ಅಮೆರಿಕದಲ್ಲಿ ಗುಂಡಿನ ದಾಳಿ: 9ಕ್ಕೂ ಹೆಚ್ಚು ಸಾವು

0
10
ಗುಂಡಿನ ದಾಳಿ

ಅಮೆರಿಕದ ಕ್ಯಾಲಿಫೋರ್ನಿಯಾದ ಲಾಸ್‌ ಏಂಜಲೀಸ್‌ ನಗರದಲ್ಲಿನ ಮಾಂಟೆರಿ ಪಾರ್ಕ್‌ನಲ್ಲಿ ಗುಂಡಿನ ದಾಳಿ ನಡೆದಿದ್ದು, 9ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಚಾಂದ್ರಮಾನ ಪದ್ಧತಿಯಂತೆ ಆರಂಭವಾಗುವ ಹೊಸ ವರ್ಷವನ್ನು ಸಂಭ್ರಮಿಸಲು ಚೈನೀಸ್‌ ನ್ಯೂ ಇಯರ್‌ ಪಾರ್ಟಿ ಆಯೋಜಿಸಲಾಗಿತ್ತು. ಈ ವೇಳೆ ಸುಮಾರು 50,000ಕ್ಕೂ ಹೆಚ್ಚು ಜನರು ಸೇರಿದ್ದರು. ಇದನ್ನೇ ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಗಾಯಾಳು ಮತ್ತು ಮೃತರ ನಿಖರ ಮಾಹಿತಿ ತಿಳಿದುಬರಬೇಕಿದೆ.

Previous articleಬಾನಂಗದಲ್ಲಿ ತೇಲಾಡಿದ ಪಟಗಳು
Next articlePIA ಹೆಸರಿನ ವಿಮಾನ ಆಕಾರದ ಬಲೂನ್‌ ಪತ್ತೆ