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಹೊತ್ತು ಸಾಗುವ ಜಂಬೂಸವಾರಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ.

ಇದನ್ನೂ ಓದಿ: ‘ಶ್ರೀ ರಾಮ ಭೂಮಿ’ ಚಿತ್ರದಲ್ಲಿ ಅನುಪಮ್ ಖೇರ್ ಹೊಸ ಲುಕ್

ಹಬ್ಬದ ಸಡಗರಕ್ಕೆ ಮೈಸೂರು ಸಜ್ಜು : ದಸರಾ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲಾಡಳಿತ, ಅರಮನೆ ಮಂಡಳಿ ಮತ್ತು ವಿವಿಧ ಇಲಾಖೆಗಳು ಸಿದ್ಧತೆಗಳನ್ನು ಆರಂಭಿಸಿವೆ. ಅರಮನೆ ವಿದ್ಯುತ್ ಅಲಂಕಾರ, ಸಾಂಸ್ಕೃತಿಕ ಕಾರ್ಯಕ್ರಮಗಳು, ಯುವ ದಸರಾ, ಆಹಾರ ಮೇಳ, ವಸ್ತುಪ್ರದರ್ಶನ ಹಾಗೂ ಕ್ರೀಡಾಕೂಟ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಆಯೋಜನೆಗೆ ರೂಪುರೇಷೆ ಸಿದ್ಧವಾಗುತ್ತಿದೆ.

ಪ್ರತಿ ವರ್ಷ ದೇಶ-ವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಮೈಸೂರು ದಸರಾ ವೀಕ್ಷಿಸಲು ಆಗಮಿಸುವ ಹಿನ್ನೆಲೆಯಲ್ಲಿ ಈ ಬಾರಿಯೂ ಅದ್ಧೂರಿ ಮತ್ತು ಜನಾಕರ್ಷಕ ಆಚರಣೆಗೆ ಸರ್ಕಾರ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ.

‘ಕರಾವಳಿ’ ಟ್ರೇಲರ್ ರಿಲೀಸ್ ಗಲಾಟೆ; ಪ್ರಜ್ವಲ್ ಆಪ್ತರ ವಿರುದ್ಧ FIR

The post ವಿಶ್ವವಿಖ್ಯಾತ ಮೈಸೂರು ದಸರಾಗೆ ಮುಹೂರ್ತ ನಿಗದಿ appeared first on Samyukta Karnataka.

ಆಹಾರ ನಿಯಮ ಉಲ್ಲಂಘನೆ: 106Kg ಕೃತಕ ಹಸಿರು ಬಟಾಣಿ ಸೀಜ್!
ಮೈಸೂರಿನ ಎಂಜಿ ರಸ್ತೆ ತರಕಾರಿ ಮಾರುಕಟ್ಟೆಯಲ್ಲಿ ಎಫ್‌ಎಸ್‌ಎಸ್‌ಎಐ ಅಧಿಕಾರಿಗಳು ನಡೆಸಿದ ದಿಢೀರ್ ತಪಾಸಣೆಯಲ್ಲಿ 106 ಕೆಜಿ ಕೃತಕ ಬಣ್ಣ ಬಳಿದ ಹಸಿರು ಬಟಾಣಿ ವಶಪಡಿಸಿಕೊಳ್ಳಲಾಗಿದೆ. ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ.

ಮೈಸೂರು: ನಗರದ ಎಂಜಿ ರಸ್ತೆಯಲ್ಲಿರುವ ಪ್ರಮುಖ ಸಗಟು ತರಕಾರಿ ಮಾರುಕಟ್ಟೆಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ಅಧಿಕಾರಿಗಳು ಇತ್ತಿಚೆಗೆ ನಡೆಸಿದ ವಿಶೇಷ ತಪಾಸಣೆಯಲ್ಲಿ ಕೃತಕ ಬಣ್ಣ ಬಳಿದು ಮಾರಾಟಕ್ಕೆ ಇಡಲಾಗಿದ್ದ 106 ಕೆಜಿ ಹಸಿರು ಬಟಾಣಿಯನ್ನು ವಶಪಡಿಸಿಕೊಂಡಿದ್ದಾರೆ.

ಎಫ್‌ಎಸ್‌ಎಸ್‌ಎಐನ ನಿಯೋಜಿತ ಅಧಿಕಾರಿ ಎಸ್.ಎಲ್. ರವೀಂದ್ರ ಅವರ ನೇತೃತ್ವದಲ್ಲಿ ಬೆಳ್ಳಂ ಬೆಳಿಗ್ಗೆ ಆರಂಭವಾದ ಕಾರ್ಯಾಚರಣೆಯಲ್ಲಿ ಆರು ವ್ಯಾಪಾರಿಗಳ ಬಳಿಯಿದ್ದ ಶಂಕಿತ ಬಣ್ಣದ ಬಟಾಣಿಯನ್ನು ಪರಿಶೀಲಿಸಲಾಯಿತು. ಬಳಿಕ ಅವುಗಳನ್ನು ವಶಪಡಿಸಿಕೊಂಡು, ಪ್ರಯೋಗಾಲಯ ಪರೀಕ್ಷೆಗೆ ಒಂದು ಶಾಸನಬದ್ಧ ಮಾದರಿ ಹಾಗೂ ಮೂರು ಸಮೀಕ್ಷಾ ಮಾದರಿಗಳನ್ನು ಸಂಗ್ರಹಿಸಿ ಕಳುಹಿಸಲಾಗಿದೆ.

