Home ಅಪರಾಧ ಉಗ್ರರ ಗುಂಡಿನ ದಾಳಿಗೆ ಕಾಶ್ಮೀರಿ ಪಂಡಿತ್ ಸಾವು

ಉಗ್ರರ ಗುಂಡಿನ ದಾಳಿಗೆ ಕಾಶ್ಮೀರಿ ಪಂಡಿತ್ ಸಾವು

0

ಪುಲ್ವಾಮಾ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾನುವಾರ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಕಾಶ್ಮೀರಿ ಪಂಡಿತ ಸಮುದಾಯಕ್ಕೆ ಸೇರಿದ 40 ವರ್ಷದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಕಣಿವೆ ಪ್ರದೇಶದಲ್ಲಿ ಮತ್ತೊಂದು ಉದ್ದೇಶಿತ ಹತ್ಯೆ ನಡೆದಿದ್ದು, ಮೃತಪಟ್ಟವರನ್ನು ಸಂಜಯ್‌ ಶರ್ಮಾ ಎಂದು ಗುರುತಿಸಲಾಗಿದೆ. ಸಂಜಯ್ ಶರ್ಮಾ ಅವರು ಸ್ಥಳೀಯ ಮಾರುಕಟ್ಟೆಗೆ ತೆರಳುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದು, ನಂತರ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತ ಸಂಜಯ್‌ ಶರ್ಮಾ ಅವರು ಜಮ್ಮು ಮತ್ತು ಕಾಶ್ಮೀರದ ಬ್ಯಾಂಕ್‌ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

Exit mobile version