Home ಅಪರಾಧ ಈಜುಕೊಳದಲ್ಲಿ ಬ್ಯಾಂಕ್ ಅಧಿಕಾರಿಯ ಮೃತದೇಹ

ಈಜುಕೊಳದಲ್ಲಿ ಬ್ಯಾಂಕ್ ಅಧಿಕಾರಿಯ ಮೃತದೇಹ

0

ಮಂಗಳೂರು: ನಗರದ ಪ್ರತಿಷ್ಠಿತ ಖಾಸಗಿ ಹೊಟೇಲ್‌ನ ಈಜು ಕೊಳದಲ್ಲಿ ಬ್ಯಾಂಕ್ ಅಧಿಕಾರಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್. ನಾಯರ್ ಮೃತಪಟ್ಟ ಅಧಿಕಾರಿ. ಅಧಿಕಾರಿ ಭಾನುವಾರ ಮಂಗಳೂರಿಗೆ ಆಗಮಿಸಿ ಹೊಟೇಲ್‌ನಲ್ಲಿ ತಂಗಿದ್ದು, ಇಂದು ಬೆಳಿಗ್ಗೆ ನಾಲ್ಕು ಗಂಟೆಗೆ ಹೊಟೇಲ್ ರೂಮ್ ನಿಂದ ಹೊರ ಹೋಗಿದ್ದರು ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

Exit mobile version