ಏಕೆ ಬಣ್ಣ ಬಳಿಯುತ್ತಾರೆ? : ಕೆಲವು ವ್ಯಾಪಾರಿಗಳು ದೀರ್ಘಕಾಲ ಸಂಗ್ರಹಿಸಿದ ಅಥವಾ ಒಣಗಿದ ಹಸಿರು ಬಟಾಣಿಗೆ ಮತ್ತೆ ತಾಜಾತನದ ಹಸಿರು ಬಣ್ಣ ಕಾಣುವಂತೆ ಮಾಡಲು ಕೃತಕ ಬಣ್ಣ ಬಳಿಯುತ್ತಿರುವುದು ತಪಾಸಣೆಯಲ್ಲಿ ಬೆಳಕಿಗೆ ಬಂದಿದೆ. ಇದರಿಂದ ಗ್ರಾಹಕರು ಬಟಾಣಿ ಹೊಸದಾಗಿದೆ ಎಂಬ ಭಾವನೆ ಹೊಂದುವ ಸಾಧ್ಯತೆ ಇದ್ದು, ಇದು ಗ್ರಾಹಕರನ್ನು ದಾರಿ ತಪ್ಪಿಸುವ ಕ್ರಮವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮನೆಯಲ್ಲೇ ಹೀಗೆ ಪರೀಕ್ಷಿಸಬಹುದು : ಎಸ್.ಎಲ್. ರವೀಂದ್ರ ಅವರ ಪ್ರಕಾರ, ಶಂಕಿತ ಹಸಿರು ಬಟಾಣಿಯನ್ನು ಪಾರದರ್ಶಕ ಪಾತ್ರೆಯಲ್ಲಿರುವ ನೀರಿನಲ್ಲಿ ಹಾಕಿ ನಿಧಾನವಾಗಿ ಕಲಕಿದಾಗ ನೀರು ಹಸಿರು ಬಣ್ಣಕ್ಕೆ ತಿರುಗಿದರೆ, ಬಟಾಣಿಯ ಮೇಲೆ ಬಾಹ್ಯ ಕೃತಕ ಬಣ್ಣ ಬಳಕೆಯಾಗಿರುವ ಸಾಧ್ಯತೆ ಇರುತ್ತದೆ. ಇಂತಹ ಉತ್ಪನ್ನಗಳನ್ನು ಖರೀದಿಸುವಾಗ ಗ್ರಾಹಕರು ಎಚ್ಚರಿಕೆ ವಹಿಸುವಂತೆ ಅವರು ಮನವಿ ಮಾಡಿದ್ದಾರೆ.

ವ್ಯಾಪಾರಿಗಳಿಗೆ ಅರಿವು ಮೂಡಿಸಿದ ಅಧಿಕಾರಿಗಳು : ಕಾರ್ಯಾಚರಣೆಯ ವೇಳೆ ಸುಮಾರು 25ಕ್ಕೂ ಹೆಚ್ಚು ವ್ಯಾಪಾರಿಗಳಿಗೆ ಅನಧಿಕೃತ ಬಣ್ಣದ ಬಳಕೆಯಿಂದ ಉಂಟಾಗುವ ಆರೋಗ್ಯದ ಅಪಾಯಗಳು ಹಾಗೂ ಆಹಾರ ಸುರಕ್ಷತಾ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು. ನಿಯಮ ಉಲ್ಲಂಘನೆ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳಾದ ಗಿರೀಶ್ ಎಸ್.ಆರ್. (ವೃತ್ತ-1), ರಾಜೇಶ್ (ವೃತ್ತ-2) ಹಾಗೂ ಬಾಲಸುಬ್ರಹ್ಮಣ್ಯ (ವೃತ್ತ-3) ಭಾಗವಹಿಸಿ ತಪಾಸಣೆ ನಡೆಸಿದರು.

ಗ್ರಾಹಕರಿಗೆ ಸಲಹೆ : ಆಹಾರ ಸುರಕ್ಷತಾ ತಜ್ಞರ ಪ್ರಕಾರ, ಅಸಹಜವಾಗಿ ಗಾಢ ಹಸಿರು ಬಣ್ಣ ಹೊಂದಿರುವ ಬಟಾಣಿಯನ್ನು ಖರೀದಿಸುವ ಮುನ್ನ ಪರಿಶೀಲಿಸುವುದು ಉತ್ತಮ. ಬಣ್ಣ ಬಿಡುವ ಲಕ್ಷಣ ಕಂಡುಬಂದರೆ ಬಳಸದೇ, ಸಂಬಂಧಿತ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಗುಣಮಟ್ಟದ ಹಾಗೂ ವಿಶ್ವಾಸಾರ್ಹ ಮಾರಾಟಗಾರರಿಂದ ಮಾತ್ರ ತರಕಾರಿ ಖರೀದಿಸುವಂತೆ ಗ್ರಾಹಕರಿಗೆ ಸಲಹೆ ನೀಡಲಾಗಿದೆ.

ಮೂಲ: ಎಫ್‌ಎಸ್‌ಎಸ್‌ಎಐ ಅಧಿಕಾರಿಗಳ ಮಾಹಿತಿ ಹಾಗೂ ಎಫ್‌ಎಸ್‌ಎಸ್‌ಎಐ ಅಧಿಕೃತ ಸಾಮಾಜಿಕ ಜಾಲತಾಣ ಪ್ರಕಟಣೆ.

