ಬೆಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ದಾವಣೆಗೆರೆ ಮೂಲದ ವಿವೇಕ್(20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾನೆ. ನಿಟ್ಟೆ ಮೀನಾಕ್ಷಿ ಕಾಲೇಜು ಹಾಸ್ಟೆಲ್‌ನಲ್ಲಿ ನಾಲ್ಕನೇ ಸೆಮಿಸ್ಟರ್ ಇಂಜಿನಿಯರಿಂಗ್ ವ್ಯಾಸಾಂಗ ಮಾಡುತ್ತಿದ್ದ ಈತ. ಕಾಲೇಜು ಹಾಸ್ಟೆಲ್‌ನ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆದರೆ, ಸಾವಿಗೆ ನಿಖರ ಕಾರಣ ಏನು ಎನ್ನುವುದು ತಿಳಿದುಬಂದಿಲ್ಲ.