Home News ಅತ್ಯಾಚಾರ ಪ್ರಕರಣ: ಆರೋಪಿ ಕೃಷ್ಣ ರಾವ್ ಮೈಸೂರಿನಲ್ಲಿ ಸೆರೆ

ಅತ್ಯಾಚಾರ ಪ್ರಕರಣ: ಆರೋಪಿ ಕೃಷ್ಣ ರಾವ್ ಮೈಸೂರಿನಲ್ಲಿ ಸೆರೆ

ಸಂ. ಕ. ಸಮಾಚಾರ, ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿ ಕಳೆದ ೧೦ ದಿನಗಳಿಂದ ನಾಪತ್ತೆಯಾಗಿದ್ದ ಬಪ್ಪಳಿಗೆ ನಿವಾಸಿ ಕೃಷ್ಣ ಜೆ. ರಾವ್ (೨೧) ನನ್ನು ಜು. ಶುಕ್ರವಾರ ಪೊಲೀಸರು ಮೈಸೂರಿನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.
ಈತನ ವಿರುದ್ಧ ದ.ಕ. ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿತ್ತು. ಸಂತ್ರಸ್ತೆ ಕೂಡ ಪುತ್ತೂರು ನಗರಸಭಾ ವ್ಯಾಪ್ತಿಯ ನಿವಾಸಿಯಾಗಿದ್ದು, ಮಂಗಳೂರಿನ ಕಾಲೇಜೊಂದರಲ್ಲಿ ಪದವಿ ವ್ಯಾಸಂಗ ಪೂರ್ಣಗೊಳಿಸಿದ್ದಾರೆ. ಆರೋಪಿ ನಾಪತ್ತೆ ಆದ ನಂತರ ಆತನಿಗೆ ಆಶ್ರಯ ನೀಡಿದ್ದ ಸಂಬಂಧಿಕರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಆ ವೇಳೆ ಆರೋಪಿಯ ಸುಳಿವು ಪತ್ತೆಯಾಗಿತ್ತು ಎನ್ನಲಾಗಿದೆ.

Exit mobile version