The post ಆಹಾರ ನಿಯಮ ಉಲ್ಲಂಘನೆ: 106Kg ಕೃತಕ ಹಸಿರು ಬಟಾಣಿ ಸೀಜ್! appeared first on Samyukta Karnataka.

ಅಡ್ಡ ಮತದಾನ ಈಗ ಮುಗಿದ ಅಧ್ಯಾಯ
ಮೈಸೂರು: ಪರಿಷತ್‌ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಈಗ ಮುಗಿದ ಅಧ್ಯಾಯ ಎಂದು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದಲ್ಲಿನ ಅಡ್ಡ ಮತದಾನದ ಗೊಂದಲಗಳು ಈಗ ಮುಗಿದಿವೆ. ಎಲ್ಲಾ ವಿಚಾರವನ್ನ ನಾವು ಹೈಕಮಾಂಡ್‌ಗೆ ತಲುಪಿಸಿದ್ದೇವೆ. ಮತ್ತೆ ಅದರ ಬಗ್ಗೆ ಚರ್ಚೆ ಬೇಡ ಎಂದರು.

ಡಿ.ವಿ. ಸದಾನಂದ ಗೌಡ ಆಡಿಯೋ ವಿಚಾರದಲ್ಲಿ ಆ ಧ್ವನಿ ನನ್ನದಲ್ಲ ಎಂದು ಅವರೇ ಹೇಳಿದ್ದಾರೆ. ಧ್ವನಿ ಅವರದಲ್ಲ ಅಂದ ಮೇಲೆ ಮತ್ತೆ ಅದರ ಬಗ್ಗೆ ಚರ್ಚೆ ಯಾಕೆ. ಖುದ್ದು ಸದಾನಂದ ಗೌಡರೇ ಆ ಕುರಿತು ಸ್ಪಷ್ಟನೆ ಕೊಟ್ಟಿದ್ದಾರೆ ಎಂದು ಹೇಳಿದರು.

ಶಾಸಕ ವಿಶ್ವನಾಥ್ ಜೊತೆಯೂ ನಾನು ಮಾತನಾಡಿದ್ದೇನೆ. ಒಂದು ಪಕ್ಷ ಅಂದ ಮೇಲೆ ಸಣ್ಣ ಪುಟ್ಟ ಗೊಂದಲಗಳು ಸಹಜ. ಅವೆಲ್ಲವನ್ನು ನಾನು ನಿಭಾಯಿಸಿಕೊಂಡೆ ಪಕ್ಷ ಕಟ್ಟುತ್ತಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ರಾಜ್ಯ ಸರ್ಕಾರ ತಾನು ಮಾಡಿದ್ದೆಲ್ಲ ಸರಿ ಅನ್ನೋ ಧೋರಣೆಯಲ್ಲಿದೆ. ಈ ಧೋರಣೆ ಒಳ್ಳೆಯದಲ್ಲ. ಟೌನ್‌ಶಿಪ್‌ಗೆ ಶೇಕಡ 79ರಷ್ಟು ರೈತರ ವಿರೋಧವಿದೆ. ಆದರೂ ಸರ್ಕಾರ ರೈತರ ವಿರೋಧವಿಲ್ಲ ಎಂದು ಸುಳ್ಳು ಹೇಳುತ್ತಿದೆ ಎಂದರು.

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆದ ದಿನದಿಂದ ಟೌನ್‌ಶಿಪ್ ಬಗ್ಗೆ ಬಹಳ ಆತುರದಲ್ಲಿದ್ದಾರೆ. ಬಿಜೆಪಿ ರೈತರ ಪರ, ಬರುವ ಅಧಿವೇಶನದಲ್ಲಿ ಈ ಬಗ್ಗೆ ವಿಸ್ತೃತ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.

ಎಸ್‌ಐಆರ್‌ ಕುರಿತು ಗಾಬರಿ ದೂರವಾಗಿದೆ: ಬಾನು ಮುಷ್ತಾಕ್

The post ಅಡ್ಡ ಮತದಾನ ಈಗ ಮುಗಿದ ಅಧ್ಯಾಯ appeared first on Samyukta Karnataka.

ಬಿಡದಿ ಟೌನ್‌‌ಶಿಪ್: ಚರ್ಚೆ ನಡೆಸುವುದಾದರೆ ವಿಧಾನಸೌಧಕ್ಕೆ ಬರಲಿ
ಮೈಸೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಚರ್ಚೆ ನಡೆಸುವುದಾದರೆ ವಿಧಾನಸೌಧಕ್ಕೆ ಬರಲಿ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಆಹ್ವಾನಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಎಚ್.ಡಿ. ಕುಮಾರಸ್ವಾಮಿ ಇಬ್ಬರೂ ಪತ್ರ ಬರೆದಿದ್ದಾರೆ. ಮಾತುಕತೆ ಆಗಬೇಕು ಎಂದಾದರೆ ವಿಧಾನಸೌಧಕ್ಕೆ ಬರಬೇಕು. ಸರ್ಕಾರ ನಡೆಯುವ ಜಾಗದಲ್ಲಿ ಚರ್ಚೆ ಆಗಬೇಕು. ಬೀದಿಯಲ್ಲಿ ಕುಳಿತು ಚರ್ಚಿಸಲು ಸಾಧ್ಯವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮುಖ್ಯಮಂತ್ರಿ ಸರಿಯಾದ ಸ್ಥಳಕ್ಕೆ ಅವರನ್ನು ಕರೆದಿದ್ದಾರೆ. ನಿಜವಾಗಿಯೂ ಕುಮಾರಸ್ವಾಮಿ ಅವರ ವಾದದಲ್ಲಿ ಶಕ್ತಿ ಇದ್ದರೆ ಅಲ್ಲಿಗೇ ಬರಲಿ ಎಂದು ಸವಾಲು ಹಾಕಿದರು.

