Home ಅಪರಾಧ ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮ: ಕಿಂಗ್‌ಪಿನ್ ದಿವ್ಯಾ ಹಾಗರಗಿ ಸೇರಿ 27 ಆರೋಪಿಗಳಿಗೆ ಜಾಮೀನು

ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮ: ಕಿಂಗ್‌ಪಿನ್ ದಿವ್ಯಾ ಹಾಗರಗಿ ಸೇರಿ 27 ಆರೋಪಿಗಳಿಗೆ ಜಾಮೀನು

0

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿ ಜೈಲು ಸೇರಿದ್ದ ಕಲಬುರಗಿಯ ಬಿಜೆಪಿ ನಾಯಕಿ ದಿವ್ಯಾ ರಾಜೇಶ್ ಹಾಗರಗಿ ಸೇರಿದಂತೆ 27 ಜನ ಆರೋಪಿಗಳಿಗೆ ಗುರುವಾರ ಜಿಲ್ಲಾ ನ್ಯಾಯಲಯದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.
ಕಿಂಗ್‌ಪಿನ್ ದಿವ್ಯಾ ಹಾಗರಗಿ, ಮಂಜುನಾಥ್ ಮೇಳಕುಂದಿ, ಕಾಶಿನಾಥ್ ಚಿಲ್, ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಸೇರಿ 26 ಜನರಿಗೆ ಜಾಮೀನು ಲಭಿಸಿದೆ.
ಕಲಬುರಗಿ ಜಿಲ್ಲಾ ಸತ್ರ ನ್ಯಾಯಾಲಯ ನ್ಯಾಯಾಧಿಶರಾದ ಕೆ.ಬಿ. ಪಾಟೀಲ್ ಎಲ್ಲರಿಗೂ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ. ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ. ಇದರೊಂದಿಗೆ ಪಿಎಸ್ಐ ನೇಮಕಾತಿಯ ಅಕ್ರಮ ಪ್ರಕರಣದಲ್ಲಿ ಜೈಲು ಸೇರಿದ್ದ ಒಟ್ಟು 36 ಜನರಿಗೆ ಜಾಮೀನು ಸಿಕ್ಕಂತಾಗಿದೆ.

Exit mobile version