Home ಅಪರಾಧ ಅಪಘಾತ: ಗಂಡು ಚಿರತೆ ಸಾವು

ಅಪಘಾತ: ಗಂಡು ಚಿರತೆ ಸಾವು

0

ಚಿತ್ರದುರ್ಗ: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಚಿರತೆ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ದೊಡ್ಡಸಿದ್ದವ್ವನ ಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದೆ.
ಚಿರತೆ ರಸ್ತೆ ದಾಟುವ ವೇಳೆಯಲ್ಲಿ ಅಪರಿಚಿತ ವಾಹನದ ಚಾಲಕ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಚಿರತೆ ಸ್ಥಳದಲ್ಲಿಯೇ ಮೃತಪಟ್ಟಿದೆ. ಸುಮಾರು ಮೂರು ವರ್ಷದ ಗಂಡು ಚಿರತೆ ಆಹಾರ ಹುಡುಕಿಕೊಂಡು ಬಂದಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆ ಮಾಡಿಸಿದ ಬಳಿಕ ನ್ಯಾಯಾಲಯದ ಅನುಮತಿ ಪಡೆದು ಜೋಗಿಮಟ್ಟಿ ಅರಣ್ಯ ಪ್ರದೇಶದಲ್ಲಿ ಎಸಿಎಫ್ ಸುರೇಶ್, ವಲಯ ಅರಣ್ಯಾಧಿಕಾರಿ ಉಷಾರಾಣಿ ಹಾಗೂ ಇತರೆ ಅಧಿಕಾರಿಗಳ ಸಮಕ್ಷಮದಲ್ಲಿ ದಹನ ಮಾಡಲಾಯಿತು.

Exit mobile version