ಬಿಡದಿಯಲ್ಲಿ ನಡೆದಿರುವ ಹೋರಾಟದಿಂದ ಸರ್ಕಾರದ ಮೇಲೆ ಯಾವ ಪರಿಣಾಮವೂ ಬೀರುವುದಿಲ್ಲ. ಆ ಯೋಜನೆಗೆ ಕೆಲ ರೈತರಷ್ಟೇ ವಿರೋಧ ಮಾಡುತ್ತಿದ್ದಾರೆ. ಅಲ್ಲಿನ ಹಲವು ರೈತರು ಟೌನ್‌ಶಿಪ್ ಪರವಿದ್ದಾರೆ. ಸರ್ಕಾರದಿಂದ ಪರಿಹಾರ ಸಿಗುತ್ತದೆ ಎಂಬ ಖುಷಿಯಲ್ಲಿದ್ದಾರೆ. ಕುಮಾರಸ್ವಾಮಿಯವರೇ ಭೂಸ್ವಾಧೀನ ಮಾಡಿರುವುದು. ಬಿಡದಿ ಟೌನ್‌ಶಿಪ್ ಜನರ ಪರವಾಗಿದ್ದು, ಸರ್ಕಾರ ಟೌನ್‌ಶಿಪ್ ಮಾಡುತ್ತದೆ ಎಂದು ಹೇಳಿದರು.

ವಿಜಯಪುರಕ್ಕೆ ಉತ್ತರ ಕರ್ನಾಟಕದ ಮೊದಲ PCB ಉತ್ಪಾದನಾ ಘಟಕ

The post ಬಿಡದಿ ಟೌನ್‌‌ಶಿಪ್: ಚರ್ಚೆ ನಡೆಸುವುದಾದರೆ ವಿಧಾನಸೌಧಕ್ಕೆ ಬರಲಿ appeared first on Samyukta Karnataka.

ಮಾಜಿ ಪ್ರೇಮಿಯ ಕಾಟ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಸಂ.ಕ. ಸಮಾಚಾರ ಮೈಸೂರು : ಮಾಜಿ ಪ್ರೇಮಿಯ ಕಿರುಕುಳವನ್ನು ತಡೆಯಲಾಗದೆ ಯುವತಿ ಸೇರಿದಂತೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಗ್ರಾಮದ ನಿವಾಸಿಗಳಾದ ಶಿವಣ್ಣ (54), ಅವರ ಪತ್ನಿ ನಾಗರತ್ನ (48) ಹಾಗೂ ಪುತ್ರಿ ರಕ್ಷಿತಾ (21) ಮೃತಪಟ್ಟವರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ಉಲ್ಲಾಸ್ ಗೌಡ ವಿರುದ್ಧ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ e-mail: ತೀವ್ರ ತಪಾಸಣೆ

ಸ್ಥಳೀಯರ ಮಾಹಿತಿ ಪ್ರಕಾರ, ರಕ್ಷಿತಾ ಮತ್ತು ಉಲ್ಲಾಸ್ ಗೌಡ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ ಇಬ್ಬರೂ ಬೇರೆ ಜಾತಿಗೆ ಸೇರಿದವರಾಗಿದ್ದರಿಂದ ಮದುವೆಗೆ ಕುಟುಂಬದ ಒಪ್ಪಿಗೆ ದೊರೆತಿರಲಿಲ್ಲ. ಬಳಿಕ ರಕ್ಷಿತಾಗೆ ಕುಟುಂಬಸ್ಥರು ಬೇರೆ ವಿವಾಹ ನಿಶ್ಚಯ ಮಾಡಿದ್ದರು. ಇನ್ನೆರಡು ದಿನಗಳಲ್ಲಿ ಮದುವೆ ನಡೆಯಬೇಕಿತ್ತು ಎನ್ನಲಾಗಿದೆ.

ಈ ನಡುವೆ, ರಕ್ಷಿತಾ ಕಳುಹಿಸಿದ್ದ ಸಂದೇಶಗಳು ಮತ್ತು ಛಾಯಾಚಿತ್ರಗಳನ್ನು ವರನಿಗೆ ಕಳುಹಿಸಿ ಮದುವೆ ನಿಲ್ಲಿಸಲು ಯತ್ನಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಕುಟುಂಬ ತೀವ್ರ ಮಾನಸಿಕ ಆಘಾತಕ್ಕೆ ಒಳಗಾಗಿತ್ತು ಎಂದು ತಿಳಿದುಬಂದಿದೆ. ಘಟನೆಯ ಬಳಿಕ ಮನೆಯಲ್ಲಿ ಮೂವರು ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಸ್ಥಳೀಯರು ಆಸ್ಪತ್ರೆಗೆ ಸಾಗಿಸಲು ಮುಂದಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: CBSE 12ನೇ ತರಗತಿ ಮರುಮೌಲ್ಯಮಾಪನ ಫಲಿತಾಂಶ ಬಿಡುಗಡೆ

ಆತ್ಮಹತ್ಯೆಗೆ ಮುನ್ನ ರಕ್ಷಿತಾ ಡೆತ್‌ನೋಟ್ ಬರೆದಿಟ್ಟು, ತಮ್ಮ ಕುಟುಂಬದ ಈ ನಿರ್ಧಾರಕ್ಕೆ ಉಲ್ಲಾಸ್ ಗೌಡ ಕಾರಣ ಎಂದು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಡೆತ್‌ನೋಟ್ ವಶಪಡಿಸಿಕೊಂಡಿರುವ ಟಿ. ನರಸೀಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ.

ಘಟನೆ ಗ್ರಾಮದಲ್ಲಿ ತೀವ್ರ ಶೋಕದ ವಾತಾವರಣ ನಿರ್ಮಿಸಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸೂಚನೆ: ಮಾನಸಿಕ ಒತ್ತಡ ಅಥವಾ ಸಂಕಷ್ಟದಲ್ಲಿರುವವರು ಸಹಾಯ ಪಡೆಯುವುದು ಅತ್ಯಂತ ಅಗತ್ಯ. ಆತ್ಮಹತ್ಯೆ ಸಮಸ್ಯೆಗೆ ಪರಿಹಾರವಲ್ಲ. ಅಗತ್ಯವಿದ್ದಲ್ಲಿ ಸ್ಥಳೀಯ ಸಹಾಯವಾಣಿ ಅಥವಾ ವಿಶ್ವಾಸಾರ್ಹ ವ್ಯಕ್ತಿಗಳ ನೆರವು ಪಡೆಯಲು ಮನವಿ.

ಬ್ರಿಟನ್ ಪ್ರಧಾನಿ ಸ್ಥಾನಕ್ಕೆ ಕೀರ್ ಸ್ಟಾರ್ಮರ್ ರಾಜೀನಾಮೆ

The post ಮಾಜಿ ಪ್ರೇಮಿಯ ಕಾಟ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ appeared first on Samyukta Karnataka.

ಬಂಡಾಯಗಾರರಿಗೆ ಶಾಕ್ ಕೊಟ್ಟ HDK : JDSನಲ್ಲಿ ‘Gen Z’ ಯುಗ
ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ: ನಾಲ್ವರು ಯಾರು ಎಂಬುದು ಗೊತ್ತಿದೆ, ಪಕ್ಷ ಕಟ್ಟುವುದು ನನಗೆ ಗೊತ್ತು ಎಂದ ಕುಮಾರಸ್ವಾಮಿ – “ಬಂಡಾಯಗಾರರಿಗೆ ಬಿಗ್ ಶಾಕ್: ಜೆಡಿಎಸ್‌ ಸಂಘಟನೆಗೆ ‘Gen Z’ ಅಸ್ತ್ರ ಪ್ರಯೋಗಿಸಲಿದ್ದಾರಾ ಹೆಚ್‌ಡಿಕೆ?”

ಮೈಸೂರು: ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸೋಲು ಕಂಡ ಬೆನ್ನಲ್ಲೇ ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ H. D. ಕುಮಾರಸ್ವಾಮಿ ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರತಿಕ್ರಿಯೆ ನೀಡಿದ್ದು, ಪಕ್ಷದ ನಾಲ್ವರು ಶಾಸಕರು ಅಡ್ಡಮತದಾನ ಮಾಡಿದ್ದಾರೆ ಎಂಬುದು ತಮಗೆ ತಿಳಿದಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ, ಅವರು ಪಕ್ಷ ತೊರೆಯುವ ವಿಚಾರದಲ್ಲಿಯೂ ಈಗಾಗಲೇ ಚರ್ಚೆ ನಡೆಸಿದ್ದಾರೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ನಡೆದಿರುವುದು ತಮಗೆ ಯಾವುದೇ ಅಚ್ಚರಿ ಅಥವಾ ಆಘಾತ ಉಂಟುಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಯಾರು ಅಡ್ಡಮತದಾನ ಮಾಡಿದ್ದಾರೆ, ಯಾವ ಕಾರಣಕ್ಕಾಗಿ ಮಾಡಿದ್ದಾರೆ ಎಂಬುದರ ಕುರಿತು ತಮ್ಮ ಬಳಿ ಸಂಪೂರ್ಣ ಮಾಹಿತಿ ಇದೆ ಎಂದು ಅವರು ಹೇಳಿದರು.

ಅಡ್ಡಮತದಾನದ ನಿರೀಕ್ಷೆ ಮೊದಲೇ ಇತ್ತು: “ಅವರು ಅಡ್ಡಮತದಾನ ಮಾಡುತ್ತಾರೆ ಎಂಬ ನಿರೀಕ್ಷೆ ಮೊದಲೇ ಇತ್ತು. ಆದ್ದರಿಂದ ಇದು ನನಗೆ ಹೊಸ ವಿಚಾರವಲ್ಲ. ಈಗಲೂ ಅವರು ಮುಂದಿನ ದಿನಗಳಲ್ಲಿ ಯಾವ ರೀತಿಯ ರಾಜಕೀಯ ನಡೆ ಅನುಸರಿಸಬಹುದು ಎಂಬುದನ್ನು ತಿಳಿದುಕೊಳ್ಳುವ ಉದ್ದೇಶದಿಂದಲೇ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿತ್ತು” ಎಂದು ಕುಮಾರಸ್ವಾಮಿ ತಿಳಿಸಿದರು.

ಪಕ್ಷ ಬಿಡುವ ಚರ್ಚೆಯೂ ನಡೆದಿತ್ತು : ಅಡ್ಡಮತದಾನ ಮಾಡಿದ ಶಾಸಕರು ಪಕ್ಷ ತೊರೆಯುವ ಸಾಧ್ಯತೆಗಳ ಕುರಿತು ಈಗಾಗಲೇ ಚರ್ಚೆ ನಡೆಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಆದರೆ ಇದರಿಂದ ಪಕ್ಷಕ್ಕೆ ಯಾವುದೇ ಹಿನ್ನಡೆಯಾಗುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, “ಹೋಗುವವರು ಹೋಗಲಿ, ಪಕ್ಷ ಕಟ್ಟುವುದು ನನಗೆ ಗೊತ್ತಿದೆ” ಎಂದು ಖಡಕ್ ಸಂದೇಶ ರವಾನಿಸಿದರು.

Gen Zಗೆ ಅವಕಾಶ: ಪಕ್ಷ ಸಂಘಟನೆಗೆ ಹೊಸ ದಿಕ್ಕು ನೀಡುವ ಕುರಿತು ಮಾತನಾಡಿದ ಅವರು, ಇನ್ನು ಮುಂದೆ ಯುವ ನಾಯಕರು ಹಾಗೂ ಹೊಸ ಮುಖಗಳಿಗೆ ಹೆಚ್ಚಿನ ಅವಕಾಶ ನೀಡಲಾಗುವುದು ಎಂದು ಘೋಷಿಸಿದರು. “ಯುವಕರನ್ನು ಮುಂದೆ ತಂದು ಪಕ್ಷವನ್ನು ಮತ್ತಷ್ಟು ಬಲಪಡಿಸುತ್ತೇನೆ. ಹೊಸ ತಲೆಮಾರಿನ ನಾಯಕರಿಗೆ ಆದ್ಯತೆ ನೀಡುವ ನಿರ್ಧಾರ ಮಾಡಿದ್ದೇನೆ” ಎಂದು ಹೇಳಿದರು.

ಜೆಡಿಎಸ್‌ನಲ್ಲಿ ಹೊಸ ಮುಖಗಳಿಗೆ ಅವಕಾಶ : ಪಕ್ಷದ ಭವಿಷ್ಯದ ಕುರಿತು ಮಾತನಾಡಿದ ಕುಮಾರಸ್ವಾಮಿ, ಜೆಡಿಎಸ್ ಸಂಘಟನೆಯನ್ನು ಮರುನಿರ್ಮಿಸುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸೂಚನೆ ನೀಡಿದರು. ಹಳೆಯ ರಾಜಕೀಯ ಲೆಕ್ಕಾಚಾರಗಳಿಗಿಂತ ಯುವ ನಾಯಕತ್ವದ ಮೇಲೆ ಹೆಚ್ಚು ಒತ್ತು ನೀಡಲಾಗುವುದು ಎಂದು ಹೇಳಿದರು. ರಾಜಕೀಯವಾಗಿ ಪಕ್ಷಕ್ಕೆ ಸವಾಲಿನ ಪರಿಸ್ಥಿತಿ ಎದುರಾದರೂ, ಕಾರ್ಯಕರ್ತರ ಶಕ್ತಿ ಮತ್ತು ಜನರ ಬೆಂಬಲದ ಆಧಾರದ ಮೇಲೆ ಪಕ್ಷವನ್ನು ಮತ್ತೊಮ್ಮೆ ಬಲಿಷ್ಠಗೊಳಿಸಲಾಗುವುದು ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಜಿ.ಟಿ. ದೇವೇಗೌಡ ಹೆಸರು ಪ್ರಸ್ತಾಪಿಸಲು ನಿರಾಕರಣೆ : ಸುದ್ದಿಗೋಷ್ಠಿಯ ವೇಳೆ ಮಾಧ್ಯಮ ಪ್ರತಿನಿಧಿಗಳು ಜಿ.ಟಿ. ದೇವೇಗೌಡ ಅವರ ಹೆಸರನ್ನು ಪ್ರಸ್ತಾಪಿಸಿದಾಗ ಕುಮಾರಸ್ವಾಮಿ ಪ್ರತಿಕ್ರಿಯಿಸಲು ನಿರಾಕರಿಸಿದರು. “ಅವರ ಹೆಸರು ಎತ್ತಬೇಡಿ. ಕಳೆದ ಒಂದೂವರೆ ವರ್ಷದಿಂದ ಅವರ ಬಗ್ಗೆ ನಾನು ಮಾತನಾಡಿಲ್ಲ. ಇತ್ತೀಚೆಗೆ ನಡೆದ ಚಾಮುಂಡೇಶ್ವರಿ ಕ್ಷೇತ್ರದ ಸಭೆಯಲ್ಲಿಯೂ ಅವರ ಹೆಸರನ್ನು ಪ್ರಸ್ತಾಪಿಸಿಲ್ಲ” ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಪಕ್ಷದ ಆಂತರಿಕ ಬೆಳವಣಿಗೆಗಳ ಕುರಿತು ಹೆಚ್ಚಿನ ಚರ್ಚೆ ನಡೆಸಲು ಅವರು ಆಸಕ್ತಿ ತೋರಲಿಲ್ಲ.

ಅಂತಿಮ ನಿರ್ಧಾರ ನನ್ನದೇ : ಪಕ್ಷದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಅಧಿಕಾರದ ಕುರಿತು ಮಾತನಾಡಿದ ಕುಮಾರಸ್ವಾಮಿ, ಕಾರ್ಯಕರ್ತರ ಅಭಿಪ್ರಾಯಗಳಿಗೆ ಮಹತ್ವ ನೀಡುತ್ತೇನೆ. ಆದರೆ ಅಂತಿಮ ನಿರ್ಧಾರವನ್ನು ತಾವೇ ಕೈಗೊಳ್ಳುವುದಾಗಿ ಹೇಳಿದರು. “ಕಾರ್ಯಕರ್ತರ ಅಭಿಪ್ರಾಯಗಳನ್ನು ಸಂಗ್ರಹಿಸಿ ನಿರ್ಧಾರ ಮಾಡುತ್ತೇನೆ. ಪಕ್ಷದ ಹಿತದೃಷ್ಟಿಯಿಂದ ಯಾವ ಕ್ರಮ ಅಗತ್ಯವೋ ಅದನ್ನು ಕೈಗೊಳ್ಳುತ್ತೇನೆ” ಎಂದು ಅವರು ತಿಳಿಸಿದರು.

ಪರಿಷತ್ ಚುನಾವಣೆಯಲ್ಲಿ ಏನಾಯಿತು? : ಗುರುವಾರ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಎಲ್ಲಾ ಐವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಭಾರತೀಯ ಜನತಾ ಪಕ್ಷ ಅಭ್ಯರ್ಥಿಗಳಲ್ಲಿ ಇಬ್ಬರು ಜಯಗಳಿಸಿದ್ದು, ಜೆಡಿಎಸ್ ಅಭ್ಯರ್ಥಿ ಗೊವಿಂದರಾಜು ಸೋಲು ಕಂಡಿದ್ದಾರೆ.

ಜೆಡಿಎಸ್ ಶಾಸಕರ ಅಡ್ಡಮತದಾನವೇ ಈ ಸೋಲಿಗೆ ಪ್ರಮುಖ ಕಾರಣ ಎಂಬ ರಾಜಕೀಯ ವಿಶ್ಲೇಷಣೆಗಳು ಕೇಳಿಬರುತ್ತಿವೆ. ಈ ಬೆಳವಣಿಗೆ ಜೆಡಿಎಸ್ ಒಳಗಿನ ಅಸಮಾಧಾನ ಹಾಗೂ ಭಿನ್ನಾಭಿಪ್ರಾಯಗಳನ್ನು ಬಹಿರಂಗಪಡಿಸಿದ್ದು, ಮುಂದಿನ ದಿನಗಳಲ್ಲಿ ಪಕ್ಷದೊಳಗಿನ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆ ಇದೆ.

The post ಬಂಡಾಯಗಾರರಿಗೆ ಶಾಕ್ ಕೊಟ್ಟ HDK : JDSನಲ್ಲಿ ‘Gen Z’ ಯುಗ appeared first on Samyukta Karnataka.

ಮೈಸೂರು ಪಬ್ ಅಗ್ನಿ ದುರಂತ: ಅಬಕಾರಿ ಜಿಲ್ಲಾಧಿಕಾರಿ ಅಮಾನತಿಗೆ ಶಿಫಾರಸು
RSS ನೋಂದಣಿ ಆಗಲೇಬೇಕು; ಬಿಡದಿ ಟೌನ್‌ಶಿಪ್ ಯೋಜನೆಗೆ 80% ರೈತರ ಬೆಂಬಲ: ಯತೀಂದ್ರ ಸಿದ್ದರಾಮಯ್ಯ

ಸಂ.ಕ. ಸಮಾಚಾರ ಮೈಸೂರು: ನಗರದ ದಟ್ಟಗಳ್ಳಿ 4ನೇ ಹಂತದಲ್ಲಿರುವ ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಇಬ್ಬರು ಸಜೀವ ದಹನಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆಯ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸಲು ಶಿಫಾರಸು ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಗ್ನಿ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಇದನ್ನೂ ಓದಿ: ಬೆಳಗಾವಿಯಲ್ಲಿ ಕಸದ ರಾಶಿಯಲ್ಲಿ 59 ಜೀವಂತ ಗುಂಡುಗಳು ಪತ್ತೆ!

ಪ್ರಾಥಮಿಕ ತನಿಖೆಯಲ್ಲಿ ಪಬ್ ಯಾವುದೇ ಮಾನ್ಯ ಲೈಸೆನ್ಸ್ ಪಡೆಯದೇ ಕಾರ್ಯನಿರ್ವಹಿಸುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪಬ್ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಘಟನೆಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ಅಗ್ನಿಶಾಮಕ ಇಲಾಖೆಯ ಅನುಮೋದನೆ ಮತ್ತು ಅಗತ್ಯ ಸುರಕ್ಷತಾ ಪ್ರಮಾಣಪತ್ರಗಳನ್ನು ಪಡೆಯದೇ ಕೆಲವು ವಾಣಿಜ್ಯ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿರುವುದು ಗಮನಕ್ಕೆ ಬಂದಿದೆ. ಈ ಪ್ರಕರಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಅಥವಾ ಕರ್ತವ್ಯಲೋಪ ಕಂಡುಬಂದರೆ ಅವರ ವಿರುದ್ಧವೂ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು. ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದ ಸಚಿವರು, ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಕೇರಳದಲ್ಲಿ ನಿಫಾ ಆತಂಕ : ಸೋಂಕಿತನಿಗೆ ವೆಂಟಿಲೇಟರ್ ಬೆಂಬಲ

ಬಿಡದಿ ಟೌನ್‌ಶಿಪ್ ಯೋಜನೆಗೆ ರೈತರ ಬೆಂಬಲ : ಬಿಡದಿ ಟೌನ್‌ಶಿಪ್ ಯೋಜನೆ ಕುರಿತು ಪ್ರತಿಕ್ರಿಯಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಯೋಜನೆಗೆ ಶೇಕಡಾ 80ರಷ್ಟು ರೈತರು ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು. ಭೂಸ್ವಾಧೀನಕ್ಕೆ ಒಳಪಡುವ ರೈತರಿಗೆ ಉತ್ತಮ ಪರಿಹಾರ ನೀಡಲಾಗುತ್ತಿದ್ದು, ಬಹುತೇಕ ರೈತರು ಪರಿಹಾರ ಸ್ವೀಕರಿಸಲು ಮುಂದಾಗಿದ್ದಾರೆ. ಕೆಲವರ ವಿರೋಧದ ಕಾರಣಕ್ಕೆ ಯೋಜನೆಯನ್ನು ಕೈಬಿಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು ನಗರ ವೇಗವಾಗಿ ವಿಸ್ತರಿಸುತ್ತಿದ್ದು, ನಿವೇಶನಗಳ ಬೇಡಿಕೆಯೂ ಹೆಚ್ಚುತ್ತಿದೆ. ಹೀಗಾಗಿ ನಗರದ ವಿಸ್ತರಣೆಗೆ ಇಂತಹ ಯೋಜನೆಗಳು ಅಗತ್ಯವಾಗಿವೆ. ರೈತರೊಂದಿಗೆ ನಿರಂತರ ಮಾತುಕತೆ ನಡೆಸಿ, ಅವರ ವಿಶ್ವಾಸ ಗಳಿಸಿಕೊಂಡು ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಕೆಮ್ಮಿನ ಸಿರಪ್ ಮೇಲೆ ಕೇಂದ್ರದ ಕಟ್ಟುನಿಟ್ಟಿನ ಕ್ರಮ: ಸಾರ್ವಜನಿಕರಿಗೆ ಏನು ಬದಲಾವಣೆ?

RSS ವಿರುದ್ಧ ವಾಗ್ದಾಳಿ : ಆರ್‌ಎಸ್‌ಎಸ್ ಕುರಿತು ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಆ ಸಂಘಟನೆಯ ನಾಯಕರು ಹಿಂದೂ ಧರ್ಮದ ಪ್ರತಿನಿಧಿಗಳಲ್ಲ, ಕೇವಲ ಹಿಂದುತ್ವವಾದಿಗಳು ಎಂದು ಟೀಕಿಸಿದರು. ದೇಶದ ಯಾವುದೇ ಸಂಘಟನೆಯೂ ಕಾನೂನಿಗಿಂತ ದೊಡ್ಡದಲ್ಲ. ಆರ್‌ಎಸ್‌ಎಸ್ ದೇಶದಾದ್ಯಂತ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿಗಳನ್ನು ಹೊಂದಿದ್ದು, ಅದರ ಹಣಕಾಸು ವ್ಯವಹಾರಗಳ ಕುರಿತು ಪಾರದರ್ಶಕತೆ ಇರಬೇಕು ಎಂದು ಹೇಳಿದರು.

ಸಂಘಟನೆಗೆ ಬರುವ ಹಣ ಮತ್ತು ಆಸ್ತಿಗಳ ಲೆಕ್ಕಪತ್ರಗಳ ಬಗ್ಗೆ ಪರಿಶೀಲನೆ ಅಗತ್ಯವಿದ್ದು, ಆರ್‌ಎಸ್‌ಎಸ್ ಕಡ್ಡಾಯವಾಗಿ ನೋಂದಣಿಯಾಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಗೃಹ ಸಚಿವರ ನೋಂದಣಿ ಕುರಿತ ನಿಲುವನ್ನು ಸಮರ್ಥಿಸಿಕೊಂಡ ಸಚಿವರು, ಎಲ್ಲ ಸಂಘಟನೆಗಳು ದೇಶದ ಕಾನೂನು ವ್ಯಾಪ್ತಿಯಲ್ಲೇ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

NTA ಶಿಫಾರಸಿನ ಮೇರೆಗೆ Telegram ಸೇವೆಗೆ ತಾತ್ಕಾಲಿಕ ನಿರ್ಬಂಧ

The post ಮೈಸೂರು ಪಬ್ ಅಗ್ನಿ ದುರಂತ: ಅಬಕಾರಿ ಜಿಲ್ಲಾಧಿಕಾರಿ ಅಮಾನತಿಗೆ ಶಿಫಾರಸು appeared first on Samyukta Karnataka.